ರೋಹಿತ್ ಶರ್ಮಾ ನಾಯಕ, ವಿರಾಟ್ ಕೊಹ್ಲಿ ಇನ್​: 2025ರ ಚಾಂಪಿಯನ್ಸ್ ಟ್ರೋಫಿಗೆ ಭಾರತ ಸಂಭಾವ್ಯ ತಂಡ
ಕನ್ನಡ ಸುದ್ದಿ  /  ಕ್ರಿಕೆಟ್  /  ರೋಹಿತ್ ಶರ್ಮಾ ನಾಯಕ, ವಿರಾಟ್ ಕೊಹ್ಲಿ ಇನ್​: 2025ರ ಚಾಂಪಿಯನ್ಸ್ ಟ್ರೋಫಿಗೆ ಭಾರತ ಸಂಭಾವ್ಯ ತಂಡ

ರೋಹಿತ್ ಶರ್ಮಾ ನಾಯಕ, ವಿರಾಟ್ ಕೊಹ್ಲಿ ಇನ್​: 2025ರ ಚಾಂಪಿಯನ್ಸ್ ಟ್ರೋಫಿಗೆ ಭಾರತ ಸಂಭಾವ್ಯ ತಂಡ

2025 ICC Champions Trophy: ಪಾಕಿಸ್ತಾನದಲ್ಲಿ ನಡೆಯಲಿರುವ ಈ ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡದಲ್ಲಿ ಯಾರಿಗೆಲ್ಲಾ ಅವಕಾಶ ಸಿಗಲಿದೆ? ಟೀಮ್ ಇಂಡಿಯಾ ಸಂಭಾವ್ಯ ತಂಡ ಇಲ್ಲಿದೆ.

ರೋಹಿತ್ ಶರ್ಮಾ ನಾಯಕ, ವಿರಾಟ್ ಕೊಹ್ಲಿ ಇನ್​: 2025ರ ಚಾಂಪಿಯನ್ಸ್ ಟ್ರೋಫಿಗೆ ಭಾರತ ಸಂಭಾವ್ಯ ತಂಡ
ರೋಹಿತ್ ಶರ್ಮಾ ನಾಯಕ, ವಿರಾಟ್ ಕೊಹ್ಲಿ ಇನ್​: 2025ರ ಚಾಂಪಿಯನ್ಸ್ ಟ್ರೋಫಿಗೆ ಭಾರತ ಸಂಭಾವ್ಯ ತಂಡ

2024ರ ಟಿ20 ವಿಶ್ವಕಪ್ ಟೂರ್ನಿ (T20 World Cup 2024) ಗೆದ್ದ ನಂತರ ರೋಹಿತ್ ಶರ್ಮಾ (Rohit Sharma) 2025ರ ಚಾಂಪಿಯನ್ಸ್ ಟ್ರೋಫಿ (ICC Champions Trophy 2025) ಮೇಲೆ ಕಣ್ಣಿಟ್ಟಿದ್ದಾರೆ. ಭಾರತ ತಂಡ ನಾಯಕ ಮೊದಲ ಒಡಿಐ ಐಸಿಸಿ ಪ್ರಶಸ್ತಿ ಗೆಲ್ಲಲು ಉತ್ಸುಕನಾಗಿದ್ದಾರೆ. 2023ರ ಏಕದಿನ ವಿಶ್ವಕಪ್ ಫೈನಲ್ ಪ್ರವೇಶಿಸಿದ್ದ ರೋಹಿತ್ ಶರ್ಮಾ ಪಡೆ​ ಆಸೀಸ್​​ನಲ್ಲಿ ವಿರುದ್ಧ ಸೋಲನುಭವಿಸಿತ್ತು. ಇದೀಗ ಮುಂಬರುವ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲೂ ರೋಹಿತ್ ಶರ್ಮಾನೇ ತಂಡ ಮುನ್ನಡೆಸಲಿದ್ದಾರೆ ಎಂದು ಬಿಸಿಸಿಐ ಈಗಾಗಲೇ ಖಚಿತಪಡಿಸಿದೆ.

ರೋಹಿತ್ ಶರ್ಮಾ ಮತ್ತು ಮುಖ್ಯಕೋಚ್ ಗೌತಮ್ ಗಂಭೀರ್ ಅವರಿಗೆ ಇದು ಮೊದಲ ಐಸಿಸಿ ಟೂರ್ನಿಯಾಗಿದೆ. ಇಬ್ಬರು ಸಹ 2007ರ ಟಿ20 ವಿಶ್ವಕಪ್‌ ತಂಡದಲ್ಲಿ ಸಹ ಆಟಗಾರರಾಗಿದ್ದರು. ರೋಹಿತ್, ವಿರಾಟ್ ಕೊಹ್ಲಿ ಸೇರಿದಂತೆ ಹಿರಿಯ ಆಟಗಾರರು 2023ರ ವಿಶ್ವಕಪ್​ ಫೈನಲ್‌ ನಂತರ ಇನ್ನೂ ಏಕದಿನ ಕ್ರಿಕೆಟ್​​ನಲ್ಲಿ ಕಣಕ್ಕಿಳಿದಿಲ್ಲ. ಇವರೆಲ್ಲರೂ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಮರಳುವ ಸಾಧ್ಯತೆ ಇದೆ. ಫ್ಯಾನ್ಸ್ ಕೂಡ ಹಿರಿಯರು ಏಕದಿನಕ್ಕೆ ಮರಳುವುದಕ್ಕೆ ಕಾಯುತ್ತಿದ್ದಾರೆ.

2025ರ ಚಾಂಪಿಯನ್ಸ್ ಟ್ರೋಫಿ ನಂತರ ಭಾರತದ ಭವಿಷ್ಯ ತಂಡವನ್ನು ಕಟ್ಟಲು ಬಿಸಿಸಿಐ ಈಗಿನಿಂದಲೇ ಯೋಜನೆ ರೂಪಿಸುತ್ತಿದೆ. ಆದರೆ ಪಾಕಿಸ್ತಾನದಲ್ಲಿ ನಡೆಯಲಿರುವ ಈ ಐಸಿಸಿ ಟೂರ್ನಿಗೆ ಭಾರತ ತಂಡದಲ್ಲಿ ಯಾರಿಗೆಲ್ಲಾ ಅವಕಾಶ ಸಿಗಲಿದೆ? ಆರಂಭಿಕರು, ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಬೀಸುವವರು, ಆಲ್​ರೌಂಡರ್​ಗಳು, ಸ್ಪಿನ್ನರ್​ಗಳು, ವೇಗಿಗಳು ಸೇರಿದಂತೆ ಯಾರಿಗೆಲ್ಲಾ ಅವಕಾಶ ಸಿಗಲಿದೆ ಎಂಬುದರ ಭಾರತದ ಸಂಭಾವ್ಯ ತಂಡ ಇಲ್ಲಿದೆ.

ಆರಂಭಿಕರು

ರೋಹಿತ್ ಶರ್ಮಾ ಅವರೊಂದಿಗೆ ಶುಭ್ಮನ್ ಗಿಲ್ ಅವರೊಂದಿಗೆ ಇನ್ನಿಂಗ್ಸ್ ತೆರೆಯುವುದು ಖಚಿತವಾಗಿದೆ. ಏಕದಿನ ಮತ್ತು ಟೆಸ್ಟ್​​​ನಲ್ಲಿ ಶುಭ್ಮನ್ ತನ್ನ ಸ್ಥಾನ ಭದ್ರಪಡಿಸಿಕೊಂಡಿದ್ದು, ಆರಂಭಿಕ ಸ್ಥಾನಕ್ಕೆ ಮೊದಲ ಆಯ್ಕೆಯಾಗಿದ್ದಾರೆ. ಆದರೆ, ಬ್ಯಾಕಪ್ ಓಪನರ್​​ ಆಗಿ ಯಶಸ್ವಿ ಜೈಸ್ವಾಲ್ ಆಯ್ಕೆಯಾಗಬಹುದು. ಕೆಎಲ್ ರಾಹುಲ್ ಆರಂಭಿಕನಾಗಿ ಆಡಿದ್ದರೂ ಮಧ್ಯಮ ಕ್ರಮಾಂಕದಲ್ಲಿ ಅದ್ಭುತ ಪ್ರದರ್ಶನ ನೀಡಿ ಸ್ಥಾನ ಭದ್ರಪಡಿಸಿಕೊಂಡಿದ್ದಾರೆ. ಹೀಗಾಗಿ, ತಂಡದಲ್ಲಿದ್ದರೂ ಅವರು ಓಪನರ್​​ ಆಗಿ ಕಣಕ್ಕಿಳಿಯುವುದು ಕಷ್ಟ.

ಮಧ್ಯಮ ಕ್ರಮಾಂಕ

ವಿರಾಟ್ ಕೊಹ್ಲಿ ಟಿ20ಐ ವಿಶ್ವಕಪ್​ನಲ್ಲಿ ತಮ್ಮ ಬ್ಯಾಟಿಂಗ್ ಸ್ಥಾನ ಬದಲಾಯಿಸಿದ್ದರೂ ಏಕದಿನದಲ್ಲಿ ಅವರು ಮೂರನೇ ಕ್ರಮಾಂಕದಲ್ಲೇ ಬ್ಯಾಟಿಂಗ್ ಮಾಡಲಿದ್ದಾರೆ. ಶ್ರೇಯಸ್ ಅಯ್ಯರ್ ಕೆಲವು ವರ್ಷಗಳಿಂದ 4ನೇ ಕ್ರಮಾಂಕದಲ್ಲಿ ಭಾರತದ ಅತ್ಯುತ್ತಮ ಸ್ಥಾನ ಪಡೆದಿದ್ದಾರೆ. ಸದ್ಯ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಗೆ ಮರಳುವ ನಿರೀಕ್ಷೆಯಿದೆ.

ವಿಕೆಟ್ ಕೀಪರ್ಸ್​

ಕೆಎಲ್ ರಾಹುಲ್ ಮತ್ತು ರಿಷಭ್​ ಪಂತ್ ತಂಡದಲ್ಲಿ ಇಬ್ಬರು ವಿಕೆಟ್ ಕೀಪರ್ ಆಗುವ ಸಾಧ್ಯತೆ ಇದೆ. ಆದರೆ ರಾಹುಲ್, ರಿಷಭ್‌ಗಿಂತ ಮುಂದಿದ್ದಾರೆ. ಪಂತ್ ಟೂರ್ನಿಯಲ್ಲಿ ಬೆಂಚ್ ಕಾಯಬಹುದು.

ಆಲ್​ರೌಂಡರ್​​ಗಳು

ಹಾರ್ದಿಕ್ ಪಾಂಡ್ಯ ಆಲ್​ರೌಂಡರ್​ ಆಗಿ ಮೊದಲ ಆಯ್ಕೆಯಾಗಿದ್ದಾರೆ. ಸ್ಪಿನ್ ಆಲ್​​ರೌಂಡರ್​​​ಗಳಾಗಿ ರವೀಂದ್ರ ಜಡೇಜಾ ಮತ್ತು ಅಕ್ಷರ್ ಪಟೇಲ್ ತಂಡದ ಭಾಗವಾಗಲಿದ್ದಾರೆ.

ಬೌಲರ್‌ಗಳು

ಚಾಂಪಿಯನ್ಸ್ ಟ್ರೋಫಿಯಲ್ಲಿ ಜಸ್ಪ್ರೀತ್ ಬುಮ್ರಾ ಭಾರತದ ಬೌಲಿಂಗ್ ವಿಭಾಗ ಮುನ್ನಡೆಸುವುದು ಖಚಿತವಾಗಿದೆ. ಶೀಘ್ರದಲ್ಲೇ ಮೊಹಮ್ಮದ್ ಶಮಿ ಭಾರತ ತಂಡಕ್ಕೆ ಮರಳಲಿದ್ದು, ಎರಡನೇ ವೇಗಿಯಾಗಲಿದ್ದಾರೆ. ಅಲ್ಲದೆ, ಮೊಹಮ್ಮದ್ ಸಿರಾಜ್ 3ನೇ ವೇಗಿಯಾಗಲಿದ್ದಾರೆ. ಸ್ಪೆಷಲಿಸ್ಟ್ ಸ್ಪಿನ್ನರ್​ ಕುಲ್ದೀಪ್ ಯಾದವ್ ಪ್ರಮುಖ ಪಾತ್ರವಹಿಸಲಿದ್ದಾರೆ.

2025ರ ಚಾಂಪಿಯನ್ಸ್ ಟ್ರೋಫಿಗೆ ಭಾರತದ ಸಂಭಾವ್ಯ ತಂಡ

ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಹಲ್, ಯಶಸ್ವಿ ಜೈಸ್ವಾಲ್.

Whats_app_banner