ಆರ್‌ಸಿಬಿ vs ಸಿಎಸ್‌ಕೆ ಪಂದ್ಯದ ಟಿಕೆಟ್‌ಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್; 1500 ರೂ ಟಿಕೆಟ್ ಬೆಲೆ ಐದಂಕಿಗೆ ಏರಿಕೆ!
ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವಿನ ಪಂದ್ಯದ ಟಿಕೆಟ್ ಬೆಲೆ ಗಗನಕ್ಕೇರಿದೆ. ಆದರೆ ಅಭಿಮಾನಿಗಳು ಪಂದ್ಯ ವೀಕ್ಷಣೆಗೆ ಕಾಯುತ್ತಿದ್ದಾರೆ. ದುಬಾರಿ ಬೆಲೆ ತೆತ್ತರೂ ಟಿಕೆಟ್ ಸಿಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಭಾರಿ ಕುತೂಹಲ ಮೂಡಿಸಿರುವ ಆರ್‌ಸಿಬಿ ಮತ್ತು ಸಿಎಸ್‌ಕೆ ಪಂದ್ಯದ ಟಿಕೆಟ್ ಬೆಲೆ ಗಗನಕ್ಕೇರಿದೆ. ಈಗಾಗಲೇ ದಿನಗಳ ಹಿಂದೆಯೇ ಆನ್‌ಲೈನ್‌ನಲ್ಲಿ ಟಿಕೆಟ್‌ಗಳು ಸೋಲ್ಡ್‌ಔಟ್ ಆಗಿವೆ. ಈ ನಡುವೆ ಪಂದ್ಯದ ಟಿಕೆಟ್ಗಾಗಿ ಶುಕ್ರವಾರದಿಂದಲೇ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಾವಿರಾರು ಅಭಿಮಾನಿಗಳು ಜಮಾಯಿಸುತ್ತಿದ್ದಾರೆ. ಆದರೆ, ಬೇಕಾದ ಟಿಕೆಟ್ ಸಿಗುತ್ತಿಲ್ಲ. ಬೆಲೆ ಎಷ್ಟೇ ಇದ್ದರೂ ಖರೀದಿಸಲು ಸಿದ್ಧರಿರುವ ಅಭಿಮಾನಿಗಳಿಗೆ ಟಿಕೆಟ್ ಸಿಗುತ್ತಿಲ್ಲ. ಆನ್‌ಲೈನ್‌ನಲ್ಲಿ ಟಿಕೆಟ್ ಸೋಲ್ಡ್ ಔಟ್ ಆಗಿದ್ದು, ಬ್ಲ್ಯಾಕ್ ಮಾರ್ಕೆಟ್ ಮೂಲಕ ಭಾರಿ ಬೆಲೆಗೆ ಮಾರಾಟ ಮಾಡಲಾಗುತ್ತಿದೆ ಎಂದು ಫ್ಯಾನ್ಸ್ ಆರೋಪಿಸುತ್ತಿದ್ದಾರೆ.
ಇಂದಿನ ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳಿಗೆ ನಿರ್ಣಾಯಕ. ಪಂದ್ಯದಲ್ಲಿ ಗೆದ್ದ ತಂಡಗಳು ಪ್ಲೇಆಫ್‌ಗೆ ಅರ್ಹತೆ ಪಡೆಯುತ್ತವೆ. ಪಂದ್ಯಕ್ಕೆ ಉದ್ಯಾನ ನಗರಿ ಬೆಂಗಳುರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣ ಆತಿಥ್ಯ ವಹಿಸುತ್ತಿದೆ. ಐಪಿಎಲ್‌ನಲ್ಲಿ ಅತಿ ಹೆಚ್ಚು ಅಭಿಮಾನಿ ಬಳಗವನ್ನು ಹೊಂದಿರುವ ಎರಡು ತಂಡಗಳ ಕದನವನ್ನು ನೇರವಾಗಿ ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾಯುತ್ತಿದ್ದಾರೆ. ರಾಜ್ಯ ಮಾತ್ರವಲ್ಲದೆ ಹೊರರಾಜ್ಯಗಳಿಂದಲೂ ಉದ್ಯಾನ ನಗರಿಗೆ ಫ್ಯಾನ್ಸ್ ಬರುತ್ತಿದ್ದಾರೆ.
ಆನ್‌ಲೈನ್‌ನಲ್ಲಿ ಟಿಕೆಟ್‌ಗಳು ಸೋಲ್ಡ್‌ಔಟ್ ತೋರಿಸುತ್ತಿದೆ. ಆದರೆ, ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ. ಪಂದ್ಯದ ಒಂದೊಂದು ಟಿಕೆಟ್‌ಗೂ ಭರ್ಜರಿ ಬೇಡಿಕೆ ಇದೆ. ಅಧಿಕೃತವಾಗಿ ಟಿಕೆಟ್ ಖರೀದಿಸಲು ಮೈದಾನದ ಬಳಿ ಬಂದ ಅಭಿಮಾನಿಗಳಿಗೆ ಟಿಕೆಟ್ ಸಿಗುತ್ತಿಲ್ಲ. ಬ್ಲ್ಯಾಕ್‌ನಲ್ಲಿ ದುಬಾರಿ ಬೆಲೆಗೆ ಮಾರಾಟ ಮಾಡಲಾಗುತ್ತಿದೆ. ಇದು ಫಾನ್ಸ್ ಆಕ್ರೋಶಕ್ಕೆ ಕಾರಣವಾಗಿದೆ.
ಒಂದು ಟಿಕೆಟ್ ಬೆಲೆ 10 ಸಾವಿರ ರೂಪಾಯಿ
ಟಿಕೆಟ್‌ಗಳು ಸೋಲ್ಡ್‌ಔಟ್ ಆದ ನಂತರವೂ ಬ್ಲ್ಯಾಕ್‌ನಲ್ಲಿ ದುಬಾರಿ ಬೆಲೆಗೆ ಸಿಗುತ್ತಿರುವುದು, ಫ್ಯಾನ್ಸ್ ನಿರಾಶೆ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ. ಆನ್‌ಲೈನ್‌ನಲ್ಲಿ 1500 ರೂಪಾಯಿ ಬೆಲೆಯ ಟಿಕೆಟ್‌ಗೆ ಹತ್ತು ಸಾವಿರ ರೂಪಾಯಿ ಡಿಮಾಂಡ್ ಮಾಡಲಾಗುತ್ತಿದೆ. 3 ಸಾವಿರ ರೂಪಾಯಿ ಟಿಕೆಟ್‌ಗೆ 15 ಸಾವಿರಕ್ಕಿಂತ ಹೆಚ್ಚು ಬೆಲೆ ಬೇಡಿಕೆ ಇಡಲಾಗುತ್ತಿದೆ. ಹಣ ಕೊಡಲು ಸಿದ್ಧರಿದ್ದರೂ ಟಿಕೆಟ್ ಕೊಡಲು ಹಿಂದೆ ಮುಂದೆ ನೋಡುತ್ತಿದ್ದಾರೆ. ಯಾವುದೂ ಪಾರದರ್ಶಕವಾಗಿ ನಡೆಯುತ್ತಿಲ್ಲ ಎಂಬುದು ಅಭಿಮಾನಿಗಳ ಅಳಲು.
ಇದನ್ನೂ ಓದಿ | ಐಪಿಎಲ್ ಪ್ಲೇಆಫ್ಗೂ ಮುನ್ನ ನೈಟ್ ರೈಡರ್ಸ್ ಸೇರಿದ ಶಕೀಬ್ ಅಲ್ ಹಸನ್; ಆದರೆ ಇಲ್ಲೊಂದಿದೆ ಟ್ವಿಸ್ಟ್
ಹಣ ತೆಗೆದುಕೊಂಡು ಟಿಕೆಟ್ ಕೊಡುತ್ತಾರೋ ಇಲ್ಲವೋ ಗೊತ್ತಾಗುತ್ತಿಲ್ಲ. ಮೊದಲು ಹಣ ಕೇಳಿ ಆಮೇಲೆ ಟಿಕೆಟ್ ಕೊಡುವ ಭರವಸೆ ನೀಡಲಾಗುತ್ತಿದೆ. ದೂರ ಕರೆದುಕೊಂಡು ಹೋಗಿ ಗುಟ್ಟಾಗಿ ಮಾತುಕತೆ ಮಾಡುತ್ತಾರೆ. ಎಲ್ಲಾ ಸ್ಟೇಡಿಯಂನವರೇ ಡೀಲ್ ಮಾಡ್ತಿದ್ದಾರೆ. ಅಭಿಮಾನಿಗಳಿಗೆ ಅನ್ಯಾಯ ಆಗುತ್ತಿದೆ ಎಂದು ಸ್ಟೇಡಿಯಂ ಹೊರಗೆ ಸೇರಿದ ಫ್ಯಾನ್ಸ್ ಮಾಧ್ಯಮಗಳ ಮುಂದೆ ತೋಡಿಕೊಂಡಿದ್ದಾರೆ.
ಇದನ್ನೂ ಓದಿ | ಕನ್ನಡಿಗರ ಮನೆ ಮಗ ವಿರಾಟ್ ಕೊಹ್ಲಿ; ಕರುನಾಡ ಜನತೆಗೆ ಆರ್‌ಸಿಬಿ ಮಾಜಿ ನಾಯಕನೆಂದರೆ ಅಷ್ಟೇಕೆ ಇಷ್ಟ?
(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)