ಕನ್ನಡ ಸುದ್ದಿ  /  ಚುನಾವಣೆಗಳು  /  ಮತಗಟ್ಟೆ ಸಮೀಕ್ಷೆಗಳ ಮೇಲೆ ವಿಶ್ವಾಸವಿಲ್ಲ, ಕರ್ನಾಟಕದಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಮತಗಟ್ಟೆ ಸಮೀಕ್ಷೆಗಳ ಮೇಲೆ ವಿಶ್ವಾಸವಿಲ್ಲ, ಕರ್ನಾಟಕದಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

Karnataka Politics ಲೋಕಸಭೆ ಚುನಾವಣೆ ಮತಗಟ್ಟೆ ಸಮೀಕ್ಷೆಯಲ್ಲಿ ಕಾಂಗ್ರೆಸ್‌ ಎರಡಂಕಿ ದಾಟದಿರುವ ಭವಿಷ್ಯ ನುಡಿದಿರುವ ಕುರಿತು ಡಿಸಿಎಂ ಡಿ.ಕೆ.ಶಿವಕುಮಾರ್(‌ DK Shivakumar) ಪ್ರತಿಕ್ರಿಯಿಸಿದ್ದಾರೆ.

ಡಿಸಿಎಂ ಡಿ.ಕೆ.ಶಿವಕುಮಾರ್
ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಲೋಕಸಭೆ ಚುನಾವಣೆಯ ಮತಗಟ್ಟೆ ಸಮೀಕ್ಷೆಗಳು ಕರ್ನಾಟಕದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎಗೆ ಮುನ್ನಡೆ ತೋರಿಸಿವೆ. ಅದರಲ್ಲೂ ಕಾಂಗ್ರೆಸ್‌ ಎರಡಂಕಿ ದಾಟುವುದಿಲ್ಲ ಎನ್ನುವ ಮುನ್ಸೂಚನೆಯನ್ನು ಬಹುತೇಕ ಮತಗಟ್ಟೆ ಸಮೀಕ್ಷೆಗಳು ಹೇಳಿವೆ. ಹಿಂದಿನ ಚುನಾವಣೆಗೆ ಹೋಲಿಸಿದರೆ ಕಾಂಗ್ರೆಸ್‌ ಸ್ಥಿತಿಯಲ್ಲಿ ಸುಧಾರಣೆಯಂತೂ ಆಗಲಿದೆ ಎನ್ನುವ ಭವಿಷ್ಯವವನ್ನು ನುಡಿದಿವೆ. ಆದರೆ ಚುನಾವಣೆ ಮತಗಟ್ಟೆ ಸಮೀಕ್ಷೆಗಳ ಮೇಲೆ ನನಗಂತೂ ಯಾವುದೇ ವಿಶ್ವಾಸವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಚುನಾವಣೋತ್ತರ ಸಮೀಕ್ಷೆ ಮೇಲೆ ವಿಶ್ವಾಸವಿಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನಗಳನ್ನು ಗೆಲ್ಲಲಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.

ಟ್ರೆಂಡಿಂಗ್​ ಸುದ್ದಿ

ಚುನಾವಣೋತ್ತರ ಸಮೀಕ್ಷೆ ನಡೆಸುವವರು ಅಲ್ಪಪ್ರಮಾಣದ ಮಾದರಿಗಳನ್ನು ಸಂಗ್ರಹಿಸಿರುತ್ತಾರೆ. ಆಳವಾದ ಸಮೀಕ್ಷೆ ನಡೆಯುವುದಿಲ್ಲ. ಹೀಗಾಗಿ ಈ ಸಮೀಕ್ಷೆಗಳಿಂದ ನಿಖರ ಮಾಹಿತಿ ಬರುವುದಿಲ್ಲ. ಹೀಗಾಗಿ ನನಗೆ ಎಕ್ಸಿಟ್ ಪೋಲ್ ಮೇಲೆ ವಿಶ್ವಾಸವಿಲ್ಲ ಎಂದಷ್ಟೇ ಹೇಳಿದರು

ರಾಜ್ಯದಲ್ಲಿ ಕಾಂಗ್ರೆಸ್ 3-4 ಸ್ಥಾನ ಪಡೆಯಲಿದೆ ಎಂದು ಎಕ್ಸಿಟ್ ಪೋಲ್ ಮಾಹಿತಿ ತೋರಿಸುತಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಎರಡಂಕಿ ಸ್ಥಾನಗಳನ್ನು ಗೆಲ್ಲಲಿದೆ. ದೇಶದ ಅಧಿಕಾರವನ್ನು ಇಂಡಿಯಾ ಮೈತ್ರಿಕೂಟ ಪಡೆಯಲಿದೆ ಎಂದು ಡಿಕೆಶಿ ವಿಶ್ವಾಸ ವ್ಯಕ್ತಪಡಿಸಿದರು.

ಲೋಕಸಭೆ ಚುನಾವಣೆಯ ಕರ್ನಾಟಕದ ಮತಗಟ್ಟೆ ಸಮೀಕ್ಷೆ ಕುರಿತು ಲೈವ್ ಅಪ್ಡೇಟ್ಸ್ ಅನ್ನು ಹಿಂದೂಸ್ತಾನ್ ಟೈಮ್ಸ್ ಕನ್ನಡದಲ್ಲೂ ಕ್ಷಣ ಕ್ಷಣಕ್ಕೂ ಒದಗಿಸಲಾಗುತ್ತಿದ್ದು, ವಿವರ ಓದಿಗೆ ಇಲ್ಲಿ ಕ್ಲಿಕ್ ಮಾಡಬಹುದು.

(ಗಮನಿಸಿ: ಚುನಾವಣೆ ಫಲಿತಾಂಶ ಎಕ್ಸಿಟ್‌ ಪೋಲ್ ಸಂಖ್ಯೆಗಳಿಗಿಂತ ಭಿನ್ನವಾಗಿ ಇರಬಹುದು)