Video: ವಾಂಖೆಡೆ ಮೈದಾನಕ್ಕೆ ನುಗ್ಗಿದ ಹಿಟ್‌ಮ್ಯಾನ್ ಅಭಿಮಾನಿ; ಬೆಚ್ಚಿಬಿದ್ದ ರೋಹಿತ್ ಶರ್ಮಾ ಮಾಡಿದ್ದೇನು ನೋಡಿ
ಕನ್ನಡ ಸುದ್ದಿ  /  ಕ್ರಿಕೆಟ್  /  Video: ವಾಂಖೆಡೆ ಮೈದಾನಕ್ಕೆ ನುಗ್ಗಿದ ಹಿಟ್‌ಮ್ಯಾನ್ ಅಭಿಮಾನಿ; ಬೆಚ್ಚಿಬಿದ್ದ ರೋಹಿತ್ ಶರ್ಮಾ ಮಾಡಿದ್ದೇನು ನೋಡಿ

Video: ವಾಂಖೆಡೆ ಮೈದಾನಕ್ಕೆ ನುಗ್ಗಿದ ಹಿಟ್‌ಮ್ಯಾನ್ ಅಭಿಮಾನಿ; ಬೆಚ್ಚಿಬಿದ್ದ ರೋಹಿತ್ ಶರ್ಮಾ ಮಾಡಿದ್ದೇನು ನೋಡಿ

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಏಪ್ರಿಲ್‌ 1ರಂದು ನಡೆದ ಮುಂಬೈ ಇಂಡಿಯನ್ಸ್ ಮತ್ತು ರಾಜಸ್ಥಾನ್‌ ರಾಯಲ್ಸ್ ನಡುವಿನ ಪಂದ್ಯದ ವೇಳೆ, ಅಭಿಮಾನಿಯೊಬ್ಬ ಮೈದಾನದ ಭದ್ರತೆ ಉಲ್ಲಂಘಿಸಿ ಮೈದಾನಕ್ಕೆ ನುಗ್ಗಿರುವ ಘಟನೆ ನಡೆದಿದೆ. ಫೀಲ್ಡಿಂಗ್‌ ಮಾಡುತ್ತಿದ್ದ ರೋಹಿತ್ ಶರ್ಮಾ ಅವರನ್ನು ಭೇಟಿಯಾಗಿ ತಬ್ಬಿಕೊಂಡಿರುವ ವಿಡಿಯೋ ವೈರಲ್‌ ಆಗಿದೆ.

ವಾಂಖೆಡೆ ಮೈದಾನಕ್ಕೆ ನುಗ್ಗಿದ ಹಿಟ್‌ಮ್ಯಾನ್ ಅಭಿಮಾನಿ
ವಾಂಖೆಡೆ ಮೈದಾನಕ್ಕೆ ನುಗ್ಗಿದ ಹಿಟ್‌ಮ್ಯಾನ್ ಅಭಿಮಾನಿ

ಕ್ರಿಕೆಟ್‌ ಪಂದ್ಯ ನಡೆಯುತ್ತಿರುವ ವೇಳೆ ಅಭಿಮಾನಿಗಳು ಮೈದಾನಕ್ಕೆ ನುಗ್ಗುವುದು ಹೊಸದೇನಲ್ಲ. ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಮೈದಾನಲ್ಲಿ ವಿರಾಟ್‌ ಕೊಹ್ಲಿ ಅಭಿಮಾನಿಯೊಬ್ಬ ಭದ್ರತೆ ಉಲ್ಲಂಘಿಸಿ ಮೈದಾನದ ಪಿಚ್‌ಗೆ ನುಗ್ಗಿದ್ದ ವಿಡಿಯೋ ವೈರಲ್‌ ಆಗಿತ್ತು. ಇದೀಗ ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಮುಂಬೈ ಇಂಡಿಯನ್ಸ್‌ ಹಾಗೂ ರಾಜಸ್ಥಾನ್‌ ರಾಯಲ್‌ ಪಂದ್ಯದ ವೇಳೆ ರೋಹಿತ್‌ ಶರ್ಮಾ ಅಭಿಮಾನಿಯೊಒಬ್ಬ ಮೈದಾನಕ್ಕೆ ನುಗ್ಗಿದ್ದಾನೆ. ಈ ವಿಡಿಯೋ ವೈರಲ್‌ ಆಗಿದೆ.

ಅಭಿಮಾನಿ ಸಮೀಪಕ್ಕೆ ಬರುತ್ತಿದ್ದಂತೆ, ಫೀಲ್ಡಿಂಗ್‌ ಮಾಡುತ್ತಿದ್ದ ರೋಹಿತ್‌ ಶರ್ಮಾ ಬೆಚ್ಚಿ ಬಿದ್ದಿದ್ದಾರೆ. ಈ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ಪಂದ್ಯದ ಎರಡನೇ ಇನ್ನಿಂಗ್ಸ್ ವೇಳೆ ರಾಜಸ್ಥಾನ್‌ ರಾಯಲ್ಸ್‌ ತಂಡ ಬ್ಯಾಟಿಂಗ್‌ ಮಾಡುತ್ತಿದ್ದಾಗ ಅಭಿಮಾನಿಯೊಬ್ಬ ವೀಕ್ಷಕರ ಗ್ಯಾಲರಿಯಿಂದ ಮೈದಾನಕ್ಕಿರುವ ಬೇಲಿ ದಾಟಿ ರೋಹಿತ್ ಶರ್ಮಾ ಅವರನ್ನು ಭೇಟಿಯಾಗಲು ಮೈದಾನಕ್ಕಿಳಿದಿದ್ದಾನೆ. ಅಭಿಮಾನಿಯು ಹಿಟ್‌ಮ್ಯಾನ್‌ ಬಳಿ ಬರುತ್ತಿದ್ದಂತೆಯೇ, ರೋಹಿತ್‌ ಭಯದಿಂದ ಬೆಚ್ಚಿಬಿದ್ದಿದ್ದಾರೆ. ಆ ಬಳಿಕ ಅವರನ್ನು ತಬ್ಬಿಕೊಂಡಿದ್ದಾನೆ. ಅಭಿಮಾನಿಯು ನಿಯಮ ಉಲ್ಲಂಘಿಸಿ ಮೈದಾನಕ್ಕೆ ಎಂಟ್ರಿ ಕೊಟ್ಟಿರುವುದರಿಂದ, ರೋಹಿತ್‌ ಶರ್ಮಾಗೆ ಈ ನಡೆ ಇಷ್ಟವಾಗಿಲ್ಲ. ಒಲ್ಲದ ಮನಸ್ಸಿನಿಂದಲೇ ಅಭಿಮಾನಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ರೋಹಿತ್‌ ಅವರಿಂದ ಅಪ್ಪುಗೆ ಪಡೆದ ಬಳಿಕ, ಆ ಅಭಿಮಾನಿಯು ವಿಕೆಟ್‌ ಕೀಪಿಂಗ್‌ ಮಾಡುತ್ತಿದ್ದ ಇಶಾನ್‌ ಕಿಶನ್ ಅವರನ್ನು ಕೂಡಾ ಅಪ್ಪಿಕೊಂಡಿದ್ದಾರೆ. ಈ ವೇಳೆ ಮೈದಾನದ ಭದ್ರತಾ ಸಿಬ್ಬಂದಿ ವ್ಯಕ್ತಿಯನ್ನು ಮೈದಾನದಿಂದ ಹೊರಕ್ಕೆ ಕರೆದುಕೊಂಡು ಹೋಗಿದ್ದಾರೆ.

ವೈರಲ್‌ ವಿಡಿಯೋವನ್ನು ಹಲವರು ಹಂಚಿಕೊಂಡಿದ್ದಾರೆ. ಇದೇ ವೇಳೆ ಮುಂಬೈ ಹಾಗೂ ವೆಸ್ಟ್‌ ಬೆಂಗಾಲ್‌ ಪೊಲೀಸರು ಕೂಡಾ ಹಂಚಿಕೊಂಡು ರಸ್ತೆ ನಿಯಮಗಳ ಬಗ್ಗೆ ಎಚ್ಚರ ಮೂಡಿಸಿದ್ದಾರೆ. ಬೌಂಡರಿ ದಾಟಿದರೆ ಅಪಾಯ ಖಚಿತ ಎಂಬ ಅರ್ಥದಲ್ಲಿ ಪೊಲೀಸರು ಹೇಳಿಕೊಂಡಿದ್ದಾರೆ. ಈ ವಿಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುವುದು ಮಾತ್ರವಲ್ಲದೆ, ಜನರು ಕೂಡಾ ಕಾಮೆಂಟ್‌ ಮಾಡುತ್ತಿದ್ದಾರೆ.

ಮುಂಬೈಗೆ ಹ್ಯಾಟ್ರಿಕ್ ಸೋಲು‌

ವಾಂಖೆಡೆ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ರಾಜಸ್ಥಾನ್‌ ರಾಯಲ್ಸ್‌ ತಂಡವು ಭರ್ಜರಿ 6 ವಿಕೆಟ್‌ಗಳಿಂದ ಜಯ ಸಾಧಿಸಿತು. ಐಪಿಎಲ್ 2024 ಆವೃತ್ತಿಯಲ್ಲಿ ಮುಂಬೈ ಇಂಡಿಯನ್ಸ್‌ ಹ್ಯಾಟ್ರಿಕ್ ಸೋಲು ಕಂಡಿದೆ. ಹಾರ್ದಿಕ್‌ ಪಾಂಡ್ಯ ನಾಯಕತ್ವದಲ್ಲಿ, ಮುಂಬೈ ಮೂರನೇ ಸೋಲು ಕಂಡಿದೆ. ಮೊದಲು ಬ್ಯಾಟಿಂಗ್‌ ನಡೆಸಿದ ಮುಂಬೈ, 9 ವಿಕೆಟ್‌ ನಷ್ಟಕ್ಕೆ ಕೇವಲ 125 ರನ್ ಗಳಿಸಿತು. ಸಾಧಾರಣ ಗುರಿ ಬೆನ್ನಟ್ಟಿದ ರಾಯಲ್ಸ್, 15.3 ಓವರ್‌ಗಳಲ್ಲಿ 4 ವಿಕೆಟ್‌ ಕಳೆದುಕೊಂಡು 127 ರನ್‌ ಗಳಿಸಿತು. ಸ್ಯಾಮ್ಸನ್‌ ಪಡೆಯು ಮೂರನೇ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.

Whats_app_banner