Prakash Raj: ಪ್ರಶಾಂತ್ ಸಂಬರ್ಗಿ ವಿರುದ್ಧ ದೂರು ದಾಖಲಿಸಿದ ನಟ ಪ್ರಕಾಶ್‌ ರಾಜ್
ಕನ್ನಡ ಸುದ್ದಿ  /  ಮನರಂಜನೆ  /  Prakash Raj: ಪ್ರಶಾಂತ್ ಸಂಬರ್ಗಿ ವಿರುದ್ಧ ದೂರು ದಾಖಲಿಸಿದ ನಟ ಪ್ರಕಾಶ್‌ ರಾಜ್

Prakash Raj: ಪ್ರಶಾಂತ್ ಸಂಬರ್ಗಿ ವಿರುದ್ಧ ದೂರು ದಾಖಲಿಸಿದ ನಟ ಪ್ರಕಾಶ್‌ ರಾಜ್

ನಟ ಪ್ರಕಾಶ್‌ ರಾಜ್‌ ಮೈಸೂರಿನ ಲಕ್ಷ್ಮೀಪುರಂ ಪೊಲೀಸ್ ಠಾಣೆಗೆ ಆಗಮಿಸಿ ದೂರು ದಾಖಲಿಸಿದ್ದಾರೆ. ಎಐ ತಂತ್ರಜ್ಞಾನ ಬಳಸಿಕೊಂಡು ಅಪಪ್ರಚಾರ ಮಾಡುತ್ತಿರುವವರ ಬಗ್ಗೆ ದೂರು ನೀಡಿದ್ದಾರೆ.

ಪ್ರಂಶಾಂತ್ ಸಂಬರ್ಗಿ ವಿರುದ್ಧ ದೂರು ದಾಖಲಿಸಿದ ನಟ ಪ್ರಕಾಶ್‌ ರಾಜ್
ಪ್ರಂಶಾಂತ್ ಸಂಬರ್ಗಿ ವಿರುದ್ಧ ದೂರು ದಾಖಲಿಸಿದ ನಟ ಪ್ರಕಾಶ್‌ ರಾಜ್

ಪ್ರಯಾಗ್ ರಾಜ್ ಮಹಾ ಕುಂಭಮೇಳದಲ್ಲಿ, ನಟ ಪ್ರಕಾಶ್‌ ರಾಜ್‌ ಸ್ನಾನ ಮಾಡುತ್ತಿರುವ ಕೃತಕ ಬುದ್ಧಿಮತ್ತೆ ಆಧರಿಸಿ ಸೃಷ್ಟಿಸಿದ ಚಿತ್ರವೊಂದು ವೈರಲ್ ಆಗಿತ್ತು. ಆದರೆ ಪ್ರಕಾಶ್‌ ರಾಜ್ ಕುಂಭಮೇಳದಲ್ಲಿ ಭಾಗವಹಿಸಿರಲಿಲ್ಲ. ಈಗ ಅದೇ ವಿಚಾರವಾಗಿ ಪ್ರಕಾಶ್‌ ರಾಜ್ ತಮ್ಮ ನಕಲಿ ಚಿತ್ರವನ್ನು ಹರಿಬಿಟ್ಟವರ ಮೇಲೆ ದೂರು ದಾಖಲಿಸಿದ್ದಾರೆ. ಈ ಚಿತ್ರವನ್ನು ಮೊದಲು ಹರಿಬಿಟ್ಟ ಪ್ರಶಾಂತ್ ಸಂಬರ್ಗಿ ವಿರುದ್ಧ ಎಫ್ಐ ಆರ್ ದಾಖಲಿಸಿದ್ದಾರೆ. ಮೈಸೂರಿನ ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಎಫ್ಐ ಆರ್ ದಾಖಲು ಮಾಡಲಾಗಿದೆ.

ಪ್ರಶಾಂತ ಸಂಬರ್ಗಿ ಪ್ರಖ್ಯಾತರೋ ಕುಖ್ಯಾತರೋ ಗೊತ್ತಿಲ್ಲ ನನಗೆ. ಜನರ ನಂಬಿಕೆಗೆ ಅಘಾತ ಉಂಟು ಮಾಡುತ್ತಿದ್ದಾರೆ. ನನ್ನ ವಿರುದ್ಧ ಸಾಕಷ್ಟು ವಿಚಾರದಲ್ಲಿ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಅವರ ಮೇಲೆ ಕೇಸ್ ಹಾಕಿ ಗೆದ್ದಿದ್ದೇನೆ. ಹೀಗಾಗಿ ನಾನು ಪ್ರಶಾಂತ ಸಂಬರ್ಗಿ ವಿರುದ್ಧ ದೂರು ನೀಡಿ ಎಫ್ ಐ ಆರ್ ಮಾಡಿಸಿದ್ದೇನೆ. 15 ದಿನಗಳಲ್ಲಿ ಆ ವ್ಯಕ್ತಿ ಠಾಣೆಗೆ ಬಂದು ಉತ್ತರ ನೀಡಬೇಕು. ಸತ್ಯಾಸತ್ಯತೆ ಎಲ್ಲರಿಗೂ ತಿಳಿಯಬೇಕು ಎಂದು ನಟ ಪ್ರಕಾಶ್‌ ರಾಜ್ ಹೇಳಿದ್ದಾರೆ.

ಎಐ ಆ್ಯಪ್ ಬಳಿಸಿ ಪ್ರಕಾಶ್ ರಾಜ್ ಕುಂಭಮೇಳದಲ್ಲಿ ಸ್ನಾನ ಮಾಡಿದ್ರಾ ಎಂದು ಫೋಟೊ ವೈರಲ್ ಮಾಡುತ್ತಿದ್ದಾರೆ. ಅಂತಹ ಪುಣ್ಯದ ಸ್ನಾನ ನಡೆಯಬೇಕಾದರೆ ಅದರಲ್ಲಿ ರಾಜಕಾರಣ ನಡೆಯುತ್ತಿದೆ. ಮೊದಲಿನಿಂದಲೂ ಪ್ರಕಾಶ್ ರಾಜ್ ಹಿಂದು ವಿರೋಧಿ ಎಂದು ಸುಳ್ಳು ಸುದ್ದಿಯನ್ನು ಹಬ್ಬಿಸಿಕೊಂಡು ಬಂದಿದ್ದಾರೆ. ದೇಶದಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿಸುವುದು ಅಭ್ಯಾಸವಾಗಿ ಬಿಟ್ಟಿದೆ. ಇದನ್ನು ಯಾರೂ ಪ್ರಶ್ನೆ ಮಾಡುತ್ತಿಲ್ಲ. ದ್ವೇಷವನ್ನು ಹರಡಿಸುತ್ತಿದ್ದಾರೆ. ಇವರು ನಿಜವಾದ ಧರ್ಮದವರಲ್ಲ. ಫೇಕ್ ನ್ಯೂಸ್ ಸಮಾಜವನ್ನು ಹಾಳು ಮಾಡುತ್ತಿದೆ ಎಂದಿದ್ದಾರೆ.

ನಟ ಪ್ರಕಾಶ್ ರಾಜ್ ಹೇಳಿಕೆ

ಮೈಸೂರಿನ ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ಬಳಿಕ ನಟ ಪ್ರಕಾಶ್ ರಾಜ್ ಹೇಳಿಕೆ ನೀಡಿದ್ದಾರೆ. ಯುವಕ ಯುವತಿಯರಿಗೆ ಪಾಠ ಆಗಬೇಕು. ಪ್ರಶಾಂತ್ ಸಂಬರ್ಗಿ ಇದೇ ರೀತಿ ಸಾಕಷ್ಟು ಜನರಿಗೆ ತೊಂದರೆ ಕೊಟ್ಟಿದ್ದಾನೆ. ಹಿಂದೆ ನಟಿಯರಿಗೆ ತೊಂದರೆ ಕೊಟ್ಟಿದ್ದಾನೆ. ಈ ಮನುಷ್ಯನಿಗೆ ಒಂದು ಪಾಠ ಕಲಿಸಬೇಕು. ತಪ್ಪು ಪ್ರಚಾರ ಮಾಡುವುದು, ಅನುಮತಿ ಇಲ್ಲದೇ ಯಾರ ಫೋಟೊಗಳನ್ನು ಬಳಸಬಾರದು. ಇದು ಅಕ್ಷಮ್ಯ ಅಪರಾಧ. ನ್ಯಾಯದ ಬಗ್ಗೆ ನಿಜವಾದ ಬಗ್ಗೆ ಗಂಭೀರವಾಗಿ ಯೋಚನೆ ಮಾಡುತ್ತಿದ್ದೇನೆ. ಕುಂಭಮೇಳ ಪುಣ್ಯ ಸ್ನಾನ. ಸ್ನಾನ ಮಾಡುವುದರಲ್ಲಿ ತಪ್ಪೇನಿದೆ. ಅದು ಅವರವರ ನಂಬಿಕೆ.

ನನಗೆ ದೇವರ ಮೇಲೆ ನಂಬಿಕೆ ಇಲ್ಲ. ನನಗೆ ಮನ್ಯುಷ್ಯರ ಮೇಲೆ ನಂಬಿಕೆ. ದೇವರಿಲ್ಲದೆ ಬದುಕಬಹುದು ಆದರೆ ಮನುಷ್ಯರಿಲ್ಲದೆ ಬದುಕಲು ಸಾಧ್ಯವಿಲ್ಲ. ಹಾಗಂತ ಅವರ ನಂಬಿಕೆಯನ್ನು ಪ್ರಶ್ನೆ ಮಾಡೋದಿಲ್ಲ. ಅದನ್ನು ರಾಜಕಾರಣಕ್ಕೆ ಬಳಸಿಕೊಳ್ಳುವುದು ತಪ್ಪು.

ಕಾಂಗ್ರೆಸ್ ಟೀಕೆ ಮಾಡುವ ವಿಚಾರ

ಅವರವರ ಭಾವಕ್ಕೆ ಅವರ ಭಕ್ತಿಗೆ ಹೇಳುತ್ತಾ ಹೋಗಲಿ. ನಾನು ಯಾರ ಬಗ್ಗೆಯೂ ಮಾತನಾಡೋದಿಲ್ಲ‌. ನಾನು ಯಾವ ನಂಬಿಕೆಯ ಬಗ್ಗೆಯೂ ಟೀಕೆ ಮಾಡಲ್ಲ. ನನ್ನ ಹೆಂಡತಿ ಮಗಳು ದೇವಸ್ಥಾನಕ್ಕೆ ಹೋಗಿ ಹೋಮ ಮಾಡುತ್ತಾರೆ. ಆದರೆ ಇಬ್ಬರು ಸಾಮರಸ್ಯದಿಂದ ಇದ್ದೇವೆ. ಮೂಡ ನಂಬಿಕೆಯನ್ನು ಮಾತ್ರ ಪ್ರಶ್ನೆ ಮಾಡುತ್ತೇನೆ. ನಾನು ಕ್ರಿಶ್ಚಿಯನ್‌ಗಿಂತ ದೊಡ್ಡ ಮಾಫಿಯಾ ಇನ್ನೊಂದು ಇಲ್ಲ. ಮುಸ್ಲಿಮರಲ್ಲಿ ದೊಡ್ಡ ಟೆರರಿಸ್ಟ್‌ಗಳು ಇದ್ದಾರೆ ಎಂದು ಹೇಳಿದ್ದೇನೆ. ಅದು ಹೈಲೆಟ್ ಆಗಲಿಲ್ಲ‌. ನಾನು ಯಾವತ್ತಾದರೂ ಧರ್ಮದ ಬಗ್ಗೆ ಮಾತನಾಡಿದ್ದೀನಾ? ಧರ್ಮ ಧರ್ಮದ ಮೇಲೆ ಎತ್ತಿ ಕಟ್ಟುವ ಕೆಲಸ ಮಾಡುತ್ತಿದ್ದಾರೆ. ಇದೇ ಅವರ ಕೆಲಸ. ಸಂಬರ್ಗಿ ಯಾರು ಅಂತಾನೇ ಗೊತ್ತಿಲ್ಲ ಎಂದು ಮೈಸೂರಿನಲ್ಲಿ ನಟ ಪ್ರಕಾಶ್ ರಾಜ್ ಹೇಳಿಕೆ ನೀಡಿದ್ದಾರೆ.

Whats_app_banner