ಶಿವಂ ದುಬೆ ಔಟ್, ಸಂಜು ಸ್ಯಾಮ್ಸನ್ ಇನ್; ಸೆಮಿಫೈನಲ್ನಲ್ಲಿ ಇಂಗ್ಲೆಂಡ್ ವಿರುದ್ಧದ ಪಂದ್ಯಕ್ಕೆ ಭಾರತ ಸಂಭಾವ್ಯ ತಂಡ
India vs England semi-final 2: ಟಿ20 ವಿಶ್ವಕಪ್ 2024 ಟೂರ್ನಿಯ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಸೆಣಸಾಟ ನಡೆಸಲಿದ್ದು, ಗೆದ್ದ ತಂಡವು ಫೈನಲ್ಗೆ ಪ್ರವೇಶಿಸಲಿದೆ.

ಟಿ20 ವಿಶ್ವಕಪ್ 2024 ಟೂರ್ನಿ (T20 World Cup 2024) ಕೊನೆಯ ಹಂತಕ್ಕೆ ತಲುಪಿದೆ. 2ನೇ ಸೆಮಿಫೈನಲ್ ಪಂದ್ಯದಲ್ಲಿ ಭಾರತ-ಇಂಗ್ಲೆಂಡ್ ತಂಡಗಳು (India vs England) ಸೆಣಸಾಟ ನಡೆಸುತ್ತಿವೆ. ಗಯಾನಾದ ಪ್ರಾವಿಡೆನ್ಸ್ ಮೈದಾನದಲ್ಲಿ ಈ ಪಂದ್ಯ ನಡೆಯಲಿದೆ. 2022ರ ಟಿ20 ವಿಶ್ವಕಪ್ ಸೆಮಿಫೈನಲ್ನಲ್ಲಿ 10 ವಿಕೆಟ್ ಗಳಿಂದ ಸೋಲಿಸಿದ್ದ ಇಂಗ್ಲೆಂಡ್ ವಿರುದ್ದ ಭಾರತ ತಂಡ ಸೇಡು ತೀರಿಸಿಕೊಳ್ಳಲು ಸಜ್ಜಾಗಿದೆ. ಮಹತ್ವದ ಪಂದ್ಯಕ್ಕೆ ಭಾರತ ತಂಡದಲ್ಲಿ ಪ್ರಮುಖ ಬದಲಾವಣೆಯಾಗುವ ಸಾಧ್ಯತೆ ದೆ.
ಆರಂಭಿಕ ಸ್ಥಾನದಲ್ಲಿಲ್ಲ ಬದಲಾವಣೆ
ಆರಂಭಿಕ ಸ್ಥಾನದಲ್ಲಿ ಬದಲಾವಣೆ ಕಾಣುವುದು ಅಸಾಧ್ಯವಾಗಿದೆ. ವಿರಾಟ್ ಕೊಹ್ಲಿ ಕಳಪೆ ಪ್ರದರ್ಶನ ನೀಡಿದ್ದರೂ ಅವರನ್ನೇ ಓಪನಿಂಗ್ನಲ್ಲಿ ಮುಂದುವರೆಸಲು ಟೀಮ್ ಮ್ಯಾನೇಜ್ಮೆಂಟ್ ನಿರ್ಧರಿಸಿದೆ. ಕಳೆದ ಪಂದ್ಯದಲ್ಲಿ ಡಕೌಟಾದರೂ ಕೊಹ್ಲಿ ಮತ್ತೆ ಓಪನಿಂಗ್ ಮಾಡಲಿದ್ದಾರೆ. ಯಶಸ್ವಿ ಜೈಸ್ವಾಲ್ ಮತ್ತೆ ಬೆಂಚ್ ಕಾಯಬೇಕಾಗುತ್ತದೆ. ರೋಹಿತ್ ಶರ್ಮಾ ಭರ್ಜರಿ ಫಾರ್ಮ್ನಲ್ಲಿದ್ದು, ಸೆಮಿಫೈನಲ್ನಲ್ಲೂ ಮತ್ತೊಮ್ಮೆ ಮಿಂಚಿನ ಪ್ರದರ್ಶನ ನೀಡುವ ಸಾಧ್ಯತೆ ಇದೆ.
ಆರಂಭಿಕರಾಗಿ ವಿರಾಟ್ ಕೊಹ್ಲಿ ಅವರು ಅಟ್ಟರ್ಫ್ಲಾಪ್ ಪ್ರದರ್ಶನ ನೀಡಿದ್ದು, ತಮ್ಮ ಫೇವರಿಟ್ 3ನೇ ಕ್ರಮಾಂಕದಲ್ಲಿ ಆಡಿದರೂ ಅಚ್ಚರಿ ಇಲ್ಲ. ಆದರೆ, ರಿಷಭ್ ಪಂತ್ ಆರಂಭಿಕರಾಗಿ ಬಡ್ತಿ ಪಡೆಯುವ ಸಾಧ್ಯತೆ ಇದೆ. ಸೂರ್ಯಕುಮಾರ್ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿಯಲಿದ್ದಾರೆ. ಆದರೆ, ಮಧ್ಯಮ ಕ್ರಮಾಂಕದಲ್ಲಿ ವೈಫಲ್ಯ ಅನುಭವಿಸುತ್ತಿರುವ ಶಿವಂ ದುಬೆ ಅವರನ್ನು ಕೈಬಿಡಲು ನಿರ್ಧರಿಸಲಾಗಿದೆ. ಆದರೆ, ಅವರ ಬದಲಿಗೆ ಸ್ಯಾಮ್ಸನ್ ಅಥವಾ ಜೈಸ್ವಾಲ್ ಅವಕಾಶ ಪಡೆಯುವ ನಿರೀಕ್ಷೆ ಇದೆ.
ಶಿವಂ ದುಬೆ ಬ್ಯಾಟಿಂಗ್ನಲ್ಲಿ ವೈಫಲ್ಯ ಅನುಭವಿಸುತ್ತಿದ್ದಾರೆ. ಅವರು ಬೌಲಿಂಗ್ ಮಾಡಿದ್ದು ಕೂಡ ಕಡಿಮೆ. ಕೆಲವೇ ಓವರ್ಗಳು ಬೌಲಿಂಗ್ ಮಾಡಿದ್ದರೂ ದುಬಾರಿಯಾಗಿದ್ದಾರೆ. ಹೀಗಾಗಿ ಅವರ ಸ್ಥಾನ ಬದಲಿಸಲು ಟೀಮ್ ಮ್ಯಾನೇಜ್ಮೆಂಟ್ ಚಿಂತನೆ ನಡೆಸಿದೆ. ಮತ್ತೊಬ್ಬ ವೇಗದ ಆಲ್ರೌಂಡರ್ ಆಗಿ ಹಾರ್ದಿಕ್ ಪಾಂಡ್ಯ ಇರಲಿದ್ದಾರೆ. ಸ್ಪಿನ್ ಆಲ್ರೌಂಡರ್ಗಳಾಗಿ ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್ ವೇಗಿಗಳಾಗಿ ಸ್ಥಾನ ಪಡೆಯಲಿದ್ದಾರೆ. ಕುಲ್ದೀಪ್ ಯಾದವ್ ಸ್ಪೆಷಲಿಸ್ಟ್ ಸ್ಪಿನ್ನರ್ ಆಗಿ ಸ್ಥಾನ ಪಡೆಯಲಿದ್ದಾರೆ.
ರೋಹಿತ್ ಶರ್ಮಾ ಅವರು 191 ರನ್ ಸಿಡಿಸಿ ಟೀಮ್ ಇಂಡಿಯಾ ಪರ ಅಗ್ರ ಸ್ಕೋರರ್ ಆಗಿದ್ದರೆ, ಅರ್ಷದೀಪ್ ಸಿಂಗ್ 15 ವಿಕೆಟ್ ಉರುಳಿಸಿ ಟಾಪ್ ವಿಕೆಟ್ ಟೇಕರ್ ಆಗಿದ್ದಾರೆ. ಹೀಗಾಗಿ, ಅವರೇ ಈ ಪಂದ್ಯಕ್ಕೂ ಮುನ್ನ ಅವರ ಮೇಲೆಯೇ ಹೆಚ್ಚಿನ ನಿರೀಕ್ಷೆ ಇಡಲಾಗಿದೆ. 2022ರಲ್ಲಿ ಆಸ್ಟ್ರೇಲಿಯಾದಲ್ಲಿ ನಡೆದಿದ್ದ ಟಿ20 ವಿಶ್ವಕಪ್ ಸೆಮಿಫೈನಲ್ನಲ್ಲಿ ಟೀಮ್ ಇಂಡಿಯಾ ವಿರುದ್ದ 10 ವಿಕೆಟ್ಗಳ ಗೆಲುವು ಸಾಧಿಸಿ ಇಂಗ್ಲೆಂಡ್ ಫೈನಲ್ ಪ್ರವೇಶಿಸಿತ್ತು.
ಭಾರತ ನಿರೀಕ್ಷಿತ ಪ್ಲೇಯಿಂಗ್ XI
ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ರಿಷಭ್ ಪಂತ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ರವೀಂದ್ರ ಜಡೇಜಾ, ಅರ್ಷ್‌ದೀಪ್ ಸಿಂಗ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ.
ಇಂಗ್ಲೆಂಡ್ ಸಂಭಾವ್ಯ ಪ್ಲೇಯಿಂಗ್ XI
ಜೋಸ್ ಬಟ್ಲರ್ (ನಾಯಕ), ಫಿಲ್ ಸಾಲ್ಟ್ (ವಿಕೆಟ್ ಕೀಪರ್), ಜಾನಿ ಬೈರ್‌ಸ್ಟೋವ್, ಹ್ಯಾರಿ ಬ್ರೂಕ್, ಮೊಯಿನ್ ಅಲಿ, ವಿಲ್ ಜ್ಯಾಕ್ಸ್, ಲಿಯಾಮ್ ಲಿವಿಂಗ್‌ಸ್ಟನ್, ಕ್ರಿಸ್ ಜೋರ್ಡಾನ್, ಆದಿಲ್ ರಶೀದ್, ಜೋಫ್ರಾ ಆರ್ಚರ್, ಮಾರ್ಕ್ ವುಡ್.
