Saif Ali Khan: ಸೈಫ್ ಅಲಿ ಖಾನ್ ಆರೋಗ್ಯದಲ್ಲಿ ಚೇತರಿಕೆ; ಐಸಿಯುನಿಂದ ಸಾಮಾನ್ಯ ವಾರ್ಡ್‌ಗೆ ಶಿಫ್ಟ್ ಆದ ನಟ
ಲೀಲಾವತಿ ಆಸ್ಪತ್ರೆಯ ಸಿಬ್ಬಂದಿ ಸೈಫ್ ಅಲಿ ಖಾನ್ ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದಾರೆ. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಮುಂಬೈನ ಲೀಲಾವತಿ ಆಸ್ಪತ್ರೆಯ ಮುಖ್ಯ ನರಶಸ್ತ್ರಚಿಕಿತ್ಸಕ ಡಾ ನಿತಿನ್ ಡಾಂಗೆ ಕೆಲ ವಿಚಾರಗಳನ್ನು ಹಂಚಿಕೊಂಡಿದ್ದಾರೆ.

ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಬಾಲಿವುಡ್ ನಟ ಸೈಫ್ ಅಲಿ ಖಾನ್ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಪಸರಿಸಿತ್ತು. ಅವರ ಆರೋಗ್ಯದ ಬಗ್ಗೆ ತಿಳಿದುಕೊಳ್ಳಲು ಅಭಿಮಾನಿಗಳು ಕಾಯುತ್ತಿದ್ದರು. ಹಾಗಾಗಿ ಮುಂಬೈನ ಲೀಲಾವತಿ ಆಸ್ಪತ್ರೆಯ ಮುಖ್ಯ ನರಶಸ್ತ್ರಚಿಕಿತ್ಸಕ ಡಾ ನಿತಿನ್ ಡಾಂಗೆ ಕೆಲ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಸೈಫ್ ಅಲಿ ಖಾನ್ ಆರೋಗ್ಯದಲ್ಲಿ ಚೇತರಿ ಇದೆ ಎಂದು ಅವರು ತಿಳಿಸಿದ್ದಾರೆ. ಲೀಲಾವತಿ ಆಸ್ಪತ್ರೆಯ ಸಿಬ್ಬಂದಿ ಸೈಫ್ ಅಲಿ ಖಾನ್ ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದಾರೆ.
ಡಾಕ್ಟರ್ ನೀಡಿದ ಮಾಹಿತಿ ಏನು?
ಡಾಕ್ಟರ್ ನೀಡಿದ ಮಾಹಿತಿ ಪ್ರಕಾರ ಸೈಫ್ ಅಲಿ ಖಾನ್ ಆರೋಗ್ಯದಲ್ಲಿ ಚೇತರಿಕೆ ಇದೆ. ಅವರಗೆ ನಡೆಯಲು ಸಾಧ್ಯವೇ ಎಂದು ಪರೀಕ್ಷಿಸಿದ್ದಾರೆ. ಅವರು ಕೊಂಚ ನಡೆದಿದ್ಧಾರೆ. ಗಾಯಗಳನ್ನು ಪರಿಶೀಲನೆ ಮಾಡಲಾಗಿದೆ. ಎಲ್ಲವನ್ನೂ ಪರಿಶೀಲಿಸಿದ ನಂತರ ಅವರನ್ನು ಐಸಿಯುದಿಂದ ಹೊರಗಡೆ ಕರೆದುಕೊಂಡು ಬರಲಾಗಿದೆ. ಆದರೆ ಅವರಿಗೆ ಇನ್ನೂ ಕೆಲ ದಿನಗಳ ವಿಶ್ರಾಂತಿ ಬೇಕು ಎಂದು ಡಾಕ್ಟರ್ ಸೂಚಿಸಿದ್ದಾರೆ. ಕನಿಷ್ಟ ಒಂದು ವಾರವಾದರೂ ಅವರಿಗೆ ವಿಶ್ರಾಂತಿಯ ಅಗತ್ಯವಿದೆ ಎಂದಿದ್ದಾರೆ. ಐಸಿಯುನಿಂದ ಹೊರಗೆ ಸ್ಥಳಾಂತರಿಸಲು ಸುರಕ್ಷಿತವಾಗಿದ್ದಾರೆ ಎಂದು ತಿಳಿಸಿದ್ದಾರೆ. ಆದರೂ ಮುನ್ನೆಚ್ಚರಿಕೆಯ ಅಗತ್ಯತೆ ಇದೆ ಎಂದಿದ್ದಾರೆ.
ಲೀಲಾವತಿ ಆಸ್ಪತ್ರೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನೀರಜ್ ಉತ್ತಮಿ, “ಸೈಫ್ ಅಲಿ ಖಾನ್ ನಿಜವಾದ ಹೀರೋ, ಅವರು ಚೆನ್ನಾಗಿದ್ದಾರೆ.. ಆರೋಗ್ಯದಲ್ಲಿ ಸುಧಾರಣೆ ಇದೆ. ಅವರನ್ನು ಐಸಿಯುನಿಂದ ಸಾಮಾನ್ಯ ಕೋಣೆಗೆ ಸ್ಥಳಾಂತರಿಸಲಾಗಿದೆ" ಎಂದು ಹೇಳಿದ್ದಾರೆ. ಲೀಲಾವತಿ ಆಸ್ಪತ್ರೆಯ ವೈದ್ಯರೊಬ್ಬರಿಂದ ಪಡೆದ ಮಾಹಿತಿಯ ಪ್ರಕಾರ, ನಟನ ಕುಟುಂಬದೊಂದಿಗೆ ಚರ್ಚಿಸಿದ ನಂತರ ವೈದ್ಯಕೀಯ ತಂಡವು ಸೈಫ್ ಅಲಿ ಖಾನ್‌ರವರನ್ನು ಸಿಯುನಿಂದ ಸಾಮಾನ್ಯ ವಾರ್ಡ್‌ಗೆ ಸ್ಥಳಾಂತರಿಸಲು ನಿರ್ಧರಿಸಿತು ಎಂಬ ಮಾಹಿತಿ ಲಭ್ಯವಾಗಿದೆ.
ಈ ಹಿಂದೆ ಆಗಿದ್ದೇನು?
ಗುರುವಾರ (ಜನವರಿ 16) ಬೆಳಗಿನ ಜಾವ 2:30ರ ಸುಮಾರಿಗೆ ಬಾಂದ್ರಾ 11ನೇ ಮಹಡಿಯ ಫ್ಲಾಟ್‌ನಲ್ಲಿ ಕಳ್ಳನೊಬ್ಬ ನುಗ್ಗಿ ಸೈಫ್ ಅಲಿ ಖಾನ್‌ಗೆ ಚೂರಿ ಇರಿದಿದ್ದಾನೆ. 6 ಕಡೆ ಚೂರಿ ಇರಿತವಾಗಿದೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ನಟನನ್ನು ಮುಂಬೈನ ಲೀಲಾವತಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ನೀಡಲಾಗಿದೆ. ನಟನ ಕೈ, ಕುತ್ತಿಗೆ ಹಾಗೂ ಬೆನ್ನಿನ ಮೂಳೆಗೆ ಪೆಟ್ಟಾಗಿತ್ತು. ಚೂರಿ ಬೆನ್ನುಮೂಳೆಯಲ್ಲಿ 2.5 ಇಂಚಿನಷ್ಟು ಹುದುಗಿತ್ತು. ಆ ನಂತರದಲ್ಲಿ ಚೂರಿಯ ತುಂಡನ್ನು ತೆಗೆದು ಶಸ್ತ್ರ ಚಿಕಿತ್ಸೆ ಮಾಡಲಾಯಿತು. ಗಾಯಕ್ಕೆ ಹತ್ತು ಹೊಲಿಗೆ ಹಾಕಲಾಗಿತ್ತು, ಪ್ಲಾಸ್ಟಿಕ್ ಸರ್ಜರಿಯನ್ನೂ ಸಹ ಮಾಡಲಾಗಿದೆ ಎಂಬ ಮಾಹಿತಿ ಇದೆ.
ಈ ವಿಚಾರ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಅಷ್ಟೊಂದು ದೊಡ್ಡ ಮನೆಯಲ್ಲಿ ಈ ರೀತಿ ಆಗುವುದು ಚಿಕ್ಕ ವಿಚಾರವಂತೂ ಆಗಿರಲಿಲ್ಲ. ಅಲ್ಲಿನ ಭದ್ರತೆ ಬಗ್ಗೆ ಸಾಕಷ್ಟು ಚರ್ಚೆ ಕೂಡ ನಡೆಯಿತು. ಸೈಫ್ ಅಲಿ ಖಾನ್ ಅವರು ತಮ್ಮ ಪತ್ನಿ ಕರೀನಾ ಕಪೂರ್ ಖಾನ್ ಮತ್ತು ಇಬ್ಬರು ಮಕ್ಕಳಾದ ತೈಮೂರ್ ಮತ್ತು ಜೆಹ್ ಅವರೊಂದಿಗೆ ಮುಂಬೈನ ಬಾಂದ್ರಾ ಪಶ್ಚಿಮದಲ್ಲಿರುವ ಸದ್ಗುರು ಶರಣ್ ಅಪಾರ್ಟ್‌ಮೆಂಟ್‌ನಲ್ಲಿ ವಾಸಿಸುತ್ತಿದ್ದರು, ಅಲ್ಲೇ ಈ ಘಟನೆ ಸಂಭವಿಸಿದೆ.
