ಆರಂಭಿಕರೇ ನಾಲ್ವರು; ಆಸ್ಟ್ರೇಲಿಯಾ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಕಣಕ್ಕಿಳಿಯುವ ಓಪನಿಂಗ್ ಜೋಡಿ ಯಾವುದು?
ಕನ್ನಡ ಸುದ್ದಿ  /  ಕ್ರಿಕೆಟ್  /  ಆರಂಭಿಕರೇ ನಾಲ್ವರು; ಆಸ್ಟ್ರೇಲಿಯಾ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಕಣಕ್ಕಿಳಿಯುವ ಓಪನಿಂಗ್ ಜೋಡಿ ಯಾವುದು?

ಆರಂಭಿಕರೇ ನಾಲ್ವರು; ಆಸ್ಟ್ರೇಲಿಯಾ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಕಣಕ್ಕಿಳಿಯುವ ಓಪನಿಂಗ್ ಜೋಡಿ ಯಾವುದು?

India vs Australia: ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯಕ್ಕೆ ಆರಂಭಿಕ ಸ್ಥಾನಕ್ಕಾಗಿ ನಾಲ್ವರು ಆಟಗಾರರ ಮಧ್ಯೆ ಪೈಪೋಟಿ ಏರ್ಪಟ್ಟಿದೆ. ಹಾಗಾಗಿ ಯಾರು ಇನಿಂಗ್ಸ್​ ಆರಂಭಿಸಲಿದ್ದಾರೆ ಎಂಬ ಪ್ರಶ್ನೆ ಹುಟ್ಟು ಹಾಕಿದೆ.

ಕೆಎಲ್ ರಾಹುಲ್, ಇಶಾನ್ ಕಿಶನ್, ಶುಭ್ಮನ್ ಗಿಲ್, ಋತುರಾಜ್ ಗಾಯಕ್ವಾಡ್.
ಕೆಎಲ್ ರಾಹುಲ್, ಇಶಾನ್ ಕಿಶನ್, ಶುಭ್ಮನ್ ಗಿಲ್, ಋತುರಾಜ್ ಗಾಯಕ್ವಾಡ್.

ಏಷ್ಯಾಕಪ್ ಗೆದ್ದು (Asia Cup 2023) ಒಂದು ವಾರವೂ ಪೂರ್ಣಗೊಂಡಿಲ್ಲ. ಅದಾಗಲೇ ಭಾರತ ತಂಡವು ಮತ್ತೊಂದು ಸವಾಲಿಗೆ ಸಜ್ಜಾಗಿದೆ. ಸೆಪ್ಟೆಂಬರ್​ 22ರಿಂದ ಆಸ್ಟ್ರೇಲಿಯಾ ಎದುರಿನ ಮೂರು ಪಂದ್ಯಗಳ ಏಕದಿನ ಸರಣಿಗೆ (India vs Australia) ಸಿದ್ಧಗೊಂಡಿದೆ. ಮೊಹಾಲಿಯಲ್ಲಿ ಜರುಗುವ ಮೊದಲ ಪಂದ್ಯದಲ್ಲಿ ಭಾರತದ (Team India) ಪರ ಆರಂಭಿಕರಾಗಿ ಕಾಣಿಸಿಕೊಳ್ಳುವುದು ಯಾರೆಂಬ ಕುತೂಹಲದ ಜೊತೆಗೆ ಗೊಂದಲ ಏರ್ಪಟ್ಟಿದೆ. ನಾಲ್ವರು ಆರಂಭಿಕರು ತಂಡದಲ್ಲಿರುವುದೇ ಅದಕ್ಕೆ ಕಾರಣ.

ಕಾಯಂ ಆರಂಭಿಕ ಆಟಗಾರ ಮತ್ತು ನಾಯಕ ರೋಹಿತ್​ ಶರ್ಮಾ (Rohit Sharma) ಮೊದಲ ಎರಡು ಪಂದ್ಯಗಳಿಗೆ ಅಲಭ್ಯರಾಗಿದ್ದು, 3ನೇ ಪಂದ್ಯಕ್ಕೆ ಮರಳಲಿದ್ದಾರೆ. ಹಾಗಾಗಿ ಮೊದಲ ಏಕದಿನ ಪಂದ್ಯಕ್ಕೆ ಆರಂಭಿಕನ ಸ್ಥಾನದಲ್ಲಿ ಬದಲಾವಣೆ ಕಂಡು ಬರುವುದು ಖಚಿತ. ಆದರೆ, ಆರಂಭಿಕ ಸ್ಥಾನಕ್ಕಾಗಿ ನಾಲ್ವರು ಆಟಗಾರರ ಮಧ್ಯೆ ಪೈಪೋಟಿ ಏರ್ಪಟ್ಟಿದ್ದು, ಯಾರು ಇನಿಂಗ್ಸ್​ ಆರಂಭಿಸಲಿದ್ದಾರೆ ಎಂಬ ಪ್ರಶ್ನೆ ಹುಟ್ಟು ಹಾಕಿದೆ.

ಶುಭ್ಮನ್ ಖಚಿತ, ಮತ್ತೊಬ್ಬ ಯಾರು?

ಪ್ರಸ್ತುತ ನಾಲ್ವರು ಆಟಗಾರರ ಪೈಪೋಟಿಯಲ್ಲಿ ಶುಭ್ಮನ್ ಗಿಲ್ (Shubman Gill) ಆರಂಭಿಕನಾಗಿ ಕಣಕ್ಕಿಳಿಯುವುದು ಖಚಿತ. ಆದರೆ, ಉಳಿದ ಮೂವರಲ್ಲಿ ಒಬ್ಬರು ಯಾರು ಎನ್ನುವುದೇ ದೊಡ್ಡ ಪ್ರಶ್ನೆ. ಇನ್ನೊಂದು ಬದಿಯಲ್ಲಿ ಕಣಕ್ಕಿಳಿಯಲು ಇಶಾನ್ ಕಿಶನ್ (Ishan Kishan), ಋತುರಾಜ್ ಗಾಯಕ್ವಾಡ್ (Ruturaj Gaikwad) ಮತ್ತು ಕೆಎಲ್ ರಾಹುಲ್ (KL Rahul) ಮಧ್ಯೆ ಸ್ಪರ್ಧೆ ನಡೆಯುತ್ತಿದೆ. ರೋಹಿತ್​ ತಂಡದಲ್ಲಿ ಇದ್ದಿದ್ದರೆ ರಾಹುಲ್, ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಬೀಸುತ್ತಾರೆ.

ಈಗ ರೋಹಿತ್ ಅಲಭ್ಯರಾಗಿದ್ದು, ಟಾಪ್​ ಆರ್ಡರ್​​ನಲ್ಲಿ ಕಣಕ್ಕಿಳಿದರೂ ಅಚ್ಚರಿ ಇಲ್ಲ. ಮತ್ತೊಂದೆಡೆ ಏಕದಿನ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದಿರುವ ಇಶಾನ್ ಕಿಶನ್ ಸಹ ಆರಂಭಿಕ ಆಟಗಾರ ಎಂಬುದನ್ನು ಮರೆಯುವಂತಿಲ್ಲ. ಏಷ್ಯಾಕಪ್​ ಫೈನಲ್​ನಲ್ಲಿ ಓಪನರ್​ ಆಗಿದ್ದ ಇಶಾನ್, ರೋಹಿತ್ ಅನುಪಸ್ಥಿತಿಯಲ್ಲಿ ಗಿಲ್ ಜೊತೆ ಮತ್ತೆ ಇನಿಂಗ್ಸ್ ಆರಂಭಿಸುವ ಲೆಕ್ಕಚಾರದಲ್ಲಿದ್ದಾರೆ. ಏಷ್ಯಾಕಪ್​ನಲ್ಲಿ ಇಶಾನ್ ಕಿಶನ್ ಪಾಕ್​ ವಿರುದ್ಧ ಮಧ್ಯಮ ಕ್ರಮಾಂಕದಲ್ಲಿ ಅಬ್ಬರಿಸಿದ್ದರು.

ಮತ್ತೊಂದೆಡೆ ಚೀನಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್​ಗಾಗಿ (Asian Games) ತೆರಳಬೇಕಿರುವ ಭಾರತ ತಂಡದ ನಾಯಕರಾಗಿ ಆಯ್ಕೆಯಾದ ಋತುರಾಜ್ ಗಾಯಕ್ವಾಡ್ ಸಹ ಓಪನರ್​. ಹಾಗಾಗಿ ಏಷ್ಯನ್​ ಗೇಮ್ಸ್​​​ಗೂ ಸಿದ್ಧತೆಯ ಭಾಗವಾಗಿ ಆಸ್ಟ್ರೇಲಿಯಾ ಎದುರು ಆರಂಭಿಕನಾಗಿ ಕಣಕ್ಕಿಳಿಯುವ ಇರಾದೆಯಲ್ಲಿದ್ದಾರೆ. ಒಟ್ನಲ್ಲಿ ಗಿಲ್ ಹೊರತುಪಡಿಸಿ ಇನ್ನೊಂದು ಆರಂಭಿಕ ಸ್ಥಾನಕ್ಕೆ ಮೂವರ ಪೈಪೋಟಿ ನಡೆಯುತ್ತಿದ್ದು, ಯಾರಿಗೆ ಅವಕಾಶ ಸಿಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಮೊದಲ 2 ಏಕದಿನ ಪಂದ್ಯಗಳಿಗೆ ಭಾರತ ತಂಡ

ಕೆಎಲ್ ರಾಹುಲ್ (ನಾಯಕ ಮತ್ತು ವಿಕೆಟ್ ಕೀಪರ್), ರವೀಂದ್ರ ಜಡೇಜಾ (ಉಪನಾಯಕ), ಋತುರಾಜ್ ಗಾಯಕ್ವಾಡ್, ಶುಭ್ಮನ್ ಗಿಲ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಶಾರ್ದೂಲ್ ಠಾಕೂರ್, ವಾಷಿಂಗ್ಟನ್ ಸುಂದರ್, ಆರ್ ಅಶ್ವಿನ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ

3ನೇ ಮತ್ತು ಅಂತಿಮ ಏಕದಿನ ಪಂದ್ಯಕ್ಕೆ ಭಾರತ ತಂಡ

ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ, (ಉಪನಾಯಕ), ಶುಭ್ಮನ್​ ಗಿಲ್​, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್*, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಆರ್ ಅಶ್ವಿನ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್.

Whats_app_banner