Rohit Sharma: ಏಷ್ಯಾಕಪ್ ಟ್ರೋಫಿ ಜಯಿಸಿ ಧೋನಿ-ಅಜರುದ್ದೀನ್ ದಾಖಲೆ ಸರಿಗಟ್ಟಿದ ರೋಹಿತ್ ಶರ್ಮಾ
- Asia Cup 2023: ಭಾರತ ಟ್ರೋಫಿ ಗೆಲ್ಲುತ್ತಿದ್ದಂತೆ ತಂಡದ ನಾಯಕ ರೋಹಿತ್ ಶರ್ಮಾ ಅವರು ಮಾಜಿ ನಾಯಕರಾದ ಎಂಎಸ್ ಧೋನಿ ಮತ್ತು ಮೊಹಮ್ಮದ್ ಅಜರುದ್ದೀನ್ ದಾಖಲೆಯನ್ನು ಸಮಗೊಳಿಸಿದ್ದಾರೆ.
- Asia Cup 2023: ಭಾರತ ಟ್ರೋಫಿ ಗೆಲ್ಲುತ್ತಿದ್ದಂತೆ ತಂಡದ ನಾಯಕ ರೋಹಿತ್ ಶರ್ಮಾ ಅವರು ಮಾಜಿ ನಾಯಕರಾದ ಎಂಎಸ್ ಧೋನಿ ಮತ್ತು ಮೊಹಮ್ಮದ್ ಅಜರುದ್ದೀನ್ ದಾಖಲೆಯನ್ನು ಸಮಗೊಳಿಸಿದ್ದಾರೆ.
(1 / 14)
16ನೇ ಆವೃತ್ತಿಯ ಏಷ್ಯಾಕಪ್ನಲ್ಲಿ ಶ್ರೀಲಂಕಾ ತಂಡವನ್ನು ಮಣಿಸಿದ ಭಾರತ ಚಾಂಪಿಯನ್ ಪಟ್ಟಕ್ಕೇರಿದೆ. ಇದರೊಂದಿಗೆ ರೋಹಿತ್ ಶರ್ಮಾ ವಿಶೇಷ ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.(AFP)
(2 / 14)
ಭಾರತ ಟ್ರೋಫಿ ಗೆಲ್ಲುತ್ತಿದ್ದಂತೆ ತಂಡದ ನಾಯಕ ರೋಹಿತ್ ಶರ್ಮಾ ಅವರು ಮಾಜಿ ನಾಯಕರಾದ ಎಂಎಸ್ ಧೋನಿ ಮತ್ತು ಮೊಹಮ್ಮದ್ ಅಜರುದ್ದೀನ್ ದಾಖಲೆಯನ್ನು ಸಮಗೊಳಿಸಿದ್ದಾರೆ.
(3 / 14)
ಏಷ್ಯಾಕಪ್ನಲ್ಲಿ ಒಂದಕ್ಕಿಂತ ಅಧಿಕ ಟ್ರೋಫಿ ಗೆದ್ದ 3ನೇ ಭಾರತದ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಧೋನಿ ಮತ್ತು ಅಜರುದ್ದೀನ್ ಜೊತೆಗೆ 36 ವರ್ಷದ ರೋಹಿತ್ ಈ ಸಾಧನೆ ಮಾಡಿದ್ದಾರೆ.
(4 / 14)
ಮೊಹಮ್ಮದ್ ಅಜರುದ್ದೀನ್ ನಾಯಕತ್ವದಲ್ಲಿ 1990/91 ಮತ್ತು 1995ರಲ್ಲಿ ಟೀಮ್ ಇಂಡಿಯಾ ಏಷ್ಯಾಕಪ್ ಟ್ರೋಫಿಗೆ ಮುತ್ತಿಕ್ಕಿತು.
(6 / 14)
ಇದೀಗ ರೋಹಿತ್ ಕೂಡ ಈ ಸಾಲಿಗೆ ಸೇರಿದ್ದಾರೆ. 2018ರಲ್ಲಿ ರೋಹಿತ್ ಶರ್ಮಾ ಮೊದಲ ಏಷ್ಯಾಕಪ್ ಟ್ರೋಫಿ ಗೆದ್ದಿದ್ದರು. ಈ ಮೂವರು ಭಾರತಕ್ಕೆ ತಲಾ 2 ಏಷ್ಯಾಕಪ್ ಗೆದ್ದುಕೊಟ್ಟ ಸಾಧನೆ ಮಾಡಿದ್ದಾರೆ.
(7 / 14)
2018ರಲ್ಲಿ ರೋಹಿತ್ ನಾಯಕತ್ವದಲ್ಲಿ ದುಬೈನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಬಾಂಗ್ಲಾವನ್ನು ಮಣಿಸಿ ಕಪ್ ಗೆದ್ದಿತ್ತು.
(8 / 14)
ಫೈನಲ್ ಪಂದ್ಯದಲ್ಲಿ ರೋಹಿತ್ ಶರ್ಮಾ ಕಣಕ್ಕಿಳಿಯುವ ಮೂಲಕ ಏಕದಿನ ಕ್ರಿಕೆಟ್ನಲ್ಲಿ ನೂತನ ಮೈಲಿಗಲ್ಲೊಂದನ್ನು ನಿರ್ಮಿಸಿದರು. ರೋಹಿತ್ಗೆ ಇದು 250ನೇ ಏಕದಿನ ಪಂದ್ಯ. ಈ ಸಾಧನೆ ಮಾಡಿದ 9ನೇ ಭಾರತೀಯ ಆಟಗಾರ ಎನಿಸಿಕೊಂಡರು.
(9 / 14)
ರೋಹಿತ್ ಇತ್ತೀಚೆಗೆ ಪಾಕಿಸ್ತಾನ ಮತ್ತು ಶ್ರೀಲಂಕಾ ವಿರುದ್ಧ ಸತತ ಅರ್ಧಶತಕ ಬಾರಿಸಿ ಮಿಂಚಿದ್ದರು. ಅತಿ ವೇಗವಾಗಿ ಏಕದಿನದಲ್ಲಿ ವೇಗದ 10 ಸಾವಿರ ರನ್ ಪೂರೈಸಿದರು.
(10 / 14)
ಏಷ್ಯಾಕಪ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ಶ್ರೀಲಂಕಾಗೆ ವೇಗಿ ಜಸ್ಪ್ರೀತ್ ಬುಮ್ರಾ, ಆಘಾತ ನೀಡಿದರು.(AP)
(11 / 14)
ಬುಮ್ರಾ ಬಳಿಕ 4ನೇ ಓವರ್ನಲ್ಲಿ ಬೌಲಿಂಗ್ ಮಾಡಿದ ಸಿರಾಜ್ ಒಂದೇ ಓವರ್ನಲ್ಲಿ 4 ವಿಕೆಟ್ ಪಡೆದರು. ಇದರೊಂದಿಗೆ ಶ್ರೀಲಂಕಾ ಬ್ಯಾಟಿಂಗ್ ವಿಭಾಗ ಧೂಳೀಪಟವಾಯಿತು.(AFP)
(13 / 14)
ಹಾರ್ದಿಕ್ ಪಾಂಡ್ಯ 2.2 ಓವರ್ಗಳಲ್ಲಿ 3 ರನ್ ನೀಡಿ 3 ವಿಕೆಟ್ ಪಡೆದರು. ಇದರೊಂದಿಗೆ ಶ್ರೀಲಂಕಾ 15.2 ಓವರ್ಗಳಲ್ಲಿ 50 ರನ್ಗಳಿಗೆ ಆಲೌಟ್ ಆಯಿತು. (AFP)
ಇತರ ಗ್ಯಾಲರಿಗಳು