Breaking News: ಲೋಕಸಭೆ ಚುನಾವಣೆಗೆ ಕಾಂಗ್ರೆಸ್‌ನ 2ನೇ ಪಟ್ಟಿ ಬಿಡುಗಡೆ, ಕರ್ನಾಟಕದವರ ಹೆಸರಿಲ್ಲ
ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ ಎರಡನೇ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ದೆಹಲಿ: ಮುಂಬರುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. ಇದರಲ್ಲಿ ಗುಜರಾತ್, ರಾಜಸ್ಥಾನ,ಮಧ್ಯಪ್ರದೇಶ, ಉತ್ತರಾಖಂಡ, ಅಸ್ಸಾಂ ಸೇರಿ ಹಲವು ರಾಜ್ಯಗಳ 43 ಅಭ್ಯರ್ಥಿಗಳ ಹೆಸರಿದೆ. ಆದರೆ ಕರ್ನಾಟಕದ ಯಾವುದೇ ಅಭ್ಯರ್ಥಿಯ ಹೆಸರನ್ನು ಈ ಪಟ್ಟಿಯಲ್ಲಿ ಪ್ರಕಟಿಸಿಲ್ಲ.
ಅಸ್ಸಾಂನಿಂದ ಮಾಜಿ ಸಿಎಂ ತರುಣ್ ಗೋಗೋಯ್ ಪುತ್ರ ಗೌರವ್ ಗೋಗೋಯ್ ಜೊಹ್ರಾತ್ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ. ಮಧ್ಯಪ್ರದೇಶದಲ್ಲಿ ಮಾಜಿ ಸಿಎಂ ಕಮಲನಾಥ್ ಪುತ್ರ ನಕುಲ್ ನಾಥ್ ಗೆ ಬಿಂಡ್ವಾರ ಕ್ಷೇತ್ರದಿಂದಲೇ ಮತ್ತೊಮ್ಮೆ ಟಿಕೆಟ್ ನೀಡಲಾಗಿದೆ. ಅವರು ಬಿಜೆಪಿ ಸೇರುವ ಕುರಿತು ಚರ್ಚೆಗಳಿದ್ದವು. ರಾಜಸ್ಥಾನದಲ್ಲೂ ಮಾಜಿ ಸಿಎಂ ಅಶೋಕ್ ಗೆಹ್ಲೋಟ್ ಪುತ್ರ ವೈಭವ್ ಗೆಹ್ಲೋಟ್‌ಗೆ ಟಿಕೆಟ್ ನೀಡಲಾಗಿದೆ.
ದೆಹಲಿಯಲ್ಲಿ ಕಾಂಗ್ರೆಸ್ ನಾಯಕ ಕೆ.ಸಿ.ವೇಣುಗೋಪಾಲ್. ಅಜಯ್ ಮಕೇನ್ ಅವರು ಪಟ್ಟಿಯನ್ನು ಬಿಡುಗಡೆ ಮಾಡಿದರು.
ಕಳೆದ ವಾರವೇ ಕರ್ನಾಟಕದ ಏಳು ಕ್ಷೇತ್ರ ಸೇರಿದಂತೆ ಒಟ್ಟು 39 ಕ್ಷೇತ್ರಗಳಿಗೆ ಅಭ್ಯರ್ಥಿಯನ್ನು ಘೋಷಿಸಿತ್ತು. ಇದರಲ್ಲಿ ರಾಹುಲ್ ಗಾಂಧಿ ಸೇರಿದಂತೆ ಪ್ರಮುಖ ನಾಯಕರ ಹೆಸರಿದ್ದವು.