Karnataka Exit poll result 2024: ಹಳೆ ಮೈಸೂರು ಭಾಗದಲ್ಲಿ ಸಿದ್ದರಾಮಯ್ಯರ ಬಲ ಹೇಗಿರಲಿದೆ, ಮತಗಟ್ಟೆ ಸಮೀಕ್ಷೆಗಳು ಹೇಳುವುದೇನು?
Old mysuru region ಲೋಕಸಭೆ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಬಲದ ಕಾರಣಕ್ಕೆ ಹಳೆ ಮೈಸೂರು ಭಾಗದಲ್ಲಿ ಎಷ್ಟು ಸ್ಥಾನ ಬರಬಹುದು, ಮತಗಟ್ಟೆ ಸಮೀಕ್ಷೆ ಹೇಗಿದೆ. ಇಲ್ಲಿದೆ ವಿವರ
ಮೈಸೂರು: ಹಳೆ ಮೈಸೂರು ಭಾಗದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪ್ರಭಾವ ಹೆಚ್ಚೇ ಇದೆ. ಸಿದ್ದರಾಮಯ್ಯ ಅವರು ಕಾಂಗ್ರೆಸ್‌ಗೆ ಸೇರಿದ ನಂತರವಬೂ ಹಿಂದಿನ ಚುನಾವಣೆಗಳಲ್ಲಿ ಮೈಸೂರು ಭಾಗದಲ್ಲಿ ಕಾಂಗ್ರೆಸ್ ಗೆದ್ದಿರುವ ಉದಾಹರಣೆ ಇದೆ. ಹಿಂದಿನ ಚುನಾವಣೆಯಲ್ಲಿ ಹಳೆ ಮೈಸೂರು ಭಾಗದಲ್ಲಿಯೂ ಬಿಜೆಪಿ ಹಾಗೂ ಮೋದಿ ಅಲೆಯ ನಡುವೆ ಕಾಂಗ್ರೆಸ್ ಸೋಲು ಅನುಭವಿಸಿತ್ತು. ಈ ಬಾರಿ ಹಳೆ ಕಲ್ಯಾಣ ಕರ್ನಾಟಕದಂತೆಯೇ ಹಳೆ ಮೈಸೂರು ಭಾಗದಲ್ಲೂ ಕಾಂಗ್ರೆಸ್‌ಗೆ ಕೆಲವು ಸ್ಥಾನಗಳು ಬರಬಹುದು ಎನ್ನುವ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಶನಿವಾರ ಪ್ರಕಟವಾಗಿರುವ ಚುನಾವಣೆ ಮತಗಟ್ಟೆ ಸಮೀಕ್ಷೆಗಳೂ ಇದನ್ನೇ ಒತ್ತಿ ಹೇಳಿವೆ. ಹಳೆ ಮೈಸೂರು ಭಾಗದಲ್ಲಿ ಕಾಂಗ್ರೆಸ್‌ಗೆ 3 ರಿಂದ 4 ಸ್ಥಾನಗಳು ಬರಬಹುದು ಎನ್ನುವ ಲೆಕ್ಕಾಚಾರವಿದೆ. ಯಾವ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಬಹುದು ಎನ್ನುವ ಚರ್ಚೆಗಳು ಸಮೀಕ್ಷೆ ನಂತರ ನಡೆದಿದೆ.
- ಸಿದ್ದರಾಮಯ್ಯ ಅವರ ತವರು ಜಿಲ್ಲೆಯಾದ ಮೈಸೂರು- ಕೊಡಗು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬದಲಿಸಿದ ನಂತರ ಕಾಂಗ್ರೆಸ್ ಕೂಡ ಜಾತಿ ಸಮೀಕರಣದೊಂದಿಗೆ ಅಭ್ಯರ್ಥಿ ಕಣಕ್ಕಿಳಿಸಿತು. ಈ ಕಾರಣದಿಂದ ಇಲ್ಲಿ ಸ್ಪರ್ಧೆ ಏರ್ಪಟ್ಟಿದೆ. ಎರಡು ಬಾರಿ ಸೋತ ನಂತರ ಇಲ್ಲಿ ಕಾಂಗ್ರೆಸ್ ಗೆಲ್ಲಬಹುದು ಎನ್ನುವ ವಿಶ್ವಾಸ ಇಟ್ಟುಕೊಳ್ಳಲಾಗಿದೆ. ಬಿಜೆಪಿ ರಾಜವಂಸ್ಥರಿಗೆ ಟಿಕೆಟ್ ನೀಡಿದ್ದರಿಂದ ಅವರು ಕೂಡ ಕೌಟುಂಬಿಕ ವರ್ಚಸ್ಸಿನ ಹಿನ್ನೆಲೆಯಲ್ಲಿ ಮುನ್ನಡೆ ಸಾಧಿಸಿರಬಹುದು ಎನ್ನುವುದಕ್ಕೂ ಸಮೀಕ್ಷೆಗಳು ಹೇಳುತ್ತಿವೆ
- ಚಾಮರಾಜನಗರ ಕ್ಷೇತ್ರ ವ್ಯಾಪ್ತಿಯೂ ಸಿಎಂ ಸಿದ್ದರಾಮಯ್ಯ ಅವರು ಪ್ರತಿನಿಧಿಸುವ ವರುಣಾ ಕ್ಷೇತ್ರ ವ್ಯಾಪ್ತಿಗೆ ಬರುತ್ತದೆ. ಇಲ್ಲಿ ಕಾಂಗ್ರೆಸ್ ಶಾಸಕರೇ ಹೆಚ್ಚಿನ ಸಂಖ್ಯೆಯಲ್ಲಿ ಇರುವ ಜತೆಗೆ ಸಚಿವ ಡಾ.ಮಹದೇವಪ್ಪ ಅವರ ಪುತ್ರ ಸುನೀಲ್ ಗೆ ಅವಕಾಶ ನೀಡಿದ್ದು ಸ್ಪರ್ಧೆಗೆ ಬಲ ನೀಡಿದೆ. ಕಳೆದ ಬಾರಿ ಗೆದ್ದಿದ್ದ ಶ್ರೀನಿವಾಸಪ್ರಸಾದ್ ಅವರಿಗೆ ಟಿಕೆಟ್ ತಪ್ಪಿದ್ದು ಸಹ ಕಾಂಗ್ರೆಸ್‌ಗೆ ಬಲ ತಂದಿರಬಹುದು. ಇದರಿಂದ ಕಾಂಗ್ರೆಸ್ ಹಾಗೂ ಬಿಜೆಪಿ ಸ್ಪರ್ಧೆ ನಡುವೆ ಸಿದ್ದರಾಮಯ್ಯ ಅವರ ಬಲವೇ ಇಲ್ಲಿ ಹೆಚ್ಚಬಹುದು ಎನ್ನುವ ಚರ್ಚೆಗಳು ನಡೆದಿವೆ.
- ಮಂಡ್ಯದಲ್ಲಿ ಈ ಬಾರಿ ಜೆಡಿಎಸ್‌ನಿಂದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರೇ ಕಣಕ್ಕೆ ಇಳಿದರು. ಹಿಂದಿನ ಚುನಾವಣೆಯಲ್ಲಿ ಪುತ್ರ ನಿಖಿಲ್ ಸೋತ ಕಾರಣದಿಂದ ತಾವೇ ಬರಬೇಕಾಯಿತು. ಸುಮಲತಾ ಅಂಬರೀಷ್ ಅಸಹಕಾರ, ಕಾಂಗ್ರೆಸ್ ನ ಬಲದ ನಡುವೆ ಇಲ್ಲಿಯೂ ತುರುಸಿನ ಸ್ಪರ್ಧೆ ಏರ್ಪಟ್ಟಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವಿನ ಸ್ಪರ್ಧೆಯಲ್ಲಿ ಜೆಡಿಎಸ್ ಮುನ್ನಡೆ ಸಾಧಿಸಬಹುದು ಎನ್ನುವ ಲೆಕ್ಕಾಚಾರಗಳ ಸಮೀಕ್ಷೆಯಿಂದ ಬಹಿರಂಗವಾಗಿದೆ.
- ಜೆಡಿಎಸ್ ಭದ್ರಕೋಟೆ ಹಾಸನದಲ್ಲಿ ಈ ಬಾರಿ ಪ್ರಜ್ವಲ್ ರೇವಣ್ಣ ಅವರನ್ನು ಸೋಲಿಸಿಯೇ ತೀರಬೇಕು ಎನ್ನು ಲೆಕ್ಕಾಚಾರಗಳು ನಡೆದವು. ಪೆನ್‌ಡ್ರೈವ್ ವಿವಾದವೂ ಭಾರೀ ಸಂಚಲನ ಉಂಟು ಮಾಡಿತು.ಇದರ ನಡುವೆ ಇಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ಭಾರೀ ಸ್ಪರ್ಧೆಯೇ ನಡೆದಿದೆ. ಇದರ ನಡುವೆ ಪ್ರಜ್ವಲ್ ಗೆಲ್ಲಬಹುದು ಎನ್ನುವ ಭವಿಷ್ಯವನ್ನು ಸಮೀಕ್ಷೆಗಳು ನಡೆದಿವೆ. ಹೀಗಿದ್ದರೂ ಫಲಿತಾಂಶ ಯಾವ ರೀತಿಯಲ್ಲಾದರೂ ಬರಬಹುದು ಎನ್ನುವ ಚರ್ಚೆಗಳು ನಡೆದಿವೆ.
- ತುಮಕೂರು, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಕ್ಷೇತ್ರಗಳಲ್ಲೂ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ನಡುವೆ ಲೋಕಸಭಾ ಕ್ಷೇತ್ರಗಳ ಅಧಿಕಾರ ಬದಲಾಗುತ್ತಲೇ ಬಂದಿದೆ. ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಕೂಡ ಒಮ್ಮೆ ಗೆದ್ದಿದೆ. ಈ ಬಾರಿ ಈ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪ್ರಯತ್ನ ಕೊಂಚ ಸಂಘಟಿತವಾಗಿಯೇ ಇತ್ತು. ಕೋಲಾರದಲ್ಲಿ ಕೈ ಮೇಲಾಟದಲ್ಲಿ ಅಭ್ಯರ್ಥಿ ಬದಲಾಗಿದ್ದು, ಚಿಕ್ಕಬಳ್ಳಾಪುರ, ತುಮಕೂರಿನಲ್ಲಿ ಬಿಜೆಪಿ ಅಭ್ಯರ್ಥಿ ಆಯ್ಕೆ ವಿಚಾರ ಕಾಂಗ್ರೆಸ್‌ಗೆ ಪೂರಕವೂ ಆಗಬಹುದು ಎನ್ನುವ ಚರ್ಚೆಗಳು ಇವೆ. ಶನಿವಾರ ಪ್ರಕಟವಾದ ಕಾಂಗ್ರೆಸ್‌ನ ಸ್ಥಾನಗಳಲ್ಲಿ ಮೂರು ಕ್ಷೇತ್ರದಲ್ಲಿ ಎರಡು ಸ್ಥಾನಗಳಾದರೂ ಬರಬಹುದು ಎನ್ನುವ ಮನ್ಸೂಚನೆಯನ್ನು ಸಮೀಕ್ಷಗಳು ನಡೆದಿವೆ.
ಲೋಕಸಭೆ ಚುನಾವಣೆಯ ಕರ್ನಾಟಕದ ಮತಗಟ್ಟೆ ಸಮೀಕ್ಷೆ ಕುರಿತು ಲೈವ್ ಅಪ್ಡೇಟ್ಸ್ ಅನ್ನು ಹಿಂದೂಸ್ತಾನ್ ಟೈಮ್ಸ್ ಕನ್ನಡದಲ್ಲೂ ಕ್ಷಣ ಕ್ಷಣಕ್ಕೂ ಒದಗಿಸಲಾಗುತ್ತಿದ್ದು, ವಿವರ ಓದಿಗೆ ಇಲ್ಲಿ ಕ್ಲಿಕ್ ಮಾಡಬಹುದು.
(ಗಮನಿಸಿ: ಚುನಾವಣೆ ಫಲಿತಾಂಶ ಎಕ್ಸಿಟ್ ಪೋಲ್ ಸಂಖ್ಯೆಗಳಿಗಿಂತ ಭಿನ್ನವಾಗಿ ಇರಬಹುದು)