ಕನ್ನಡ ಸುದ್ದಿ  /  Cricket  /  Video Of Rohit Sharma Lands In Dharamshala In Helicopter Ahead Of 5th Test Against England Goes Viral Ind Vs Eng Jra

ಧರ್ಮಶಾಲಾಗೆ ಹೆಲಿಕಾಪ್ಟರ್‌ನಲ್ಲಿ ಅದ್ಧೂರಿ ಎಂಟ್ರಿ ಕೊಟ್ಟ ಟೀಮ್‌ ಇಂಡಿಯಾ ನಾಯಕ ರೋಹಿತ್ ಶರ್ಮಾ; ವಿಡಿಯೋ ವೈರಲ್

ಭಾರತ ತಂಡದ ನಾಯಕ ರೋಹಿತ್ ಶರ್ಮಾ ಹೆಲಿಕಾಪ್ಟರ್‌ನಲ್ಲಿ ಧರ್ಮಶಾಲಾಗೆ ಬಂದ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ. ಜಾಮ್‌ನಗರದಲ್ಲಿ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹಪೂರ್ವ ಸಮಾರಂಭದಲ್ಲಿ ರೋಹಿತ್ ಶರ್ಮಾ ಭಾಗವಹಿಸಿದ್ದರು. ಅಲ್ಲಿಂದ ಅಂತಿಮ ಟೆಸ್ಟ್‌ ಪಂದ್ಯಕ್ಕಾಗಿ ಅವರು ಧರ್ಮಶಾಲಾಗೆ ಬಂದಿದ್ದಾರೆ.

ಧರ್ಮಶಾಲಾಗೆ ಹೆಲಿಕಾಪ್ಟರ್‌ನಲ್ಲಿ ಎಂಟ್ರಿ ಕೊಟ್ಟ ಟೀಮ್‌ ಇಂಡಿಯಾ ನಾಯಕ ರೋಹಿತ್ ಶರ್ಮಾ
ಧರ್ಮಶಾಲಾಗೆ ಹೆಲಿಕಾಪ್ಟರ್‌ನಲ್ಲಿ ಎಂಟ್ರಿ ಕೊಟ್ಟ ಟೀಮ್‌ ಇಂಡಿಯಾ ನಾಯಕ ರೋಹಿತ್ ಶರ್ಮಾ

ಭಾರತ ಮತ್ತು ಇಂಗ್ಲೆಂಡ್ ತಂಡಗಳ ನಡುವಿನ ಐದನೇ ಟೆಸ್ಟ್ (India vs England 5th Test) ಪಂದ್ಯವು ಮಾರ್ಚ್‌ 07ರಿಂದ ಆರಂಭವಾಗಲಿದೆ. ಧರ್ಮಶಾಲಾದಲ್ಲಿ ನಡೆಯಲಿರುವ ಸರಣಿಯ ನಿರ್ಣಾಯಕ ಪಂದ್ಯಕ್ಕಾಗಿ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಮಾರ್ಚ್‌ 5ರ ಮಂಗಳವಾರ ಧರ್ಮಶಾಲಾಗೆ ಆಗಮಿಸಿದ್ದಾರೆ. ಈ ಬಾರಿ ಟೀಮ್‌ ಇಂಡಿಯಾ ನಾಯಕ ಖಾಸಗಿ ಹೆಲಿಕಾಪ್ಟರ್ ಮೂಲಕ‌ ಸುಂದರ ನಗರಕ್ಕೆ ಬಂದಿಳಿದಿದ್ದಾರೆ. ಈ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ಮುಖೇಶ್‌ ಅಂಬಾನಿ ಪುತ್ರ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹಪೂರ್ವ ಸಮಾರಂಭದಲ್ಲಿ ರೋಹಿತ್ ಶರ್ಮಾ ಭಾಗವಹಿಸಿದ್ದರು. ಜಾಮ್‌ನಗರದಲ್ಲಿ ನಡೆದ ಕಾರ್ಯಕ್ರಮದಿಂದ, ಇದೀಗ ಅಂತಿಮ ಟೆಸ್ಟ್‌ ಪಂದ್ಯಕ್ಕಾಗಿ ಅವರು ಧರ್ಮಶಾಲಾಗೆ ಮರಳಿದ್ದಾರೆ. ಗುರುವಾರ ಪಂದ್ಯ ಆರಂಭವಾಗಲಿದ್ದು, ಇಂದಿನಿಂದ ಭಾರತ ತಂಡ ಅಭ್ಯಾಸ ಆರಂಭಿಸಿದೆ.

ಈ ನಡುವೆ, ಹಿಟ್‌ಮ್ಯಾನ್‌ ಹೆಲಿಕಾಪ್ಟರ್‌ನಲ್ಲಿ ಬಂದ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ. ಹೆಲಿಕಾಪ್ಟರ್‌ನಿಂದ ಇಳಿದ ನಾಯಕ ಅಲ್ಲಿಂದ ತಮ್ಮ ಕಾರಿನತ್ತ ಸಾಗುವುದು ವಿಡಿಯೋದಲ್ಲಿ ಕಂಡುಬಂದಿದೆ. ಅಲ್ಲಿಂದ ತಂಡದ ಇತರ ಸದಸ್ಯರನ್ನು ಸೇರಿಕೊಂಡ ಬಳಿಕ ರೋಹಿತ್ ತರಬೇತಿ ಆರಂಭಿಸಿದ್ದಾರೆ.

ಇದನ್ನೂ ಓದಿ | ಇಡೀ ಪಂದ್ಯದಲ್ಲಿ 23 ಓವರ್‌ ಬೌಲಿಂಗ್‌ ಮಾಡಿದ್ರೆ ಆಯಾಸ ಆಗಲ್ಲ; ಬುಮ್ರಾಗೆ ವಿಶ್ರಾಂತಿ ಕುರಿತು ಗವಾಸ್ಕರ್ ಅಸಮಾಧಾನ

ಈ ನಡುವೆ ಭಾರತದ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಮತ್ತು ಇಂಗ್ಲೆಂಡ್ ಬ್ಯಾಟರ್ ಜಾನಿ ಬೈರ್‌ಸ್ಟೋ ಅವರಿಗೆ ಈ ಪಂದ್ಯ ವಿಶೇಷವಾಗಲಿದೆ. ಇವರಿಬ್ಬರೂ 100ನೇ ಪಂದ್ಯವನ್ನು ಆಡುತ್ತಿದ್ದಾರೆ.

ಸರಣಿಯ ನಾಲ್ಕು ಪಂದ್ಯಗಳ ಬಳಿಕ, ಭಾರತವು ಈಗಾಗಲೇ 3-1 ಅಂತರದಿಂದ ಮುನ್ನಡೆ ಸಾಧಿಸಿ ಸರಣಿ ವಶಪಡಿಸಿಕೊಂಡಿದೆ. ಹೀಗಾಗಿ ಭಾರತದ ಪಾಲಿಗೆ ಅಂತಿಮ ಟೆಸ್ಟ್ ಪಂದ್ಯದಲ್ಲಿ ಅಷ್ಟೇನೂ ಒತ್ತಡವಿಲ್ಲ. ಆದರೆ, ವಿಶ್ವ ಟೆಸ್ ಚಾಂಪಿಯನ್‌ಶಿಪ್ ಫೈನಲ್‌ ನಿಟ್ಟಿನಲ್ಲಿ ಪ್ರತಿ ಗೆಲುವು ತಂಡಕ್ಕೆ ಅಗತ್ಯವಾಗಿದೆ. ಹೀಗಾಗಿ ಗೆಲುವಿನೊಂದಿಗೆ ಸರಣಿ ಮುಗಿಸಲು ಭಾರತ ಎದುರು ನೋಡುತ್ತಿದೆ. ಭಾರತ ತಂಡವು ಸದ್ಯ ಎಂಟು ಪಂದ್ಯಗಳಲ್ಲಿ ಐದಲ್ಲಿ ಗೆದ್ದು ಡಬ್ಲ್ಯೂಟಿಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಮತ್ತೊಂದೆಡೆ, ಇಂಗ್ಲೆಂಡ್ ಕೇವಲ ಮೂರು ಗೆಲುವುಗಳೊಂದಿಗೆ ಅಂಕಪಟ್ಟಿಯಲ್ಲಿ ಎಂಟನೇ ಸ್ಥಾನದಲ್ಲಿದೆ.

ಇದನ್ನೂ ಓದಿ | 147 ವರ್ಷಗಳ ಟೆಸ್ಟ್​ ಇತಿಹಾಸದಲ್ಲಿ ಅಪರೂಪದ ದಾಖಲೆ ಬರೆಯಲು ಸಜ್ಜಾದ ಅಶ್ವಿನ್ ಮತ್ತು ಜಾನಿ ಬೈರ್‌ಸ್ಟೋ

ರಾಂಚಿ ಟೆಸ್ಟ್‌ನಿಂದ ವಿಶ್ರಾಂತಿ ಪಡೆದಿದ್ದ ಪ್ರಮುಖ ವೇಗಿ ಜಸ್ಪ್ರೀತ್ ಬುಮ್ರಾ, ಧರ್ಮಶಾಲಾ ಟೆಸ್ಟ್‌ಗೆ ತಂಡ ಸೇರಿಕೊಂಡಿದ್ದಾರೆ. ಅತ್ತ ಗಾಯದಿಂದ ಇನ್ನೂ ಚೇತರಿಸಿಕೊಳ್ಳದ ಕಾರಣ ಕನ್ನಡಿಗ ಕೆಎಲ್ ರಾಹುಲ್ ತಂಡದಿಂದ ಹೊರಗುಳಿದಿದ್ದಾರೆ.

5ನೇ ಟೆಸ್ಟ್‌ಗೆ ಭಾರತ ತಂಡ

ರೋಹಿತ್ ಶರ್ಮಾ (ನಾಯಕ), ಜಸ್ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ರಜತ್ ಪಾಟೀದಾರ್, ಸರ್ಫರಾಜ್ ಖಾನ್, ಧ್ರುವ್ ಜುರೆಲ್ (ವಿಕೆಟ್‌ ಕೀಪರ್), ಕೆಎಸ್ ಭರತ್ (ವಿಕೆಟ್‌ ಕೀಪರ್), ದೇವದತ್ ಪಡಿಕ್ಕಲ್, ಆರ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಆಕಾಶ್ ದೀಪ್.

ಕ್ರಿಕೆಟ್‌ ಕುರಿತ ಇನ್ನಷ್ಟು ಸುದ್ದಿಗಳಿಗೆ ಇಲ್ಲಿ ಕ್ಲಿಕ್‌ ಮಾಡಿ

(This copy first appeared in Hindustan Times Kannada website. To read more like this please logon to kannada.hindustantimes.com)