ದಕ್ಷಿಣ ಆಫ್ರಿಕಾ ವಿರುದ್ಧದ ಟಿ20, ಏಕದಿನ ಸರಣಿಗೆ ಕೊಹ್ಲಿ-ರೋಹಿತ್ ಲಭ್ಯವಾಗಿಲ್ಲ, ಏಕೆ; ಕಾರಣ ತಿಳಿಸಿದ ಬಿಸಿಸಿಐ
Virat Kohli And Rohit Sharma: ಡಿಸೆಂಬರ್ 10ರಿಂದ ಶುರುವಾಗುವ ಸೌತ್ ಆಫ್ರಿಕಾ ಎದುರಿನ ಸೀಮಿತ ಓವರ್ಗಳ ಸರಣಿಗೆ ಹಿರಿಯ ಆಟಗಾರರಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರು ಏಕೆ ಆಯ್ಕೆಯಾಗಿಲ್ಲ? ಇಲ್ಲಿದೆ ವಿವರ.
ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಗುರುವಾರ (ನವೆಂಬರ್ 30) ದಕ್ಷಿಣ ಆಫ್ರಿಕಾ ಪ್ರವಾಸಕ್ಕಾಗಿ ಭಾರತ ತಂಡವನ್ನು (Team India Squad Announce) ಪ್ರಕಟಿಸಿದೆ. ಮೆನ್ ಇನ್ ಬ್ಲೂ, ದಕ್ಷಿಣ ಆಫ್ರಿಕಾ ವಿರುದ್ಧ (India vs South Africa) ಎರಡು ಟೆಸ್ಟ್ ಪಂದ್ಯಗಳ ಜೊತೆಗೆ ಒಟ್ಟು 3 ಪಂದ್ಯಗಳ ಏಕದಿನ ಸರಣಿ, ಮೂರು ಪಂದ್ಯಗಳ ಟಿ20 ಸರಣಿ ಆಡಲಿದೆ.
ಪ್ರಮುಖ ಅಂಶವೆಂದರೆ ರೋಹಿತ್ ಶರ್ಮಾ (Rohit Sharma) ಮತ್ತು ವಿರಾಟ್ ಕೊಹ್ಲಿ (Virat Kohli) ಇಬ್ಬರನ್ನೂ ವೈಟ್ಬಾಲ್ ಕ್ರಿಕೆಟ್ಗೆ ಆಯ್ಕೆ ಮಾಡಲಾಗಿದೆ. ಗಾಯದಿಂದ ಚೇತರಿಸಿಕೊಳ್ಳದ ಕಾರಣ ಹಾರ್ದಿಕ್ ಪಾಂಡ್ಯ ಈ ಸರಣಿಗೆ ಅಲಭ್ಯರಾಗಿದ್ದು, ಸೂರ್ಯಕುಮಾರ್ ಯಾದವ್ ತಂಡವನ್ನು ಮುನ್ನಡೆಸಲಿದ್ದಾರೆ. ಏಕದಿನ ತಂಡಕ್ಕೆ ಕೆಎಲ್ ರಾಹುಲ್ ನಾಯಕತ್ವ ವಹಿಸಲಿದ್ದಾರೆ. ಆದರೆ, ಕೊಹ್ಲಿ-ರೋಹಿತ್ ಏಕದಿನ ತಂಡದಲ್ಲೂ ಕಾಣಿಸಿಕೊಳ್ಳದಿರುವುದು ಅಚ್ಚರಿ ಮೂಡಿಸಿದೆ.
ಕೊಹ್ಲಿ-ರೋಹಿತ್ ವೈಟ್ಬಾಲ್ ಸರಣಿಗೆ ಏಕಿಲ್ಲ?
ದಕ್ಷಿಣ ಆಫ್ರಿಕಾದಲ್ಲಿ ಆಡುವ ವೈಟ್-ಬಾಲ್ ಸರಣಿಗೆ ವಿರಾಟ್ ಮತ್ತು ರೋಹಿತ್ ಆಯ್ಕೆಯಾಗದ ಹಿಂದಿರುವ ಕಾರಣವನ್ನು ಬಿಸಿಸಿಐ ಬಹಿರಂಗಪಡಿಸಿದೆ. ಇಬ್ಬರೂ ವಿಶ್ರಾಂತಿ ಕೇಳಿದ್ದಾರೆ ಎಂದು ಬಿಸಿಸಿಐ ಹೇಳಿದೆ. ರೋಹಿತ್ ಮತ್ತು ವಿರಾಟ್ ಅವರು ಪ್ರವಾಸದ ವೈಟ್-ಬಾಲ್ ಸರಣಿಯಿಂದ ವಿರಾಮ ಪಡೆಯಲು ಮಂಡಳಿಯನ್ನು ಕೋರಿದ್ದರು ಎಂದು ಬಿಸಿಸಿಐ ಸ್ಪಷ್ಟಪಡಿಸಿದೆ.
ರೋಹಿತ್ ಮತ್ತು ವಿರಾಟ್ ಇಬ್ಬರೂ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಮರಳಲಿದ್ದಾರೆ. ರೋಹಿತ್ ಟೆಸ್ಟ್ ತಂಡವನ್ನು ಮುನ್ನಡೆಸಲಿದ್ದಾರೆ. ಅಂದರೆ, ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಭಾರತ ತಂಡವು ಮೂರು ವಿಭಿನ್ನ ನಾಯಕರನ್ನು ಹೊಂದಿರಲಿದೆ. ಡಿಸೆಂಬರ್ 10 ರಿಂದ ಟಿ20 ಸರಣಿ, ಡಿಸೆಂಬರ್ 17 ರಿಂದ ಏಕದಿನ ಸರಣಿ, ಎರಡು ಪಂದ್ಯಗಳ ಟೆಸ್ಟ್ ಸರಣಿಯು ಡಿಸೆಂಬರ್ 26 ರಂದು ಪ್ರಾರಂಭವಾಗಲಿದ್ದು, ಎರಡನೇ ಟೆಸ್ಟ್ ಜನವರಿ 3 ರಂದು ಪ್ರಾರಂಭವಾಗಲಿದೆ.
ಭಾರತ ಟೆಸ್ಟ್ ತಂಡ
ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಋತುರಾಜ್ ಗಾಯಕ್ವಾಡ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಕೆಎಲ್ ರಾಹುಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಮುಕೇಶ್ ಕುಮಾರ್, ಮೊಹಮ್ಮದ್ ಶಮಿ*, ಜಸ್ಪ್ರೀತ್ ಬುಮ್ರಾ (ಉಪ ನಾಯಕ), ಪ್ರಸಿದ್ಧ್ ಕೃಷ್ಣ.
ಟಿ20 ಸರಣಿಗೆ ಭಾರತ ತಂಡ
ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ಋತುರಾಜ್ ಗಾಯಕ್ವಾಡ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ರಿಂಕು ಸಿಂಗ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರವೀಂದ್ರ ಜಡೇಜಾ (ಉಪ ನಾಯಕ), ವಾಷಿಂಗ್ಟನ್ , ರವಿ ಬಿಷ್ಣೋಯ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಮುಕೇಶ್ ಕುಮಾರ್, ದೀಪಕ್ ಚಹರ್.
ಏಕದಿನ ಸರಣಿಗೆ ಭಾರತ ತಂಡ
ಋತುರಾಜ್ ಗಾಯಕ್ವಾಡ್, ಸಾಯಿ ಸುದರ್ಶನ್, ತಿಲಕ್ ವರ್ಮಾ, ರಜತ್ ಪಟಿದಾರ್, ರಿಂಕು ಸಿಂಗ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ನಾಯಕ, ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಲ್, ಮುಕೇಶ್ ಕುಮಾರ್, ಅವೇಶ್ ಖಾನ್, ಅರ್ಷದೀಪ್ ಸಿಂಗ್, ದೀಪಕ್ ಚಹರ್.