ರೋಹಿತ್​ ಶರ್ಮಾ ಹ್ಯಾಟ್ರಿಕ್ ಟಾಸ್ ಸೋಲು; ಬೌಲಿಂಗ್ ಆಯ್ದುಕೊಂಡ ಇಂಗ್ಲೆಂಡ್, ಭಾರತ ತಂಡದಲ್ಲಿ 3 ಬದಲಾವಣೆ
ಕನ್ನಡ ಸುದ್ದಿ  /  ಕ್ರಿಕೆಟ್  /  ರೋಹಿತ್​ ಶರ್ಮಾ ಹ್ಯಾಟ್ರಿಕ್ ಟಾಸ್ ಸೋಲು; ಬೌಲಿಂಗ್ ಆಯ್ದುಕೊಂಡ ಇಂಗ್ಲೆಂಡ್, ಭಾರತ ತಂಡದಲ್ಲಿ 3 ಬದಲಾವಣೆ

ರೋಹಿತ್​ ಶರ್ಮಾ ಹ್ಯಾಟ್ರಿಕ್ ಟಾಸ್ ಸೋಲು; ಬೌಲಿಂಗ್ ಆಯ್ದುಕೊಂಡ ಇಂಗ್ಲೆಂಡ್, ಭಾರತ ತಂಡದಲ್ಲಿ 3 ಬದಲಾವಣೆ

India vs England 3rd ODI: ಅಹ್ಮದಾಬಾದ್​ನ ನರೇಂದ್ರ ಮೋದಿ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಮೂರನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ವಿರುದ್ಧ ಟಾಸ್ ಗೆದ್ದ ಇಂಗ್ಲೆಂಡ್ ಚೇಸಿಂಗ್ ಆಯ್ಕೆ ಮಾಡಿಕೊಂಡಿದೆ.

ರೋಹಿತ್​ ಶರ್ಮಾ ಹ್ಯಾಟ್ರಿಕ್ ಟಾಸ್ ಸೋಲು; ಬೌಲಿಂಗ್ ಆಯ್ದುಕೊಂಡ ಇಂಗ್ಲೆಂಡ್, ಭಾರತ ತಂಡದಲ್ಲಿ 3 ಬದಲಾವಣೆ
ರೋಹಿತ್​ ಶರ್ಮಾ ಹ್ಯಾಟ್ರಿಕ್ ಟಾಸ್ ಸೋಲು; ಬೌಲಿಂಗ್ ಆಯ್ದುಕೊಂಡ ಇಂಗ್ಲೆಂಡ್, ಭಾರತ ತಂಡದಲ್ಲಿ 3 ಬದಲಾವಣೆ (AP)

ಕ್ಲೀನ್ ಸ್ವೀಪ್ ಸಾಧಿಸುವ ಗುರಿ ಹೊಂದಿರುವ ಟೀಮ್ ಇಂಡಿಯಾ ವಿರುದ್ಧದ ಮೂರನೇ ಹಾಗೂ ಅಂತಿಮ ಏಕದಿನ ಕ್ರಿಕೆಟ್ ಪಂದ್ಯದಲ್ಲೂ ಇಂಗ್ಲೆಂಡ್ ತಂಡವೇ ಟಾಸ್ ಗೆದ್ದಿದೆ. ಟಾಸ್ ಗೆದ್ದ ಆಂಗ್ಲರು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದರೆ, ಹ್ಯಾಟ್ರಿಕ್ ಟಾಸ್ ಸೋಲು ಕಂಡಿರುವ ರೋಹಿತ್​ ಶರ್ಮಾ ಪಡೆ ಬ್ಯಾಟಿಂಗ್ ಮಾಡಲಿದೆ. ಅಂತಿಮ ಪಂದ್ಯಕ್ಕೆ ಅಹ್ಮದಾಬಾದ್​ನ ನರೇಂದ್ರ ಮೋದಿ ಕ್ರಿಕೆಟ್ ಮೈದಾನ ಆತಿಥ್ಯ ವಹಿಸುತ್ತಿದೆ. ಉಭಯ ತಂಡಗಳ ಪ್ಲೇಯಿಂಗ್ 11ನಲ್ಲೂ ಮಹತ್ವದ ಬದಲಾವಣೆಯಾಗಿದೆ.

ಅಂಕಿಅಂಶ: ಭಾರತ ಸತತ 10 ಏಕದಿನ ಪಂದ್ಯಗಳಲ್ಲಿ ಟಾಸ್ ಸೋತಿದೆ. ಎರಡನೇ ಬಾರಿ ಅತಿ ಹೆಚ್ಚು ಟಾಸ್ ಸೋತ ಕುಖ್ಯಾತಿಗೆ ಪಾತ್ರವಾಗಿದೆ. ಈ ಹಿಂದೆ 2011ರ ಮಾರ್ಚ್​ನಿಂದ 2013ರ ಆಗಸ್ಟ್​​ ಮಧ್ಯೆ ಸತತ 11 ಪಂದ್ಯಗಳಲ್ಲಿ ಟಾಸ್ ಸೋತಿತ್ತು. ಭಾರತ ಕೊನೆಯ ಬಾರಿಗೆ ಟಾಸ್ ಗೆದ್ದಿದ್ದು 2023ರ ವಿಶ್ವಕಪ್‌ನಲ್ಲಿ ವಾಂಖೆಡೆಯಲ್ಲಿ ನ್ಯೂಜಿಲೆಂಡ್ ವಿರುದ್ಧದ ಸೆಮಿಫೈನಲ್‌ನಲ್ಲಿ.

ಈಗಾಗಲೇ ಮೊದಲ ಎರಡು ಪಂದ್ಯಗಳನ್ನು ಗೆದ್ದು ಮೂರು ಪಂದ್ಯಗಳ ಸರಣಿಯನ್ನು 2-0 ಅಂತರದಲ್ಲಿ ವಶಪಡಿಸಿಕೊಂಡಿರುವ ಟೀಮ್ ಇಂಡಿಯಾ, 3ನೇ ಏಕದಿನದಲ್ಲೂ ಗೆದ್ದು ಸರಣಿ ಕ್ಲೀನ್ ಸ್ವೀಪ್ ಸಾಧಿಸುವ ಗುರಿಯನ್ನು ಹೊಂದಿದೆ. ಜೊತೆಗೆ ಮುಂಬರುವ ಚಾಂಪಿಯನ್ಸ್ ಟ್ರೋಫಿಗೆ ಭರ್ಜರಿಯಾಗಿಯೇ ಸಿದ್ಧತೆ ಕೊನೆಗೊಳಿಸುವ ಲೆಕ್ಕಾಚಾರವೂ ಇದೆ. ಮೊದಲ ಎರಡು ಪಂದ್ಯಗಳ ಗೆಲುವನ್ನೇ ಪುನರಾವರ್ತಿಸಲು ರೋಹಿತ್ ಪಡೆ ಎದುರು ನೋಡುತ್ತಿದೆ. ಮತ್ತೊಂದೆಡೆ ಕ್ಲೀನ್ ಸ್ವೀಪ್ ಮುಖಭಂಗದಿಂದ ಪಾರಾಗಲು ಇಂಗ್ಲೆಂಡ್ ಕಾಯುತ್ತಿದೆ.

ಭಾರತದಲ್ಲಿ ಮೂರು ಬದಲಾವಣೆ

ಅಂತಿಮ ಏಕದಿನ ಪಂದ್ಯಕ್ಕೆ ಭಾರತದ ಪ್ಲೇಯಿಂಗ್ 11ನಲ್ಲಿ ಮೂರು ಬದಲಾವಣೆಯಾಗಿದೆ. ರವೀಂದ್ರ ಜಡೇಜಾ ಮತ್ತು ಮೊಹಮ್ಮದ್ ಶಮಿಗೆ ವಿಶ್ರಾಂತಿ ನೀಡಲಾಗಿದೆ. ವರುಣ್‌ ಚಕ್ರವರ್ತಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಹೀಗಾಗಿ ಈ ಮೂವರ ಸ್ಥಾನಕ್ಕೆ ವಾಷಿಂಗ್ಟನ್ ಸುಮದರ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಇಂಗ್ಲೆಂಡ್ ತಂಡಕ್ಕೆ ಟಾಮ್ ಬ್ಯಾಂಟನ್ ಆಯ್ಕೆಯಾಗಿದ್ದಾರೆ. ಅವರು ಜೆಮಿ ಓವರ್ಟನ್ ಸ್ಥಾನ ತುಂಬಿದ್ದಾರೆ.

ಇಂಗ್ಲೆಂಡ್ ಪ್ಲೇಯಿಂಗ್ XI

ಫಿಲಿಪ್ ಸಾಲ್ಟ್(ವಿಕೆಟ್ ಕೀಪರ್), ಬೆನ್ ಡಕೆಟ್, ಜೋ ರೂಟ್, ಹ್ಯಾರಿ ಬ್ರೂಕ್, ಜೋಸ್ ಬಟ್ಲರ್ (ನಾಯಕ), ಟಾಮ್ ಬ್ಯಾಂಟನ್, ಲಿಯಾಮ್ ಲಿವಿಂಗ್‌ಸ್ಟನ್, ಗಸ್ ಅಟ್ಕಿನ್ಸನ್, ಆದಿಲ್ ರಶೀದ್, ಮಾರ್ಕ್ ವುಡ್, ಸಾಕಿಬ್ ಮಹಮೂದ್.

ಭಾರತ ಪ್ಲೇಯಿಂಗ್ XI

ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಹರ್ಷಿತ್ ರಾಣಾ, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್.

ನಮೋ ಮೈದಾನದಲ್ಲಿ ಏಕದಿನ ದಾಖಲೆಗಳು

ಪಂದ್ಯಗಳು - 36

ಮೊದಲು ಬ್ಯಾಟಿಂಗ್ ನಡೆಸಿದ ತಂಡಗಳ ಗೆಲುವು - 19

ಚೇಸಿಂಗ್ ನಡೆಸಿದ ತಂಡಗಳ ಗೆಲುವು - 17

ಮೊದಲ ಇನ್ನಿಂಗ್ಸ್​ ಸರಾಸರಿ ಸ್ಕೋರ್ - 237

ಎರಡನೇ ಇನ್ನಿಂಗ್ಸ್ ಸರಾಸರಿ ಸ್ಕೋರ್ - 208

ಗರಿಷ್ಠ ಸ್ಕೋರ್ - 365/2 (50) ಭಾರತ vs ಸೌತ್ ಆಫ್ರಿಕಾ

ಕನಿಷ್ಠ ಸ್ಕೋರ್​ - 85/10 (30.1) ಜಿಂಬಾಬ್ವೆ vs ವೆಸ್ಟ್ ಇಂಡೀಸ್

ಗರಿಷ್ಠ ಚೇಸಿಂಗ್ ಸ್ಕೋರ್ - 325/5 (47.4) ಭಾರತ vs ವೆಸ್ಟ್ ಇಂಡೀಸ್

ರಕ್ಷಿಸಿಕೊಂಡ ಕನಿಷ್ಠ ಸ್ಕೋರ್​ - 196/10 (48.3) ಭಾರತ vs ವೆಸ್ಟ್ ಇಂಡೀಸ್

ಭಾರತ vs ಇಂಗ್ಲೆಂಡ್ ಮುಖಾಮುಖಿ ದಾಖಲೆ

ಪಂದ್ಯಗಳು: 109

ಭಾರತ ಗೆಲುವು: 60

ಇಂಗ್ಲೆಂಡ್ ಗೆಲುವು: 44

ಪ್ರಸನ್ನಕುಮಾರ್ ಪಿ.ಎನ್.: 'ಹಿಂದೂಸ್ತಾನ್ ಟೈಮ್ಸ್​​ ಕನ್ನಡ'ದಲ್ಲಿ ಸೀನಿಯರ್​ ಕಂಟೆಂಟ್ ಪ್ರೊಡ್ಯೂಸರ್. ಕ್ರೀಡಾ (ಕ್ರಿಕೆಟ್) ವಿಭಾಗದಲ್ಲಿ ಕಾರ್ಯನಿರ್ವಹಣೆ. ಸಂಜೆವಾಣಿ, ವಿಶ್ವವಾಣಿ, ಪ್ರಜಾವಾಣಿ, ಈಟಿವಿ ಭಾರತ್, ನ್ಯೂಸ್ ಫಸ್ಟ್​ ಮಾಧ್ಯಮ ಸಂಸ್ಥೆಗಳಲ್ಲಿ ಒಟ್ಟು 7 ವರ್ಷ ಸೇವೆ ಸಲ್ಲಿಸಿದ ಅನುಭವ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಪುಟ್ಟಲಿಂಗಯ್ಯನಪಾಳ್ಯ ಇವರ ಊರು. ಸದ್ಯಕ್ಕೆ ಬೆಂಗಳೂರು ನಿವಾಸಿ.