ಒಡಿಶಾದ ಖ್ಯಾತ ರ‍್ಯಾಪರ್ ಅಭಿನವ್ ಸಿಂಗ್ ಆತ್ಮಹತ್ಯೆ; ಬೆಂಗಳೂರು ಕಾಡುಬೀಸನಹಳ್ಳಿ ಅಪಾರ್ಟ್‌ಮೆಂಟ್‌ನಲ್ಲಿ ಅಸಹಜ ರೀತಿಯಲ್ಲಿ ಶವ ಪತ್ತೆ
ಕನ್ನಡ ಸುದ್ದಿ  /  ಮನರಂಜನೆ  /  ಒಡಿಶಾದ ಖ್ಯಾತ ರ‍್ಯಾಪರ್ ಅಭಿನವ್ ಸಿಂಗ್ ಆತ್ಮಹತ್ಯೆ; ಬೆಂಗಳೂರು ಕಾಡುಬೀಸನಹಳ್ಳಿ ಅಪಾರ್ಟ್‌ಮೆಂಟ್‌ನಲ್ಲಿ ಅಸಹಜ ರೀತಿಯಲ್ಲಿ ಶವ ಪತ್ತೆ

ಒಡಿಶಾದ ಖ್ಯಾತ ರ‍್ಯಾಪರ್ ಅಭಿನವ್ ಸಿಂಗ್ ಆತ್ಮಹತ್ಯೆ; ಬೆಂಗಳೂರು ಕಾಡುಬೀಸನಹಳ್ಳಿ ಅಪಾರ್ಟ್‌ಮೆಂಟ್‌ನಲ್ಲಿ ಅಸಹಜ ರೀತಿಯಲ್ಲಿ ಶವ ಪತ್ತೆ

Abhinav Singh Suicide Case: ಒಡಿಶಾದ ಖ್ಯಾತ ರ‍್ಯಾಪರ್ ಅಭಿನವ್ ಸಿಂಗ್ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಕಾಡುಬೀಸನಹಳ್ಳಿ ಅಪಾರ್ಟ್‌ಮೆಂಟ್‌ನಲ್ಲಿ ಅವರ ಶವ ಅಸಹಜ ರೀತಿಯಲ್ಲಿ ಪತ್ತೆಯಾಗಿದೆ.

ಒಡಿಶಾದ ಖ್ಯಾತ ರ‍್ಯಾಪರ್ ಅಭಿನವ್ ಸಿಂಗ್ ಆತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗಿದೆ.
ಒಡಿಶಾದ ಖ್ಯಾತ ರ‍್ಯಾಪರ್ ಅಭಿನವ್ ಸಿಂಗ್ ಆತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗಿದೆ.

Abhinav Singh Suicide Case: ಒಡಿಯಾ ರ‍್ಯಾಪರ್ ಅಭಿನವ್ ಸಿಂಗ್ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಕಾಡುಬೀಸನಹಳ್ಳಿ ಅಪಾರ್ಟ್‌ಮೆಂಟ್‌ನಲ್ಲಿ ಅವರ ಶವ ಅಸಹಜ ರೀತಿಯಲ್ಲಿ ಪತ್ತೆಯಾಗಿದೆ. ಅಭಿನವ್ ಸಿಂಗ್ ಸಾವಿಗೆ ಆತನ ಪತ್ನಿಯ ಕಿರುಕುಳವೇ ಕಾರಣ ಎಂದು ಅಭಿನವ್ ಸಿಂಗ್ ಕುಟುಂಬ ಆರೋಪಿಸಿದೆ. ಒಡಿಯಾ ರ‍್ಯಾಪರ್ ಅಭಿನವ್ ಸಿಂಗ್, ವೃತ್ತಿಯಲ್ಲಿ ಇಂಜಿನಿಯರ್‌. ಬೆಂಗಳೂರು ಕಾಡುಬೀಸನಹಳ್ಳಿಯಲ್ಲಿ ಅಪಾರ್ಟ್‌ಮೆಂಟ್‌ನಲ್ಲಿ ವಾಸವಿದ್ದರು. ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ರೀತಿಯುಲ್ಲಿ ಅವರ ಶವ ಪತ್ತೆಯಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಸಂಬಂಧ ಮಾರತ್ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿವಿಧ ಆಯಾಮಾಗಳಲ್ಲಿ ಪೊಲೀಸರು ತನಿಖೆ ನಡೆಸಿದ್ದಾರೆ.

ಅಭಿನವ್ ಸಿಂಗ್ ವಿರುದ್ಧ ವರದಕ್ಷಿಣಿ ಕೇಸ್ ದಾಖಲಿಸಿದ್ದ ಪತ್ನಿ

ಅಭಿನವ್ ಸಿಂಗ್ ವಿರುದ್ಧ ಆತನ ಪತ್ನಿ ವರದಕ್ಷಿಣೆ ಕೇಸ್ ದಾಖಲಿಸಿದ್ದು, ಒಡಿಶಾ ಪೊಲೀಸರು ಇದರ ತನಿಖೆ ನಡೆಸಿದ್ದರು ಎಂದು ಹೇಳಲಾಗುತ್ತಿದೆ. ಇದೇ ಕೇಸ್ ಕಾರಣಕ್ಕೆ ಅಭಿನವ್ ಸಿಂಗ್ ತುಂಬಾ ಮನನೊಂದಿದ್ದರು ಎಂದು ಕುಟುಂಬ ಮೂಲಗಳು ಹೇಳುತ್ತಿವೆ. ಅಭಿನವ್ ಸಿಂಗ್ ಮೃತದೇಹವನ್ನು ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಗಿದೆ. ಮಾರತ್ತಹಳ್ಳಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಈ ನಡುವೆ, ಅಭಿನವ್ ಸಿಂಗ್ ಅವರ ತಂದೆ ಬಿಜಯ್ ನಂದ ಸಿಂಗ್ ಪೊಲೀಸ್ ದೂರು ದಾಖಲಿಸಿದ್ದಾರೆ. ತನ್ನ ಮಗ ಅಭಿನವ್ ಸಿಂಗ್ ಸಾವಿಗೆ ಕಾರಣಕರ್ತರು ಎಂದು 8-10 ಜನರ ವಿರುದ್ಧ ಆರೋಪ ಹೊರಿಸಿದ್ದಾರೆ. ಪೊಲೀಸರು ಅಭಿನವ್ ಸಿಂಗ್ ಅವರ ಅಪಾರ್ಟ್‌ಮೆಂಟ್‌ ಶೋಧ ನಡೆಸಿದ್ದು, ಸಾಕ್ಷ್ಯ ಸಂಗ್ರಹಿಸಿದ್ದಾರೆ. ಅಭಿನವ್‌ ಸಿಂಗ್ ಅಸಹಜ ಸಾವಿಗೆ ಕಾರಣ ಏನು ಎಂಬ ಬಗ್ಗೆ ತನಿಖೆ ನಡೆಸಿದ್ದಾರೆ. ಆದರೂ, ಇದುವರೆಗೆ ಅಭಿನವ್ ಸಿಂಗ್ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಆತ್ಮಹತ್ಯೆ ಪರಿಹಾರವಲ್ಲ

ಗಮನಿಸಿ: ಖಿನ್ನತೆ, ಆತ್ಮಹತ್ಯೆಯ ಆಲೋಚನೆಗಳು ಬಾಧಿಸುತ್ತಿದ್ದರೆ ನಿಮ್ಮ ಗೆಳತಿ / ಗೆಳೆಯರೊಂದಿಗೆ, ಹೆತ್ತವರೊಂದಿಗೆ, ಸಂಬಂಧಿಕರು, ಆಪ್ತರೊಂದಿಗೆ ಮುಕ್ತವಾಗಿ ಮಾತನಾಡಿ. ಪೊಲೀಸರ, ಆಪ್ತಸಮಾಲೋಚಕರ, ವೈದ್ಯರ ನೆರವು ಪಡೆಯಿರಿ. ಮಾನಸಿಕ ಆರೋಗ್ಯ ಚೆನ್ನಾಗಿ ಕಾಪಾಡಿಕೊಳ್ಳಿ. ಕರ್ನಾಟಕದಲ್ಲಿ ಆರೋಗ್ಯ ಸಹಾಯವಾಣಿ 104, ವೃದ್ಧರ ಸಹಾಯವಾಣಿ 1090, ಮಕ್ಕಳ ಸಹಾಯವಾಣಿ 1098 ಮತ್ತು ಸ-ಮುದ್ರ ಸಹಾಯವಾಣಿ 98803 96331 ಮೂಲಕ ಟೆಲಿ ಕೌನ್ಸೆಲಿಂಗ್ ನೆರವು ಪಡೆದುಕೊಳ್ಳಿ. ಕೊನೇ ನಿರ್ಧಾರಕ್ಕೆ ಮೊದಲು ನಿಮ್ಮವರ ಬಗ್ಗೆ ಒಂದು ಕ್ಷಣ ಯೋಚಿಸಿ.

Umesh Kumar S

TwittereMail
ಉಮೇಶ್ ಕುಮಾರ್ ಶಿಮ್ಲಡ್ಕ: 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದ ಸುದ್ದಿ ಸಂಪಾದಕ. ಜೀವನದ ಕಲಿಕಾರ್ಥಿ. ದೇಶ, ವಿದೇಶಗಳ ಪ್ರಸಕ್ತ ವಿದ್ಯಮಾನ, ವಾಣಿಜ್ಯ, ವಿಜ್ಞಾನ ತಂತ್ರಜ್ಞಾನ ಕುರಿತು ಕುತೂಹಲಿ. ಹೊಸ ದಿಗಂತ, ಉದಯವಾಣಿ, ವಿಜಯ ಕರ್ನಾಟಕ, ವಿಜಯವಾಣಿ ಪತ್ರಿಕೆಗಳು. ಏಷ್ಯಾನೆಟ್ ಸುವರ್ಣ, ಸಮಯ ಸುದ್ದಿವಾಹಿನಿಗಳ ವಿವಿಧ ವಿಭಾಗಗಳು ಸೇರಿ 20 ವರ್ಷಗಳಿಗೂ ಹೆಚ್ಚಿನ ಅನುಭವ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಿವಾಸಿ.
Whats_app_banner