ಕನ್ನಡ ಸುದ್ದಿ  /  ಕ್ರಿಕೆಟ್  /  ಅಫ್ಘಾನಿಸ್ತಾನ ವಿರುದ್ಧ ಸೂಪರ್​​-8 ಪಂದ್ಯದಲ್ಲಿ ಕಪ್ಪು ಪಟ್ಟಿ ಧರಿಸಿ ಕಣಕ್ಕಿಳಿದ ಭಾರತ ತಂಡ; ಡೇವಿಡ್ ಜಾನ್ಸನ್​ಗೆ ಗೌರವ ಸಲ್ಲಿಕೆ

ಅಫ್ಘಾನಿಸ್ತಾನ ವಿರುದ್ಧ ಸೂಪರ್​​-8 ಪಂದ್ಯದಲ್ಲಿ ಕಪ್ಪು ಪಟ್ಟಿ ಧರಿಸಿ ಕಣಕ್ಕಿಳಿದ ಭಾರತ ತಂಡ; ಡೇವಿಡ್ ಜಾನ್ಸನ್​ಗೆ ಗೌರವ ಸಲ್ಲಿಕೆ

Black Armbands : ದಿವಂಗತ ಡೇವಿಡ್ ಜಾನ್ಸನ್ ಅವರಿಗೆ ಗೌರವ ಸಲ್ಲಿಸುವ ಸಲುವಾಗಿ ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡವು ಟಿ20 ವಿಶ್ವಕಪ್ 2024 ಸೂಪರ್​-8 ಪಂದ್ಯದಲ್ಲಿ ಅಫ್ಘಾನಿಸ್ತಾನ ವಿರುದ್ಧ ಕಪ್ಪು ಪಟ್ಟಿ ಧರಿಸಿ ಕಣಕ್ಕಿಳಿಯಿತು.

ಅಫ್ಘಾನಿಸ್ತಾನ ವಿರುದ್ಧ ಸೂಪರ್​​-8 ಪಂದ್ಯದಲ್ಲಿ ಕಪ್ಪು ಪಟ್ಟಿ ಧರಿಸಿ ಕಣಕ್ಕಿಳಿದ ಭಾರತ ತಂಡ; ಡೇವಿಡ್ ಜಾನ್ಸನ್​ಗೆ ಗೌರವ ಸಲ್ಲಿಕೆ
ಅಫ್ಘಾನಿಸ್ತಾನ ವಿರುದ್ಧ ಸೂಪರ್​​-8 ಪಂದ್ಯದಲ್ಲಿ ಕಪ್ಪು ಪಟ್ಟಿ ಧರಿಸಿ ಕಣಕ್ಕಿಳಿದ ಭಾರತ ತಂಡ; ಡೇವಿಡ್ ಜಾನ್ಸನ್​ಗೆ ಗೌರವ ಸಲ್ಲಿಕೆ

ಐಸಿಸಿ ಟಿ20 ವಿಶ್ವಕಪ್ 2024ರಲ್ಲಿ ರಶೀದ್ ಖಾನ್ ಅವರ ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ಭಾರತದ ಮಾಜಿ ಕ್ರಿಕೆಟಿಗ ಡೇವಿಡ್ ಜಾನ್ಸನ್​ಗೆ ಗೌರವ ಸಲ್ಲಿಸಲು ರೋಹಿತ್ ಶರ್ಮಾ ನೇತೃತ್ವದ ಟೀಮ್ ಇಂಡಿಯಾ ಆಟಗಾರರು ತೋಳುಗಳಿಗೆ ಕಪ್ಪು ಪಟ್ಟಿ ಧರಿಸಿ ಕಣಕ್ಕಿಳಿದಿದೆ. ಬಾರ್ಬಡೋಸ್‌ನ ಬ್ರಿಡ್ಜ್‌ಟೌನ್‌ನ ಕೆನ್ಸಿಂಗ್ಟನ್ ಓವಲ್​ನಲ್ಲಿ ನಡೆದ ಪಂದ್ಯದಲ್ಲಿ ಭಾರತ-ಆಫ್ಘನ್ ನಡುವಿನ ಸೂಪರ್-8 ಮುಖಾಮುಖಿ ಪ್ರಾರಂಭವಾಗುವ ಕೆಲವೇ ಗಂಟೆಗಳಿಗೂ ಮುನ್ನ ಭಾರತದ ಮಾಜಿ ವೇಗದ ಬೌಲರ್ ಡೇವಿಡ್ ಜಾನ್ಸನ್ ದುರಂತ ಸಾವಿಗೆ ಸದಸ್ಯರು ಸಂತಾಪ ಸೂಚಿಸಿ ಗೌರವ ಸಲ್ಲಿಸಿದರು.

ತಮ್ಮ 52ನೇ ವಯಸ್ಸಿನಲ್ಲಿ ಜೂನ್ 20ರಂದು ಗುರುವಾರ ಬೆಂಗಳೂರಿನ ಕೊತ್ತನೂರು ಬಳಿ ತಮ್ಮ ಅಪಾರ್ಟ್​ಮೆಂಟ್​​ನಲ್ಲಿ 4ನೇ ಮಹಡಿಯ ಬಾಲ್ಕನಿಯಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಾನ್ಸನ್ ಅವರ ಸ್ಮರಣಾರ್ಥ ರೋಹಿತ್ ನಾಯಕತ್ವದ ತಂಡವು ಕಪ್ಪು ಪಟ್ಟಿ ಧರಿಸಿ ಕಣಕ್ಕಿಳಿಯುವುದಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಪಂದ್ಯಕ್ಕೂ ಮೊದಲೇ ಬಹಿರಂಗಪಡಿಸಿತ್ತು. ಇದರ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಭಾರತದ ಮಾಜಿ ಕ್ರಿಕೆಟಿಗ ಜಾನ್ಸನ್ ಏಷ್ಯಾದ ದೈತ್ಯರ ಪರ ಎರಡು ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಅವರಿಗೆ 52 ವರ್ಷ ವಯಸ್ಸಾಗಿತ್ತು. ದಿವಂಗತ ಕ್ರಿಕೆಟಿಗ ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಟೀಮ್ ಇಂಡಿಯಾ ಮೊದಲು ಬ್ಯಾಟಿಂಗ್ ನಡೆಸಿತು. 20 ಓವರ್​​ಗಳಲ್ಲಿ 8 ವಿಕೆಟ್​ ನಷ್ಟಕ್ಕೆ 181 ರನ್​ ಗಳಿಸಿತು. ಸೂರ್ಯಕುಮಾರ್ ಯಾದವ್ 50 ರನ್ ಗಳಿಸಿದರು.

ಟ್ರೆಂಡಿಂಗ್​ ಸುದ್ದಿ

ಸಚಿನ್ ತೆಂಡೂಲ್ಕರ್​ ಸಂತಾಪ

ತೆಂಡೂಲ್ಕರ್ ಜಾನ್ಸನ್ ಅವರಿಗೆ ಗೌರವ ಸಲ್ಲಿಸಿದ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರು ತಮ್ಮ ಮಾಜಿ ಸಹ ಆಟಗಾರನನ್ನು ‘ತುಂಬಿದ ವ್ಯಕ್ತಿ’ ಎಂದು ಬಣ್ಣಿಸಿದ್ದಾರೆ. 'ನನ್ನ ಮಾಜಿ ಸಹ ಆಟಗಾರ ಡೇವಿಡ್ ಜಾನ್ಸನ್ ಅವರ ನಿಧನದಿಂದ ತೀವ್ರ ದುಃಖಿತನಾಗಿದ್ದೇನೆ. ಅವರು ಜೀವನದಿಂದ ತುಂಬಿದ್ದರು. ಮೈದಾನದಲ್ಲಿ ಎಂದಿಗೂ ಬಿಟ್ಟುಕೊಡಲಿಲ್ಲ. ಅವರ ಕುಟುಂಬಕ್ಕೆ ಮತ್ತು ಸ್ನೇಹಿತರಿಗೆ ನನ್ನ ಸಂತಾಪಗಳು ಎಂದು ತೆಂಡೂಲ್ಕರ್ ಎಕ್ಸ್​ ಖಾತೆಯಲ್ಲಿ ಪೋಸ್ಟ್​ ಮಾಡಿದ್ದಾರೆ.

ಜಾನ್ಸನ್ ಅವರ ನಿಧನಕ್ಕೆ ಭಾರತದ ಮಾಜಿ ಕ್ರಿಕೆಟಿಗರಾದ ವೀರೇಂದ್ರ ಸೆಹ್ವಾಗ್, ಗೌತಮ್ ಗಂಭೀರ್ ಮತ್ತು ಅನಿಲ್ ಕುಂಬ್ಳೆ ಕೂಡ ಸಂತಾಪ ಬರೆದಿದ್ದಾರೆ. ‘ನನ್ನ ಕ್ರಿಕೆಟ್ ಸಹೋದ್ಯೋಗಿ ಡೇವಿಡ್ ಜಾನ್ಸನ್ ನಿಧನದ ಸುದ್ದಿ ಕೇಳಿ ದುಃಖವಾಯಿತು. ಅವರ ಕುಟುಂಬಕ್ಕೆ ಹೃತ್ಪೂರ್ವಕ ಸಂತಾಪಗಳು. ಬೇಗ ಹೊರಟುಬಿಟ್ಟಿರಿ' ಎಂದು ಕುಂಬ್ಳೆ ಹೇಳಿದ್ದಾರೆ.

1996ರಲ್ಲಿ ಭಾರತಕ್ಕೆ ಪದಾರ್ಪಣೆ ಮಾಡಿದ ಜಾನ್ಸನ್, 39 ಪ್ರಥಮ ದರ್ಜೆ ಹಾಗೂ 33 ಲಿಸ್ಟ್ ಎ ಪಂದ್ಯಗಳನ್ನು ಆಡಿದ್ದಾರೆ. ಸುದ್ದಿ ಸಂಸ್ಥೆ ಪಿಟಿಐ ಜೊತೆ ಮಾತನಾಡಿದ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (ಕೆಎಸ್ಸಿಎ) ಅಧಿಕಾರಿಯೊಬ್ಬರು, ಜಾನ್ಸನ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು ಎಂದು ಹೇಳಿದ್ದಾರೆ. ಆತ್ಮಹತ್ಯೆ ಪತ್ರ ಇರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.