ಸಂಜು ಸ್ಯಾಮ್ಸನ್ ಮೇಲೆ ಎಲ್ಲರ ಕಣ್ಣು: ಬಾಂಗ್ಲಾದೇಶ ವಿರುದ್ಧ ಮೊದಲ ಟಿ20ಐಗೆ ಭಾರತದ ಸಂಭಾವ್ಯ XI
Indias Likely XI: ಭಾರತ ಯುವ ತಂಡ ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿಗೆ ಸಜ್ಜಾಗುತ್ತಿದೆ. ಆದರೆ, ತಂಡದಲ್ಲಿ ಇತರೆ ಯಾವುದೇ ಆರಂಭಿಕ ಬ್ಯಾಟರ್ ಇಲ್ಲದ ಕಾರಣ, ಸಂಜು ಸ್ಯಾಮ್ಸನ್ ಬ್ಯಾಟಿಂಗ್ ಕ್ರಮಾಂಕದಲ್ಲಿ ಬಡ್ತಿ ಗಳಿಸುವ ಸಾಧ್ಯತೆಯಿದೆ.
ಟೆಸ್ಟ್ ಸರಣಿಯನ್ನು 2-0 ಅಂತರದಲ್ಲಿ ಗೆದ್ದ ನಂತರ, ಭಾರತ ಕ್ರಿಕೆಟ್ ತಂಡವು ಭಾನುವಾರ (ಅಕ್ಟೋಬರ್ 6) ಗ್ವಾಲಿಯರ್‌ನಲ್ಲಿ ಹೊಸದಾಗಿ ನಿರ್ಮಿಸಲಾದ ಮಾಧವರಾವ್ ಸಿಂಧಿಯಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ಮೂರು ಪಂದ್ಯಗಳ ಸರಣಿಯ ಮೊದಲ T20I ನಲ್ಲಿ ಬಾಂಗ್ಲಾದೇಶವನ್ನು ಎದುರಿಸಲಿದೆ. ಸೂರ್ಯಕುಮಾರ್ ಯಾದವ್ ಅವರ ನಾಯಕತ್ವದಲ್ಲಿ ಟೀಮ್ ಇಂಡಿಯಾ ಕಣಕ್ಕಿಳಿಯಲಿದೆ. ಜೊತೆಗೆ ಸೂರ್ಯ ಕ್ಯಾಪ್ಟನ್ ಆಗಿ ನೇಮಕಗೊಂಡ ನಂತರ ತವರಿನಲ್ಲಿ ರಾಷ್ಟ್ರೀಯ ತಂಡದ ಉಸ್ತುವಾರಿ ವಹಿಸುವ ಮೊದಲ ಪಂದ್ಯ ಇದಾಗಿದೆ.
ನ್ಯೂಝಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯು ಶೀಘ್ರದಲ್ಲೇ ಪ್ರಾರಂಭವಾಗಲಿದೆ. ಹೀಗಾಗಿ ಬಾಂಗ್ಲಾದೇಶವನ್ನು ಎದುರಿಸುತ್ತಿರುವ ಭಾರತದ ರೆಡ್ ಬಾಲ್ ತಂಡದಲ್ಲಿ ದೊಡ್ಡ ದೊಡ್ಡ ಸ್ಟಾರ್ ಆಟಗಾರರು ಇಲ್ಲ. ಶುಬ್ಮನ್ ಗಿಲ್, ರಿಷಬ್ ಪಂತ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಅಕ್ಷರ್ ಪಟೇಲ್ ಮತ್ತು ಕುಲದೀಪ್ ಯಾದವ್ ಅವರಂತಹ ಸ್ಟಾರ್ಸ್ ಈ ಸರಣಿಗಿಲ್ಲ.
ಬಾಂಗ್ಲಾದೇಶ ವಿರುದ್ಧ ಮೊದಲ ಟಿ20ಐಗೆ ಭಾರತದ ಸಂಭಾವ್ಯ XI
ಆತಿಥೇಯ ತಂಡವು 15 ಸದಸ್ಯರ ತಂಡದಲ್ಲಿ ಒಬ್ಬ ಸ್ಪೆಷಲ್ ಓಪನರ್ ಅನ್ನು ಆಯ್ಕೆ ಮಾಡಿದೆ. ಅವರೇ ಭರವಸೆಯ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ. ತಂಡದಲ್ಲಿ ಇತರೆ ಯಾವುದೇ ಆರಂಭಿಕ ಬ್ಯಾಟರ್ ಇಲ್ಲದ ಕಾರಣ, ಸಂಜು ಸ್ಯಾಮ್ಸನ್ ಬ್ಯಾಟಿಂಗ್ ಕ್ರಮಾಂಕದಲ್ಲಿ ಬಡ್ತಿ ಗಳಿಸುವ ಸಾಧ್ಯತೆಯಿದ್ದು ಓಪನರ್ ಆಗಿ ಆಡಲಿದ್ದಾರೆ. ಹೀಗಾಗಿ ಇವರ ಮೇಲೆ ಎಲ್ಲರ ಕಣ್ಣಿದೆ.
ನಾಯಕ ಸೂರ್ಯಕುಮಾರ್ ಯಾದವ್ ಮೂರನೇ ಸ್ಥಾನದಲ್ಲಿ ಕಣಕ್ಕಿಳಿಯಬಹುದು. ರಿಯಾನ್ ಪರಾಗ್ ಶ್ರೀಲಂಕಾದಲ್ಲಿ ಎಲ್ಲಾ ಮೂರು ಪಂದ್ಯಗಳನ್ನು ಆಡಿದ ನಂತರ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ. ಮತ್ತು ಈ ಬಾರಿ ನಾಲ್ಕನೇ ಸ್ಥಾನದಲ್ಲಿ ಬ್ಯಾಟ್ ಮಾಡುತ್ತಾರೆ. ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಎರಡು ತಿಂಗಳ ನಂತರ ಆಟಕ್ಕೆ ಮರಳುತ್ತಾರೆ ಮತ್ತು ಐದನೇ ಸ್ಥಾನದಲ್ಲಿ ಬ್ಯಾಟಿಂಗ್ ಮಾಡುತ್ತಾರೆ. ರಿಂಕು ಸಿಂಗ್ ಆರನೇ ಸ್ಥಾನವನ್ನು ಪಡೆದುಕೊಳ್ಳುತ್ತಾರೆ.
ವಾಷಿಂಗ್ಟನ್ ಸುಂದರ್ ಏಳನೇ ಸ್ಥಾನದಲ್ಲಿ ಸ್ಪಿನ್-ಬೌಲಿಂಗ್ ಆಲ್-ರೌಂಡರ್ ಆಗಿ ಆಡಬಹುದು. ರವಿ ಬಿಷ್ಣೋಯ್ ಏಕೈಕ ಸ್ಪೆಷಲಿಸ್ಟ್ ಸ್ಪಿನ್ನರ್ ಆಗಿದ್ದಾರೆ. ಈ ಮೂಲಕ ವರುಣ್ ಚಕ್ರವರ್ತಿ ಪುನರಾಗಮನಕ್ಕಾಗಿ ಕಾಯಬೇಕಾಗಿದೆ. ಹರ್ಷಿತ್ ರಾಣಾ ಮತ್ತು ಮಯಾಂಕ್ ಯಾದವ್ ಅವರೊಂದಿಗೆ ಅರ್ಶ್ದೀಪ್ ಸಿಂಗ್ ವೇಗದ ದಾಳಿಯನ್ನು ಮುನ್ನಡೆಸಲಿದ್ದಾರೆ.
ಮೊದಲ ಟಿ20 ಪಂದ್ಯಕ್ಕೆ ಭಾರತದ ಸಂಭಾವ್ಯ ಪ್ಲೇಯಿಂಗ್ XI
ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್-ಕೀಪರ್), ಸೂರ್ಯಕುಮಾರ್ ಯಾದವ್ (ನಾಯಕ), ರಿಯಾನ್ ಪರಾಗ್, ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ಮಯಾಂಕ್ ಯಾದವ್.
ಬಾಂಗ್ಲಾದೇಶ ಟಿ20ಐಗೆ ಭಾರತ ತಂಡ
ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್-ಕೀಪರ್), ರಿಂಕು ಸಿಂಗ್, ಹಾರ್ದಿಕ್ ಪಾಂಡ್ಯ, ರಿಯಾನ್ ಪರಾಗ್, ನಿತೀಶ್ ಕುಮಾರ್ ರೆಡ್ಡಿ, ಶಿವಂ ದುಬೆ, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ವರುಣ್ ಚಕ್ರವರ್ತಿ, ಜಿತೇಶ್ ಶರ್ಮಾ (ವಿಕೆಟ್-ಕೀಪರ್), ಅರ್ಷದೀಪ್ ಸಿಂಗ್, ಹರ್ಷಿತ್ ರಾಣಾ, ಮಯಾಂಕ್ ಯಾದವ್.