ಬಾಲಿವುಡ್ ನಟ ಸುಶಾಂತ್‌ ಸಿಂಗ್ ರಜಪೂತ್ ಸಾವು ಕೊಲೆಯಲ್ಲ: ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದ ಸಿಬಿಐ, ಮಾಜಿ ಪ್ರೇಯಸಿ ರಿಯಾ ವಕೀಲರ ಸ್ವಾಗತ
ಕನ್ನಡ ಸುದ್ದಿ  /  ಮನರಂಜನೆ  /  ಬಾಲಿವುಡ್ ನಟ ಸುಶಾಂತ್‌ ಸಿಂಗ್ ರಜಪೂತ್ ಸಾವು ಕೊಲೆಯಲ್ಲ: ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದ ಸಿಬಿಐ, ಮಾಜಿ ಪ್ರೇಯಸಿ ರಿಯಾ ವಕೀಲರ ಸ್ವಾಗತ

ಬಾಲಿವುಡ್ ನಟ ಸುಶಾಂತ್‌ ಸಿಂಗ್ ರಜಪೂತ್ ಸಾವು ಕೊಲೆಯಲ್ಲ: ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದ ಸಿಬಿಐ, ಮಾಜಿ ಪ್ರೇಯಸಿ ರಿಯಾ ವಕೀಲರ ಸ್ವಾಗತ

Sushant Singh Rajput: ಬಾಲಿವುಡ್ ನಟ ಸುಶಾಂತ್‌ ಸಿಂಗ್ ರಜಪೂತ್ ಸಾವು ಕೊಲೆಯಲ್ಲ ಎಂದು ನ್ಯಾಯಾಲಯಕ್ಕೆ ಸಿಬಿಐ ಅಂತಿಮ ವರದಿ ಸಲ್ಲಿಸಿದೆ. ರಿಯಾ ಪರ ವಕೀಲರು ಈ ವರದಿಯನ್ನು ಸ್ವಾಗತಿಸಿದ್ದಾರೆ.

ಬಾಲಿವುಡ್ ನಟ ಸುಶಾಂತ್‌ ಸಿಂಗ್ ರಜಪೂತ್ ಸಾವು ಕೊಲೆಯಲ್ಲ
ಬಾಲಿವುಡ್ ನಟ ಸುಶಾಂತ್‌ ಸಿಂಗ್ ರಜಪೂತ್ ಸಾವು ಕೊಲೆಯಲ್ಲ

ಬಾಲಿವುಡ್‌ ಸುಶಾಂತ್ ಸಿಂಗ್ ರಜಪೂತ್ ಮರಣಕ್ಕೆ ಸಂಬಂಧಿಸಿದ ಅಂತಿಮ ತನಿಖಾ ವರದಿಯನ್ನು ವಿಶೇಷ ನ್ಯಾಯಾಲಯಕ್ಕೆ ಸಿಬಿಐ ಸಲ್ಲಿಸಿದೆ. ಸುಶಾಂತ್‌ ಸಿಂಗ್ ರಜಪೂತ್ ಸಾವು ಕೊಲೆಯಲ್ಲ ಎಂದು ಸಿಬಿಐ ತಿಳಿಸಿದೆ. ಸುಶಾಂತ್ ಸಿಂಗ್ ಅವರ ಮೃತದೇಹ 2020ರ ಜೂನ್ 14ರಂದು ಮುಂಬೈನ ಬಾಂದ್ರಾದಲ್ಲಿರುವ ಅವರ ಅಪಾರ್ಟ್‌ಮೆಂಟ್‌ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ಘಟನೆಯಿಂದಾಗಿ ಅವರ ಅಭಿಮಾನಿಗಳು ಬೇಸರಗೊಂಡಿದ್ದರು. ಇದು ಆತ್ಮಹತ್ಯೆಯೋ ಅಥವಾ ಕೊಲೆಯೊ ಎಂಬ ಶಂಕೆ ವ್ಯಕ್ತವಾಗಿತ್ತು ಹೀಗಾಗಿ ಪೊಲೀಸರು ಕೇಸ್ ದಾಖಲಿಸಿದ್ದರು. ಬಳಿಕ ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲಾಗಿತ್ತು.

ಬಾಲಿವುಡ್ ನಟ ಸುಶಾಂತ್‌ ಸಿಂಗ್ ರಜಪೂತ್ ಸಾವು ಕೊಲೆಯಲ್ಲ

ನಟಿ ರಿಯಾ ಚಕ್ರವರ್ತಿ ಅವರ ವಕೀಲ ಸತೀಶ್ ಮಾನೆಶಿಂಧೆ ಅವರು ಶನಿವಾರ ಕೇಂದ್ರ ತನಿಖಾ ದಳ (ಸಿಬಿಐ) ಸಲ್ಲಿಸಿದ ಮುಕ್ತಾಯ ವರದಿಯನ್ನು ಸ್ವಾಗತಿಸಿದ್ದಾರೆ. ನಟಿ ರಿಯಾ ಚಕ್ರವರ್ತಿ ಸುಶಾಂತ್ ಸಿಂಗ್ ರಜಪೂತ್ ಅವರ ಆತ್ಮಹತ್ಯೆ ಪ್ರಕರಣದಲ್ಲಿ ಹಲವು ಬಾರಿ ಪರೀಕ್ಷೆಗೆ ಒಳಗಾಗಿದ್ದರು. ರಿಯಾ, ಸುಶಾಂತ್ ಅವರ ಪ್ರೇಯಸಿ ಎಂಬ ಕಾರಣಕ್ಕಾಗಿ ಅವರನ್ನು ಹಲವು ಬಾರಿ ಪ್ರಶ್ನಿಸಲಾಗಿತ್ತು. "ಪ್ರಕರಣದ ಪ್ರತಿಯೊಂದು ಅಂಶವನ್ನು ಎಲ್ಲಾ ಕೋನಗಳಿಂದ ಕೂಲಂಕಷವಾಗಿ ತನಿಖೆ ಮಾಡಿ ಪ್ರಕರಣವನ್ನು ಮುಕ್ತಾಯಗೊಳಿಸಿದ್ದಕ್ಕಾಗಿ ನಾವು ಸಿಬಿಐಗೆ ಕೃತಜ್ಞರಾಗಿರುತ್ತೇವೆ" ಎಂದು ಸತೀಶ್ ಮಾನೆಶಿಂಧೆ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ರಜಪೂತ್ ಸಾವಿಗೆ ಸಂಬಂಧಿಸಿದಂತೆ ಫೆಡರಲ್ ತನಿಖಾ ಸಂಸ್ಥೆ ಎರಡು ಪ್ರತ್ಯೇಕ ಮುಕ್ತಾಯ ವರದಿಗಳನ್ನು ಸಲ್ಲಿಸಿದೆ. ಒಂದು ರಜಪೂತ್ ಅವರ ತಂದೆ ಕೆ.ಕೆ. ಸಿಂಗ್ ಅವರು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣದ ಬಗ್ಗೆ ನೀಡಿದ ದೂರು. ಇನ್ನೊಂದು ರಿಯಾ ಚಕ್ರವರ್ತಿ ಸುಶಾಂತ್ ಅವರ ಸಹೋದರಿಯರ ವಿರುದ್ಧ ದಾಖಲಿಸಿದ್ದ ದೂರು. ಇವೆರಡರ ಬಗ್ಗೆಯೂ ವರದಿ ಸಲ್ಲಿಕೆ ಆಗಿದೆ.

ಮುಂದಿನ ನಿರ್ಧಾರ ನ್ಯಾಯಾಲಯದ್ದು

ನಟನ ತಂದೆ ಸಲ್ಲಿಸಿದ ದೂರಿನ ಆಧಾರದ ಮೇಲೆ ತನಿಖೆಯ ಮುಕ್ತಾಯ ವರದಿಯನ್ನು ಬಿಹಾರದ ಪಾಟ್ನಾದ ವಿಶೇಷ ನ್ಯಾಯಾಲಯದ ಮುಂದೆ ಸಲ್ಲಿಸಲಾಯಿತು. ಮಾಜಿ ಪ್ರೇಯಸಿ ರಿಯಾ ಚಕ್ರವರ್ತಿ ಪ್ರಕರಣದ ವರದಿಯನ್ನು ಮುಂಬೈನ ವಿಶೇಷ ನ್ಯಾಯಾಲಯದ ಮುಂದೆ ಸಲ್ಲಿಸಲಾಯಿತು. ವರದಿಯನ್ನು ಸ್ವೀಕರಿಸಬೇಕೆ ಅಥವಾ ಏಜೆನ್ಸಿಯಿಂದ ಪ್ರಕರಣಗಳ ಕುರಿತು ಹೆಚ್ಚಿನ ತನಿಖೆಗೆ ಆದೇಶಿಸಬೇಕೆ ಎಂಬುದನ್ನು ನ್ಯಾಯಾಲಯಗಳು ಈಗ ನಿರ್ಧರಿಸುತ್ತವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುಂಬೈನ ಕೂಪರ್ ಆಸ್ಪತ್ರೆಯಲ್ಲಿ ನಡೆಸಲಾದ ರಜಪೂತ್ ಅವರ ಮರಣೋತ್ತರ ಪರೀಕ್ಷೆಯು, ನಟ ಉಸಿರುಕಟ್ಟುವಿಕೆಯಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿತ್ತು. ಸುಶಾಂತ್ ಸಿಂಗ್ ರಜಪೂತ್ ಸಾವು ಮತ್ತು ರಿಯಾ ಚಕ್ರವರ್ತಿಯ ಭಾಗಿಯಾಗಿರುವ ಆರೋಪದ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ನಾನಾ ರೀತಿಯ ಸುದ್ದಿಗಳು ಹಬ್ಬಿತ್ತು. ಆದರೆ, ಆ ಬಗ್ಗೆ ಪುಷ್ಟಿ ಕೊಡಬಾರದು ಅದೆಲ್ಲವೂ ಅನಗತ್ಯ ಎಂದು ರಿಯಾ ಪರ ವಕೀಲ ಮಾನೆಶಿಂಡೆ ಹೇಳಿದ್ದಾರೆ.

Suma Gaonkar

eMail
Whats_app_banner