ಕನ್ನಡ ಸುದ್ದಿ  /  ಕ್ರಿಕೆಟ್  /  ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ದಾರಿ ಹಿಡಿದ ಜಡ್ಡು; ಅಂತಾರಾಷ್ಟ್ರೀಯ ಟಿ20ಐ ಕ್ರಿಕೆಟ್​ಗೆ ರವೀಂದ್ರ ಜಡೇಜಾ ವಿದಾಯ

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ದಾರಿ ಹಿಡಿದ ಜಡ್ಡು; ಅಂತಾರಾಷ್ಟ್ರೀಯ ಟಿ20ಐ ಕ್ರಿಕೆಟ್​ಗೆ ರವೀಂದ್ರ ಜಡೇಜಾ ವಿದಾಯ

Ravindra Jadeja Retire: ಟೀಮ್ ಇಂಡಿಯಾ ಟಿ20 ವಿಶ್ವಕಪ್ 2024 ಜಯಿಸಿದ ಬಳಿಕ ಸ್ಟಾರ್ ಆಲ್​ರೌಂಡರ್​ ರವೀಂದ್ರ ಜಡೇಜಾ ಅವರು ಅಂತಾರಾಷ್ಟ್ರೀಯ ಟಿ20ಐ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಆ ಮೂಲಕ ವಿರಾಟ್ ಕೊಹ್ಲಿ, ರೋಹಿತ್​ ಶರ್ಮಾ ಸಾಲಿಗೆ ಸೇರಿದ್ದಾರೆ.

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ದಾರಿ ಹಿಡಿದ ಜಡ್ಡು; ಅಂತಾರಾಷ್ಟ್ರೀಯ ಟಿ20ಐ ಕ್ರಿಕೆಟ್​ಗೆ ರವೀಂದ್ರ ಜಡೇಜಾ ವಿದಾಯ
ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ದಾರಿ ಹಿಡಿದ ಜಡ್ಡು; ಅಂತಾರಾಷ್ಟ್ರೀಯ ಟಿ20ಐ ಕ್ರಿಕೆಟ್​ಗೆ ರವೀಂದ್ರ ಜಡೇಜಾ ವಿದಾಯ

ಐಸಿಸಿ ಟಿ20 ವಿಶ್ವಕಪ್ 2024 (T20 World Cup 2024) ಗೆಲುವಿನ ಬೆನ್ನಲ್ಲೇ ಭಾರತ ತಂಡದ ಸ್ಟಾರ್ ಆಲ್​​ರೌಂಡರ್ ರವೀಂದ್ರ ಜಡೇಜಾ (Ravindra Jadeja Retire) ಅವರು ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಬ್ಯಾಟಿಂಗ್ ದಿಗ್ಗಜರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ (Virat Kohli and Rohit Sharma) ಬೆನ್ನಲ್ಲೇ ಜಡೇಜಾ ಅವರು ವಿದಾಯ ಹೇಳಿದ್ದಾರೆ. ಆಲ್​ರೌಂಡರ್ ಇನ್​ಸ್ಟಾಗ್ರಾಂನಲ್ಲಿ ತಮ್ಮ ನಿವೃತ್ತಿಯನ್ನು ಖಚಿತಪಡಿಸಿದ್ದಾರೆ.

ಕೃತಜ್ಞತೆ ತುಂಬಿದ ಹೃದಯದಿಂದ ನಾನು ಅಂತರರಾಷ್ಟ್ರೀಯ ಟಿ20 ಪಂದ್ಯಗಳಿಗೆ ವಿದಾಯ ಹೇಳುತ್ತಿದ್ದೇನೆ. ಹೆಮ್ಮೆಯಿಂದ ಓಡುವ ದೃಢವಾದ ಕುದುರೆಯಂತೆ, ನಾನು ಯಾವಾಗಲೂ ನನ್ನ ದೇಶಕ್ಕಾಗಿ ಅತ್ಯುತ್ತಮವಾದದ್ದನ್ನು ನೀಡಿದ್ದೇನೆ. ಕ್ರಿಕೆಟ್​ನ ಇತರ ಸ್ವರೂಪಗಳಲ್ಲಿ ಅದನ್ನೇ ಮುಂದುವರಿಸುತ್ತೇನೆ. ಟಿ20 ವಿಶ್ವಕಪ್ ಗೆಲ್ಲುವ ನನ್ನ ಕನಸು, ನನಸಾಗಿದೆ. ನನ್ನ ಅಂತಾರಾಷ್ಟ್ರೀಯ ಟಿ20 ವೃತ್ತಿಜೀವನ ಅತ್ಯುತ್ತಮವಾಗಿದೆ. ನೆನಪು, ಹರ್ಷೋದ್ಗಾರಗಳು ಮತ್ತು ಅಚಲ ಬೆಂಬಲಕ್ಕಾಗಿ ಧನ್ಯವಾದಗಳು ಎಂದು ಬರೆದಿದ್ದಾರೆ.

ಜಡೇಜಾ ಹಲವು ವರ್ಷಗಳಿಂದ ಭಾರತೀಯ ಟಿ20ಐ ಸೆಟಪ್​ನ ಅವಿಭಾಜ್ಯ ಅಂಗವಾಗಿದ್ದರು. ಆಲ್​ರೌಂಡರ್ 2024ರ ಆವೃತ್ತಿಯಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇಂಗ್ಲೆಂಡ್ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಜಡೇಜಾ ಕೇವಲ 9 ಎಸೆತಗಳಲ್ಲಿ ಅಜೇಯ 17 ರನ್ ಬಾರಿಸಿ ಗೆಲುವಿನ ಕಾಣಿಕೆ ನೀಡಿದ್ದರು. ಟೂರ್ನಿಯಲ್ಲಿ ಅವರು ಕೇವಲ ಒಂದು ವಿಕೆಟ್ ಪಡೆದರೂ 7.57 ಎಕಾನಮಿಯಲ್ಲಿ ರನ್ ನೀಡಿದ್ದಾರೆ.

ಟ್ರೆಂಡಿಂಗ್​ ಸುದ್ದಿ

ಜಡೇಜಾ ಇನ್ಸ್ಟಾಗ್ರಾಮ್ ಪೋಸ್ಟ್ ಇಲ್ಲಿದೆ ನೋಡಿ

ಜಡೇಜಾ 74 ಟಿ20 ಪಂದ್ಯಗಳಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದಾರೆ. 41 ಇನ್ನಿಂಗ್ಸ್​ಗಳಲ್ಲಿ​ 515 ರನ್ ಗಳಿಸಿದ್ದಾರೆ. ಈ ಪೈಕಿ 17 ರಲ್ಲಿ ಜಡ್ಡು ಅಜೇಯರಾಗಿ ಉಳಿದಿದ್ದಾರೆ. ಆಲ್​ರೌಂಡರ್ ಹೆಚ್ಚಾಗಿ ಕೆಳ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ನಡೆಸಿದ್ದಾರೆ. ಚೆಂಡಿನೊಂದಿಗೆ ಜಡೇಜಾ ಉತ್ತಮವಾದ ಎಕಾನಮಿ ಹೊಂದಿದ್ದಾರೆ. ತಮ್ಮ ಟಿ20ಐ ವೃತ್ತಿಜೀವನದಲ್ಲಿ 7.13ರ ಎಕಾನಮಿಯಲ್ಲಿ ಕೊನೆಗೊಳಿಸಿದ್ದಾರೆ.

ಟಿ20ಐ ಕ್ರಿಕೆಟ್​ನಿಂದ ಹಿಂದೆ ಸರಿದಿರುವ ಜಡೇಜಾ ಅವರು ಟೆಸ್ಟ್ ಮತ್ತು ಏಕದಿನ ಕ್ರಿಕೆಟ್​ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಲಿದ್ದಾರೆ. ಜಡೇಜಾ ಗಾಯದಿಂದಾಗಿ 2022ರ ಟಿ20 ವಿಶ್ವಕಪ್ ಆವೃತ್ತಿಯಿಂದ ಹೊರಗುಳಿದಿದ್ದರು. ಟೂರ್ನಿಯ ಸೆಮಿಫೈನಲ್​​ನಲ್ಲಿ ಭಾರತ ತಂಡವು ಇಂಗ್ಲೆಂಡ್ ವಿರುದ್ಧ 10 ವಿಕೆಟ್​ಗಳ ಸೋಲು ಅನುಭವಿಸಿತ್ತು. ಇದೀಗ ಟಿ20 ವಿಶ್ವಕಪ್ ಗೆಲುವಿನೊಂದಿಗೆ ಚುಟುಕು ಕ್ರಿಕೆಟ್​ನಿಂದ ದೂರ ಉಳಿದಿದ್ದಾರೆ.

ಸಂಕ್ಷಿಪ್ತ ಸ್ಕೋರ್​

ಬಾರ್ಬಡೋಸ್​ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ವಿರಾಟ್ ಕೊಹ್ಲಿ ಅವರ ಬ್ಯಾಟಿಂಗ್ ಬಲದಿಂದ 20 ಓವರ್​​ಗಳಲ್ಲಿ 7 ವಿಕೆಟ್ ನಷ್ಟಕ್ಕೆ 176 ರನ್​​ಗಳ ಸ್ಪರ್ಧಾತ್ಮಕ ಮೊತ್ತ ಪೇರಿಸಿತು. ಈ ಗುರಿ ಬೆನ್ನಟ್ಟಿದ ಸೌತ್ ಆಫ್ರಿಕಾ, ಬೆಂಕಿ ಬಿರುಗಾಳಿ ಬ್ಯಾಟಿಂಗ್ ನಡೆಸಿತು. ಅದರಲ್ಲೂ ಹೆನ್ರಿಚ್ ಕ್ಲಾಸೆನ್ ಅದ್ಭುತ ಪ್ರದರ್ಶನ ನೀಡಿದರು. 20 ಓವರ್​​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 168 ರನ್ ಗಳಿಸಿತು.