ಜಸ್ಪ್ರೀತ್ ಬುಮ್ರಾಗೆ ವಿಶ್ರಾಂತಿ, ಶುಭ್ಮನ್ ಗಿಲ್​ಗೆ ಅವಕಾಶ; ಏಷ್ಯಾಕಪ್ ಟೂರ್ನಿಗೆ ಭಾರತದ ಸಂಭಾವ್ಯ ತಂಡ
ಕನ್ನಡ ಸುದ್ದಿ  /  ಕ್ರಿಕೆಟ್  /  ಜಸ್ಪ್ರೀತ್ ಬುಮ್ರಾಗೆ ವಿಶ್ರಾಂತಿ, ಶುಭ್ಮನ್ ಗಿಲ್​ಗೆ ಅವಕಾಶ; ಏಷ್ಯಾಕಪ್ ಟೂರ್ನಿಗೆ ಭಾರತದ ಸಂಭಾವ್ಯ ತಂಡ

ಜಸ್ಪ್ರೀತ್ ಬುಮ್ರಾಗೆ ವಿಶ್ರಾಂತಿ, ಶುಭ್ಮನ್ ಗಿಲ್​ಗೆ ಅವಕಾಶ; ಏಷ್ಯಾಕಪ್ ಟೂರ್ನಿಗೆ ಭಾರತದ ಸಂಭಾವ್ಯ ತಂಡ

Asia Cup 2025: ಮುಂದಿನ ವರ್ಷ ನಡೆಯುವ ಟಿ20 ವಿಶ್ವಕಪ್​ಗೂ ಮುನ್ನ ಜರುಗುವ ಏಷ್ಯಾಕಪ್ ಟೂರ್ನಿಗೆ ಭಾರತ ತಂಡ ಹೇಗಿರಲಿದೆ? ಯಾರಿಗೆಲ್ಲಾ ಅವಕಾಶ ಸಿಗಬಹುದು? ಹಿರಿಯ ಆಟಗಾರರು ಇರಲಿದ್ದಾರೆಯೇ? ಇಲ್ಲಿದೆ ವಿವರ.

ಜಸ್ಪ್ರೀತ್ ಬುಮ್ರಾಗೆ ವಿಶ್ರಾಂತಿ, ಶುಭ್ಮನ್ ಗಿಲ್​ಗೆ ಅವಕಾಶ; ಏಷ್ಯಾಕಪ್ ಟೂರ್ನಿಗೆ ಭಾರತದ ಸಂಭಾವ್ಯ ತಂಡ
ಜಸ್ಪ್ರೀತ್ ಬುಮ್ರಾಗೆ ವಿಶ್ರಾಂತಿ, ಶುಭ್ಮನ್ ಗಿಲ್​ಗೆ ಅವಕಾಶ; ಏಷ್ಯಾಕಪ್ ಟೂರ್ನಿಗೆ ಭಾರತದ ಸಂಭಾವ್ಯ ತಂಡ

ಟಿ20 ವಿಶ್ವಕಪ್ ಮತ್ತು ಐಸಿಸಿ ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದ ನಂತರ, ಭಾರತ ತಂಡವು ಈಗ ಮುಂದಿನ ದೊಡ್ಡ ಟೂರ್ನಿಯಾದ 2026ರ ಐಸಿಸಿ ಟಿ20 ವಿಶ್ವಕಪ್ ಮೇಲೆ ಗಮನ ಹರಿಸಲಿದೆ. ಮುಂದಿನ ವರ್ಷ ಭಾರತ ಮತ್ತು ಶ್ರೀಲಂಕಾ ಈ ಟೂರ್ನಿಯನ್ನು ಆಯೋಜಿಸಲಿವೆ. ಈ ಟೂರ್ನಿಗೂ ಮುನ್ನ, ಸೆಪ್ಟೆಂಬರ್ 2025ರಲ್ಲಿ ಟಿ20 ಸ್ವರೂಪದಲ್ಲಿ ನಡೆಯಲಿರುವ ಟಿ20 ಏಷ್ಯಾ ಕಪ್ ನಡೆಯಲಿದ್ದು, ಏಷ್ಯನ್ ತಂಡಗಳು ಐಸಿಸಿ ಟೂರ್ನಿಗೆ ಸಿದ್ಧತೆ ಮಾಡಿಕೊಳ್ಳಲಿವೆ.

ಏಷ್ಯಾಕಪ್‌ನಲ್ಲಿ ಭಾಗವಹಿಸುವ ತಂಡವು ಟಿ20 ವಿಶ್ವಕಪ್‌ನಲ್ಲಿಯೂ ಆಡುವ ಸಾಧ್ಯತೆಯಿದೆ. ಇದು ಎಂಟು ತಂಡಗಳ ಟೂರ್ನಿಯಾಗಿದ್ದು, ಭಾರತ, ಪಾಕಿಸ್ತಾನ, ಅಫ್ಘಾನಿಸ್ತಾನ, ಬಾಂಗ್ಲಾದೇಶ, ಯುಎಇ, ಹಾಂಗ್ ಕಾಂಗ್ ಮತ್ತು ಓಮನ್ ಭಾಗವಹಿಸಲಿವೆ. ಜುಲೈ-ಆಗಸ್ಟ್‌ನಲ್ಲಿ ಭಾರತ ಐದು ಪಂದ್ಯಗಳ ಟೆಸ್ಟ್ ಸರಣಿ ಆಡಲಿದ್ದು, ಟಿ20 ವಿಶ್ವಕಪ್ ಟೂರ್ನಿ ಭಾಗವಾಗುವ ಕೆಲವು ಆಟಗಾರರಿಗೆ ವಿಶ್ರಾಂತಿ ನೀಡಬಹುದು. ಕೆಲಸದ ಹೊರೆ ಇಳಿಸುವ ಸಲುವಾಗಿ​ ಜಸ್ಪ್ರೀತ್ ಬುಮ್ರಾಗೆ ಏಷ್ಯಾಕಪ್ ಟೂರ್ನಿಗೆ ವಿಶ್ರಾಂತಿ ನೀಡಬಹುದು.

ಜಸ್ಪ್ರೀತ್ ಬುಮ್ರಾಗೆ ವಿಶ್ರಾಂತಿ

ಪ್ರಸ್ತುತ ಬುಮ್ರಾ ಗಾಯದಿಂದ ಬಳಲುತ್ತಿದ್ದಾರೆ. ಚಾಂಪಿಯನ್ಸ್ ಟ್ರೋಫಿ ತಪ್ಪಿಸಿಕೊಂಡಿದ್ದ ಬುಮ್ರಾ ಅವರು, ಪ್ರಸಕ್ತ ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ ಪರ ಕೆಲವು ಪಂದ್ಯಗಳನ್ನೂ ತಪ್ಪಿಸಿಕೊಳ್ಳಲಿದ್ದಾರೆ. ಇಂಗ್ಲೆಂಡ್ ವಿರುದ್ಧ ಸರಣಿಯಲ್ಲಿ ಬುಮ್ರಾ ಕಣಕ್ಕಿಳಿಯುವುದು ಅತ್ಯಂತ ಅವಶ್ಯಕವಾಗಿದೆ. ಒಂದೂವರೆ ತಿಂಗಳು ಪೂರ್ತಿ ಸರಣಿಗೆ ಲಭ್ಯರಿರಲಿದ್ದಾರೆ. ಹೀಗಾಗಿ ಬಿಡುವಿಲ್ಲದ ಸರಣಿಯ ನಂತರ ಏಷ್ಯಾ ಕಪ್‌ನಲ್ಲೂ ಕಣಕ್ಕಿಳಿದರೆ ಬುಮ್ರಾ ಮತ್ತೆ ಅಪಾಯಕ್ಕೆ ಸಿಲುಕುವ ಸಾಧ್ಯತೆ ಹೆಚ್ಚು. ಹಾಗಾಗಿ ಅವರಿಗೆ ವಿಶ್ರಾಂತಿ ನೀಡಬಹುದು. 

ಮೊಹಮ್ಮದ್ ಶಮಿ, ಕೆಎಲ್ ರಾಹುಲ್ ಕೂಡ ತಂಡದಿಂದ ಹೊರಗುಳಿಯಬಹುದು. ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ಅಭಿಷೇಕ್ ಶರ್ಮಾ ಮತ್ತು ಸಂಜು ಸ್ಯಾಮ್ಸನ್ ಆರಂಭಿಕ ಸ್ಥಾನಕ್ಕೆ ಅವಕಾಶ ಪಡೆಯಲಿದ್ದಾರೆ. ಸೂರ್ಯ ಕುಮಾರ್ ಯಾದವ್ ತಂಡವನ್ನು ಮುನ್ನಡೆಸಲಿದ್ದು, ಹಾರ್ದಿಕ್ ಪಾಂಡ್ಯ, ಶ್ರೇಯಸ್ ಅಯ್ಯರ್, ರಿಂಕು ಸಿಂಗ್ ಮತ್ತು ತಿಲಕ್ ವರ್ಮಾ ಅವರು ಬ್ಯಾಟರ್​​ಗಳಾಗಿ ಆಯ್ಕೆಯಾಗಲಿದ್ದಾರೆ. ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಸಹ ತಂಡದ ಭಾಗವಾಗಬಹುದು. ಅಕ್ಷರ್ ಪಟೇಲ್ ವಾಷಿಂಗ್ಟನ್ ಸುಂದರ್ ಜೊತೆಗೆ ಸ್ಪಿನ್ ಆಲ್‌ರೌಂಡರ್ ಆಗಬಹುದು. 

ಹಾರ್ದಿಕ್ ಪಾಂಡ್ಯ ಜೊತೆಗೆ ನಿತೀಶ್ ರೆಡ್ಡಿ 2ನೇ ವೇಗದ ಬೌಲಿಂಗ್ ಆಲ್‌ರೌಂಡರ್ ಆಗಬಹುದು. ಕುಲ್ದೀಪ್ ಯಾದವ್, ವರುಣ್ ಚಕ್ರವರ್ತಿ ಸ್ಪೆಷಲಿಸ್ಟ್ ಸ್ಪಿನ್ನರ್‌ಗಳಾಗಿದ್ದರೆ, ಅರ್ಷದೀಪ್ ಸಿಂಗ್, ಹರ್ಷಿತ್ ರಾಣಾ ಮತ್ತು ಮೊಹಮ್ಮದ್ ಸಿರಾಜ್ ವೇಗದ ಬೌಲರ್‌ಗಳಾಗಿರಬಹುದು. ಇದೀಗ ಇಶಾನ್ ಕಿಶನ್ ಕೂಡ ರೇಸ್​ಗೆ ಮರಳಬಹುದು. ಜೊತೆಗೆ ಐಪಿಎಲ್​ನಲ್ಲಿ ಯುವ ಆಟಗಾರರು ಮಿಂಚಿದರೆ, ಅಂತಹ ಆಟಗಾರರಿಗೆ ಅವಕಾಶ ಸಿಕ್ಕರೂ ಅಚ್ಚರಿ ಇಲ್ಲ.

2025ರ ಏಷ್ಯಾ ಕಪ್‌ಗೆ ಭಾರತದ ಸಂಭಾವ್ಯ ತಂಡ

ಶುಭ್ಮನ್ ಗಿಲ್, ಸಂಜು ಸ್ಯಾಮ್ಸನ್, ಯಶಸ್ವಿ ಜೈಸ್ವಾಲ್, ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್.

Prasanna Kumar PN

TwittereMail
ಪ್ರಸನ್ನಕುಮಾರ್ ಪಿ.ಎನ್.: 'ಹಿಂದೂಸ್ತಾನ್ ಟೈಮ್ಸ್​​ ಕನ್ನಡ'ದಲ್ಲಿ ಸೀನಿಯರ್​ ಕಂಟೆಂಟ್ ಪ್ರೊಡ್ಯೂಸರ್. ಕ್ರೀಡಾ (ಕ್ರಿಕೆಟ್) ವಿಭಾಗದಲ್ಲಿ ಕಾರ್ಯನಿರ್ವಹಣೆ. ಸಂಜೆವಾಣಿ, ವಿಶ್ವವಾಣಿ, ಪ್ರಜಾವಾಣಿ, ಈಟಿವಿ ಭಾರತ್, ನ್ಯೂಸ್ ಫಸ್ಟ್​ ಮಾಧ್ಯಮ ಸಂಸ್ಥೆಗಳಲ್ಲಿ ಒಟ್ಟು 7 ವರ್ಷ ಸೇವೆ ಸಲ್ಲಿಸಿದ ಅನುಭವ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಪುಟ್ಟಲಿಂಗಯ್ಯನಪಾಳ್ಯ ಇವರ ಊರು. ಸದ್ಯಕ್ಕೆ ಬೆಂಗಳೂರು ನಿವಾಸಿ.
Whats_app_banner