National Film Awards 2024: ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆ; ಕಾಂತಾರ ಚಿತ್ರದ ನಟನೆಗೆ ರಿಷಬ್‌ ಶೆಟ್ಟಿಗೆ ಅತ್ಯುತ್ತಮ ನಟ ಪ್ರಶಸ್ತಿ-70th national film awards 2024 sandalwood actor rishabh shetty wins best actor for kantara mnk ,ಮನರಂಜನೆ ಸುದ್ದಿ
ಕನ್ನಡ ಸುದ್ದಿ  /  ಮನರಂಜನೆ  /  National Film Awards 2024: ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆ; ಕಾಂತಾರ ಚಿತ್ರದ ನಟನೆಗೆ ರಿಷಬ್‌ ಶೆಟ್ಟಿಗೆ ಅತ್ಯುತ್ತಮ ನಟ ಪ್ರಶಸ್ತಿ

National Film Awards 2024: ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆ; ಕಾಂತಾರ ಚಿತ್ರದ ನಟನೆಗೆ ರಿಷಬ್‌ ಶೆಟ್ಟಿಗೆ ಅತ್ಯುತ್ತಮ ನಟ ಪ್ರಶಸ್ತಿ

70th National Film Awards 2024: ಹೊಂಬಾಳೆ ಫಿಲಂಸ್‌ ನಿರ್ಮಾಣ ಮಾಡಿರುವ ಕಾಂತಾರ ಸಿನಿಮಾ ಮುಡಿಗೆ 70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಸಿಕ್ಕಿದೆ. ರಿಷಬ್‌ ಶೆಟ್ಟಿ ಅವರ ನಟನೆಗೆ ಅತ್ಯುತ್ತಮ ನಟ ಪ್ರಶಸ್ತಿ ಮುಡಿಗೇರಿದೆ.

70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಘೋಷಣೆ ಆಗಿದೆ. ಆ ಪೈಕಿ ಕಾಂತಾರ ಸಿನಿಮಾದ ನಟನೆಗಾಗಿ ನಟ, ನಿರ್ದೇಶಕ ರಿಷಬ್‌ ಶೆಟ್ಟಿಗೆ ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿ ಸಿಕ್ಕಿದೆ
70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಘೋಷಣೆ ಆಗಿದೆ. ಆ ಪೈಕಿ ಕಾಂತಾರ ಸಿನಿಮಾದ ನಟನೆಗಾಗಿ ನಟ, ನಿರ್ದೇಶಕ ರಿಷಬ್‌ ಶೆಟ್ಟಿಗೆ ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿ ಸಿಕ್ಕಿದೆ

National Film Awards 2024: 70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಘೋಷಣೆ ಆಗಿದೆ. ಆ ಪೈಕಿ ಕಾಂತಾರ ಸಿನಿಮಾದ ನಟನೆಗಾಗಿ ನಟ, ನಿರ್ದೇಶಕ ರಿಷಬ್‌ ಶೆಟ್ಟಿಗೆ ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿ ಸಿಕ್ಕಿದೆ. ಹೊಂಬಾಳೆ ಫಿಲಂಸ್‌ ಬ್ಯಾನರ್‌ನಲ್ಲಿ ನಿರ್ಮಾಣವಾಗಿದ್ದ ಈ ಸಿನಿಮಾ, ಕೇವಲ 16 ಕೋಟಿ ಬಜೆಟ್‌ನಲ್ಲಿ ನಿರ್ಮಾಣವಾಗಿ, ಬರೋಬ್ಬರಿ 400 ಪ್ಲಸ್‌ ಕೋಟಿ ಗಳಿಕೆ ಕಂಡಿತ್ತು. 2022ರ ಸೆಪ್ಟೆಂಬರ್‌22ರಂದು ಕನ್ನಡದಲ್ಲಿ ಮಾತ್ರ ತೆರೆಕಂಡಿದ್ದ ಈ ಸಿನಿಮಾ, ಅದಾದ ಬಳಿಕ ಬೇರೆ ಭಾಷೆಗಳಿಗೂ ಡಬ್‌ ಆಗಿ ಮೋಡಿ ಮಾಡಿತ್ತು. ಇದೀಗ ಇದೇ ಸಿನಿಮಾಕ್ಕೆ ರಾಷ್ಟ್ರ ಪ್ರಶಸ್ತಿ ಗರಿ ಮುಡಿಗೇರಿದೆ.

2022ರಲ್ಲಿ ಬಿಡುಗಡೆಯಾದ ಸಿನಿಮಾಗಳಿಗೆ ಪ್ರಶಸ್ತಿಗಳನ್ನು ಘೋಷಿಸಲಾಗುತ್ತದೆ. ಅಂದರೆ, 2022ರ ಜನವರಿ 1ರಿಂದ ಡಿಸೆಂಬರ್ 31 ಅವಧಿಯಲ್ಲಿ ಸೆನ್ಸಾರ್ ಆಗಿರುವ ಸಿನಿಮಾಗಳನ್ನು ಈ ಪ್ರಶಸ್ತಿಗೆ ಪರಿಗಣಿಸಲಾಗಿದೆ. ಇದೀಗ ಈ ಪ್ರಶಸ್ತಿ ಪಟ್ಟಿಯ ಪೈಕಿ ಅತ್ಯುತ್ತಮ ನಟ ಪ್ರಶಸ್ತಿಗಾಗಿ ಸೌತ್‌ನ ಇಬ್ಬರು ಸ್ಟಾರ್‌ ನಟರ ಹೆಸರು ಮುನ್ನಲೆಯಲ್ಲಿತ್ತು. ಮಲಯಾಳಂನ ಮಮ್ಮುಟ್ಟಿ ಮತ್ತು ಸ್ಯಾಂಡಲ್‌ವುಡ್‌ ನಟ ರಿಷಬ್ ಶೆಟ್ಟಿ ಇಬ್ಬರಲ್ಲಿ ಒಬ್ಬರಿಗೆ ರಾಷ್ಟ್ರ ಪ್ರಶಸ್ತಿ ಸಿಗುವ ಸಾಧ್ಯತೆ ಇತ್ತು. ಆ ಪೈಕಿ ರಿಷಬ್‌ ಶೆಟ್ಟಿ ಅತ್ಯುತ್ತಮ ನಟರಾಗಿ ಹೊರಹೊಮ್ಮಿದ್ದಾರೆ.

ಕಾಂತಾರ ಚಿತ್ರಕ್ಕೆ ಮತ್ತೊಂದು ಗರಿ..

ರಿಷಬ್‌ ಶೆಟ್ಟಿ ನಿರ್ದೇಶನದ ಜತೆಗೆ ನಟಿಸಿದ್ದ ಕಾಂತಾರ ಚಿತ್ರಕ್ಕೆ ಬರೀ ಅತ್ಯುತ್ತಮ ನಟ ಪ್ರಶಸ್ತಿ ಮಾತ್ರವಲ್ಲದೆ, ಅತ್ಯುತ್ತಮ ಮನರಂಜನಾ ಸಿನಿಮಾ ವಿಭಾಗದಲ್ಲಿಯೂ ಪ್ರಶಸ್ತಿ ಪಡೆದಿದೆ. ಈ ಮೂಲಕ ಈ ಸಲದ ರಾಷ್ಟ್ರ ಪ್ರಶಸ್ತಿ ಪಟ್ಟಿಯಲ್ಲಿ ಕನ್ನಡದ ಸಿನಿಮಾಗಳು ಹೊಸ ದಾಖಲೆ ಬರೆದಿವೆ.

ಫಿಲಂಫೇರ್‌ನಲ್ಲೂ ಕಾಂತಾರ ಕಮಾಲ್‌ ಮಾಡಿತ್ತು..

ಇತ್ತೀಚೆಗೆ ಘೋಷಣೆ ಆಗಿದ್ದ 68ನೇ ಫಿಲಂಫೇರ್‌ ಪ್ರಶಸ್ತಿಯಲ್ಲಿಯೂ ಕಾಂತಾರ ಸಿನಿಮಾ ಒಂದಲ್ಲ ಎರಡಲ್ಲ ಬರೋಬ್ಬರಿ ಆರು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿತ್ತು. ಅತ್ಯುತ್ತಮ ಚಿತ್ರ ವಿಭಾಗದಲ್ಲಿ ಕಾಂತಾರ ಪ್ರಶಸ್ತಿ ಪಡೆದರೆ, ಅತ್ಯುತ್ತಮ ನಟ, ಅತ್ಯುತ್ತಮ ನಟಿ (ವಿಮರ್ಶಕರ ಆಯ್ಕೆ), ಅತ್ಯುತ್ತಮ ಪೋಷಕ ನಟ, ಅತ್ಯುತ್ತಮ ಸಂಗೀತ ನಿರ್ದೇಶನ, ಅತ್ಯುತ್ತಮ ಹಿನ್ನೆಲೆ ಗಾಯನ ವಿಭಾಗದಲ್ಲಿ ಕಾಂತಾರ ಸಿನಿಮಾ ಪ್ರಶಸ್ತಿ ಪಡೆದಿತ್ತು. ಇದೀಗ ಇದೇ ಸಿನಿಮಾ 70ನೇ ರಾಷ್ಟ್ರ ಪ್ರಶಸ್ತಿಯಲ್ಲಿಯೂ ಮೋಡಿ ಮಾಡುತ್ತಿದೆ. ‘ಅಮೆಜಾನ್ ಪ್ರೈಮ್’ ಒಟಿಟಿ ಪ್ಲಾಟ್‌ಫಾರ್ಮ್‌ನಲ್ಲಿ ‘ಕಾಂತಾರ’ ಸಿನಿಮಾ ವೀಕ್ಷಣೆಗೆ ಲಭ್ಯವಿದೆ.

ಕಾಂತಾರ ಸಿನಿಮಾದ ಟ್ರೇಲರ್ ಇಲ್ಲಿದೆ