ಕನ್ನಡ ಸುದ್ದಿ  /  ಕ್ರಿಕೆಟ್  /  ಐಪಿಎಲ್‌ 2024: ಇಂದು ಲೀಗ್‌ ಹಂತದ ಕೊನೆಯ 2 ಪಂದ್ಯಗಳು; ಎಲಿಮನೇಟರ್‌ನಲ್ಲಿ ಆರ್‌ಸಿಬಿ ಎದುರಾಳಿಯಾಗೋರು ಯಾರು?

ಐಪಿಎಲ್‌ 2024: ಇಂದು ಲೀಗ್‌ ಹಂತದ ಕೊನೆಯ 2 ಪಂದ್ಯಗಳು; ಎಲಿಮನೇಟರ್‌ನಲ್ಲಿ ಆರ್‌ಸಿಬಿ ಎದುರಾಳಿಯಾಗೋರು ಯಾರು?

ಪ್ಲೇಆಫ್‌ ಪ್ರವೇಶಿಸಿರುವ ಆರ್‌ಸಿಬಿ ತಂಡದ ಮುಂದಿನ ಎದುರಾಳಿ ಯಾರು ಎಂಬುದನ್ನು ಮೇ 19ರ ಭಾನುವಾರವಾದ ಇಂದು ಉತ್ತರ ಸಿಗಲಿದೆ. ಐಪಿಎಲ್‌ 2024ರ ಆವೃತ್ತಿಯ ಲೀಗ್‌ ಹಂತದ ಕೊನೆಯ ಎರಡು ಪಂದ್ಯಗಳು ನಡೆಯುತ್ತಿದ್ದು, ಕುತೂಹಲ ಮೂಡಿಸಿದೆ.

ಎಲಿಮನೇಟರ್‌ನಲ್ಲಿ ಆರ್‌ಸಿಬಿ ಎದುರಾಳಿಯಾಗೋರು ಯಾರು?
ಎಲಿಮನೇಟರ್‌ನಲ್ಲಿ ಆರ್‌ಸಿಬಿ ಎದುರಾಳಿಯಾಗೋರು ಯಾರು?

ಐಪಿಎಲ್‌ 2024ರ ಆವೃತ್ತಿಯ ಲೀಗ್‌ ಹಂತವು ಅಂತಿಮ ಹಂತಕ್ಕೆ ಬಂದಿದೆ, ಮೇ 19ರ ಭಾನುವಾರ ಲೀಗ್‌ ಹಂತದ ಕೊನೆಯ ಎರಡು ಪಂದ್ಯಗಳು ನಡೆಯುತ್ತಿವೆ. ವಾರಾಂತ್ಯವಾಗಿರುವುದರಿಂದ ಎರಡು ಪಂದ್ಯಗಳಿದ್ದು, ಹೈದರಾಬಾದ್‌ನ ರಾಜೀವ್‌ ಗಾಂಧಿ ಕ್ರೀಡಾಂಗಣದಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದರಾಬಾದ್‌ ಹಾಗೂ ಪಂಜಾಬ್‌ ಕಿಂಗ್ಸ್‌ ತಂಡಗಳು ಮುಖಾಮುಖಿಯಾಗಲಿವೆ. ಗುವಾಹಟಿಯಲ್ಲಿ ನಡೆಯುತ್ತಿರುವ ದಿನದ ಎರಡನೇ ಪಂದ್ಯದಲ್ಲಿ ರಾಜಸ್ಥಾನ್‌ ರಾಯಲ್ಸ್‌ ಹಾಗೂ ಕೋಲ್ಕತ್ತಾ ನೈಟ್‌ ರೈಡರ್ಸ್‌ ತಂಡಗಳು ಎದುರಾಗಲಿವೆ. ಇಂದಿನ ಪಂದ್ಯಗಳು ಪಂಜಾಬ್‌ ಮತ್ತು ಕೆಕೆಆರ್‌ ಪಾಲಿಗೆ ಔಪಚಾರಿಕವಷ್ಟೇ. ಆದರೆ, ಎಸ್‌ಆರ್‌ಎಚ್‌ ಹಾಗೂ ರಾಜಸ್ಥಾನ್‌ ರಾಯಲ್ಸ್‌ ತಂಡಗಳಿಗೆ ಪ್ರಮುಖ ಪಂದ್ಯವಾಗಿವೆ. ತಮ್ಮ ತಮ್ಮ ಪಂದ್ಯಗಳಲ್ಲಿ ಗೆದ್ದರೆ, ಅಂಕಪಟ್ಟಿಯಲ್ಲಿ ಅಗ್ರ ಎರಡನೇ ತಂಡವಾಗಿ ಅಭಿಯಾನ ಮುಗಿಸುವ ಅವಕಾಶವಿದೆ.

ಟ್ರೆಂಡಿಂಗ್​ ಸುದ್ದಿ

ಇಂದಿನ ಪಂದ್ಯದಲ್ಲಿ ಕೆಕೆಆರ್‌ ಸೋತರೂ ಅಥವಾ ಗೆದ್ದರೂ ಅಂಕಪಟ್ಟಿಯಲ್ಲಿ ಯಾವುದೇ ಬದಲಾವಣೆಗಾಳಾಗುವುದಿಲ್ಲ. ಅದು ಅಗ್ರಸ್ಥಾನದಲ್ಲೇ ಉಳಿಯಲಿದೆ. ಇತ್ತ ರಾಜಸ್ಥಾನ ಗೆದ್ದರೆ, ಎರಡನೇ ಸ್ಥಾನವನ್ನು ಉಳಿಸಿಕೊಳ್ಳಲಿದೆ. ಅತ್ತ ಸನ್‌ರೈಸರ್ಸ್‌ ಗೆದ್ದು ರಾಜಸ್ಥಾನ ಸೋತರೆ, ಪ್ಯಾಟ್‌ ಕಮಿನ್ಸ್‌ ಬಳಗವು ಎರಡನೇ ಸ್ಥಾನಕ್ಕೆ ಲಗ್ಗೆ ಹಾಕಲಿದೆ. ಈ ಎರಡೂ ತಂಡಗಳು ಸೋತರೆ ಅಥವಾ ಗೆದ್ದರೆ, ಈಗ ಇರುವಂತೆಯೇ ಆರ್‌ಆರ್‌ ಎರಡನೇ ಸ್ಥಾನ ಹಾಗೂ ಹೈದರಾಬಾದ್‌ ಮೂರನೇ ಸ್ಥಾನದಲ್ಲಿ ಉಳಿಯಲಿದೆ.

ಆರ್‌ಸಿಬಿ ಎದುರಾಳಿ ಯಾರು?

ಐಪಿಎಲ್‌ ಅಂಕಪಟ್ಟಿಯಲ್ಲಿ ಮೊದಲೆರಡು ಸ್ಥಾನ ಪಡೆದ ತಂಡಗಳು, ಮೇ 21ರಂದು ಮೊದಲ ಕ್ವಾಲಿಫೈಯರ್‌ ಪಂದ್ಯ ಆಡುತ್ತವೆ. ಇಲ್ಲಿ ಗೆದ್ದ ತಂಡವು ನೇರವಾಗಿ ಮೇ 26ರಂದು ನಡೆಯುವ ಫೈನಲ್‌ ಪಂದ್ಯಕ್ಕೆ ಲಗ್ಗೆ ಹಾಕುತ್ತದೆ. ಅತ್ತ ಸೋತ ತಂಡಕ್ಕೆ ಮತ್ತೊಂದು ಅವಕಾಶವಿದೆ. ಮೇ 22ರಂದು ನಡೆಯುವ ಎಲಿಮನೇಟರ್‌ ಪಂದ್ಯದಲ್ಲಿ ಅಂಕಪಟ್ಟಿಯಲ್ಲಿ ಮೂರು ಹಾಗೂ ನಾಲ್ಕನೇ ಸ್ಥಾನ ಪಡೆದ ತಂಡಗಳು ಮುಕಾಮುಖಿಯಾಗುತ್ತವೆ. ಇಲ್ಲಿ ಸೋತ ತಂಡ ಮನೆಗೆ ನಡೆದರೆ, ಗೆದ್ದ ತಂಡವು ಎರಡನೇ ಕ್ವಾಲಿಫೈಯರ್‌ ಪ್ರವೇಶಿಸುತ್ತದೆ. ಅಲ್ಲಿ, ಮೊದಲ ಕ್ವಾಲಿಫೈಯರ್‌ನಲ್ಲಿ ಸೋತ ತಂಡವನ್ನು ಎದುರಿಸಬೇಕಾಗುತ್ತದೆ. ಇಲ್ಲಿ ಗೆದ್ದ ತಂಡವು ಫೈನಲ್‌ ಪ್ರವೇಶ ಮಾಡುತ್ತದೆ.

ಇದನ್ನೂ ಓದಿ | Video: ನಿದ್ದೆಗೆಟ್ಟು ಸಂಭ್ರಮಾಚರಣೆಯಲ್ಲಿ ಮುಳುಗಿದ ಆರ್‌ಸಿಬಿ ಫ್ಯಾನ್ಸ್; ಇದು ಗ್ರೇಟೆಸ್ಟ್‌ ಕಂಬ್ಯಾಕ್ ಎಂದು ಹರ್ಷೋದ್ಘಾರ

ಆರ್‌ಸಿಬಿ ತಂಡವು ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲೇ ಉಳಿಯುವುದು ಖಚಿತ. ಹೀಗಾಗಿ ಫಾಫ್‌ ಡುಪ್ಲೆಸಿಸ್‌ ಪಡೆಯು ಮೇ 22ರ ಬುಧವಾರ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುವ ಎಲಿಮನೇಟರ್‌ ಪಂದ್ಯದಲ್ಲಿ ಆಡಲಿದೆ. ಆರ್‌ಸಿಬಿಯ ಎದುರಾಳಿ ತಂಡ ಯಾವುದು ಎಂಬುದು ಇಂದಿನ ಪಂದ್ಯದ ಬಳಿ ನಿರ್ಧಾರವಾಗಬೇಕಿದೆ. ರಾಜಸ್ಥಾನ್‌ ರಾಯಲ್ಸ್‌ ಅಥವಾ ಸನ್‌ರೈಸರ್ಸ್‌ ಹೈದರಾಬಾದ್‌ ತಂಡಗಳು ಆರ್‌ಸಿಬಿಗೆ ಎದುರಾಳಿಯಾಗಿ ಸಿಗಲಿದೆ.

ಸನ್‌ರೈಸರ್ಸ್‌ ಹೈದರಾಬಾದ್‌ vs ಪಂಜಾಬ್ ಕಿಂಗ್ಸ್

ಪಂಜಾಬ್‌ ತಂಡದಿಂದ ಸ್ಯಾಮ್‌ ಕರನ್ ಮತ್ತು ಬೈರ್‌ಸ್ಟೋ ಹೊರಬಂದಿದ್ದಾರೆ. ಹೀಗಾಗಿ ಜಿತೇಶ್‌ ಶರ್ಮಾ ತಂಡದ ನಾಯಕತ್ವ ವಹಿಸಲಿದ್ದಾರೆ.

ಎಸ್‌ಆರ್‌ಎಚ್‌ ಸಂಭಾವ್ಯ ತಂಡ

ಪ್ರಭ್‌ಸಿಮ್ರಾನ್ ಸಿಂಗ್, ಅಥರ್ವ ತೈಡೆ, ರಿಲೀ ರೋಸೊವ್, ಶಶಾಂಕ್ ಸಿಂಗ್, ಜಿತೇಶ್ ಶರ್ಮಾ (ನಾಯಕ, ವಿಕೆಟ್‌ ಕೀಪರ್), ಅಶುತೋಷ್ ಶರ್ಮಾ, ರಿಷಿ ಧವನ್, ಹರ್‌ಪ್ರೀತ್ ಬ್ರಾರ್, ಹರ್ಷಲ್ ಪಟೇಲ್, ನಾಥನ್ ಎಲ್ಲಿಸ್‌, ರಾಹುಲ್ ಚಹರ್, ಅರ್ಷದೀಪ್ ಸಿಂಗ್ (ಇಂಪ್ಯಾಕ್ಟ್‌ ಪ್ಲೇಯರ್).

ಪಂಜಾಬ್‌ ಸಂಭಾವ್ಯ ತಂಡ

ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ಮಯಾಂಕ್ ಅಗರ್ವಾಲ್/ರಾಹುಲ್ ತ್ರಿಪಾಠಿ, ನಿತೀಶ್ ಕುಮಾರ್ ರೆಡ್ಡಿ, ಹೆನ್ರಿಚ್ ಕ್ಲಾಸೆನ್ (ವಿಕೆಟ್‌ ಕೀಪರ್), ಅಬ್ದುಲ್ ಸಮದ್, ಶಹಬಾಜ್ ಅಹ್ಮದ್, ಪ್ಯಾಟ್ ಕಮ್ಮಿನ್ಸ್ (ನಾಯಕ), ಭುವನೇಶ್ವರ್ ಕುಮಾರ್, ಜೈದೇವ್‌ ಉನದ್ಕತ್, ವಿಜಯಕಾಂತ್ ವ್ಯಾಸಕಾಂತ್, ಟಿ ನಟರಾಜನ್ (ಇಂಪ್ಯಾಕ್ಟ್‌ ಪ್ಲೇಯರ್).

ರಾಜಸ್ಥಾನ ಸಂಭಾವ್ಯ ತಂಡ

ಯಶಸ್ವಿ ಜೈಸ್ವಾಲ್, ಟಾಮ್ ಕೊಹ್ಲರ್-ಕ್ಯಾಡ್ಮೋರ್, ಸಂಜು ಸ್ಯಾಮ್ಸನ್ (ನಾಯಕ ಮತ್ತು ವಿಕೆಟ್‌ ಕೀಪರ್), ರಿಯಾನ್ ಪರಾಗ್, ಧ್ರುವ್ ಜುರೆಲ್, ಶಿಮ್ರಾನ್ ಹೆಟ್ಮೆಯರ್, ಆರ್ ಅಶ್ವಿನ್, ಟ್ರೆಂಟ್ ಬೌಲ್ಟ್, ಆವೇಶ್ ಖಾನ್, ಸಂದೀಪ್ ಶರ್ಮಾ, ಯುಜ್ವೇಂದ್ರ ಚಹಾಲ್, ನಾಂದ್ರೆ ಬರ್ಗರ್/ಡೊನೊವನ್ ಫೆರೇರಾ (ಇಂಪ್ಯಾಕ್ಟ್‌ ಪ್ಲೇಯರ್).

ಕೆಕೆಆರ್‌ ಸಂಭಾವ್ಯ ತಂಡ

ರಹಮಾನುಲ್ಲಾ ಗುರ್ಬಾಜ್ (ವಿಕೆಟ್‌ ಕೀಪರ್), ಸುನಿಲ್ ನರೈನ್, ನಿತೀಶ್ ರಾಣಾ, ಶ್ರೇಯಸ್ ಅಯ್ಯರ್ (ನಾಯಕ), ವೆಂಕಟೇಶ್ ಅಯ್ಯರ್, ಆಂಡ್ರೆ ರಸೆಲ್, ರಿಂಕು ಸಿಂಗ್, ರಮಣದೀಪ್ ಸಿಂಗ್, ಮಿಚೆಲ್ ಸ್ಟಾರ್ಕ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ವೈಭವ್ ಅರೋರಾ/ಸುಯಶ್ ಶರ್ಮಾ (ಇಂಪ್ಯಾಕ್ಟ್‌ ಪ್ಲೇಯರ್).

ಇದನ್ನೂ ಓದಿ | IPL 2024: ಆರ್‌ಸಿಬಿ ಮುಂದಿನ ಪಂದ್ಯ ಯಾವಾಗ, ಯಾರ ವಿರುದ್ಧ? ಅಹಮದಾಬಾದ್‌ಗೆ ರಾಯಲ್‌ ಚಾಲೆಂಜರ್ಸ್‌ ಪಯಣ

(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್‌. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)

ಟಿ20 ವರ್ಲ್ಡ್‌ಕಪ್ 2024