WPL 2024 Playoffs: ಫೈನಲ್‌ಗೆ ಡೆಲ್ಲಿ; ಎಲಿಮನೇಟರ್ ಪಂದ್ಯದಲ್ಲಿ ಆರ್‌ಸಿಬಿ vs ಮುಂಬೈ ಇಂಡಿಯನ್ಸ್ ಮುಖಾಮುಖಿ
WPL 2024: ಆರ್‌ಸಿಬಿ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಪ್ರಸಕ್ತ ಡಬ್ಲ್ಯೂಪಿಎಲ್ ಎರಡನೇ ಆವೃತ್ತಿಯ ಎಲಿಮನೇಟರ್ ಪಂದ್ಯದಲ್ಲಿ ಮತ್ತೊಮ್ಮೆ ಮುಖಾಮುಖಿಯಾಗಲಿವೆ. ಡೆಲ್ಲಿ ಕ್ಯಾಪಿಟಲ್ಸ್ ತಂಡವು ಫೈನಲ್ ಪ್ರವೇಶೀಸಿದ್ದು, ಅದಕ್ಕೂ ಮುನ್ನ ಸ್ಮೃತಿ ಮಂಧಾ ಮತ್ತು ಹರ್ಮನ್‌ಪ್ರೀತ್ ಕೌರ್ ಬಳಗವು ಎಲಿಮನೇಟರ್ ಪಂದ್ಯವಾಡಲಿದೆ.
ಗುಜರಾತ್ ಜೈಂಟ್ಟ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ (Delhi Capitals Women vs Gujarat Giants) ತಂಡವು ಗೆಲುವು ಸಾಧಿಸುವುದರೊಂದಿಗೆ, ಡಬ್ಲ್ಯೂಪಿಎಲ್ (Womens Premier League 2024) ಎರಡನೇ ಆವೃತ್ತಿಯ ಪ್ಲೇ ಆಫ್ ಪಂದ್ಯಗಳ ಸ್ಪಷ್ಟ ಚಿತ್ರಣ ಸಿಕ್ಕಿದೆ. ಪಂದ್ಯಾವಳಿಯ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ, ಬೆತ್ ಮೂನಿ ಬಳಗದ ವಿರುದ್ಧ ಮೆಗ್ ಲ್ಯಾನಿಂಗ್ ಪಡೆ 7 ವಿಕೆಟ್ ಗೆಲುವು ಸಾಧಿಸಿದೆ. ಇದರೊಂದಿಗೆ, ಡೆಲ್ಲಿ ಕ್ಯಾಪಿಟಲ್ಸ್ ತಂಡವು ವಿಮೆನ್ಸ್ ಪ್ರೀಮಿಯರ್ ಲೀಗ್ 2024ರ ಫೈನಲ್‌ಗೆ ಮೊದಲ ತಂಡವಾಗಿ ಲಗ್ಗೆ ಇಟ್ಟಿದೆ. ಸತತ ಎರಡನೇ ಬಾರಿಗೆ ವಿಮೆನ್ಸ್ ಪ್ರೀಮಿಯರ್ ಲೀಗ್ ಫೈನಲ್ ಪ್ರವೇಶಿಸಿರುವ ಡಿಸಿ ತಂಡದ ಎದುರಾಳಿ ಯಾರು ಎಂಬುದು, ಮೊದಲ ಎಲಿಮನೇಟರ್ ಪಂದ್ಯದ ಬಳಿಕ ಸ್ಪಷ್ಟವಾಗಲಿದೆ.
ಅತ್ತ ತಾನಾಡಿದ ಕೊನೆಯ ಪಂದ್ಯದಲ್ಲಿ 7 ವಿಕೆಟ್‌ಗಳ ಅಂತರದಿಂದ ಜಯ ಸಾಧಿಸಿದ ಆರ್‌ಸಿಬಿ ತಂಡವು, ಇದೇ ಮೊದಲ ಬಾರಿ ಡಬ್ಲ್ಯೂಪಿಎಲ್ ಪ್ಲೇ ಆಫ್‌ಗೆ ಪ್ರವೇಶಿಸಿದೆ. ಮೂರನೇ ತಂಡವಾಗಿ ನಾಕೌಟ್ ಹಂತಕ್ಕೆ ಲಗ್ಗೆ ಇಟ್ಟ ಸ್ಮೃತಿ ಮಂಧಾನ ಪಡೆಯು, ಇದೀಗ ಎಲಿಮನೇಟರ್ ಪಂದ್ಯದಲ್ಲಿ ಆಡಲಿದೆ. ಆರ್‌ಸಿಬಿಯ ಎದುರಾಳಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್.
ಡಬ್ಲ್ಯೂಪಿಎಲ್ ನಿಯಮದ ಪ್ರಕಾರ, ಲೀಗ್ ಹಂತದಲ್ಲಿ ಅಗ್ರ ಮೂರು ಸ್ಥಾನ ಪಡೆದ ತಂಡಗಳು ನಾಕೌಟ್ ಹಂತಕ್ಕೆ ಪ್ರವೇಶಿಸುತ್ತವೆ. ಲೀಗ್ ಹಂತದಲ್ಲಿ ಅಗ್ರಸ್ಥಾನ ಪಡೆದ ತಂಡವು ನೇರವಾಗಿ ಫೈನಲ್ ಟಿಕೆಟ್ ಗಳಿಸುತ್ತದೆ. ಅತ್ತ, ಎರಡು ಮತ್ತು ಮೂರನೇ ಸ್ಥಾನದಲ್ಲಿರುವ ತಂಡಗಳು ಎಲಿಮಿನೇಟರ್ ಪಂದ್ಯದಲ್ಲಿ ಮುಖಾಮುಖಿಯಾಗುತ್ತವೆ. ಇದೀಗ ಡೆಲ್ಲಿ ಕ್ಯಾಪಿಟಲ್ಸ್ ಫೈನಲ್ ಪ್ರವೇಶಿಸಿದ್ದು, ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಎಲಿಮಿನೇಟರ್‌ನಲ್ಲಿ ಮತ್ತೊಮ್ಮೆ ಮುಖಾಮುಖಿಯಾಗಲಿವೆ.
ಇದನ್ನೂ ಓದಿ | WPL 2024: ಗುಜರಾತ್ ಮಣಿಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಿಯಾಗಿ ಫೈನಲ್ ಪ್ರವೇಶಿಸಿದ ಡೆಲ್ಲಿ ಕ್ಯಾಪಿಟಲ್ಸ್
ಮಾರ್ಚ್ 15ರಂದು ನಡೆಯಲಿರುವ ಎಲಿಮಿನೇಟರ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯದಲ್ಲಿ ಗೆದ್ದ ತಂಡವು, ಫೈನಲ್ ಪ್ರವೇಶಿಸಲಿದೆ. ಇದೇ ವೇಳೆ ಸೋತ ತಂಡವು ಟೂರ್ನಿಯಿಂದ ನಿರ್ಗಮಿಸಲಿದೆ. ಗೆದ್ದ ತಂಡವು, ಮಾರ್ಚ್ 17ರ ಭಾನುವಾರ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಲಿದೆ. ಈ ಎರಡೂ ಪಂದ್ಯಗಳು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿದೆ.
ನೇರ ಪ್ರಸಾರ ವಿವರ
ಡಬ್ಲ್ಯೂಪಿಎಲ್ ಪಂದ್ಯಾವಳಿಯ ಎಲ್ಲಾ ಪಂದ್ಯಗಳು ಸ್ಪೋರ್ಟ್ಸ್ 18 ಚಾನೆಲ್‌ಗಳಲ್ಲಿ ನೇರಪ್ರಸಾರವಾಗಲಿದೆ. ಇದೇ ವೇಳೆ ಜಿಯೋ ಸಿನಿಮಾ ಅಪ್ಲಿಕೇಶನ್ ಅಥವಾ ವೆಬ್‌ಸೈಟ್‌ನಲ್ಲಿ ಪಂದ್ಯವನ್ನು ಲೈವ್ ಸ್ಟ್ರೀಮ್ ಮಾಡಲಾಗುತ್ತದೆ. ಇಂಗ್ಲೀಷ್ ಹಿಂದಿ ಮಾತ್ರವಲ್ಲದೆ, ಕನ್ನಡ ವೀಕ್ಷಕ ವಿವರಣೆಯೊಂದಿಗೂ ಪಂದ್ಯವನ್ನು ಆಸ್ವಾದಿಸಬಹುದಾಗಿದೆ.
ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಸುಲಭ ಜಯ ಸಾಧಿಸಿತು. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಗುಜರಾತ್ ತಂಡವು, ಕೇವಲ 126 ರನ್ ಗಳಿಸಿತು. ಗುರಿ ಬೆನ್ನಟ್ಟಿದ ಡೆಲ್ಲಿ, ಶಫಾಲಿ ವರ್ಮಾ ಆಕರ್ಷಕ ಅರ್ಧಶತಕದ ನೆರವಿಂದ 13.1 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು ಗುರಿ ತಲುಪಿತು.
ಇದನ್ನೂ ಓದಿ | ಐಪಿಎಲ್ 2024 ಆರಂಭಕ್ಕೂ ಮುನ್ನ ಆರ್‌ಸಿಬಿ ತಂಡದ ಹೆಸರು ಬದಲಾವಣೆ; ರಿಷಬ್ ಶೆಟ್ಟಿ ಕೊಟ್ಟ ಸುಳಿವು ಅರ್ಥ ಆಯ್ತಾ?
ಮಹಿಳಾ ಪ್ರೀಮಿಯರ್ ಲೀಗ್ ಕುರಿತ ಇನ್ನಷ್ಟು ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
(This copy first appeared in Hindustan Times Kannada website. To read more like this please logon to kannada.hindustantimes.com)