ಕನ್ನಡ ಸುದ್ದಿ  /  ಕ್ರಿಕೆಟ್  /  ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸೂಪರ್‌ ಸಾಪರ್ಸ್‌ಗೆ ಕೆಲಸವಿಲ್ಲ; ಮಳೆ ಬಂದಾಗ ಪಿಚ್‌ಗೆ ಮಾತ್ರ ಟಾರ್ಪಲ್ ಹೊದಿಸುವ ಹಿಂದಿನ ಕಾರಣವಿದು

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸೂಪರ್‌ ಸಾಪರ್ಸ್‌ಗೆ ಕೆಲಸವಿಲ್ಲ; ಮಳೆ ಬಂದಾಗ ಪಿಚ್‌ಗೆ ಮಾತ್ರ ಟಾರ್ಪಲ್ ಹೊದಿಸುವ ಹಿಂದಿನ ಕಾರಣವಿದು

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸೂಪರ್ ಸಾಪರ್ಸ್‌ಗಳಿಗೆ ಕೆಲಸವೇ ಇಲ್ಲದಂತಾಗಿದೆ. ಅತ್ಯಾಧುನಿಕ ವ್ಯವಸ್ಥೆಯಿಂದಾಗಿ ಎಷ್ಟೋ ಜೋರು ಮಳೆ ಬಂದರೂ ಇಲ್ಲಿ 15 ನಿಮಿಷಕ್ಕೆ ಮತ್ತೆ ಪಂದ್ಯವನ್ನು ಪುನರಾರಂಭಿಸಬಹುದು.

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸೂಪರ್‌ ಸಾಪರ್ಸ್‌ಗೆ ಕೆಲಸವಿಲ್ಲ. ಮಳೆ ಬಂದಾಗ ಪಿಚ್‌ಗೆ ಮಾತ್ರ ಟಾರ್ಪಲ್ ಹೊದಿಸಲಾಗುತ್ತದೆ. ಯಾಕೆ ಅನ್ನೋದರ ಮಾಹಿತಿ ಇಲ್ಲಿದೆ.
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸೂಪರ್‌ ಸಾಪರ್ಸ್‌ಗೆ ಕೆಲಸವಿಲ್ಲ. ಮಳೆ ಬಂದಾಗ ಪಿಚ್‌ಗೆ ಮಾತ್ರ ಟಾರ್ಪಲ್ ಹೊದಿಸಲಾಗುತ್ತದೆ. ಯಾಕೆ ಅನ್ನೋದರ ಮಾಹಿತಿ ಇಲ್ಲಿದೆ.

ಬೆಂಗಳೂರು: ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ನಡುವಿನ ಮಹತ್ವದ ಐಪಿಎಲ್ (IPL 2024) ಪಂದ್ಯ ಉದ್ಯಾನ ನಗರಿ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ (Bengaluru Chinnaswamy Stadium) ಇಂದು (ಮೇ 18, ಶನಿವಾರ) ನಡೆಯುತ್ತಿದೆ. ಆದರೆ ನಿರೀಕ್ಷೆಯಂತೆ ಮಳೆ ಪಂದ್ಯ ಅಡ್ಡಿಯುಂಟು ಮಾಡಿದೆ. ಸಾಮಾನ್ಯವಾಗಿ ಮಳೆ ಬಂದಾಗ ಚಿನ್ನಸ್ವಾಮಿ ಕ್ರೀಡಾಂಣವನ್ನು ಸಂಪೂರ್ಣವಾಗಿ ಟಾರ್ಪಲ್‌ನಿಂದ ಕವರ್ ಮಾಡಲಾಗುತ್ತಿತ್ತು. ಇನ್ನ ಮಳೆ ನಿಂತಾಗ ಮೈದಾನವನ್ನು ಒಣಗಿಸಲು ಎರಡ್ಮೂರು ಸೂಪರ್ ಸಾಪರ್ಸ್‌ಗಳು (Super Soppers) ಕ್ರೀಡಾಂಣದಲ್ಲಿ ಆ ಕಡೆಯಿಂದ ಈಕಡೆಗೆ, ಈಕಡೆಯಿಂದ ಆಕಡೆಗೆ ಮೈದಾನದಲ್ಲಿ ರೌಂಡ್ಸ್ ಹಾಕಿ ತೇವಾಂಶವನ್ನು ಹಾರಿಸುವ ಕೆಲಸ ಮಾಡುತ್ತವೆ. ಆದರೆ ಮಳೆ ಬಂದಾಗ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸೂಪರ್ ಸಾಪರ್ಸ್‌ಗಳು ಕಾಣಿಸೋದಿಲ್ಲ. ಜೊತೆಗೆ ಮೈದಾನವನ್ನು ಸಂಪೂರ್ಣವಾಗಿ ಟಾರ್ಪಲ್‌ನಿಂದ ಕವರ್ ಮಾಡುವುದಿಲ್ಲ. ಇದು ಅಚ್ಚರಿಯಾದರೂ ಸತ್ಯ.

ಟ್ರೆಂಡಿಂಗ್​ ಸುದ್ದಿ

ಕಳೆದ ಕೆಲವು ವರ್ಷಗಳ ಹಿಂದಷ್ಟೇ ಚಿನ್ನಸ್ವಾಮಿ ಸ್ಟೇಡಿಯಂನ ಮೈದಾನವನ್ನು ಅಂತಾರಾಷ್ಟ್ರೀಯ ಮಟ್ಟದ ಅತ್ಯಾಧುನಿಕ ತಂತ್ರಜ್ಞಾನವನ್ನು ಅಳವಡಿಸಲಾಗಿದೆ. ಈ ಮೈದಾನಕ್ಕೆ ಸಬ್ ಏರ್ ವ್ಯವಸ್ಥೆಯನ್ನು ಅಳವಡಿಸಿರುವುದರಿಂದ ಎಂತಹ ಜೋರು ಮಳೆ ಬಂದರೂ ಪಂದ್ಯಕ್ಕೆ ಅಡ್ಡಿ ಮಾಡಿದರೂ ಕೇವಲ 10 ರಿಂದ 15 ನಿಮಿಷದಲ್ಲಿ ಪಂದ್ಯವನ್ನು ಮತ್ತೆ ಆರಂಭಿಸಬಹುದು. ಕೆಲವೇ ನಿಮಿಷಗಳಲ್ಲಿ ಮೈದಾನದಲ್ಲಿನ ಮಳೆ ನೀರನ್ನು ಇಂಗಿಸುವ ವ್ಯವಸ್ಥೆಯನ್ನು ಮಾಡಲಾಗಿದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿನ ಈ ಅತ್ಯಾಧುನಿಕ ವ್ಯವಸ್ಥೆಗೆ ಐಸಿಸಿ ತಜ್ಞರು ಕೂಡ ಖುದ್ದು ವೀಕ್ಷಣೆ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಈ ವ್ಯವಸ್ಥೆಯನ್ನು ಅಳವಡಿಸಿರುವ ಪ್ರಪಂಚದ ಮೊದಲ ಕ್ರಿಕೆಟ್ ಸ್ಟೇಡಿಯಂ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ.

ಮಳೆ ಬಂದಾಗ ಮೈದಾನಗಳು ಸಂಪೂರ್ಣವಾಗಿ ತೇವಗೊಂಡು ಪಂದ್ಯಗಳಿಗೆ ಅಡ್ಡಿ ಪಡಿಸುತ್ತವೆ. ಕೆಲವೊಮ್ಮೆ ಪಂದ್ಯಗಳನ್ನು ರದ್ದು ಮಾಡಿರುವ ಬಹಳಷ್ಟು ನಿದರ್ಶನಗಳೂ ಇವೆ. ಆದರೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಎಷ್ಟೇ ಮಳೆಯಾದಗೂ ಕೆಲವೇ ನಿಮಿಷಗಳಲ್ಲಿ ಪಂದ್ಯವನ್ನು ಆರಂಭಿಸಬಹುದಾಗಿದೆ. ಸಬ್ ಏರ್ ವ್ಯವಸ್ಥೆ ಅಳವಡಿಸಿರುವುದರಿಂದ ಮಳೆ ಬಂದಾಗ ಚಿನ್ನಸ್ವಾಮಿ ಮೈದಾನದಲ್ಲಿ ಹುಲ್ಲಿನ ಮೇಲಿನ ನೀರನ್ನು ಮಾತ್ರ ಹಾರಿಸುವ ಕೆಲಸವನ್ನು ಮಾಡಲಾಗುತ್ತದೆ. ಹೀಗಾಗಿ ಇಲ್ಲಿ ಸೂಪರ್ ಸಾಪರ್ಸ್‌ಗಳು ಕಾಣ್ಮರೆಯಾಗಿವೆ.

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿಂದು (ಮೇ 18, ಶನಿವಾರ) ಆರ್‌ಸಿಬಿ ಮತ್ತು ಸಿಎಸ್‌ಕೆ ನಡುವಿನ ತಮ್ಮ ಅಂತಿಮ ಲೀಗ್ ಹಂತದ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಫ್ಲಾಪ್‌ ಡು ಪ್ಲೆಸಿಸ್ ಪಡೆಯ 18 ರನ್‌ಗಳ ಅಂತ ಅಥವಾ ಚೇಸಿಂಗ್‌ನಲ್ಲಿ 18 ಓವರ್‌ಗಳ ಮೊದಲೇ ಗುರಿಯನ್ನು ಮುಟ್ಟಿದರೆ 2024ರ ಐಪಿಎಲ್‌ನಲ್ಲಿ ಪ್ಲೇ-ಆಫ್‌ಗೆ ಹೋಗಲಿದೆ. ಆದರೆ ಚೆನ್ನೈ ಸೂಪರ್ ಕಿಂಗ್ಸ್ ಪಂದ್ಯ ಗೆದ್ದರೆ ಪ್ಲೇ-ಆಫ್‌ಗೆ ಹೋಗಲಿದೆ. ಹೀಗಾಗಿ ಆರ್‌ಸಿಬಿಗೆ ಸಿಎಸ್‌ಕೆ ವಿರುದ್ಧ ಗೆಲುವು ಅನಿವಾರ್ಯವಾಗಿದೆ.

(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್‌. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)

ಟಿ20 ವರ್ಲ್ಡ್‌ಕಪ್ 2024

ಕ್ರಿಕೆಟ್‌ಗೆ ಸಂಬಂಧಿಸಿದ ಎಲ್ಲ ಸುದ್ದಿ, T20 ವಿಶ್ವಕಪ್, T20 ವಿಶ್ವಕಪ್ ವೇಳಾಪಟ್ಟಿ, T20 ವಿಶ್ವಕಪ್ ಅತ್ಯಧಿಕ ರನ್‌ಗಳು, T20 ವಿಶ್ವಕಪ್ ಪಾಯಿಂಟ್ಸ್ ಟೇಬಲ್, T20 ವಿಶ್ವಕಪ್ ಲೈವ್ ಸ್ಕೋರ್, T20 ವಿಶ್ವಕಪ್ ಅಂಕಿಅಂಶಗಳು.. ಕ್ರಿಕೆಟ್‌ಗೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ HT ಕನ್ನಡ ವೆಬ್‌ಸೈಟ್ ನೋಡಿ