ಕೆಎಲ್ ರಾಹುಲ್ ಇನ್, ಶಮಿ ರಿಟರ್ನ್, ಪೂಜಾರ ಔಟ್; ಬಾರ್ಡರ್​ ಗವಾಸ್ಕರ್ ಟ್ರೋಫಿಗೆ ಭಾರತ ಸಂಭಾವ್ಯ ತಂಡ
ಕನ್ನಡ ಸುದ್ದಿ  /  ಕ್ರಿಕೆಟ್  /  ಕೆಎಲ್ ರಾಹುಲ್ ಇನ್, ಶಮಿ ರಿಟರ್ನ್, ಪೂಜಾರ ಔಟ್; ಬಾರ್ಡರ್​ ಗವಾಸ್ಕರ್ ಟ್ರೋಫಿಗೆ ಭಾರತ ಸಂಭಾವ್ಯ ತಂಡ

ಕೆಎಲ್ ರಾಹುಲ್ ಇನ್, ಶಮಿ ರಿಟರ್ನ್, ಪೂಜಾರ ಔಟ್; ಬಾರ್ಡರ್​ ಗವಾಸ್ಕರ್ ಟ್ರೋಫಿಗೆ ಭಾರತ ಸಂಭಾವ್ಯ ತಂಡ

Border-Gavaskar Trophy: ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್ ಗವಾಸ್ಕರ್ ಟ್ರೋಫಿಗೆ ಭಾರತ ತಂಡದ ಆಯ್ಕೆಗೆ ಸಂಬಂಧಿಸಿ ಚರ್ಚೆ ನಡೆಯುತ್ತಿದೆ. ಈ ಮಹತ್ವದ ಸರಣಿಗೆ ಯಾರಿಗೆಲ್ಲಾ ಅವಕಾಶ ಸಿಗಬಹುದು ಎಂಬುದರ ವಿವರ ಇಲ್ಲಿದೆ.

ಕೆಎಲ್ ರಾಹುಲ್, ಚೇತೇಶ್ವರ್ ಪೂಜಾರ, ಮೊಹಮ್ಮದ್ ಶಮಿ.
ಕೆಎಲ್ ರಾಹುಲ್, ಚೇತೇಶ್ವರ್ ಪೂಜಾರ, ಮೊಹಮ್ಮದ್ ಶಮಿ.

ಪ್ರಸ್ತುತ ಪುಣೆಯಲ್ಲಿ ನಡೆಯುತ್ತಿರುವ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 2ನೇ ಟೆಸ್ಟ್ ಪಂದ್ಯ ಮುಗಿದ ತಕ್ಷಣ ಚೀಫ್ ಸೆಲೆಕ್ಟರ್ ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿಯು ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್​ ಗವಾಸ್ಕರ್​ ಟ್ರೋಫಿಗೆ ರೋಹಿತ್ ಶರ್ಮಾ ಅವರ ನೇತೃತ್ವದ ತಂಡವನ್ನು ಪ್ರಕಟಿಸುವ ನಿರೀಕ್ಷೆ ಇದೆ. ಕಳೆದ ನಾಲ್ಕು ಸಿರೀಸ್​​​​​ಗಳಲ್ಲಿ ಆಸೀಸ್ ವಿರುದ್ಧ ಬಿಜಿಟಿ ಗೆದ್ದಿರುವ ಭಾರತ, ಸತತ ಐದನೇ ಸರಣಿ ಮೇಲೆ ಕಣ್ಣಿಟ್ಟಿದೆ. ಅಲ್ಲದೆ, ಆಸ್ಟ್ರೇಲಿಯಾ ನೆಲದಲ್ಲಿ ಸತತ 2 ಜಯ ಸಾಧಿಸಿದ ಟೀಂ ಇಂಡಿಯಾ, ಹ್ಯಾಟ್ರಿಕ್ ಗೆಲುವು ಸಾಧಿಸಲು ಯೋಜನೆ ರೂಪಿಸಿದೆ.

ಆಸ್ಟ್ರೇಲಿಯಾ ವಿರುದ್ಧ ತನ್ನದೇ ನೆಲದಲ್ಲಿ ಎದುರಿಸುವುದು ಸುಲಭದ ಮಾತಲ್ಲ. ಫಾಸ್ಟ್​ ಮತ್ತು ಬೌನ್ಸಿ ಟ್ರ್ಯಾಕ್​​ನಲ್ಲಿ ರನ್ ಗಳಿಸಲು ಇಲ್ಲಿನ ಪಿಚ್​​ಗಳಲ್ಲಿ ಯಂಗ್​ಸ್ಟರ್ಸ್ ಸ್ಕೋರ್ ಮಾಡುವುದು ಕಷ್ಟದ ವಿಷಯ. ನವೆಂಬರ್ 22ರಿಂದ ಆರಂಭವಾಗುವ ಮಹತ್ವದ ಸಿರೀಸ್​​ಗೆ ಅನುಭವಿ ಆಟಗಾರರಿಗೆ ಮತ್ತೆ ಮಣೆ ಹಾಕಬೇಕೇ ಬೇಡವೇ ಎಂಬ ಗೊಂದಲದಲ್ಲಿ ಇದೆ ಆಯ್ಕೆ ಸಮಿತಿ. ಅಲ್ಲದೆ, ಯುವ ಆಟಗಾರರಿಗೆ ಮಣೆ ಹಾಕುವ ಬಗ್ಗೆ ಕೂಡ ಚರ್ಚೆಗಳು ನಡೆದಿದೆ. ಈ ವೇಳೆ ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ ಬಗ್ಗೆಯೂ ಚರ್ಚೆ ನಡೆದಿದೆ.

ನಾಯಕ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಜೊತೆಗೆ ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ರಿಷಭ್ ಪಂತ್, ಜಸ್ಪ್ರೀತ್ ಬುಮ್ರಾ, ಸಿರಾಜ್ ಆಯ್ಕೆಯೂ ಖಚಿತ ಎನ್ನಲಾಗಿದೆ. ಕಿವೀಸ್ ವಿರುದ್ಧದ ಪುಣೆ ಟೆಸ್ಟ್​ಗೆ ಕೆಎಲ್ ರಾಹುಲ್​​ರನ್ನು ಪ್ಲೇಯಿಂಗ್ 11 ​ನಿಂದ ಕೈಬಿಟ್ಟರೂ ಈ ಸರಣಿಗೆ ಆಯ್ಕೆಯಾಗುತ್ತಾರೆ ಎನ್ನಲಾಗುತ್ತಿದೆ. ಇದೆಲ್ಲದರ ಮಧ್ಯೆ ಭಾರತ ತಂಡದಿಂದ ಹೊರಬಿದ್ದಿರುವ ಚೇತೇಶ್ವರ್ ಪೂಜಾರಗೆ ಮತ್ತೊಮ್ಮೆ ಅವಕಾಶ ನೀಡಲು ಆಯ್ಕೆ ಸಮಿತಿ ಚಿಂತನೆ ನಡೆಸಿದೆ. ಏಕೆಂದರೆ ಆಸೀಸ್ ಪಿಚ್​​ಗಳಲ್ಲಿ ಅವರು ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ.

ಮೊಹಮ್ಮದ್ ಶಮಿ ಕಂಬ್ಯಾಕ್

ಒಂದು ವೇಳೆ ಪೂಜಾರಗೆ ಅವಕಾಶ ನೀಡಿದರೆ ಇತ್ತೀಚೆಗೆ ತಂಡದಲ್ಲಿ ಸ್ಥಾನ ಭದ್ರಪಡಿಸಿಕೊಂಡ ಸರ್ಫರಾಜ್ ಅವಕಾಶ ಕಳೆದುಕೊಳ್ಳಬಹುದು. ಹೀಗಾಗಿ, ಸೆಲೆಕ್ಷನ್ ಕಮಿಟಿಗೂ ಗೊಂದಲ ಉಂಟಾಗಿದ್ದು, ಸರ್ಫರಾಜ್​ಗೆ ಹೆಚ್ಚು ಒತ್ತು ನೀಡಲಾಗುತ್ತದೆ ಎನ್ನಲಾಗುತ್ತಿದೆ. 2023ರ ಏಕದಿನ ವಿಶ್ವಕಪ್ ಟೂರ್ನಿ ಬಳಿಕ ಗಾಯದ ಕಾರಣ ಭಾರತ ತಂಡಕ್ಕೆ ದೂರ ಇರುವ ಮೊಹಮ್ಮದ್ ಶಮಿ 1 ವರ್ಷದ ನಂತರ ಕಂಬ್ಯಾಕ್ ಮಾಡಲು ಸಜ್ಜಾಗಿದ್ದಾರೆ. ಕಾಲಿನ ಪಾದದ ಗಾಯದ ಸಮಸ್ಯೆಗೆ ಒಳಗಾಗಿದ್ದ ಶಮಿ, ಮೊದಲು ಲಂಡನ್​​ನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಇದೀಗ ಫಿಟ್ ಆಗಿದ್ದು, ತಂಡಕ್ಕೆ ಮರಳಲು ಸಜ್ಜಾಗಿದ್ದಾರೆ.

ಬಾರ್ಡರ್​ ಗವಾಸ್ಕರ್ ಟ್ರೋಫಿಯ ಮೊದಲ ಪಂದ್ಯಕ್ಕೆ ನಾಯಕ ರೋಹಿತ್ ಶರ್ಮಾ ಅಲಭ್ಯರಾಗಲಿದ್ದಾರೆ ಎನ್ನಲಾಗಿದೆ. ಹೀಗಾಗಿ ಆರಂಭಿಕ ಸ್ಥಾನಕ್ಕೆ ಆಸ್ಟ್ರೇಲಿಯಕ್ಕೆ ಪ್ರಯಾಣಿಸುತ್ತಿರುವ ಭಾರತ-ಎ ತಂಡದ ನಾಯಕ ಋತುರಾಜ್ ಗಾಯಕ್ವಾಡ್ ಅಥವಾ ಅನ್‌ಕ್ಯಾಪ್ಡ್ ಆಟಗಾರ ಅಭಿಮನ್ಯು ಈಶ್ವರನ್ ಅಥವಾ ಸಾಯಿ ಸುದರ್ಶನ್ ಈ ಮೂವರ ನಡುವೆ ಪೈಪೋಟಿ ಏರ್ಪಟ್ಟಿದೆ. ರಿಷಭ್​ ಪಂತ್ ಮತ್ತು ಧ್ರುವ್ ಜುರೆಲ್ ಅವರನ್ನು ತಂಡದಲ್ಲಿ ಇಬ್ಬರು ವಿಕೆಟ್ ಕೀಪರ್ ಬ್ಯಾಟರ್​​​ಗಳನ್ನಾಗಿ ಹೆಸರಿಸಲು ನಿರ್ಧರಿಸಲಾಗಿದೆ.

ಇನ್ನು ಬೌಲಿಂಗ್ ವಿಭಾಗದಲ್ಲಿ ವೇಗದ ಬೌಲರ್​​ಗಳನ್ನೇ ಹೆಚ್ಚು ಆಯ್ಕೆ ಮಾಡಲು ಚಿಂತಿಸಿದೆ. ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್ ಮತ್ತು ಆಕಾಶ್ ದೀಪ್ ಅವರು ಗ್ಯಾರಂಟಿ ಫಿಕ್ಸ್ ಆಗಿದ್ದಾರೆ. ಜೊತೆಗೆ ಮೊಹಮ್ಮದ್ ಶಮಿ ತಂಡಕ್ಕೆ ಸೇರ್ಪಡೆಯಾಗಲಿದ್ದಾರೆ. ಸ್ಪಿನ್ನರ್​​ಗಳ ವಿಭಾಗದಲ್ಲಿ ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ ಜೊತೆಗೆ ವಾಷಿಂಗ್ಟನ್ ಸುಂದರ್​ಗೂ ಅವಕಾಶ ನೀಡಲಾಗುತ್ತದೆ ಎಂದು ಹೇಳಲಾಗುತ್ತಿದೆ. ಅಲ್ಲದೆ, ಆಲ್​ರೌಂಡರ್​​ ನಿತೀಶ್​ ಕುಮಾರ್​ ರೆಡ್ಡಿಗೂ ಅವಕಾಶ ನೀಡಲು ಚಿಂತಿಸಲಾಗಿದೆ.

ಬಾರ್ಡರ್ ಗವಾಸ್ಕರ್ ಟ್ರೋಫಿಗೆ ಭಾರತದ ಸಂಭಾವ್ಯ ತಂಡ

ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಋತುರಾಜ್ ಗಾಯಕ್ವಾಡ್, ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಸರ್ಫರಾಜ್ ಖಾನ್, ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ ಜುರೆಲ್ (ವಿಕೆಟ್ ಕೀಪರ್), ನಿತೀಶ್ ಕುಮಾರ್ ರೆಡ್ಡಿ, ಜಸ್ಪ್ರೀತ್ ಬುಮ್ರಾ (ಉಪನಾಯಕ), ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ಆಕಾಶ್ ದೀಪ್, ಪ್ರಸಿದ್ಧ್ ಕೃಷ್ಣ, ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್​.

Whats_app_banner