ಆಸ್ಟ್ರೇಲಿಯಾ ಸರಣಿಗೆ ಭಾರತ ತಂಡ ಪ್ರಕಟ; 2 ಪಂದ್ಯಗಳಿಗೆ ರೋಹಿತ್, ಕೊಹ್ಲಿಗೆ ವಿಶ್ರಾಂತಿ; ಕೆಎಲ್ ರಾಹುಲ್ ನಾಯಕ, ಅಶ್ವಿನ್​ಗೆ ಅವಕಾಶ
ಕನ್ನಡ ಸುದ್ದಿ  /  ಕ್ರಿಕೆಟ್  /  ಆಸ್ಟ್ರೇಲಿಯಾ ಸರಣಿಗೆ ಭಾರತ ತಂಡ ಪ್ರಕಟ; 2 ಪಂದ್ಯಗಳಿಗೆ ರೋಹಿತ್, ಕೊಹ್ಲಿಗೆ ವಿಶ್ರಾಂತಿ; ಕೆಎಲ್ ರಾಹುಲ್ ನಾಯಕ, ಅಶ್ವಿನ್​ಗೆ ಅವಕಾಶ

ಆಸ್ಟ್ರೇಲಿಯಾ ಸರಣಿಗೆ ಭಾರತ ತಂಡ ಪ್ರಕಟ; 2 ಪಂದ್ಯಗಳಿಗೆ ರೋಹಿತ್, ಕೊಹ್ಲಿಗೆ ವಿಶ್ರಾಂತಿ; ಕೆಎಲ್ ರಾಹುಲ್ ನಾಯಕ, ಅಶ್ವಿನ್​ಗೆ ಅವಕಾಶ

Team India Squad announce for Australia ODI Series: 2023ರ ಏಷ್ಯಾಕಪ್ ಟೂರ್ನಿ ಗೆದ್ದುಕೊಳ್ಳುವ ಮೂಲಕ ಯಶಸ್ವಿಯಾಗಿ ಮುಗಿಸಿದ ಬೆನ್ನಲ್ಲೇ ಆಸ್ಟ್ರೇಲಿಯಾ ಎದುರಿನ 3 ಪಂದ್ಯಗಳ ಏಕದಿನ ಸರಣಿಗೆ ಭಾರತ ಸಜ್ಜಾಗುತ್ತಿದೆ. ಇದೀಗ ಈಗ ಈ ಸರಣಿಗೆ ತಂಡವನ್ನು ಪ್ರಕಟಿಸಲಾಗಿದೆ.

ಏಷ್ಯಾಕಪ್ ಮುಗಿದ ಬೆನ್ನಲ್ಲೇ ಆಸ್ಟ್ರೇಲಿಯಾ ಸರಣಿ ಭಾರತ ತಂಡ ಪ್ರಕಟ.
ಏಷ್ಯಾಕಪ್ ಮುಗಿದ ಬೆನ್ನಲ್ಲೇ ಆಸ್ಟ್ರೇಲಿಯಾ ಸರಣಿ ಭಾರತ ತಂಡ ಪ್ರಕಟ. (BCCI Twitter)

ಏಷ್ಯಾಕಪ್ ಟೂರ್ನಿ (Asia Cup 2023) ಗೆದ್ದ ಒಂದು ದಿನದ ಅಂತರದಲ್ಲೇ ಸೆಪ್ಟೆಂಬರ್​ 22ರಿಂದ ಆಸ್ಟ್ರೇಲಿಯಾ (India vs Australia) ವಿರುದ್ಧ ಶುರುವಾಗುವ ಮೂರು ಪಂದ್ಯಗಳ ಏಕದಿನ ಸರಣಿಗೆ ಭಾರತ ತಂಡವನ್ನು ಬಿಸಿಸಿಐ (BCCI) ಪ್ರಕಟಿಸಿದೆ. ಅಕ್ಟೋಬರ್​ 5ರಿಂದ ಆರಂಭಗೊಳ್ಳುವ ಐಸಿಸಿ ಏಕದಿನ ವಿಶ್ವಕಪ್​ ಟೂರ್ನಿಗೆ (ICC ODI World Cup 2023) ಪೂರ್ವ ಸಿದ್ಧತೆಯ ಭಾಗವಾಗಿ ಈ ಸರಣಿಯ ಮೊದಲ ಎರಡು ಪಂದ್ಯಗಳಿಗೆ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ. ಏಷ್ಯಾಕಪ್​ನಲ್ಲಿ ಅಬ್ಬರಿಸಿದ ಕೆಎಲ್ ರಾಹುಲ್​ಗೆ ನಾಯಕತ್ವ ಪಟ್ಟ ನೀಡಲಾಗಿದೆ.

ಕೊಹ್ಲಿ-ರೋಹಿತ್​ಗೆ ವಿಶ್ರಾಂತಿ

ಮೊದಲ ಎರಡು ಏಕದಿನ ಪಂದ್ಯಗಳಿಗೆ ನಾಯಕ ರೋಹಿತ್​ ಶರ್ಮಾ, ಉಪನಾಯಕ ಹಾರ್ದಿಕ್​​ ಪಾಂಡ್ಯ, ವಿರಾಟ್ ಕೊಹ್ಲಿ ಮತ್ತು ಸ್ಪಿನ್ನರ್ ಕುಲ್ದೀಪ್​ ಯಾದವ್​ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಇವರ ಬದಲಿಗೆ ಋತುರಾಜ್ ಗಾಯಕ್ವಾಡ್, ತಿಲಕ್​ ವರ್ಮಾ, ವಾಷಿಂಗ್ಟನ್ ಸುಂದರ್ ಮತ್ತು ಆರ್​ ಅಶ್ವಿನ್​ಗೆ ಅವಕಾಶ ನೀಡಲಾಗಿದೆ. ಆದರೆ ಈ ನಾಲ್ವರಲ್ಲಿ ಇಬ್ಬರು ಮೂರನೇ ಏಕದಿನ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ. ಮತ್ತು ವಿಶ್ರಾಂತಿ ಪಡೆದಿರುವ ಕೊಹ್ಲಿ, ರೋಹಿತ್, ಹಾರ್ದಿಕ್, ಕುಲ್ದೀಪ್​ ತಂಡಕ್ಕೆ ಮರಳಿದ್ದಾರೆ.

ರಾಹುಲ್-ಜಡೇಜಾ ನಾಯಕ-ಉಪನಾಯಕ

ರೋಹಿತ್​ ಶರ್ಮಾ ಮತ್ತು ಹಾರ್ದಿಕ್ ಪಾಂಡ್ಯ ಅಲಭ್ಯತೆಯಲ್ಲಿ ಕೆಎಲ್ ರಾಹುಲ್ ತಂಡವನ್ನು ಜವಾಬ್ದಾರಿ ನೀಡಲಾಗಿದೆ. ರವೀಂದ್ರ ಜಡೇಜಾಗೆ ಉಪನಾಯಕತ್ವದ ಜವಾಬ್ದಾರಿ ನೀಡಲಾಗಿದೆ. ಈ ಹಿಂದೆ ಕಳಪೆ ಪ್ರದರ್ಶನ ನೀಡಿದ್ದ ರಾಹುಲ್​ ಅವರಿಂದ ಉಪನಾಯಕತ್ವವನ್ನು ಕಿತ್ತುಕೊಳ್ಳಲಾಗಿತ್ತು. ಇದೀಗ ಏಷ್ಯಾಕಪ್​​ನಲ್ಲಿ ಅಬ್ಬರಿಸಿದ ಕಾರಣ ಮತ್ತೆ ಕ್ಯಾಪ್ಟನ್ಸಿ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಪಂದ್ಯಗಳಲ್ಲಿ ಉತ್ತಮ ನಿರ್ವಹಣೆ ತೋರಿಸಿದರೆ ಮುಂದಿನ ದಿನಗಳಲ್ಲಿ ನಾಯಕತ್ವ ಪಡೆದರೂ ಅಚ್ಚರಿ ಇಲ್ಲ.

ಆರ್​ ಅಶ್ವಿನ್​​ಗೆ ಅವಕಾಶ

ಏಷ್ಯಾಕಪ್ ಮತ್ತು ಏಕದಿನ ವಿಶ್ವಕಪ್​ ತಂಡಕ್ಕೆ ಆಯ್ಕೆಯಾಗುವ ನಿರೀಕ್ಷೆಯಲ್ಲಿದ್ದ ರವಿಚಂದ್ರನ್ ಅಶ್ವಿನ್​ ಕನಸು ನುಚ್ಚು ನೂರಾಗಿತ್ತು. ಇದೀಗ ಏಕದಿನ ಸರಣಿಗೆ ಆಯ್ಕೆಯಾಗುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಇಂಜುರಿಗೆ ಒಳಗಾಗಿರುವ ಅಕ್ಷರ್​ ಪಟೇಲ್​ ಸ್ಥಾನ ತುಂಬಲು ಸಮರ್ಥರಾಗಿರುವ ಅಶ್ವಿನ್, ಏಕದಿನ ವಿಶ್ವಕಪ್ ಕನಸನ್ನು ಚಿಗುರಿಸಿಕೊಂಡಿದ್ದಾರೆ. ಒಂದು ವೇಳೆ ಅಕ್ಷರ್​ ಪಟೇಲ್ ಚೇತರಿಸಿಕೊಳ್ಳದಿದ್ದರೆ, ಅಶ್ವಿನ್ ಅಥವಾ ವಾಷಿಂಗ್ಟನ್ ಸುಂದರ್​ಗೆ ಏಕದಿನ ವಿಶ್ವಕಪ್ ತಂಡದಲ್ಲಿ ಅವಕಾಶ ಪಡೆಯುವ ಸಾಧ್ಯತೆ ಹೆಚ್ಚಿದೆ.

ಅಕ್ಷರ್​ ಪಟೇಲ್​​ಗೆ ಇಂಜುರಿ ಕಾಟ

ಏಷ್ಯಾಕಪ್​ ಫೈನಲ್​ ಪಂದ್ಯಕ್ಕೂ ಮುನ್ನ ಇಂಜುರಿಯಾದ ಅಕ್ಷರ್ ಪಟೇಲ್, ಇದೀಗ ಎನ್​ಸಿಎನಲ್ಲಿ ಪುನಃಶ್ಚೇತನ ತರಬೇತಿಗೆ ಒಳಗಾಗಿದ್ದಾರೆ. ಹಾಗಾಗಿ ಮೊದಲ ಎರಡು ಪಂದ್ಯಗಳಿಗೆ ಅಲಭ್ಯರಾಗಿದ್ದಾರೆ. ಆದರೆ ಮೂರನೇ ಏಕದಿನ ಪಂದ್ಯಕ್ಕೆ ಅವಕಾಶ ಪಡೆಯುವಲ್ಲಿ ಯಶಸ್ವಿಯಾಗಿರುವ ಅಕ್ಷರ್​​​, ಫಿಟ್​ನೆಸ್​​ ಸಾಮರ್ಥ್ಯ ಸಾಬೀತುಪಡಿಸಬೇಕಿದೆ. ಅಕ್ಷರ್​ ಪಟೇಲ್​ ರಿಕವರ್ ಆಗಲು 10 ದಿನಗಳ ಕಾಲ ಬೇಕಾಗುತ್ತದೆ ಎಂದು ಹೇಳಿದ್ದಾರೆ.

ಮೊದಲ 2 ಏಕದಿನ ಪಂದ್ಯಗಳಿಗೆ ಭಾರತ ತಂಡ

ಕೆಎಲ್ ರಾಹುಲ್ (ನಾಯಕ ಮತ್ತು ವಿಕೆಟ್ ಕೀಪರ್), ರವೀಂದ್ರ ಜಡೇಜಾ (ಉಪನಾಯಕ), ಋತುರಾಜ್ ಗಾಯಕ್ವಾಡ್, ಶುಭ್ಮನ್ ಗಿಲ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಶಾರ್ದೂಲ್ ಠಾಕೂರ್, ವಾಷಿಂಗ್ಟನ್ ಸುಂದರ್, ಆರ್ ಅಶ್ವಿನ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ

3ನೇ ಮತ್ತು ಅಂತಿಮ ಏಕದಿನ ಪಂದ್ಯಕ್ಕೆ ಭಾರತ ತಂಡ

ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ, (ಉಪನಾಯಕ), ಶುಭ್ಮನ್​ ಗಿಲ್​, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್*, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಆರ್ ಅಶ್ವಿನ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್.

3 ಪಂದ್ಯಗಳ ಏಕದಿನ ಸರಣಿ ವೇಳಾಪಟ್ಟಿ

  • ಮೊದಲ ಏಕದಿನ ಪಂದ್ಯ (ಮೊಹಾಲಿ – ಸೆಪ್ಟೆಂಬರ್ 23, 2023)
  • 2ನೇ ಏಕದಿನ ಪಂದ್ಯ (ಇಂದೋರ್ – ಸೆಪ್ಟೆಂಬರ್ 24, 2023)
  • 3ನೇ ಏಕದಿನ ಪಂದ್ಯ (ರಾಜ್‌ಕೋಟ್ – ಸೆಪ್ಟೆಂಬರ್ 27, 2023)

ಭಾರತ ವಿರುದ್ಧದ ಏಕದಿನ ಸರಣಿಗೆ ಆಸ್ಟ್ರೇಲಿಯಾ ತಂಡ

ಪ್ಯಾಟ್ ಕಮಿನ್ಸ್ (ನಾಯಕ), ಡೇವಿಡ್ ವಾರ್ನರ್, ಸೀನ್ ಅಬಾಟ್, ಅಲೆಕ್ಸ್ ಕೇರಿ, ನಥನ್ ಎಲ್ಲಿಸ್, ಕ್ಯಾಮೆರಾನ್ ಗ್ರೀನ್, ಜೋಶ್ ಹೇಜಲ್​​ವುಡ್, ಜೋಶ್ ಇಂಗ್ಲಿಸ್, ಸ್ಪೆನ್ಸರ್ ಜಾನ್ಸನ್, ಮಾರ್ನಸ್ ಲಬುಶೇನ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ತನ್ವೀರ್ ಸಂಘ, ಮ್ಯಾಥ್ಯೂ ಶಾರ್ಟ್, ಸ್ವೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಆ್ಯಡಮ್ ಜಂಪಾ.

ವಿಶ್ವಕಪ್​ನಲ್ಲಿ ಆಸ್ಟ್ರೇಲಿಯಾವೇ ಮೊದಲ ಎದುರಾಳಿ

ಭಾರತದಲ್ಲಿ ಅಕ್ಟೋಬರ್ 5 ರಿಂದ ಆರಂಭವಾಗುವ ಏಕದಿನ ವಿಶ್ವಕಪ್​​ನಲ್ಲಿ ಭಾರತ ತಂಡಕ್ಕೆ ಮೊದಲ ಎದುರಾಳಿ ಆಸ್ಟ್ರೇಲಿಯಾ ತಂಡ ಎಂಬುದು ವಿಶೇಷ. ಅಕ್ಟೋಬರ್ 8ರಂದು ಚೆನ್ನೈನ ಚಿದಂಬರಂ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿಯುವ ಮೂಲಕ ರೋಹಿತ್ ಪಡೆ ತನ್ನ ವಿಶ್ವಕಪ್ ಅಭಿಯಾನ ಆರಂಭಿಸಲಿದೆ. ಹಾಗಾಗಿ ಈ ಪಂದ್ಯಕ್ಕೂ ಮುನ್ನ ಉಭಯ ತಂಡಗಳು 3 ಪಂದ್ಯಗಳ ಏಕದಿನ ಸರಣಿ ಆಡುತ್ತಿದ್ದು, ಪೂರ್ವ ಸಿದ್ಧತೆಯ ಭಾಗವಾಗಿದೆ.

Whats_app_banner