ICC rankings: ಅಗ್ರ 10ರೊಳಗೆ ಮರಳಿದ ವಿರಾಟ್; ಬೌಲಿಂಗ್‌ನಲ್ಲಿ ಅಶ್ವಿನ್ ಮತ್ತೆ ನಂಬರ್ ವನ್
Virat Kohli: ಕ್ರಿಕೆಟ್‌ನ ಸುದೀರ್ಘ ಸ್ವರೂಪದಲ್ಲಿ ವಿರಾಟ್ ಕೊಹ್ಲಿ ಮತ್ತೆ ಅಗ್ರ ಶ್ರೇಯಾಂಕಕ್ಕೆ ಮರಳಿದ್ದಾರೆ. ನೂತನ ಶರೇಯಾಂಕ ಪಟ್ಟಿಯಲ್ಲಿ ಅಗ್ರ 10ರೊಳಗೆ ಸ್ಥಾನ ಪಡೆದಿದ್ದಾರೆ.
ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ (Virat Kohli) ಉತ್ತಮ ಪ್ರದರ್ಶನ ನೀಡಿದ್ದರು. ಎರಡನೇ ಇನ್ನಿಂಗ್ಸ್‌ನಲ್ಲಿ ಟೀಮ್ ಇಂಡಿಯಾ ಪರ ಕ್ರೀಸ್‌ಕಚ್ಚಿ ಆಡಿದ್ದರು. ಹೀಗಾಗಿ ಟೆಸ್ಟ್ ಕ್ರಿಕೆಟ್‌ನಲ್ಲಿ ಐಸಿಸಿ ರ‍್ಯಾಂಕಿಂಗ್‌ನಲ್ಲಿ (ICC rankings) ಕೊಹ್ಲಿ ಮತ್ತೆ ಅಗ್ರ ಹತ್ತರೊಳಗೆ ಸ್ಥಾನ ಪಡೆದಿದ್ದಾರೆ.
ಸೆಂಚುರಿಯನ್‌ನಲ್ಲಿ ನಡೆದ ಪಂದ್ಯದಲ್ಲಿ ಭಾರತ ತಂಡವು ಇನ್ನಿಂಗ್ಸ್ ಮತ್ತು 32 ರನ್‌ಗಳಿಂದ ಸೋಲೊಪ್ಪಿತ್ತು. ಆದರೆ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಎರಡು ಇನ್ನಿಂಗ್ಸ್‌ಗಳಲ್ಲಿ ಕ್ರಮವಾಗಿ 38 ಮತ್ತು 76 ರನ್ ಗಳಿಸಿದ್ದರು. ಎರಡನೇ ಇನ್ನಿಂಗ್ಸ್‌ನಲ್ಲಿ ಭಾರತವು ಕೇವಲ 131 ರನ್‌ಗಳಿಗೆ ಆಲೌಟ್ ಆಗಿತ್ತು. ಆದರೆ, ಈ ಇನ್ನಿಂಗ್ಸ್‌ನಲ್ಲಿ ವಿರಾಟ್ ಒಬ್ಬರ ಕೊಡುಗೆಯೇ ಹೆಚ್ಚಿತ್ತು.
2022ರಲ್ಲಿ ಕೊಹ್ಲಿ ಟೆಸ್ಟ್ ಶ್ರೇಯಾಂಕ ಪಟ್ಟಿಯ ಟಾಪ್ 10ರಿಂದ ಹೊರಬಿದ್ದಿದ್ದರು. ಇದೀಗ ನಾಲ್ಕು ಸ್ಥಾನ ಮೇಲೇರಿರುವ ಅವರು ಒಂಬತ್ತನೇ ಸ್ಥಾನಕ್ಕೆ ತಲುಪಿದ್ದಾರೆ. ಆ ಮೂಲಕ ಮತ್ತೆ ಹತ್ತರೊಳಗೆ ಸ್ಥಾನ ಪಡೆದಿದ್ದಾರೆ.
ಇದನ್ನೂ ಓದಿ | IND vs SA: 11 ಎಸೆತಗಳಲ್ಲಿ 6 ವಿಕೆಟ್ ಪತನ; 153 ರನ್‌ಗೆ ಭಾರತ ಆಲೌಟ್, 6 ಮಂದಿ ಡಕೌಟ್
ಅಗ್ರಸ್ಥಾನದಲ್ಲಿ ವಿಲಿಯಮ್ಸನ್
ಟೆಸ್ಟ್ ಶ್ರೇಯಾಂಕದಲ್ಲಿ ಕಿವೀಸ್ ನಾಯಕ ಕೇನ್ ವಿಲಿಯಮ್ಸನ್ ಮೊದಲ ಸ್ಥಾನದಲ್ಲಿದ್ದಾರೆ. ಇಂಗ್ಲೆಂಡ್‌ನ ಜೋ ರೂಟ್ ಮತ್ತು ಸ್ಟೀವ್ ಸ್ಮಿತ್ ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನ ಪಡೆದಿದ್ದಾರೆ. ಅಗ್ರ ಹತ್ತರೊಳಗೆ ಸ್ಥಾನ ಪಡೆದಿರುವ ಏಕೈಕ ಬ್ಯಾಟರ್ ಕೊಹ್ಲಿ. ಉಳಿದಂತೆ ಸುದೀರ್ಘ ಒಂದು ವರ್ಷದಿಂದ ಕ್ರಿಕೆಟ್‌ನಿಂದ ಹೊರಗಿರುವ ರಿಷಭ್ ಪಂತ್ 12ನೇ ಸ್ಥಾನದಲ್ಲಿದ್ದಾರೆ.
ಅತ್ತ, ಭಾರತ ತಂಡದ ನಾಯಕ ರೋಹಿತ್ ಶರ್ಮಾ ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 5 ರನ್ ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ ಶೂನ್ಯಕ್ಕೆ ವಿಕೆಟ್ ಕಳೆದುಕೊಂಡಿದ್ದರು. ಹೀಗಾಗಿ 14ನೇ ಸ್ಥಾನಕ್ಕೆ ಕುಸಿದಿದ್ದಾರೆ. ಕೆಎಲ್ ರಾಹುಲ್ ಮೊದಲ ಇನ್ನಿಂಗ್ಸ್‌ನಲ್ಲಿ ಶತಕ ಬಾರಿಸಿದ್ದರು. ಹೀಗಾಗಿ 11 ಸ್ಥಾನಗಳನ್ನು ಮೇಲಕ್ಕೇರಿ 51ನೇ ಸ್ಥಾನಕ್ಕೆ ತಲುಪಿದ್ದಾರೆ.
ಅಶ್ವಿನ್ ನಂಬರ್ ವನ್
ಬೌಲರ್‌ಗಳ ಪಟ್ಟಿಯಲ್ಲಿ ಆರ್ ಅಶ್ವಿನ್ ತಮ್ಮ ಆಳ್ವಿಕೆ ಮುಂದುವರೆಸಿದ್ದಾರೆ. ಸೆಂಚುರಿಯನ್‌ನಲ್ಲಿ ರವಿಚಂದ್ರನ್ ಅಶ್ವಿನ್ ಕೇವಲ 1 ವಿಕೆಟ್ ಪಡೆದರೂ, ಅಗ್ರಸ್ಥಾನ ಉಳಿಸಿಕೊಂಡಿದ್ದಾರೆ. ರವೀಂದ್ರ ಜಡೇಜಾ ಮತ್ತು ಜಸ್ಪ್ರೀತ್ ಬುಮ್ರಾ ಕ್ರಮವಾಗಿ ನಾಲ್ಕು ಮತ್ತು ಐದನೇ ಸ್ಥಾನದಲ್ಲಿದ್ದಾರೆ. ಮತ್ತೊಂದೆಡೆ ಆಲ್‌ರೌಂಡರ್‌ಗಳ ಪಟ್ಟಿಯಲ್ಲಿ ಜಡೇಜಾ ಅಗ್ರಸ್ಥಾನದಲ್ಲಿ ಮುಂದುವರೆದರೆ, ಅಶ್ವಿನ್ ಎರಡನೇ ಸ್ಥಾನದಲ್ಲಿದ್ದಾರೆ, ಶಾರ್ದೂಲ್ ಠಾಕೂರ್ 34ನೇ ಸ್ಥಾನಕ್ಕೆ ಕುಸಿದಿದ್ದಾರೆ.
ಇದನ್ನೂ ಓದಿ | ಕೇವಲ 55 ರನ್‌ಗೆ ದಕ್ಷಿಣ ಆಫ್ರಿಕಾ ಆಲೌಟ್; ಹರಿಣಗಳ ಬ್ಯಾಟಿಂಗ್ ಲೈನಪ್ ಹಣ್ಣುಗಾಯಿ ನೀರುಗಾಯಿ ಮಾಡಿದ ಸಿರಾಜ್
ತಂಡಗಳ ಶ್ರೇಯಾಂಕದಲ್ಲಿ ಭಾರತವು 118 ರೇಟಿಂಗ್ ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದೆ. ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ಕ್ರಮವಾಗಿ ಎರಡು ಹಾಗೂ ಮೂರನೇ ಸ್ಥಾನದಲ್ಲಿದೆ. ಆಫ್ರಿಕಾ ವಿರುದ್ಧ ಮೊದಲ ಟೆಸ್ಟ್ ಸೋತರೂ ತಂಡದ ಅಗ್ರಸ್ಥಾನಕ್ಕೆ ಕುತ್ತು ಬಂದಿಲ್ಲ.
ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿ ಹೊಂದಲಿರುವ ದಕ್ಷಿಣ ಆಫ್ರಿಕಾದ ಡೀನ್ ಎಲ್ಗರ್ ಅವರು, 19 ಸ್ಥಾನಗಳ ಏರಿಕೆಯೊಂದಿಗೆ 17ನೇ ಸ್ಥಾನಕ್ಕೆ ಏರಿದ್ದಾರೆ. ಸೆಂಚುರಿಯನ್‌ನಲ್ಲಿ ಎಲ್ಗರ್ 287 ಎಸೆತಗಳಲ್ಲಿ 185 ರನ್ ಗಳಿಸಿದ್ದರು.
ವಿಡಿಯೋ ನೋಡಿ | Gurugram : ಗುರುಗಾಂವ್ ನ ವಸತಿ ಸಮುಚ್ಛಯಕ್ಕೆ ನುಗ್ಗಿದ ಚಿರತೆ ; ಸೆರೆ ಹಿಡಿಯಲು
ಅರಣ್ಯ ಇಲಾಖೆ, ಪೊಲೀಸರ ಸಾಹಸ