ಇವತ್ತೇ ಭಾರತ ತಂಡ ಪ್ರಕಟ ಸಾಧ್ಯತೆ; ಜಸ್ಪ್ರೀತ್ ಬುಮ್ರಾ ಆಯ್ಕೆಯ ಗೊಂದಲದಲ್ಲಿ ಬಿಸಿಸಿಐ ಆಯ್ಕೆ ಸಮಿತಿ
ಕನ್ನಡ ಸುದ್ದಿ  /  ಕ್ರಿಕೆಟ್  /  ಇವತ್ತೇ ಭಾರತ ತಂಡ ಪ್ರಕಟ ಸಾಧ್ಯತೆ; ಜಸ್ಪ್ರೀತ್ ಬುಮ್ರಾ ಆಯ್ಕೆಯ ಗೊಂದಲದಲ್ಲಿ ಬಿಸಿಸಿಐ ಆಯ್ಕೆ ಸಮಿತಿ

ಇವತ್ತೇ ಭಾರತ ತಂಡ ಪ್ರಕಟ ಸಾಧ್ಯತೆ; ಜಸ್ಪ್ರೀತ್ ಬುಮ್ರಾ ಆಯ್ಕೆಯ ಗೊಂದಲದಲ್ಲಿ ಬಿಸಿಸಿಐ ಆಯ್ಕೆ ಸಮಿತಿ

Jasprit Bumrah : ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್​ಗೆ ಭಾರತ ತಂಡ ಇಂದು (ಫೆಬ್ರವರಿ 9) ಪ್ರಕಟವಾಗುವ ಸಾಧ್ಯತೆ ಇದೆ. ವೇಗಿ ಜಸ್ಪ್ರೀತ್ ಬುಮ್ರಾ ಅವರನ್ನು ಆಯ್ಕೆ ಮಾಡಬೇಕೇ ಬೇಡವೇ ಎಂಬ ಗೊಂದಲಕ್ಕೆ ಸಿಲುಕಿದೆ ಸೆಲೆಕ್ಷನ್ ಕಮಿಟಿ.

ಜಸ್ಪ್ರೀತ್ ಬುಮ್ರಾ ಆಯ್ಕೆಯ ಗೊಂದಲದಲ್ಲಿ ಬಿಸಿಸಿಐ ಆಯ್ಕೆ ಸಮಿತಿ
ಜಸ್ಪ್ರೀತ್ ಬುಮ್ರಾ ಆಯ್ಕೆಯ ಗೊಂದಲದಲ್ಲಿ ಬಿಸಿಸಿಐ ಆಯ್ಕೆ ಸಮಿತಿ (PTI)

ವಿಶಾಖಪಟ್ಟಣಂನಲ್ಲಿ ನಡೆದ 2ನೇ ಟೆಸ್ಟ್‌ನಲ್ಲಿ ಗೆಲುವಿನೊಂದಿಗೆ ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯನ್ನು (India vs England) ಭಾರತ 1-1 ರಿಂದ ಡ್ರಾಗೊಳಿಸಿದೆ. ಇಡೀ ಕ್ರಿಕೆಟ್ ಅಭಿಮಾನಿಗಳು ಈಗ ಮೂರನೇ ಪಂದ್ಯಕ್ಕಾಗಿ ಎದುರು ನೋಡುತ್ತಿದ್ದಾರೆ. ಫೆಬ್ರವರಿ 15ರಂದು ಪಂದ್ಯ ನಡೆಯಲಿದೆ. ಆದಾಗ್ಯೂ ಕೆಲಸದ ಹೊರೆ ಇಳಿಸುವ ಸಲುವಾಗಿ ಸ್ಟಾರ್​ ವೇಗಿ ಜಸ್ಪ್ರೀತ್ ಬುಮ್ರಾ (Jasprit Bumrah) ಮೂರನೇ ಪಂದ್ಯಕ್ಕೆ ವಿಶ್ರಾಂತಿ ಪಡೆಯಬಹುದು ಎಂದು ವರದಿಯಾಗಿತ್ತು. ಆದರೆ ಇತ್ತೀಚಿನ ವರದಿಗಳು ಅದನ್ನು ತಳ್ಳಿ ಹಾಕಿವೆ.

ಆಯ್ಕೆಯ ಗೊಂದಲದಲ್ಲಿ ಬಿಸಿಸಿಐ ಸೆಲೆಕ್ಟರ್ಸ್

ಕ್ರಿಕ್‌ಬಜ್‌ನ ವರದಿಯ ಪ್ರಕಾರ, ಇಂಗ್ಲೆಂಡ್ ವಿರುದ್ಧದ ಮೊದಲ ಎರಡು ಟೆಸ್ಟ್ ಪಂದ್ಯಗಳಲ್ಲಿ ಜಸ್ಪ್ರೀತ್ ಬುಮ್ರಾ ಅವರ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಹಾಗಾಗಿ ನಾಯಕ ರೋಹಿತ್ ಶರ್ಮಾ, ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಮತ್ತು ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಅವರು ವೇಗದ ಬೌಲರ್‌ಗೆ ವಿಶ್ರಾಂತಿ ನೀಡುವ ನಿರ್ಧಾರ ಮರು ಪರಿಶೀಲನೆ ನಡೆಸುತ್ತಿದ್ದು, ತಂಡಕ್ಕೆ ಕರೆಸಿಕೊಳ್ಳುವ ಸಾಧ್ಯತೆ ಇದೆ.

ಟೀಮ್ ಮ್ಯಾನೇಜ್‌ಮೆಂಟ್ ಬುಮ್ರಾಗೆ ವಿಶ್ರಾಂತಿ ನೀಡಿ ಮೊಹಮ್ಮದ್ ಸಿರಾಜ್​ರನ್ನು 3ನೇ ಟೆಸ್ಟ್‌ನಲ್ಲಿ ತಂಡಕ್ಕೆ ಸೇರಿಸಲು ನಿರ್ಧರಿಸಲಾಗಿದೆ ಎಂದು ಈ ಹಿಂದಿನ ವರದಿಗಳು ಹೇಳಿದ್ದವು. ಬುಮ್ರಾಗೆ ಗಾಯವಾಗಿದೆ ಎಂದು ಇನ್ನೂ ಕೆಲವು ವರದಿಗಳು ಹೇಳಿದ್ದವು. ಆದರೆ, ಇದೆಲ್ಲವೂ ವದಂತಿಗಳು ಎಂದು ಹೇಳಲಾಗುತ್ತಿದೆ. ಅವರನ್ನು ಮೂರನೇ ಟೆಸ್ಟ್​​ಗೆ ಆಯ್ಕೆ ಮಾಡಲು ಆಯ್ಕೆ ಮಾಡಲು ಆಯ್ಕೆ ಸಮಿತಿ ಚಿಂತನೆ ನಡೆಸಿದೆ. ಮತ್ತೊಂದೆಡೆ ಆತನ ಕೆಲಸ ಹೊರೆ ಇಳಿಸುವ ಯೋಚನೆಯನ್ನೂ ಮಾಡಿದೆ. ಹೀಗಾಗಿ ಸೆಲೆಕ್ಟರ್ಸ್​ಗೆ ಗೊಂದಲ ಹೆಚ್ಚಾಗಿದೆ.

15 ವಿಕೆಟ್ ಉರುಳಿಸಿರುವ ಬುಮ್ರಾ

ಬುಮ್ರಾ ಈಗಾಗಲೇ ಆಡಿರುವ ಇಂಗ್ಲೆಂಡ್ ವಿರುದ್ಧದ ಎರಡು ಟೆಸ್ಟ್ ಪಂದ್ಯಗಳಲ್ಲಿ 58 ಓವರ್‌ ಬೌಲಿಂಗ್ ಮಾಡಿದ್ದು, ಅದ್ಭುತ ಪ್ರದರ್ಶನ ನೀಡುವ ಅಪಾರ ಮೆಚ್ಚುಗೆ ಗಳಿಸಿದ್ದಾರೆ. ಸದ್ಯ ಎರಡು ಪಂದ್ಯಗಳಲ್ಲಿ 15 ವಿಕೆಟ್ ಪಡೆದಿದ್ದು, ಪ್ರಮುಖ ವಿಕೆಟ್ ಟೇಕರ್​​ ಆಗಿ ಹೊರ ಹೊಮ್ಮಿದ್ದಾರೆ. ಸ್ಪಿನ್ನರ್​​ಗಳು ಮಿಂಚಬೇಕಿದ್ದ ಪಿಚ್​ಗಳಲ್ಲಿ ಬುಮ್ರಾ ವಿಕೆಟ್ ಬೇಟೆಯಾಡುವ ಮೂಲಕ ಗಮನ ಸೆಳೆದಿದ್ದಾರೆ.

ತಂಡದ ಇಂದು ಪ್ರಕಟ ಸಾಧ್ಯತೆ

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಕೊನೆಯ 3 ಪಂದ್ಯಗಳಿಗೆ ಭಾರತ ತಂಡವನ್ನು ಇನ್ನೂ ಹೆಸರಿಸಿಲ್ಲ. ಕ್ರಿಕ್‌ಬಜ್‌ನ ವರದಿಯ ಪ್ರಕಾರ, ತಂಡದ ಮ್ಯಾನೇಜ್‌ಮೆಂಟ್ ಶುಕ್ರವಾರ (ಫೆಬ್ರವರಿ 9) ತಂಡವನ್ನು ಪ್ರಕಟಿಸುವ ಸಾಧ್ಯತೆ ಇದೆ. ಮೂರನೇ ಟೆಸ್ಟ್‌ಗೆ ಒಂದು ವಾರಕ್ಕಿಂತ ಕಡಿಮೆ ಸಮಯ ಉಳಿದಿರುವಾಗ ತಂಡ ಪ್ರಕಟಿಸಲು ಸಜ್ಜಾಗಿದೆ ಭಾರತೀಯ ಆಯ್ಕೆ ಸಮಿತಿ.

ಯಾರೆಲ್ಲಾ ಇನ್?

ವೈಯಕ್ತಿಕ ಕಾರಣಗಳಿಂದಾಗಿ ವಿರಾಟ್ ಕೊಹ್ಲಿ ಮೊದಲ ಎರಡು ಪಂದ್ಯಗಳಿಂದ ಹೊರಗುಳಿದ ನಂತರ ಅಂತಿಮ ಮೂರು ಟೆಸ್ಟ್ ಪಂದ್ಯಗಳನ್ನು ಸಹ ಕಳೆದುಕೊಳ್ಳುವ ಸಾಧ್ಯತೆಯಿದೆ ಎಂಬುದು ತಂಡದ ಆಯ್ಕೆಯ ಮುಂದೆ ಬರುತ್ತಿರುವ ದೊಡ್ಡ ವದಂತಿಯಾಗಿದೆ. ಮತ್ತೊಂದೆಡೆ, ಕೆಎಲ್ ರಾಹುಲ್ ಮತ್ತು ರವೀಂದ್ರ ಜಡೇಜಾ ಕೂಡ ಮಂಡಿರಜ್ಜು ಗಾಯದಿಂದಾಗಿ ಎರಡನೇ ಟೆಸ್ಟ್‌ನಿಂದ ಹೊರಗುಳಿದ ನಂತರ ಮರಳುವ ಸಾಧ್ಯತೆಯಿದೆ.

Whats_app_banner