IPL 2024 Final: ಕೆಕೆಆರ್ ವಿರುದ್ಧ ಟಾಸ್ ಗೆದ್ದ ಎಸ್​ಆರ್​ಹೆಚ್ ಬ್ಯಾಟಿಂಗ್ ಆಯ್ಕೆ; ಇಲ್ಲಿದೆ ಉಭಯ ತಂಡಗಳ ಬಲಿಷ್ಠ ಪ್ಲೇಯಿಂಗ್ 11
ಕನ್ನಡ ಸುದ್ದಿ  /  ಕ್ರಿಕೆಟ್  /  Ipl 2024 Final: ಕೆಕೆಆರ್ ವಿರುದ್ಧ ಟಾಸ್ ಗೆದ್ದ ಎಸ್​ಆರ್​ಹೆಚ್ ಬ್ಯಾಟಿಂಗ್ ಆಯ್ಕೆ; ಇಲ್ಲಿದೆ ಉಭಯ ತಂಡಗಳ ಬಲಿಷ್ಠ ಪ್ಲೇಯಿಂಗ್ 11

IPL 2024 Final: ಕೆಕೆಆರ್ ವಿರುದ್ಧ ಟಾಸ್ ಗೆದ್ದ ಎಸ್​ಆರ್​ಹೆಚ್ ಬ್ಯಾಟಿಂಗ್ ಆಯ್ಕೆ; ಇಲ್ಲಿದೆ ಉಭಯ ತಂಡಗಳ ಬಲಿಷ್ಠ ಪ್ಲೇಯಿಂಗ್ 11

KKR vs SRH IPL 2024 Final Toss : ಇಂಡಿಯನ್ ಪ್ರೀಮಿಯರ್ ಲೀಗ್​ ಫೈನಲ್ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಟಾಸ್ ಗೆದ್ದ ಸನ್​ರೈಸರ್ಸ್ ಹೈದರಾಬಾದ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಐಪಿಎಲ್​ 2024 ಫೈನಲ್​ನಲ್ಲಿ ಕೆಕೆಆರ್ vs ಎಸ್​ಆರ್​ಹೆಚ್ ಹಣಾಹಣಿ
ಐಪಿಎಲ್​ 2024 ಫೈನಲ್​ನಲ್ಲಿ ಕೆಕೆಆರ್ vs ಎಸ್​ಆರ್​ಹೆಚ್ ಹಣಾಹಣಿ

KKR vs SRH IPL 2024 Final: ಇಂಡಿಯನ್ ಪ್ರೀಮಿಯರ್ ಲೀಗ್​-2024 ಟೇಬಲ್ ಟಾಪರ್​ಗಳಾದ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್​ರೈಸರ್ಸ್​​ ಹೈದರಾಬಾದ್ ತಂಡಗಳು ಫೈನಲ್​​ನಲ್ಲಿ ಸೆಣಸಾಟ ನಡೆಸುತ್ತಿವೆ. ಚೆನ್ನೈನ ಎಂಎ ಚಿದಂಬರಂ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಪ್ರಶಸ್ತಿ ಸುತ್ತಿನ ಕದನದಲ್ಲಿ ಕೆಕೆಆರ್​ ನಾಯಕ ಶ್ರೇಯಸ್ ಅಯ್ಯರ್ ವಿರುದ್ಧ ಟಾಸ್ ಗೆದ್ದ ಎಸ್​ಆರ್​ಹೆಚ್​ ಪ್ಯಾಟ್ ಕಮಿನ್ಸ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ಹೈದರಾಬಾದ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದರ ಹಿಂದೆ ಮಹತ್ವದ ಕಾರಣವಿದೆ. ಚೆನ್ನೈನ ಚಿದಂಬರಂ ಮೈದಾನದಲ್ಲಿ ಆಡಿರುವ ಐಪಿಎಲ್ 8 ಪ್ಲೇಆಫ್/ನಾಕೌಟ್ ಪಂದ್ಯಗಳಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ 6 ತಂಡಗಳು ಗೆದ್ದಿವೆ. 2024ರ ಎರಡನೇ ಕ್ವಾಲಿಫೈಯರ್​ ಪಂದ್ಯದಲ್ಲಿ ಇದೇ ಮೈದಾನದಲ್ಲಿ ಎಸ್​ಆರ್​ಹೆಚ್​ ಮೊದಲು ಬ್ಯಾಟಿಂಗ್ ಮಾಡಿ ಗೆದ್ದಿತ್ತು. ಇದೇ ಕಾರಣಕ್ಕೆ ಪ್ಯಾಟ್ ಕಮಿನ್ಸ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. 

ಈ ಪಿಚ್​​ನಲ್ಲಿ ಪಂದ್ಯ ಮುಂದುವರೆದಂತೆ ಸ್ಪಿನ್ನರ್​ಗಳ ಪ್ರಾಬಲ್ಯ ಹೆಚ್ಚಾಗಲಿದೆ. ಒಂದು ವೇಳೆ ಕೆಕೆಆರ್ ಮೊದಲು ಬ್ಯಾಟಿಂಗ್ ನಡೆಸಿದರೆ, ಚೇಸಿಂಗ್​ನಲ್ಲಿ ಸ್ಪೆಷಲಿಸ್ಟ್​ ಸ್ಪಿನ್ನರ್​ಗಳಾದ ವರುಣ್ ಚಕ್ರವರ್ತಿ ಮತ್ತು ಸುನಿಲ್ ನರೇನ್​ ತಮಗೆ ಕಂಟಕವಾಗಲಿದ್ದಾರೆ ಎಂದೂ ಸಹ ಕಮಿನ್ಸ್​ ಈ ನಿರ್ಧಾರ ತೆಗೆದುಕೊಂಡಿರಬಹುದು. ಕೆಕೆಆರ್ ತಂಡದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಎಸ್​ಆರ್​ಹೆಚ್ ತಂಡಕ್ಕೆ ಅದ್ಬುಲ್ ಸಮದ್ ತಂಡದಿಂದ ಹೊರಬಿದ್ದಿದ್ದಾರೆ.

ಕೋಲ್ಕತ್ತಾ ನೈಟ್ ರೈಡರ್ಸ್ (ಪ್ಲೇಯಿಂಗ್ XI)

ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಸುನಿಲ್ ನರೈನ್, ವೆಂಕಟೇಶ್ ಅಯ್ಯರ್, ಶ್ರೇಯಸ್ ಅಯ್ಯರ್ (ನಾಯಕ), ರಿಂಕು ಸಿಂಗ್, ಆಂಡ್ರೆ ರಸೆಲ್, ರಮಣದೀಪ್ ಸಿಂಗ್, ಮಿಚೆಲ್ ಸ್ಟಾರ್ಕ್, ವೈಭವ್ ಅರೋರಾ, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ

ಸನ್‌ರೈಸರ್ಸ್ ಹೈದರಾಬಾದ್ (ಪ್ಲೇಯಿಂಗ್ XI)

ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ರಾಹುಲ್ ತ್ರಿಪಾಠಿ, ಏಡನ್ ಮಾರ್ಕ್ರಮ್, ನಿತೀಶ್ ರೆಡ್ಡಿ, ಹೆನ್ರಿಚ್ ಕ್ಲಾಸೆನ್ (ವಿಕೆಟ್ ಕೀಪರ್​), ಶಹಬಾಜ್ ಅಹ್ಮದ್, ಪ್ಯಾಟ್ ಕಮಿನ್ಸ್ (ನಾಯಕ), ಭುವನೇಶ್ವರ್ ಕುಮಾರ್, ಜಯದೇವ್ ಉನಾದ್ಕತ್, ಟಿ ನಟರಾಜನ್

ಸನ್‌ರೈಸರ್ಸ್ ಹೈದರಾಬಾದ್ ಇಂಪ್ಯಾಕ್ಟ್ ಪ್ಲೇಯರ್ಸ್: ಉಮ್ರಾನ್ ಮಲಿಕ್, ಗ್ಲೆನ್ ಫಿಲಿಪ್ಸ್, ಮಯಾಂಕ್ ಮಾರ್ಕಾಂಡೆ, ಅಬ್ದುಲ್ ಸಮದ್, ವಾಷಿಂಗ್ಟನ್ ಸುಂದರ್

ಕೋಲ್ಕತ್ತಾ ನೈಟ್ ರೈಡರ್ಸ್ ಇಂಪ್ಯಾಕ್ಟ್ ಪ್ಲೇಯರ್ಸ್: ಅನುಕುಲ್ ರಾಯ್, ಮನೀಶ್ ಪಾಂಡೆ, ನಿತೀಶ್ ರಾಣಾ, ಕೆಎಸ್ ಭರತ್, ಶೆರ್ಫಾನೆ ರುದರ್​ಫೋರ್ಡ್

ಉಭಯ ತಂಡಗಳ ಐಪಿಎಲ್-2024 ಪ್ರಯಾಣ

ಕೆಕೆಆರ್: 14 ಪಂದ್ಯ, 9 ಗೆಲುವು, 3 ಸೋಲು, 2 ರದ್ದು, 20 ಅಂಕ (ಅಗ್ರಸ್ಥಾನ), ಕ್ವಾಲಿಫೈಯರ್​-1 ಗೆಲುವು

ಎಸ್​ಆರ್​ಹೆಚ್​: 14 ಪಂದ್ಯ, 8 ಗೆಲುವು, 5 ಸೋಲು, 1 ರದ್ದು, 17 ಅಂಕ (2ನೇ ಸ್ಥಾನ), ಕ್ವಾಲಿಫೈಯರ್​-1 ಸೋಲು, ಕ್ವಾಲಿಫೈಯರ್-2​ ಗೆಲುವು

ಉಭಯ ತಂಡಗಳು ಮುಖಾಮುಖಿ

ಪಂದ್ಯಗಳು - 27

ಕೆಕೆಆರ್​ ಗೆಲುವು - 18 (ಗೆಲುವಿನ ಶೇಕಡಾ 67)

ಎಸ್​ಆರ್​ಹೆಚ್ - 09 (ಗೆಲುವಿನ ಶೇಕಡಾ 33)

 

(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್‌. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)

Whats_app_banner