ಬೆಂಗಳೂರಿನ ಚಿನ್ನಸ್ವಾಮಿಯಲ್ಲಿ ಆರ್​​ಸಿಬಿ vs ಜಿಟಿ ಹೈವೋಲ್ಟೇಜ್ ಪಂದ್ಯ; ಈ ಜಾಗಗಳಲ್ಲಿ ವಾಹನ ನಿಲುಗಡೆ ನಿಷೇಧ
ಕನ್ನಡ ಸುದ್ದಿ  /  ಕ್ರಿಕೆಟ್  /  ಬೆಂಗಳೂರಿನ ಚಿನ್ನಸ್ವಾಮಿಯಲ್ಲಿ ಆರ್​​ಸಿಬಿ Vs ಜಿಟಿ ಹೈವೋಲ್ಟೇಜ್ ಪಂದ್ಯ; ಈ ಜಾಗಗಳಲ್ಲಿ ವಾಹನ ನಿಲುಗಡೆ ನಿಷೇಧ

ಬೆಂಗಳೂರಿನ ಚಿನ್ನಸ್ವಾಮಿಯಲ್ಲಿ ಆರ್​​ಸಿಬಿ vs ಜಿಟಿ ಹೈವೋಲ್ಟೇಜ್ ಪಂದ್ಯ; ಈ ಜಾಗಗಳಲ್ಲಿ ವಾಹನ ನಿಲುಗಡೆ ನಿಷೇಧ

Bengaluru Traffic Advisory: ಮೇ 4ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ತಂಡಗಳ ನಡುವೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಮೈದಾನದಲ್ಲಿ ಪಂದ್ಯ ನಡೆಯಲಿದೆ. ಹಾಗಾಗಿ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ.

ಬೆಂಗಳೂರಿನ ಚಿನ್ನಸ್ವಾಮಿಯಲ್ಲಿ ಆರ್​​ಸಿಬಿ vs ಜಿಟಿ ಹೈವೋಲ್ಟೇಜ್ ಪಂದ್ಯ; ಈ ಜಾಗಗಳಲ್ಲಿ ವಾಹನ ನಿಲುಗಡೆ ನಿಷೇಧ
ಬೆಂಗಳೂರಿನ ಚಿನ್ನಸ್ವಾಮಿಯಲ್ಲಿ ಆರ್​​ಸಿಬಿ vs ಜಿಟಿ ಹೈವೋಲ್ಟೇಜ್ ಪಂದ್ಯ; ಈ ಜಾಗಗಳಲ್ಲಿ ವಾಹನ ನಿಲುಗಡೆ ನಿಷೇಧ

ಮೇ 4ರಂದು ನಡೆಯುವ 17ನೇ ಆವೃತ್ತಿಯ ಐಪಿಎಲ್​ನ 52ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ (Royal Challengers Bengaluru vs Gujarat Titans) ತಂಡಗಳ ಸೆಣಸಾಟಕ್ಕೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರಿಕೆಟ್ ಮೈದಾನ ಸಜ್ಜಾಗಿದೆ. ಕಳೆದ ಪಂದ್ಯದಲ್ಲಿ ಉಭಯ ತಂಡಗಳು ಮುಖಾಮುಖಿಯಾಗಿದ್ದು, ಆರ್​​ಸಿಬಿ ಭರ್ಜರಿ ಜಯ ಸಾಧಿಸಿತ್ತು. ಏಪ್ರಿಲ್ 15ರ ನಂತರ ತವರಿನ ಮೈದಾನದಲ್ಲಿ ಪಂದ್ಯ ನಡೆಯುತ್ತಿದೆ. ಪಂದ್ಯ ಸಂಜೆ 7.30ಕ್ಕೆ ಆರಂಭಗೊಳ್ಳಲಿದೆ.

ಪಂದ್ಯವನ್ನು ಕಣ್ತುಂಬಿಕೊಳ್ಳಲು ಆಗಮಿಸುವ ಅಭಿಮಾನಿಗಳು, ತಮ್ಮ ವಾಹನಗಳ ಪಾರ್ಕಿಂಗ್​ ವ್ಯವಸ್ಥೆ ಮಾಡಬೇಕೆಂಬ ಗೊಂದಲ ಇದೆ. ರಸ್ತೆ ಬಳಕೆದಾರರ ಅನುಕೂಲಕ್ಕಾಗಿ ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 11ರ ತನಕ ಸಂಚಾರ ವ್ಯವಸ್ಥೆಯನ್ನು ಬದಲಾವಣೆ ಮಾಡಲಾಗಿದೆ. ಕೆಲವು ರಸ್ತೆಗಳಲ್ಲಿ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದೆ. ಕ್ರಿಕೆಟ್ ಪಂದ್ಯ ವೀಕ್ಷಣೆಗೆ ಆಗಮಿಸುವ ವೀಕ್ಷಕರಿಗೆ ಸಾರ್ವಜನಿಕ ಸಂಚಾರ ನಿಯಮಗಳನ್ನು ಪಾಲಿಸುವಂತೆ ಪೊಲೀಸರು ಕೋರಿದ್ದಾರೆ.

ಸಾವಿರಾರು ವೀಕ್ಷಕರು ಚಿನ್ನಸ್ವಾಮಿ ಕ್ರೀಡಾಂಗಣದತ್ತ ಬರಲಿದ್ದು ವಾಹನಗಳ ನಿಲುಗಡೆ ನಿಷೇಧವಿರುವ ರಸ್ತೆಗಳ ವಿವರ.

  • ಕ್ಲೀನ್ಸ್ ರಸ್ತೆ, ಎಂಜಿ ರಸ್ತೆ, ಎಂಜಿ ರಸ್ತೆ ಯಿಂದ ಕಬ್ಬನ್‌ ರಸ್ತೆ ರಾಜಭವನ ರಸ್ತೆ
  • ಸೆಂಟ್ರಲ್ ಸ್ಟ್ರೀಟ್ ರಸ್ತೆ, ಕಬ್ಬನ್‌ರಸ್ತೆ, ಸೆಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆ
  • ಕಸ್ತೂರಿ ಬಾ ರಸ್ತೆ, ಅಂಬೇಡ್ಕರ್ ವೀದಿ ರಸ್ತೆ, ಟ್ರಿನಿಟಿ ವೃತ್ತ, ಲ್ಯಾವೆಲ್ಲೆ ರಸ್ತೆ
  • ವಿಠಲ್ ಮಲ್ಯ ರಸ್ತೆ, ಕಿಂಗ್ಸ್ ರಸ್ತೆ ಮತ್ತು ನೃಪತುಂಗ ರಸ್ತೆ

ಇದನ್ನೂ ಓದಿ: ರೋಹಿತ್ ಶರ್ಮಾ ನಂತರ ಭಾರತ ತಂಡದ ನಾಯಕತ್ವ ವಹಿಸಲು ತಾಕತ್ತಿರುವ ನಾಲ್ವರು ಕ್ರಿಕೆಟಿಗರನ್ನು ಹೆಸರಿಸಿದ ಇರ್ಫಾನ್ ಪಠಾಣ್

ಸಾರ್ವಜನಿಕ ವಾಹನಗಳ ನಿಲುಗಡೆ ಸ್ಥಳಗಳು

  • ಸೆಂಟ್ ಜೋಸೆಫ್ ಇಂಡಿಯನ್ ಸ್ಕೂಲ್ ಮೈದಾನ
  • ಯುಬಿ ಸಿಟಿ ಪಾರ್ಕಿಂಗ್ ಸ್ಥಳ
  • ಬಿ.ಎಂ.ಟಿ.ಸಿ ಬಸ್ ನಿಲ್ದಾಣದ ಮೊದಲನೆ ಮಹಡಿ ಮತ್ತು ಓಲ್ಡ್ ಕೆ.ಜಿ.ಐ.ಡಿ ಬಿಲ್ಡಿಂಗ್
  • ಕಿಂಗ್ಸ್ ರಸ್ತೆ, (ಕಬ್ಬನ್‌ಪಾರ್ಕ್ ಒಳಭಾಗ)

ಮೇ 4ರ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ಮುಖಾಮುಖಿಯಾಗಲಿವೆ. ಸಂಜೆ 7.30 ಗಂಟೆಗೆ ಪಂದ್ಯ ಆರಂಭವಾಗಲಿದೆ. ಆರ್​ಸಿಬಿ ಹತ್ತು ಪಂದ್ಯಗಳನ್ನು ಆಡಿದ್ದು, ಮೂರು ಪಂದ್ಯಗಳಲ್ಲಿ ಜಯ ಸಾಧಿಸಿದೆ. ಜಿಟಿ ಹತ್ತು ಪಂದ್ಯಗಳನ್ನು ಆಡಿದ್ದು, 4 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ.

 

ತಂಡಪಂದ್ಯಗೆಲುವುಸೋಲುಅಂಕNRR
ರಾಜಸ್ಥಾನ್ ರಾಯಲ್ಸ್108216+0.622
ಕೋಲ್ಕತ್ತಾ ನೈಟ್ ರೈಡರ್ಸ್96312+1.096
ಲಕ್ನೋ ಸೂಪರ್ ಜೈಂಟ್ಸ್106412+0.094
ಸನ್​​ರೈಸರ್ಸ್ ಹೈದರಾಬಾದ್106412+0.072
ಚೆನ್ನೈ ಸೂಪರ್ ಕಿಂಗ್ಸ್105510+0.627
ಡೆಲ್ಲಿ ಕ್ಯಾಪಿಟಲ್ಸ್115610-0.442
ಪಂಜಾಬ್ ಕಿಂಗ್ಸ್10468-0.062
ಗುಜರಾತ್ ಟೈಟಾನ್ಸ್10468-1.113
ಮುಂಬೈ ಇಂಡಿಯನ್ಸ್10376-0.272
ರಾಯಲ್ ಚಾಲೆಂಜರ್ಸ್ ಬೆಂಗಳೂರು10376-0.415

Whats_app_banner