WPL 2024: ಎಲಿಮನೇಟರ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ವಿರುದ್ಧ ಟಾಸ್ ಗೆದ್ದ ಆರ್‌ಸಿಬಿ ಬ್ಯಾಟಿಂಗ್ ಆಯ್ಕೆ
WPL 2024: ಡಬ್ಲ್ಯೂಪಿಎಲ್ ಎರಡನೇ ಆವೃತ್ತಿಯ ಎಲಿಮನೇಟರ್ ಪಂದ್ಯದಲ್ಲಿ ಆರ್‌ಸಿಬಿ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ. ನಿರ್ಣಾಯಕ ಪಂದ್ಯದಲ್ಲಿ ಸ್ಮೃತಿ ಮಂಧಾನ ಪಡೆ ಮೊದಲಿಗೆ ಬ್ಯಾಟಿಂಗ್ ನಡೆಸುತ್ತಿದೆ. ಇಂದು ಗೆದ್ದ ತಂಡವು ಫೈನಲ್ ಪ್ರವೇಶಿಸುತ್ತದೆ.
ವಿಮೆನ್ಸ್ ಪ್ರೀಮಿಯರ್ ಲೀಗ್ ಎರಡನೇ ಆವೃತ್ತಿಯ ಎಲಿಮನೇಟರ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ವನಿತೆಯರ ತಂಡವು ಸವಾಲೆಸೆಯುತ್ತಿದೆ. ಇಂದಿನ ಪಂದ್ಯದಲ್ಲಿ ಗೆಲುವು ಕಾಣುವ ತಂಡವು ಫೈನಲ್ ಟಿಕೆಟ್ ಪಡೆಯಲಿದ್ದು, ಸೋತ ತಂಡ ಟೂರ್ನಿಯಿಂದ ನಿರ್ಗಮಿಸಲಿದೆ. ಹೀಗಾಗಿ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಸ್ಫೋಟಕ ಪ್ರದರ್ಶನ ನೀಡಲು ಉಭಯ ತಂಡಗಳು ಸಜ್ಜಾಗಿದೆ. ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ನಿರ್ಣಾಯಕ ಪಂದ್ಯದಲ್ಲಿ ಟಾಸ್ ಗೆದ್ದ ಆರ್‌ಸಿಬಿ ತಂಡವು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಕೊನೆಯ ಪಂದ್ಯದಲ್ಲಿ ಟಾಸ್ ಗೆದ್ದು ಅಚ್ಚರಿಯ ರೀತಿಯಲ್ಲಿ ಚೇಸಿಂಗ್ ಆಯ್ಕೆ ಮಾಡಿದ್ದ ಸ್ಮೃತಿ ಮಂಧಾನ, ಇಂದಿನ ಪಂದ್ಯದಲ್ಲಿ ಮತ್ತೆ ಅಚ್ಚರಿಯೆಂಬಂತೆ ಮೊದಲಿಗೆ ಬ್ಯಾಟಿಂಗ್ ಮಾಡಿಕೊಂಡಿದ್ದಾರೆ. ನಿರ್ಣಾಯಕ ಪಂದ್ಯಕ್ಕಾಗಿ ಆರ್‌ಸಿಬಿ ತಂಡಗಳಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಅತ್ತ ಮುಂಬೈ ತಂಡಕ್ಕೆ ಯಾಸ್ತಿಕಾ ಭಾಟಿಯಾ ಮರಳಿದ್ದಾರೆ.
ಇಂದಿನ ಎಲಿಮನೇಟರ್ ಪಂದ್ಯದಲ್ಲಿ ಗೆದ್ದ ತಂಡವು, ಮಾರ್ಚ್ 17ರ ಭಾನುವಾರ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಲಿದೆ. ಮೆಗ್ ಲ್ಯಾನಿಂಗ್ ಪಡೆಯು ಈಗಾಗಲೇ ಡಬ್ಲ್ಯೂಪಿಎಲ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನಿಯಾಗಿ ಫೈನಲ್‌ಗೆ ಲಗ್ಗೆ ಹಾಕಿದೆ. ಫೈನಲ್ ಪಂದ್ಯವು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿದೆ.
ಇದನ್ನೂ ಓದಿ | ಜೋಪ್ರಾ ಆರ್ಚರ್ ಆರ್‌ಸಿಬಿ ಪರ ಕಣಕ್ಕಿಳಿಯಲ್ಲ; ಇಂಗ್ಲೆಂಡ್ ವೇಗಿ ಬೆಂಗಳೂರಿಗೆ ಬಂದಿರುವುದೇ ಬೇರೆ ಉದ್ದೇಶಕ್ಕೆ!
ನೇರ ಪ್ರಸಾರ ವಿವರ
ಡಬ್ಲ್ಯೂಪಿಎಲ್ ಪಂದ್ಯಾವಳಿಯಲ್ಲಿ ಇಂದು ನಡೆಯುತ್ತಿರುವ ಎಲಿಮನೇಟರ್ ಪಂದ್ಯವು ಸ್ಪೋರ್ಟ್ಸ್ 18 ಚಾನೆಲ್‌ಗಳಲ್ಲಿ ನೇರಪ್ರಸಾರವಾಗುತ್ತಿದೆ. ಅತ್ತ, ಜಿಯೋ ಸಿನಿಮಾ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಪಂದ್ಯವನ್ನು ಲೈವ್ ಸ್ಟ್ರೀಮ್ ಮಾಡಲಾಗುತ್ತದೆ. ಕನ್ನಡ ಕಾಮೆಂಟರಿಯೊಂದಿಗೂ ಪಂದ್ಯವನ್ನು ವೀಕ್ಷಿಸಬಹುದಾಗಿದೆ.
ಮುಂಬೈ ಇಂಡಿಯನ್ಸ್ ಆಡುವ ಬಳಗ
ಹೇಲಿ ಮ್ಯಾಥ್ಯೂಸ್, ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ನಟಾಲಿ ಸೀವರ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ಅಮೆಲಿಯಾ ಕೆರ್, ಪೂಜಾ ವಸ್ತ್ರಾಕರ್, ಎಸ್ ಸಜನಾ, ಅಮಂಜೋತ್ ಕೌರ್, ಹುಮಾರಿಯಾ ಕಾಜಿ, ಶಬ್ನಿಮ್ ಇಸ್ಮಾಯಿಲ್, ಸೈಕಾ ಇಶಾಕ್.
ಆರ್‌ಸಿಬಿ ಆಡುವ ಬಳಗ
ಸ್ಮೃತಿ ಮಂಧಾನ (ನಾಯಕಿ), ಸೋಫಿ ಮೊಲಿನ್ಯೂ, ಎಲ್ಲಿಸ್ ಪೆರ್ರಿ, ಸೋಫಿ ಡಿವೈನ್, ರಿಚಾ ಘೋಷ್ (ವಿಕೆಟ್ ಕೀಪರ್), ಜಾರ್ಜಿಯಾ ವ್ಯಾರ್‌ಹ್ಯಾಮ್, ದಿಶಾ ಕಸತ್, ಶ್ರೇಯಾಂಕಾ ಪಾಟೀಲ್, ಆಶಾ ಸೋಭಾನಾ, ಶ್ರದ್ಧಾ ಪೋಖರ್ಕರ್, ರೇಣುಕಾ ಠಾಕೂರ್ ಸಿಂಗ್.
ಇದನ್ನೂ ಓದಿ | Explainer: ಟಿ20 ವಿಶ್ವಕಪ್‌ನಿಂದ ಹೊಸ ನಿಯಮ; ಪ್ರತಿ ಪಂದ್ಯಕ್ಕೂ ಸ್ಟಾಪ್ ಕ್ಲಾಕ್ ಕಡ್ಡಾಯ, ಏನಿದು ಸ್ಟಾಪ್ ಕ್ಲಾಕ್ ರೂಲ್?
ಮಹಿಳಾ ಪ್ರೀಮಿಯರ್ ಲೀಗ್ ಕುರಿತ ಇನ್ನಷ್ಟು ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
(This News id first appeared in Hindustan Times Kannada website. To read more news please logon to kannada.hindustantimes.com)