ರೋಹಿತ್-ಕೊಹ್ಲಿ ಇಲ್ಲ, ಇಶಾನ್ ಕಿಶನ್ ಕಂಬ್ಯಾಕ್; ದುಲೀಪ್‌ ಟ್ರೋಫಿಗೆ 4 ತಂಡ ಪ್ರಕಟಿಸಿದ ಬಿಸಿಸಿಐ
ಕನ್ನಡ ಸುದ್ದಿ  /  ಕ್ರಿಕೆಟ್  /  ರೋಹಿತ್-ಕೊಹ್ಲಿ ಇಲ್ಲ, ಇಶಾನ್ ಕಿಶನ್ ಕಂಬ್ಯಾಕ್; ದುಲೀಪ್‌ ಟ್ರೋಫಿಗೆ 4 ತಂಡ ಪ್ರಕಟಿಸಿದ ಬಿಸಿಸಿಐ

ರೋಹಿತ್-ಕೊಹ್ಲಿ ಇಲ್ಲ, ಇಶಾನ್ ಕಿಶನ್ ಕಂಬ್ಯಾಕ್; ದುಲೀಪ್‌ ಟ್ರೋಫಿಗೆ 4 ತಂಡ ಪ್ರಕಟಿಸಿದ ಬಿಸಿಸಿಐ

ದುಲೀಪ್ ಟ್ರೋಫಿಗೆ ಸ್ಟಾರ್‌ ಆಟಗಾರರಿರುವ ನಾಲ್ಕು ತಂಡಗಳನ್ನು ಬಿಸಿಸಿಐ ಪ್ರಕಟಿಸಿದೆ. ರವೀಂದ್ರ ಜಡೇಜಾ, ರಿಷಬ್ ಪಂತ್,‌ ಇಶಾನ್ ಕಿಶನ್‌ ತಂಡಕ್ಕೆ ಮರಳಿದ್ದಾರೆ. ಇದೇ ವೇಳೆ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಟೂರ್ನಿಯಿಂದ ವಿನಾಯಿತಿ ಪಡೆದಿದ್ದಾರೆ.

ದುಲೀಪ್‌ ಟ್ರೋಫಿಗೆ 4 ತಂಡಗಳನ್ನು ಪ್ರಕಟಿಸಿದ ಬಿಸಿಸಿಐ
ದುಲೀಪ್‌ ಟ್ರೋಫಿಗೆ 4 ತಂಡಗಳನ್ನು ಪ್ರಕಟಿಸಿದ ಬಿಸಿಸಿಐ (PTI)

ಸೆಪ್ಟೆಂಬರ್ 5ರಿಂದ ಆರಂಭವಾಗಲಿರುವ ದುಲೀಪ್ ಟ್ರೋಫಿಯ (Duleep Trophy) ಮೊದಲ ಸುತ್ತಿನ ಪಂದ್ಯಗಳಿಗೆ ಅಜಿತ್ ಅಗರ್ಕರ್ ನೇತೃತ್ವದ ಹಿರಿಯ ಆಯ್ಕೆ ಸಮಿತಿಯು ಆಟಗಾರರನ್ನು ಪ್ರಕಟಿಸಿದೆ. ನಿರೀಕ್ಷೆಯಂತೆಯೇ ಸ್ಟಾರ್ ಆಟಗಾರರಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಜೊತೆಗೆ ಅನುಭವಿ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಯಾವುದೇ ತಂಡದಲ್ಲಿ ಕಾಣಿಸಿಕೊಂಡಿಲ್ಲ. ಇದೇ ವೇಳೆ ಹಿರಿಯ ಆಲ್‌ರೌಂಡರ್ ರವಿಚಂದ್ರನ್ ಅಶ್ವಿನ್ ಅವರಿಗೂ ವಿನಾಯಿತಿ ನೀಡಲಾಗಿದೆ. ಇದೇ ವೇಳೆ ಹಲವು ತಿಂಗಳುಗಳಿಂದ ಅಂತಾರಾಷ್ಟ್ರೀಯ ತಂಡಗಳಲ್ಲಿ ಕಾಣಿಸಿಕೊಳ್ಳದ ಇಶಾನ್‌ ಕಿಶನ್‌, ಇದೀಗ ದುಲೀಪ್‌ ಟ್ರೋಫಿಗೆ ಆಯ್ಕೆಯಾಗಿದ್ದಾರೆ.

ಭಾರತದಲ್ಲಿ ನಡೆಯುವ ಪ್ರಮುಖ ದೇಶೀಯ ಕ್ರಿಕೆಟ್‌ ಟೂರ್ನಿಗಳಲ್ಲಿ ಒಂದಾದ ದುಲೀಪ್‌ ಟ್ರೋಫಿಯಲ್ಲಿ ಒಟ್ಟು ನಾಲ್ಕು ತಂಡಗಳು ಇರಲಿವೆ. ಟೂರ್ನಿಯಲ್ಲಿ ಎ ತಂಡ, ಬಿ ತಂಡ, ಸಿ ತಂಡ ಮತ್ತು ಡಿ ತಂಡಗಳ ನಡುವಿನ ಪಂದ್ಯಗಳು ಆಂಧ್ರಪ್ರದೇಶದ ಅನಂತಪುರ ಮತ್ತು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿವೆ.

“ಪುರುಷರ ಆಯ್ಕೆ ಸಮಿತಿಯು 2024-25ರ ದುಲೀಪ್ ಟ್ರೋಫಿಯ ಮೊದಲ ಸುತ್ತಿಗೆ ತಂಡಗಳನ್ನು ಪ್ರಕಟಿಸಿದೆ. ದೇಶೀಯ ಋತುವಿನಲ್ಲಿ ರೆಡ್ ಬಾಲ್ ಕ್ರಿಕೆಟ್‌ನ ಆರಂಭವನ್ನು ಸೂಚಿಸುವ ದುಲೀಪ್ ಟ್ರೋಫಿಯಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಆಡಿರುವ ಅತ್ಯುತ್ತಮ ಆಟಗಾರರು ಮತ್ತು ಕೆಲವು ಉದಯೋನ್ಮುಖ ಯುವ ಪ್ರತಿಭೆಗಳು ಉನ್ನತ ಮಟ್ಟದಲ್ಲಿ ಸ್ಪರ್ಧಿಸಲಿದ್ದಾರೆ” ಎಂದು ಬಿಸಿಸಿಐ ಪ್ರಕಟಣೆಯಲ್ಲಿ ತಿಳಿಸಿದೆ.‌

ಸೆಪ್ಟೆಂಬರ್ 19ರಿಂದ ಬಾಂಗ್ಲಾದೇಶ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದೆ. ಇದೀಗ ದುಲೀಪ್‌ ಟ್ರೋಫಿಗೆ ಆಯ್ಕೆಯಾದ ಕ್ರಿಕೆಟಿಗರನ್ನು ಟೆಸ್ಟ್‌ ಸರಣಿ ಸಂದರ್ಭದಲ್ಲಿ ಬದಲಾಯಿಸಲಾಗುವುದು ಎಂದು ಬಿಸಿಸಿಐ ತಿಳಿಸಿದೆ.

ನಾಲ್ಕು ತಂಡಗಳು ಇಂತಿವೆ

ತಂಡ ಎ: ಶುಭ್ಮನ್ ಗಿಲ್ (ನಾಯಕ), ಮಯಾಂಕ್ ಅಗರ್ವಾಲ್, ರಿಯಾನ್ ಪರಾಗ್, ಧ್ರುವ್ ಜುರೆಲ್, ಕೆಎಲ್ ರಾಹುಲ್, ತಿಲಕ್ ವರ್ಮಾ, ಶಿವಂ ದುಬೆ, ತನುಷ್ ಕೋಟ್ಯಾನ್, ಕುಲ್ದೀಪ್ ಯಾದವ್, ಆಕಾಶ್ ದೀಪ್, ಪ್ರಸಿದ್ಧ್ ಕೃಷ್ಣ, ಖಲೀಲ್ ಅಹ್ಮದ್, ಆವೇಶ್ ಖಾನ್, ವಿದ್ವತ್ ಕಾವೇರಪ್ಪ, ಕುಮಾರ್ ಕುಶಾಗ್ರ , ಶಾಶ್ವತ್ ರಾವತ್.

ತಂಡ ಬಿ : ಅಭಿಮನ್ಯು ಈಶ್ವರನ್ (ನಾಯಕ), ಯಶಸ್ವಿ ಜೈಸ್ವಾಲ್, ಸರ್ಫರಾಜ್ ಖಾನ್, ರಿಷಭ್ ಪಂತ್, ಮುಶೀರ್ ಖಾನ್, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಮೊಹಮ್ಮದ್ ಸಿರಾಜ್, ಯಶ್ ದಯಾಳ್, ಮುಖೇಶ್ ಕುಮಾರ್, ರಾಹುಲ್ ಚಹರ್, ಆರ್ ಸಾಯಿ ಕಿಶೋರ್, ಮೋಹಿತ್ ಅವಸ್ಥಿ, ಎನ್ ಜಗದೀಶ್ (ವಿಕೆಟ್‌ ಕೀಪರ್).

ಸಿ ತಂಡ: ಋತುರಾಜ್ ಗಾಯಕ್ವಾಡ್ (ನಾಯಕ), ಸಾಯಿ ಸುದರ್ಶನ್, ರಜತ್ ಪಾಟೀದಾರ್, ಅಭಿಷೇಕ್ ಪೊರೆಲ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಬಿ ಇಂದ್ರಜಿತ್, ಹೃತಿಕ್ ಶೋಕೀನ್, ಮಾನವ್ ಸುತಾರ್, ಉಮ್ರಾನ್ ಮಲಿಕ್, ವೈಶಾಕ್ ವಿಜಯಕುಮಾರ್, ಅನ್ಶುಲ್ ಖಂಬೋಜ್, ಹಿಮಾಂಶು ಚೌಹಾಣ್, ಮಯಾಂಕ್ ಮಾರ್ಕಂಡೆ, ಆರ್ಯನ್ ಜುಯಾಲ್ (ವಿಕೆಟ್‌ ಕೀಪರ್), ಸಂದೀಪ್ ವಾರಿಯರ್.

ತಂಡ ಡಿ: ಶ್ರೇಯಸ್ ಅಯ್ಯರ್ (ನಾಯಕ), ಅಥರ್ವ ಟೈಡೆ, ಯಶ್ ದುಬೆ, ದೇವದತ್ ಪಡಿಕ್ಕಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಕಿ ಭುಯಿ, ಸರಣ್ಶ್ ಜೈನ್, ಅಕ್ಷರ್ ಪಟೇಲ್, ಅರ್ಷರ್ದೀಪ್ ಸಿಂಗ್, ಆದಿತ್ಯ ಠಾಕರೆ, ಹರ್ಷಿತ್ ರಾಣಾ, ತುಷಾರ್ ದೇಶಪಾಂಡೆ, ಆಕಾಶ್ ಸೇನ್ಗುಪ್ತಾ, ಕೆಎಸ್ ಭರತ್ (ವಿಕೆಟ್‌ ಕೀಪರ್), ಸೌರಭ್ ಕುಮಾರ್.

Whats_app_banner