ವಿರಾಟ್ ಕೊಹ್ಲಿಯಿಂದ ರೋಹಿತ್ ಶರ್ಮಾವರೆಗೆ; ನ್ಯೂಜಿಲೆಂಡ್ ವಿರುದ್ಧ ಟೀಂ ಇಂಡಿಯಾದ ಟಾಪ್ ಬ್ಯಾಟರ್‌ಗಳ ಸಾಧನೆಯ ಚಿತ್ರಣ
ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಸೇರಿದಂತೆ ಟೀಂ ಇಂಡಿಯಾದ ಅಗ್ರ ಬ್ಯಾಟರ್‌ಗಳು ನ್ಯೂಜಿಲೆಂಡ್ ವಿರುದ್ಧ ಏನೆಲ್ಲಾ ಸಾಧನೆಗಳನ್ನ ಮಾಡಿದ್ದಾರೆ ಅನ್ನೋದನ್ನ ನೋಡೋಣ.
ಬೆಂಗಳೂರು: ತವರು ನೆಲದಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್‌ನ ಗ್ರೂಪ್ ಹಂತದಲ್ಲಿ ಸತತ 9 ಪಂದ್ಯಗಳಲ್ಲಿ ಅಮೋಘ ಜಯದೊಂದಿಗೆ ಟೀಂ ಇಂಡಿಯಾ ಮೊದಲ ತಂಡವಾಗಿ ಸೆಮಿ ಫೈನಲ್ ಪ್ರವೇಶಿಸಿದೆ. ನಾಳೆ (ನವೆಂಬರ್ 15, ಬುಧವಾರ) ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಸೆಮಿ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡದ ವಿರುದ್ದ ಫೈನಲ್‌ಗಾಗಿ ಸೆಣಸಾಡಲಿದೆ.
ರೋಹಿತ್ ಶರ್ಮಾ ಅಂಡ್ ಪ್ರಸ್ತುತ ವಿಶ್ವಕಪ್‌ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದು, ಆಡಿರುವ 9 ಪಂದ್ಯಗಳಲ್ಲಿ ಗೆದ್ದು 18 ಅಂಕಗಳು ಹಾಗೂ +2.570 ನೆಟ್ ರನ್ ರೇಟ್‌ನೊಂದಿಗೆ ಅಗ್ರಸ್ಥಾನದಲ್ಲಿ ಲೀಗ್ ಹಂತವನ್ನು ಮುಗಿಸಿದೆ.
ವಿಶ್ವಕಪ್‌ನಲ್ಲಿ 5 ಬಾರಿಯ ಚಾಂಪಿಯನ್ಸ್ ಆಸ್ಟ್ರೇಲಿಯಾವನ್ನು ಮಣಿಸುವುದರೊಂದಿಗೆ ಅಭಿಯಾನವನ್ನು ಆರಂಭಿಸಿದ ಭಾರತ, ನಂತರ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ, ಆ ಬಳಿಕ ಬಾಂಗ್ಲಾದೇಶ, ನ್ಯೂಜಿಲೆಂಡ್, ಇಂಗ್ಲೆಂಡ್, ಶ್ರೀಲಂಕಾ, ದಕ್ಷಿಣ ಆಫ್ರಿಕಾ ಕೊನೆಗೆ ನೆದರ್ಲೆಂಡ್ಸ್ ತಂಡದ ವಿರುದ್ಧ 160 ರನ್‌ಗಳ ದೊಡ್ಡ ಗೆಲುವವನ್ನು ಪಡೆಯುವುದರೊಂದಿಗೆ ಗ್ರೂಪ್ ಹಂತವನ್ನು ಮುಗಿಸಿದೆ.
ನ್ಯೂಜಿಲೆೆಂಡ್ ವಿರುದ್ಧ ವಿರಾಟ್ ಕೊಹ್ಲಿ ಟಾಪ್ ಬ್ಯಾಟಿಂಗ್
ಸದ್ಯ ಟೀಂ ಇಂಯಾದಲ್ಲಿ ಕಿಂಗ್ ಕೊಹ್ಲಿ ಅವರು ಅದ್ಭುತ ಫಾರ್ಮ್‌ನಲ್ಲಿದ್ದಾರೆ. ನ್ಯೂಜಿಲೆಂಡ್ ವಿರುದ್ಧ ಕಳೆದ 30 ಏಕದಿನ ಪಂದ್ಯಗಳಲ್ಲಿ ಹೆಚ್ಚು ರನ್ ಗಳಿಸಿದ್ದಾರೆ. ವಿರಾಟ್ ಕೊಹ್ಲಿ ಕಿವೀಸ್ ವಿರುದ್ಧ 1,528 ರನ್ ಕಲೆಹಾಕಿದ್ದು, ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ನ್ಯೂಜಿಲೆಂಡ್ ವಿರುದ್ಧ ಕೊಹ್ಲಿ ಅವರು ಔಟಾಗದೆ ಗಳಿಸಿರುವ 154 ರನ್ ವೈಯಕ್ತಿಕ ಗರಿಷ್ಠ ಸ್ಕೋರ್ ಎನಿಸಿದೆ.
ಮತ್ತೊಂದೆಡೆ ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಕೂಡ ಕಿವೀಸ್ ವಿರುದ್ಧ ಅಬ್ಬರಿಸಿದ್ದಾರೆ. ಇವರು 28 ಪಂದ್ಯಗಳನ್ನು ಆಡಿದ್ದು, 935 ರನ್ ಗಳಿಸಿ ಎರಡನೇ ಸ್ಥಾನದಲ್ಲಿದ್ದಾರೆ. ರೋಹಿತ್ ಶರ್ಮಾ ನ್ಯೂಜಿಲೆಂಡ್ ವಿರುದ್ಧ 147 ರನ್ ಗಳಿಸಿರುವುದು ವೈಯಕ್ತಿಕ ಗರಿಷ್ಠ ಸ್ಕೋರ್ ಆಗಿದೆ.
ಇನ್ನ ಯುವ ಬ್ಯಾಟರ್ ಶುಭ್ಮನ್ ಗಿಲ್ ನ್ಯೂಜಿಲೆಂಡ್ ವಿರುದ್ಧ 9 ಏಕದಿನ ಪಂದ್ಯಗಳನ್ನು ಆಡಿದ್ದು, 510 ರನ್ ಗಳಿಸಿದ್ದಾರೆ. ಕಿವೀಸ್ ವಿರುದ್ಧ ಅತಿ ಹೆಚ್ಚು ರನ್ ಗಳಿಸಿರುವ ಟೀಂ ಇಂಡಿಯಾದ ಅಗ್ರ ಬ್ಯಾಟರ್‌ಗಳ ಪಟ್ಟಿಯಲ್ಲಿ ಗಿಲ್ ಮೂರನೇ ಸ್ಥಾನದಲ್ಲಿದ್ದಾರೆ. ವಿಶೇಷ ಅಂದರೆ ಗಿಲ್ ಈ ತಂಡದ ವಿರುದ್ಧ ದ್ವಿಶತಕದ ಸಾಧನೆ ಮಾಡಿದ್ದಾರೆ. 208 ಇವರ ವೈಯಕ್ತಿಕ ಗರಿಷ್ಠ ರನ್ ಆಗಿದೆ.
ಟೀಂ ಇಂಡಿಯಾದ ಮಧ್ಯಮ ಕ್ರಮಾಂಕದ ಬ್ಯಾಟರ್ ಶ್ರೇಯಸ್ ಅಯ್ಯರ್ ನ್ಯೂಜಿಲೆಂಡ್ ವಿರುದ್ಧ 7 ಪಂದ್ಯಗಳನ್ನು ಆಡಿದ್ದು, 379 ರನ್ ಗಳಿಸಿದ್ದಾರೆ. ಈ ಪಟ್ಟಿಯಲ್ಲಿ ಶ್ರೇಯಸ್ 4ನೇ ಸ್ಥಾನದಲ್ಲಿದ್ದಾರೆ. 103 ರನ್ ಇವರ ವೈಯಕ್ತಿಕ ಗರಿಷ್ಠ ಸ್ಕೋರ್ ಆಗಿದೆ.
ಆಲ್‌ರೌಂಡರ್ ಜಡೇಜಾ ಉತ್ತಮ ಸಾಧನೆ
ಭಾರತದ ಸ್ಟಾರ್ ಆಲ್‌ರೌಂಡರ್ ರವೀಂದ್ರ ಜಡೇಜಾ ಏಕದಿನ ಮಾದರಿಯ 13 ಪಂದ್ಯಗಳನ್ನು ಆಡಿದ್ದು, 361 ರನ್ ಗಳಿಸಿದ್ದಾರೆ. ಜಡೇಜಾ ಅವರ ಅತ್ಯುತ್ತಮ ಸ್ಕೋರ್ 77 ರನ್. ವಿಶ್ವಕಪ್‌ನ ಗ್ರೂಪ್ ಹಂತದಲ್ಲಿ ನ್ಯೂಜಿಲೆಂಡ್ ವಿರುದ್ಧ ಟೀಂ ಇಂಡಿಯಾ 4 ವಿಕೆಟ್‌ಗಳ ಗೆಲುವು ಪಡೆದಿತ್ತು. ಡೇರಿಲ್ ಮಿಚೆಲ್ ಮತ್ತು ರಚಿನ್ ರವೀಂದ್ರ ಅವರ ಉತ್ತಮ ಬ್ಯಾಟಿಂಗ್ ನೆರವಿನಿಂದ ಕಿವೀಸ್ 273 ರನ್ ಗಳಿಸಿತ್ತು. ಈ ಪಂದ್ಯದಲ್ಲಿ ಮೊಹಮ್ಮದ್ ಶಮಿ 5 ವಿಕೆಟ್‌ಗಳ ಸಾಧನೆ ಮಾಡಿದ್ದರು. ವಿರಾಟ್ ಕೊಹ್ಲಿ (95) ಅವರ ಅರ್ಧ ಶತಕದ ನೆರವಿನಿಂದ ಭಾರತ 4 ವಿಕೆಟ್‌ಗಳ ಗೆಲುವು ಪಡೆಯಿತು.