ಕನ್ನಡ ಸುದ್ದಿ  /  ಕ್ರಿಕೆಟ್  /  ಭಾರತ Vs ಬಾಂಗ್ಲಾದೇಶ ಟಿ20 ವಿಶ್ವಕಪ್ ಅಭ್ಯಾಸ ಪಂದ್ಯ ಎಲ್ಲಿ, ಯಾವಾಗ; ಭಾರತದಲ್ಲಿ ಲೈವ್‌ ವೀಕ್ಷಿಸೋದು ಹೇಗೆ?

ಭಾರತ vs ಬಾಂಗ್ಲಾದೇಶ ಟಿ20 ವಿಶ್ವಕಪ್ ಅಭ್ಯಾಸ ಪಂದ್ಯ ಎಲ್ಲಿ, ಯಾವಾಗ; ಭಾರತದಲ್ಲಿ ಲೈವ್‌ ವೀಕ್ಷಿಸೋದು ಹೇಗೆ?

ರೋಹಿತ್ ಶರ್ಮಾ ನೇತೃತ್ವದ ಭಾರತ ಕ್ರಿಕೆಟ್‌ ತಂಡವು ಟಿ20 ವಿಶ್ವಕಪ್‌ ಪಂದ್ಯಾವಳಿಯ ಆರಂಭಕ್ಕೂ ಮುಂಚಿತವಾಗಿ ಬಾಂಗ್ಲಾದೇಶ ವಿರುದ್ಧ ಏಕೈಕ ಅಭ್ಯಾಸ ಪಂದ್ಯದಲ್ಲಿ ಕಣಕ್ಕಿಳಿಯಲಿದೆ.

ಭಾರತ vs ಬಾಂಗ್ಲಾದೇಶ ಟಿ20 ವಿಶ್ವಕಪ್ ಅಭ್ಯಾಸ ಪಂದ್ಯ ಲೈವ್‌ ವೀಕ್ಷಿಸೋದು ಹೇಗೆ?
ಭಾರತ vs ಬಾಂಗ್ಲಾದೇಶ ಟಿ20 ವಿಶ್ವಕಪ್ ಅಭ್ಯಾಸ ಪಂದ್ಯ ಲೈವ್‌ ವೀಕ್ಷಿಸೋದು ಹೇಗೆ? (AFP)

ನಾಯಕ ರೋಹಿತ್ ಶರ್ಮಾ ನೇತೃತ್ವದ ಭಾರತ ಕ್ರಿಕೆಟ್‌ ತಂಡವು, ಅಮೆರಿಕ ನೆಲದಲ್ಲಿ ಅಭ್ಯಾಸ ಪಂದ್ಯದೊಂದಿಗೆ ಟಿ20 ವಿಶ್ವಕಪ್‌ ಅಭಿಯಾನ ಆರಂಭಿಸುತ್ತಿದೆ. ಜೂನ್ 1ರಂದು ನ್ಯೂಯಾರ್ಕ್‌ನಲ್ಲಿ ಹೊಸದಾಗಿ ನಿರ್ಮಾಣಗೊಂಡ ನಸ್ಸೌ ಕೌಂಟಿ ಇಂಟರ್‌ನ್ಯಾಶನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಬಾಂಗ್ಲಾದೇಶ ವಿರುದ್ಧ ಭಾರತ (India vs Bangladesh) ಏಕೈಕ ಅಭ್ಯಾಸ ಪಂದ್ಯ ಆಡುತ್ತಿದೆ. ಈ ವಾರದ ಆರಂಭದಲ್ಲಿ ಭಾರತ ತಂಡವು ಯುಎಸ್‌ಎ ತಲುಪಿದ್ದು, ಹಾರ್ದಿಕ್‌ ಪಾಂಡ್ಯ ಕೂಡಾ ತಂಡ ಸೇರಿಕೊಂಡಿದ್ದಾರೆ. ಅಭ್ಯಾಸ ಪಂದ್ಯಕ್ಕೂ ಮುಂಚಿತವಾಗಿ ವಿರಾಟ್ ಕೊಹ್ಲಿ ಕೂಡಾ ಕ್ಯಾಂಪ್‌ ಸೇರಿಕೊಳ್ಳಲಿದ್ದಾರೆ.

ಟ್ರೆಂಡಿಂಗ್​ ಸುದ್ದಿ

ಈಗಾಗಲೇ ಹಲವು ಅಭ್ಯಾಸ ಪಂದ್ಯಗಳು ನಡೆದಿದ್ದು, ಕೊನೆಯ ಪಂದ್ಯದಲ್ಲಿ ಭಾರತವು ಬಾಂಗ್ಲಾದೇಶವನ್ನು ಎದುರಿಸುತ್ತಿದೆ. ನ್ಯೂಯಾರ್ಕ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಪಂದ್ಯ ಇದಾಗಿದೆ.

ಐಪಿಎಲ್‌ ಅಭಿಯಾನವನ್ನು ಮುಗಿಸಿದ ಬಳಿಕ ಆಟಗಾರರು ಅಮೆರಿಕಕ್ಕೆ ಹಾರಿದ್ದಾರೆ. ಅಲ್ಲಿನ ವಾತಾಪರಣಕ್ಕೆ ಒಗ್ಗಿಕೊಳ್ಳುವುದು ಆಟಗಾರರ ಪ್ರಮುಖ ಆದ್ಯತೆಯಾಗಿದೆ. ಈ ನಡುವೆ ಪಂದ್ಯಗಳಿಗೆ ಮಳೆಯ ಆತಂಕ ಕೂಡಾ ಎದುರಾಗಿದೆ. ಈಗಾಗಲೇ ಕೆಲವೊಂದು ಅಭ್ಯಾಸ ಪಂದ್ಯಗಳು ಈಗಾಗಲೇ ಮಳೆಯಿಂದಾಗಿ ರದ್ದಾಗಿವೆ.

ಭಾರತ vs ಬಾಂಗ್ಲಾದೇಶ ಅಭ್ಯಾಸ ಪಂದ್ಯ ಯಾವಾಗ ಲೈವ್ ಸ್ಟ್ರೀಮಿಂಗ್

ಭಾರತ vs ಬಾಂಗ್ಲಾದೇಶ ನಡುವಿನ ಅಭ್ಯಾಸ ಪಂದ್ಯವು ಜೂನ್ 1ರ ಶನಿವಾರ ನಡೆಯಲಿದೆ. ರಾತ್ರಿ 8:00 ಗಂಟೆಗೆ ಪಂದ್ಯ ಆರಂಭವಾಗಲಿದೆ. ಪಂದ್ಯವು ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಇಂಟರ್‌ನ್ಯಾಶನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ.

ಲೈವ್‌ ಸ್ಟ್ರೀಮಿಂಗ್

ಅಭ್ಯಾಸ ಪಂದ್ಯಗಳಲ್ಲಿ ಕೇವಲ ಎರಡು ಪಂದ್ಯಗಳನ್ನು ಮಾತ್ರ ನೇರ ಪ್ರಸಾರ ಮಾಡಲಾಗುತ್ತಿದೆ. ಈಗಾಗಲೇ ನಡೆದ ವೆಸ್ಟ್ ಇಂಡೀಸ್ ಹಾಗೂ ಆಸ್ಟ್ರೇಲಿಯಾ ಪಂದ್ಯ ನೇರಪ್ರಸಾರಗೊಂಡಿದೆ. ಆ ನಂತರ ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಪಂದ್ಯವನ್ನು ಲೈವ್ ಸ್ಟ್ರೀಮ್‌ ಮಾಡಲಾಗುತ್ತದೆ.

ಭಾರತದಲ್ಲಿ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯವನ್ನು ಅಭಿಮಾನಿಗಳು ಲೈವ್ ವೀಕ್ಷಿಸಬಹುದು. ಇದೇ ವೇಳೆ ಮೊಬೈಲ್‌ ಮೂಲಕ ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ಡಿಸ್ನಿ+ಹಾಟ್‌ಸ್ಟಾರ್‌ ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ವೀಕ್ಷಿಸಬಹುದಾಗಿದೆ.

ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡವು ಯುಎಸ್ಎ, ಪಾಕಿಸ್ತಾನ, ಐರ್ಲೆಂಡ್ ಮತ್ತು ಕೆನಡಾ ತಂಡಗಳೊಂದಿಗೆ ಎ ಗುಂಪಿನಲ್ಲಿ ಸ್ಥಾನ ಪಡೆದಿದೆ. ಜೂನ್ 5ರಂದು ಭಾರತ ವಿಶ್ವಕಪ್‌ ಅಭಿಯಾನ ಆರಂಭಿಸಲಿದ್ದು, ಐರ್ಲೆಂಡ್ ವಿರುದ್ಧ ಸೆಣಸಲಿದೆ. ಆ ಬಳಿಕ ಜೂನ್ 9ರಂದು ಪಾಕಿಸ್ತಾನ ವಿರುದ್ಧ ಆಡಲಿದೆ. ಜೂನ್ 12ರಂದು ಯುಎಸ್‌ಎ ಹಾಗೂ ಜೂನ್ 15ರಂದು ಕೆನಡಾ ವಿರುದ್ಧ ಕಣಕ್ಕಿಳಿಯಲಿದೆ. ಭಾರತ ತಂಡವು ಮುಂದಿನ ಸುತ್ತಿಗೆ ಅರ್ಹತೆ ಪಡೆಯಲು ಗ್ರೂಪ್ ಹಂತದಲ್ಲಿ ಅಗ್ರ ಎರಡು ಸ್ಥಾನ ಪಡೆಯುವ ಅಗತ್ಯವಿದೆ. ಆ ಬಳಿಕ ಸೂಪರ್ 8 ಹಂತದ ಪಂದ್ಯಗಳು ನಡೆಯಲಿದೆ.

ಟಿ20 ವಿಶ್ವಕಪ್‌ಗೆ ಭಾರತ ತಂಡ

ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್, ಸಂಜು ಸ್ಯಾಮ್ಸನ್, ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್‌ ಸಿರಾಜ್.

ಮೀಸಲು ಆಟಗಾರರು

ಶುಭ್ಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್, ಆವೇಶ್ ಖಾನ್.

(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್‌. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)

ಟಿ20 ವರ್ಲ್ಡ್‌ಕಪ್ 2024