Breaking News: ಕಾಂಗ್ರೆಸ್ ಪಟ್ಟಿ ಬಿಡುಗಡೆ, ಕರ್ನಾಟಕದ ಐವರು ಸಚಿವರ ಮಕ್ಕಳಿಗೆ ಟಿಕೆಟ್
ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲಿರುವ ಕಾಂಗ್ರೆಸ್‌ನ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.
ದೆಹಲಿ: ಕಾಂಗ್ರೆಸ್ ಪಕ್ಷವು ಲೋಕಸಭೆ ಚುನಾವಣೆಗೆ ಸ್ಪರ್ಧಿಸಲಿರುವ 17 ಮತ್ತೊಂದು ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಐವರು ಸಚಿವರ ಮಕ್ಕಳು, ಶಾಸಕರು, ಮುಖಂಡರ ಕುಟುಂಬದವರಿಗೆ ಮಣೆ ಹಾಕಲಾಗಿದೆ. ಈಗಾಗಲೇ ಏಳು ಸ್ಥಾನಕ್ಕೆ ಅಭ್ಯರ್ಥಿಗಳನ್ನು ಪ್ರಕಟಿಸಲಾಗಿತ್ತು. ಇನ್ನು ನಾಲ್ಕು ಕ್ಷೇತ್ರಗಳಿಗೆ ಬಾಕಿ ಉಳಿಸಲಾಗಿದೆ.
ಸಚಿವರಾದ ರಾಮಲಿಂಗಾರೆಡ್ಡಿ ಅವರ ಪುತ್ರಿ, ಮಾಜಿ ಶಾಸಕ ಸೌಮ್ಯ ರೆಡ್ಡಿ ಬೆಂಗಳೂರು ದಕ್ಷಿಣ, ಸಕ್ಕರೆ-ಜವಳಿ- ಎಪಿಎಂಸಿ ಸಚಿವ ಶಿವಾನಂದ ಪಾಟೀಲರ ಪುತ್ರಿ ಸಂಯುಕ್ತ ಪಾಟೀಲ್ ಬಾಗಲಕೋಟೆ ಕ್ಷೇತ್ರ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಚಿಕ್ಕೋಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಪುತ್ರ ಮೃಣಾಲ್ ಹೆಬ್ಬಾಳಕರ್ ಬೆಳಗಾವಿ ಹಾಗೂ ಅರಣ್ಯ, ಜೀವಿಶಾಸ್ತ್ರ, ಪರಿಸರ ಸಚಿವ ಈಶ್ವರ ಖಂಡ್ರೆ ಅವರ ಪುತ್ರ ಸಾಗರ್ ಖಂಡ್ರೆಗೆ ಬೀದರ್ ಕ್ಷೇತ್ರದ ಟಿಕೆಟ್ ನೀಡಲಾಗಿದೆ.
ದಾವಣಗೆರೆಯಲ್ಲಿ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಪತ್ನಿ ಪ್ರಭಾ, ಕೊಪ್ಪಳದಲ್ಲಿ ಶಾಸಕ ರಾಘವೇಂದ್ರ ಹಿಟ್ನಾಳ್ ಸಹೋದರ ರಾಜಶೇಖರ ಹಿಟ್ನಾಳ್,ಕಲಬುರಗಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ಅಳಿಯ ರಾಧಾಕೃಷ್ಣ ದೊಡ್ಡಮನಿ, ಕೆನರಾದಲ್ಲಿ ಹಿರಿಯ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಪತ್ನಿ ಡಾ.ಅಂಜಲಿ ನಿಂಬಾಳ್ಕರ್, ಬೆಂಗಳೂರು ಉತ್ತರದಲ್ಲಿ ಮಾಜಿ ಸಚಿವ ಎಂ.ವಿ.ವೆಂಕಟಪ್ಪ ಅವರ ಪುತ್ರ ರಾಜೀವ್ ಗೌಡ ಅವರಿಗೆ ಅವಕಾಶ ನೀಡಲಾಗಿದೆ.
ಯಾರಿಗೆ ಎಲ್ಲಿಗೆ ಅವಕಾಶ
ಬೆಂಗಳೂರು ದಕ್ಷಿಣ -ಸೌಮ್ಯ ರೆಡ್ಡಿ
ಬೆಂಗಳೂರು ಉತ್ತರ -ಎಂ.ವಿ. ರಾಜೀವ್ ಗೌಡ
ಬೆಂಗಳೂರು ಕೇಂದ್ರ- ಮನ್ಸೂರ್ ಆಲಿ ಖಾನ್
ಚಿಕ್ಕೋಡಿ- ಪ್ರಿಯಾಂಕ ಜಾರಕಿಹೊಳಿ
ಬೆಳಗಾವಿ- ಮೃಣಾಲ್ ಹೆಬ್ಬಾಳಕರ್
ಬಾಗಲಕೋಟೆ- ಸಂಯುಕ್ತ ಶಿವಾನಂದ ಪಾಟೀಲ
ಬೀದರ್- ಸಾಗರ್ ಖಂಡ್ರೆ
ಕಲಬುರಗಿ-ರಾಧಾಕೃಷ್ಣ ದೊಡ್ಡಮನಿ
ರಾಯಚೂರು- ಜಿ. ಕುಮಾರನಾಯಕ್
ದಕ್ಷಿಣ ಕನ್ನಡ- ಪದ್ಮರಾಜ್
ಉಡುಪಿ ಚಿಕ್ಕಮಗಳೂರು- ಜಯಪ್ರಕಾಶ್ ಹೆಗ್ಡೆ
ಕೆನರಾ- ಅಂಜಲಿ ನಿಂಬಾಳ್ಕರ್
ದಾವಣಗೆರೆ- ಪ್ರಭಾ ಮಲ್ಲಿಕಾರ್ಜುನ
ಮೈಸೂರು ಕೊಡಗು- ಎಂ.ಲಕ್ಷ್ಮಣ
ಕೊಪ್ಪಳ- ರಾಜಶೇಖರ ಹಿಟ್ನಾಳ
ಧಾರವಾಡ- ವಿನೋದ್ ಅಸೂಟಿ
ಚಿತ್ರದುರ್ಗ- ಬಿ.ಎನ್.ಚಂದ್ರಪ್ಪ
ಬಾಕಿ ಉಳಿದ ಕ್ಷೇತ್ರಗಳು
ಕೋಲಾರ
ಚಿಕ್ಕಬಳ್ಳಾಪುರ
ಬಳ್ಳಾರಿ
ಚಾಮರಾಜನಗರ