Blink Poster Released: ಸೈನ್ಸ್‌ ಫಿಕ್ಷನ್‌ 'ಬ್ಲಿಂಕ್' ಚಿತ್ರದ ನಾಯಕಿ ಚೈತ್ರಾ ಆಚಾರ್‌ ಹೊಸ ಪೋಸ್ಟರ್‌ ರಿಲೀಸ್‌
ಕನ್ನಡ ಸುದ್ದಿ  /  ಮನರಂಜನೆ  /  Blink Poster Released: ಸೈನ್ಸ್‌ ಫಿಕ್ಷನ್‌ 'ಬ್ಲಿಂಕ್' ಚಿತ್ರದ ನಾಯಕಿ ಚೈತ್ರಾ ಆಚಾರ್‌ ಹೊಸ ಪೋಸ್ಟರ್‌ ರಿಲೀಸ್‌

Blink Poster Released: ಸೈನ್ಸ್‌ ಫಿಕ್ಷನ್‌ 'ಬ್ಲಿಂಕ್' ಚಿತ್ರದ ನಾಯಕಿ ಚೈತ್ರಾ ಆಚಾರ್‌ ಹೊಸ ಪೋಸ್ಟರ್‌ ರಿಲೀಸ್‌

ಮಹಿರಾ, ಆ ದೃಶ್ಯ, ತಲೆದಂಡ ಸಿನಿಮಾಗಳಲ್ಲಿ ನಟಿಸಿರುವ ಚೈತ್ರಾ ಜೆ ಆಚಾರ್ 'ಬ್ಲಿಂಕ್' ಸಿನಿಮಾದ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ 90ರ ದಶಕದ ಸೆಮಿ ಮಾಡ್ರೆನ್ ಹಳ್ಳಿ ಹುಡುಗಿಯಾಗಿ ದೇವಕಿ ಅರಸ್ ಪಾತ್ರ ನಿಭಾಯಿಸಿದ್ದಾರೆ.

ಚೈತ್ರಾ ಜೆ ಆಚಾರ್ 'ಬ್ಲಿಂಕ್' ಪೋಸ್ಟರ್
ಚೈತ್ರಾ ಜೆ ಆಚಾರ್ 'ಬ್ಲಿಂಕ್' ಪೋಸ್ಟರ್

ಕನ್ನಡದಲ್ಲಿ ಬೆರಳೆಣಿಕೆಯಷ್ಟು ಸೈನ್ಸ್‌ ಫಿಕ್ಷನ್‌ ಸಿನಿಮಾಗಳು ತಯಾರಾಗಿವೆ. ಇದೀಗ 'ಬ್ಲಿಂಕ್' ಎಂಬ ಸಿನಿಮಾ ತಯಾರಾಗುತ್ತಿದ್ದು ಚಿತ್ರದ ಟೀಸರ್‌ ಕೂಡಾ ಬಿಡುಗಡೆ ಆಗಿದೆ. ಇತ್ತೀಚೆಗೆ ಚಿತ್ರದ ನಟಿ ಚೈತ್ರಾ ಜೆ ಆಚಾರ ಹುಟ್ಟುಹಬ್ಬದ ಅಂಗವಾಗಿ ಚಿತ್ರತಂಡ ನಾಯಕಿಯ ಹೊಸ ಪೋಸ್ಟರ್‌ ಹಾಗೂ ಒಂದು ಸಣ್ಣ ಟೀಸರ್‌ ರಿಲೀಸ್‌ ಮಾಡುವ ಮೂಲಕ ಬರ್ತ್‌ಡೇ ಶುಭ ಕೋರಿತ್ತು.‌

ಬ್ಲಿಂಕ್‌ ಸಿನಿಮಾ ಈಗಾಗಲೇ ಟೀಸರ್‌ ಮೂಲಕ ಗಮನ ಸೆಳೆದಿದೆ. ಚಿತ್ರವನ್ನು ಶ್ರೀನಿಧಿ ಬೆಂಗಳೂರು ನಿರ್ದೇಶಿಸುತ್ತಿದ್ದಾರೆ. ದೀಕ್ಷಿತ್ ಶೆಟ್ಟಿ ನಾಯಕನಾಗಿ, ಚೈತ್ರಾ ಜೆ ಆಚಾರ್ ಹಾಗೂ ಮಂದಾರ ಬಟ್ಟಲಹಳ್ಳಿ ನಾಯಕಿಯರಾಗಿ ನಟಿಸಿದ್ದಾರೆ.

ಮಹಿರಾ, ಆ ದೃಶ್ಯ, ತಲೆದಂಡ ಸಿನಿಮಾಗಳಲ್ಲಿ ನಟಿಸಿರುವ ಚೈತ್ರಾ ಜೆ ಆಚಾರ್ 'ಬ್ಲಿಂಕ್' ಸಿನಿಮಾದ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ 90ರ ದಶಕದ ಸೆಮಿ ಮಾಡ್ರೆನ್ ಹಳ್ಳಿ ಹುಡುಗಿಯಾಗಿ ದೇವಕಿ ಅರಸ್ ಪಾತ್ರ ನಿಭಾಯಿಸಿದ್ದಾರೆ. ದೇವಕಿ ಅರಸ್, ಈ ಚಿತ್ರದಲ್ಲಿ ತುಂಬಾ ಮಾತನಾಡುವ, ಎಲ್ಲರೊಂದಿಗೆ ಬಹಳ ಬೇಗ ಕನೆಕ್ಟ್ ಆಗುವ ಪಾತ್ರ ಎಂದು ಚಿತ್ರದ ನಿರ್ದೇಶಕ ಶ್ರೀನಿಧಿ ಮಾಹಿತಿ ನೀಡಿದ್ದಾರೆ. ದೇವಕಿ ಅರಸ್ ಪಾತ್ರದ ಸಣ್ಣ ಝಲಕ್ ಜನನಿ ಪಿಚ್ಚರ್ ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆಯಾಗಿದೆ.

ನಟಿಯಾಗಿ ಮಾತ್ರವಲ್ಲದೆ ಗಾಯಕಿಯಾಗಿ ಕೂಡಾ ಗುರುತಿಸಿಕೊಂಡಿರುವ ಚೈತ್ರಾ ಜೆ ಆಚಾರ್, ರಕ್ಷಿತ್ ಶೆಟ್ಟಿ ನಟನೆಯ 'ಸಪ್ತ ಸಾಗರದಾಚೆ ಎಲ್ಲೋ' ಚಿತ್ರದಲ್ಲಿ ಕೂಡಾ ಪ್ರಮುಖ ಪಾತ್ರವೊಂದನ್ನು ನಿಭಾಯಿಸಿದ್ದಾರೆ. 'ಸ್ಟ್ರಾಬೆರಿ' ಸೇರಿದಂತೆ ಹಲವು ಸಿನಿಮಾ ಅವಕಾಶಗಳು ಇವರ ಕೈಯಲ್ಲಿವೆ. 'ಗರುಡ ಗಮನ ವೃಷಭ ವಾಹನ' ಚಿತ್ರದ ಸೋಜುಗಾದ ಸೂಜು ಮಲ್ಲಿಗೆ.. ಹಾಡಿಗೆ ಅತ್ಯುತ್ತಮ ಹಿನ್ನೆಲೆ ಗಾಯಕಿ ಸೈಮಾ ಅವಾರ್ಡ್ ಕೂಡಾ ಪಡೆದುಕೊಂಡಿದ್ದಾರೆ.

'ಬ್ಲಿಂಕ್' ಸೈನ್ಸ್ ಫಿಕ್ಷನ್ ಚಿತ್ರವಾಗಿದ್ದು, ಹೊಸ ಪ್ರತಿಭೆ ಶ್ರೀನಿಧಿ ಬೆಂಗಳೂರು ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಚಿತ್ರದ ಟೀಸರ್ ಬಿಡುಗಡೆಯಾಗಿ ಐದು ಲಕ್ಷಕ್ಕೂ ಅಧಿಕ ವೀಕ್ಷಣೆ ಕಂಡು ಭರವಸೆ ಮೂಡಿಸಿದೆ. ಚಿತ್ರೀಕರಣ ಮುಗಿಸಿ ಕೊನೆಯ ಹಂತದ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ನಿರತವಾಗಿದ್ದು, ಜನನಿ ಪಿಕ್ಚರ್ಸ್ ಬ್ಯಾನರ್ ನಡಿ ರವಿಚಂದ್ರ ಎ.ಜೆ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಚಿತ್ರದಲ್ಲಿ ಆರು ಪ್ರಮುಖ ಪಾತ್ರಗಳು ಟ್ರಾವೆಲ್ ಮಾಡಲಿದ್ದು, ದಿಯಾ ಖ್ಯಾತಿಯ ದೀಕ್ಷಿತ್ ಶೆಟ್ಟಿ, ವಜ್ರದೀರ್ ಜೈನ್, ಚೈತ್ರ ಜೆ ಆಚಾರ್, ಮಂದಾರ ಬಟ್ಟಲಹಳ್ಳಿ, ಗೋಪಾಲ ಕೃಷ್ಣ ದೇಶಪಾಂಡೆ, ಯಶಸ್ವಿನಿ ರಾವ್, ಕಿರಣ್ ನಾಯ್ಕ್, ಸುರೇಶ್ ಅನಗಳ್ಳಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಅವಿನಾಶ್‌ ಶಾಸ್ತ್ರಿ ಛಾಯಾಗ್ರಾಹಣ, ಪ್ರಸನ್ನ ಕುಮಾರ್ ಮ್ಯೂಸಿಕ್, ಸಂಜೀವ್ ಜಗೀರ್ದಾರ್ ಸಂಕಲನ ಚಿತ್ರಕ್ಕಿದೆ. ಸಿನಿಮಾ ಕೆಲಸಗಳು ಕೊನೆಯ ಹಂತದಲ್ಲಿದ್ದು ಸದ್ಯದಲ್ಲೇ ಸಿನಿಮಾ ಬಿಡುಗಡೆಯ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಚಿತ್ರತಂಡ ಹಂಚಿಕೊಳ್ಳಲಿದೆ.

Whats_app_banner