Breaking: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ದಿಢೀರ್ ನಿವೃತ್ತಿ ಘೋಷಿಸಿದ ರವಿಚಂದ್ರನ್ ಅಶ್ವಿನ್
Ravichandran Ashwin Retirement: ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ರವಿಚಂದ್ರನ್ ಅಶ್ವಿನ್ ನಿವೃತ್ತಿ ಘೋಷಿಸಿದ್ದಾರೆ. ಭಾರತ ಕಂಡ ಶ್ರೇಷ್ಠ ಕ್ರಿಕೆಟಿಗರಲ್ಲಿ ಒಬ್ಬರಾದ ಅಶ್ವಿನ್, ತಮ್ಮ ಸುದೀರ್ಘ ಅಂತಾರಾಷ್ಟ್ರೀಯ ವೃತ್ತಿಜೀವನಕ್ಕೆ ವಿದಾಯ ಹೇಳಿದ್ದಾರೆ. ಒಟ್ಟು 106 ಟೆಸ್ಟ್ ಪಂದ್ಯಗಳಲ್ಲಿ ಆಡಿರುವ ಅವರು 537 ವಿಕೆಟ್ ಕಬಳಿಸಿದ್ದಾರೆ.
ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ರವಿಚಂದ್ರನ್ ಅಶ್ವಿನ್ ನಿವೃತ್ತಿ ಘೋಷಿಸಿದ್ದಾರೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯ ಡ್ರಾ ಆಗುತ್ತಿದ್ದಂತೆಯೇ ಅಶ್ವಿನ್ ಮಹತ್ವದ ಘೋಷಣೆ ಮಾಡಿದ್ದಾರೆ. ಟೆಸ್ಟ್ ಮಾತ್ರವಲ್ಲದೆ ಏಕದಿನ ಹಾಗೂ ಟಿ20 ಕ್ರಿಕೆಟ್‌ಗೂ ಅಶ್ವಿನ್ ವಿದಾಯ ಹೇಳಿದ್ದಾರೆ.
ಭಾರತ ಕಂಡ ಶ್ರೇಷ್ಠ ಕ್ರಿಕೆಟಿಗರಲ್ಲಿ ಒಬ್ಬರಾದ ರವಿಚಂದ್ರನ್ ಅಶ್ವಿನ್, ತಮ್ಮ ಸುದೀರ್ಘ ಅಂತಾರಾಷ್ಟ್ರೀಯ ವೃತ್ತಿಜೀವನಕ್ಕೆ ವಿದಾಯ ಹೇಳಿದ್ದಾರೆ. ಒಟ್ಟು 106 ಟೆಸ್ಟ್ ಪಂದ್ಯಗಳಲ್ಲಿ ಆಡಿರುವ ಅವರು 537 ವಿಕೆಟ್‌ಗಳನ್ನು ಕಬಳಿಸುವುದರೊಂದಿಗೆ 3503 ರನ್ ಕಲೆ ಹಾಕಿದ್ದಾರೆ. ಭಾರತೀಯ ಕ್ರಿಕೆಟ್‌ಗೆ ಅಶ್ವಿನ್ ಕೊಡುಗೆ ಅಪಾರ. ತವರು ಹಾಗೂ ವಿದೇಶಿ ಸರಣಿಗಳಲ್ಲಿ ನಿರ್ಣಾಯಕ ಪ್ರದರ್ಶನ ನೀಡುತ್ತಿದ್ದ ಆಶ್, 2014ರಿಂದ 2019ರ ನಡುವೆ ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತದ ಪ್ರಾಬಲ್ಯದಲ್ಲಿ ಅಶ್ವಿನ್ ಪಾತ್ರ ಮಗಹತ್ವದ್ದು. ಬೌಲಿಂಗ್ ಮಾತ್ರವಲ್ಲದೆ ಬ್ಯಾಟಿಂಗ್‌ನಲ್ಲಿ ತಂಡಕ್ಕೆ ಅವರ ಕೊಡುಗೆ ಮಹತ್ವದ್ದಾಗಿತ್ತು.
ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತದ ಪರ ಎರಡನೇ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಭಾರತದ ಪ್ರಮುಖ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಎಲ್ಲಾ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಬ್ರಿಸ್ಬೇನ್‌ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ 4 ನೇ ಟೆಸ್ಟ್ ಪಂದ್ಯ ಡ್ರಾ ಆದ ಬೆನ್ನಲ್ಲೇ, 38 ವರ್ಷದ ಅಶ್ವಿನ್ ತಮ್ಮ ನಿರ್ಧಾರದ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಭಾರತದ ಪರ ಟೆಸ್ಟ್ ಕ್ರಿಕೆಟ್‌ನಲ್ಲಿ ಅನಿಲ್ ಕುಂಬ್ಳೆ 619 ವಿಕೆಟ್ ಕಬಳಿಸಿ ಅಗ್ರಸ್ಥಾನದಲ್ಲಿದ್ದರೆ, ಅಶ್ವಿನ್ 537 ವಿಕೆಟ್‌ಗಳೊಂದಿಗೆ ನಂತರದ ಸ್ಥಾನದಲ್ಲಿದ್ದಾರೆ. ಅವರು ನಾಳೆ ಭಾರತಕ್ಕೆ ಮರಳಲಿದ್ದಾರೆ ಎಂದು ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ತಿಳಿಸಿದ್ದಾರೆ.
ಕ್ಲಬ್ ಕ್ರಿಕೆಟ್‌ನಲ್ಲಿ ಆಡುತ್ತೇನೆ
“ಅಂತಾರಾಷ್ಟ್ರೀಯ ಕ್ರಿಕೆಟಿಗನಾಗಿ ಇದು ನನ್ನ ಕೊನೆಯ ದಿನ. ಬಹಳಷ್ಟು ನೆನಪುಗಳೊಂದಿಗೆ ನಾನು ವಿದಾಯ ಹೇಳುತ್ತಿದ್ದೇನೆ. ಡ್ರೆಸ್ಸಿಂಗ್ ರೂಮ್‌ನಲ್ಲಿ ಹಲವು ನೆನೆಪುಗಳಿವೆ. ನಾನು ಬಹಳಷ್ಟು ಜನರಿಗೆ ಧನ್ಯವಾದ ಹೇಳಬೇಕು. ಬಿಸಿಸಿಐ, ನನ್ನ ಸಹ ಆಟಗಾರರು, ಎಲ್ಲಾ ತರಬೇತುದಾರರಿಗೆ ಧನ್ಯವಾದಗಳು. ಭಾರತದ ಪರ ಅಂತಾರಾಷ್ಟ್ರೀಯ ಕ್ರಿಕೆಟಿಗನಾಗಿ ಇದು ನನ್ನ ಕೊನೆಯ ದಿನ. ಆದರೆ ನಾನು ಕ್ಲಬ್ ಕ್ರಿಕೆಟ್ ಆಡುತ್ತೇನೆ,” ಎಂದು ಅಶ್ವಿನ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಸಿಕ್ಕಿತ್ತು ಸುಳಿವು
ಪಂದ್ಯದ ಸಮಯದಲ್ಲೇ ಈ ಸುಳಿವು ಸಿಕ್ಕಿತ್ತು. ಡ್ರೆಸ್ಸಿಂಗ್ ರೂಮ್‌ನಲ್ಲಿ ಅಶ್ವಿನ್ ಹಾಗೂ ವಿರಾಟ್ ಕೊಹ್ಲಿ ಮಾತನಾಡುತ್ತಾ, ಪರಸ್ಪರ ಅಪ್ಪುಗೆ ನೀಡಿದಾಗಲೇ ಈ ವಿಷಯ ಬಹಿರಂಗವಾಗತ್ತು. ಪಂದ್ಯದ ಬಳಿಕ ಅಧಿಕೃತವಾಗಿದೆ. 5ನೇ ದಿನದಾಟದ ಸಮಯದಲ್ಲಿ ಮಳೆ ವಿರಾಮದ ಸಮಯದಲ್ಲಿ, ವಿರಾಟ್ ಕೊಹ್ಲಿ ಅಶ್ವಿನ್ ಅವರನ್ನು ಭಾವುಕವಾಗಿ ತಬ್ಬಿಕೊಳ್ಳುತ್ತಿರುವ ದೃಶ್ಯಗಳನ್ನು ಕ್ಯಾಮೆರಾಗಳು ಸೆರೆಹಿಡಿದವು. ಆಗಲೇ ಅಶ್ವಿನ್ ಭವಿಷ್ಯದ ಬಗ್ಗೆ ಊಹಾಪೋಹಗಳು ಹೆಚ್ಚಾದವು. ಭಾರತದ ಮಾಜಿ ನಾಯಕ ಸುನಿಲ್ ಗವಾಸ್ಕರ್ ಕೂಡಾ ಅಶ್ವಿನ್ ನಿವೃತ್ತಿ ಬಗ್ಗೆ ಮಾತನಾಡಿದರು. ಅದಾದ ಬೆನ್ನಲ್ಲೇ ಆಶ್ವಿನ್ ಸ್ಪಷ್ಟಪಡಿಸಿದರು.
ದಾಖಲೆಯ ವಿಕೆಟ್
ಪ್ರಸ್ತುತ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಅಶ್ವಿನ್ ಕೇವಲ ಒಂದು ಟೆಸ್ಟ್ ಮಾತ್ರ ಆಡಿದ್ದಾರೆ. ಅಡಿಲೇಡ್‌ನಲ್ಲಿ ಟೆಸ್ಟ್‌ಗೆ ಅವರನ್ನು ಪ್ಲೇಯಿಂಗ್ ಇಲೆವೆನ್‌ನಲ್ಲಿ ಹೆಸರಿಸಲಾಗಿತ್ತು. ಆ ಪಂದ್ಯದಲ್ಲಿ ಅಶ್ವಿನ್ ಕೇವಲ ಒಂದು ವಿಕೆಟ್ ಮಾತ್ರ ಪಡೆದರು. ಬ್ಯಾಟಿಂಗ್‌ನಲ್ಲಿ 22 ಮತ್ತು 7 ರನ್ ಗಳಿಸಿದರು. ಭಾರತ ಪರ ಆಶ್ 106 ಟೆಸ್ಟ್, 116 ಏಕದಿನ ಹಾಗೂ 65 ಟಿ20 ಪಂದ್ಯಗಳನ್ನಾಡಿ, ಎಲ್ಲಾ ಮೂರು ಸ್ವರೂಪಗಳಲ್ಲಿ 775 ವಿಕೆಟ್ ಕಬಳಿಸಿದ್ದಾರೆ.