ಕನ್ನಡ ಸುದ್ದಿ  /  ಮನರಂಜನೆ  /  Salman Khan: ಮುಂಬೈನ ಸಲ್ಮಾನ್‌ ಖಾನ್‌ ಮನೆ ಮುಂದೆ ಗುಂಡಿನ ದಾಳಿ; ಲಾರೆನ್ಸ್‌ ಬಿಷ್ಣೋಯ್‌ ಗ್ಯಾಂಗ್‌ ಕೈವಾಡ ಶಂಕೆ Video

Salman Khan: ಮುಂಬೈನ ಸಲ್ಮಾನ್‌ ಖಾನ್‌ ಮನೆ ಮುಂದೆ ಗುಂಡಿನ ದಾಳಿ; ಲಾರೆನ್ಸ್‌ ಬಿಷ್ಣೋಯ್‌ ಗ್ಯಾಂಗ್‌ ಕೈವಾಡ ಶಂಕೆ VIDEO

ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ ಮನೆ ಮುಂದೆ ಗುಂಡಿನ ದಾಳಿ ನಡೆಸಲಾಗಿದೆ. ಈ ಹಿನ್ನೆಲೆಯಲ್ಲಿ ನಟನ ಭದ್ರತೆ ಹೆಚ್ಚಿಸಲಾಗಿದ್ದು, ಪೊಲೀಸ್‌ ತಂಡ ತನಿಖೆ ಆರಂಭಿಸಿದೆ.

ಮುಂಬೈನ ಸಲ್ಮಾನ್‌ ಖಾನ್‌ ಮನೆ ಮುಂದೆ ಗುಂಡಿನ ದಾಳಿ; ಲಾರೆನ್ಸ್‌ ಬಿಷ್ಣೋಯ್‌ ಗ್ಯಾಂಗ್‌ ಕೈವಾಡ ಶಂಕೆ
ಮುಂಬೈನ ಸಲ್ಮಾನ್‌ ಖಾನ್‌ ಮನೆ ಮುಂದೆ ಗುಂಡಿನ ದಾಳಿ; ಲಾರೆನ್ಸ್‌ ಬಿಷ್ಣೋಯ್‌ ಗ್ಯಾಂಗ್‌ ಕೈವಾಡ ಶಂಕೆ

Salman Khan: ಬಾಲಿವುಡ್‌ ನಟ ಸಲ್ಮಾನ್ ಖಾನ್ ಮನೆಯ ಬಳಿ ಗುಂಡಿನ ದಾಳಿ ನಡೆದಿದೆ. ಇಂದು (ಏ. 14) ಬೆಳಗ್ಗೆ ಸಲ್ಮಾನ್ ಖಾನ್ ಅವರ ಮುಂಬೈ ನಿವಾಸದ ಹೊರಗೆ ಗುಂಡಿನ ಸದ್ದು ಕೇಳಿಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮುಂಜಾನೆ 5 ಗಂಟೆಗೆ, ಬಾಂದ್ರಾದಲ್ಲಿರುವ ಸಲ್ಮಾನ್‌ ಮನೆಯ ಹೊರಗೆ ಬೈಕ್‌ನಲ್ಲಿ ಬಂದ ಅಪರಿಚಿತ ವ್ಯಕ್ತಿಯೊಬ್ಬ ಗಾಳಿಯಲ್ಲಿ ಹಲವು ಸುತ್ತು ಗುಂಡು ಹಾರಿಸಿ ಸ್ಥಳದಿಂದ ಪರಾರಿಯಾಗಿದ್ದಾನೆ.

ಟ್ರೆಂಡಿಂಗ್​ ಸುದ್ದಿ

ಮುಂಬೈ ಪೊಲೀಸರು ಈ ಬಗ್ಗೆ ತನಿಖೆ ಆರಂಭಿಸಿದ್ದು, ಗುಂಡು ಹಾರಿಸಿದ ವ್ಯಕ್ತಿಯ ಪತ್ತೆಗೆ ಜಾಲ ಬೀಸಿದ್ದಾರೆ. ಈ ಹಿಂದೆಯೂ ನಟ ಸಲ್ಮಾನ್ ಖಾನ್‌ಗೆ ಹಲವು ಬಾರಿ ಕೊಲೆ ಬೆದರಿಕೆ ಕರೆಗಳು ಬದಿದ್ದವು. ಈ ಹಿನ್ನೆಲೆಯಲ್ಲಿ ಅವರ ಭದ್ರತೆಯನ್ನೂ ಹೆಚ್ಚಿಸಲಾಗಿತ್ತು. ಕೆಲವು ತಿಂಗಳ ಹಿಂದೆ, ಅವರ ತಂದೆ ಸಲೀಮ್‌ ಖಾನ್‌ ವಾಕ್ ಮಾಡುವಾಗ ಚೀಟಿಯೊಂದು ಸಿಕ್ಕಿತ್ತು. ಅದರಲ್ಲಿ ಸಲ್ಮಾನ್ ಕೊಲ್ಲಲ್ಪಡುತ್ತಾರೆ ಎಂದು ಹೇಳಲಾಗಿತ್ತು. ಇದಾದ ನಂತರ ಮುಂಬೈ ಪೊಲೀಸರು ಅವರ ಭದ್ರತೆಯನ್ನು ಹೆಚ್ಚಿಸಿದ್ದರು.

ಇದೀಗ ಮನೆ ಮುಂದೆಯೇ ಗುಂಡಿನ ದಾಳಿ ನಡೆದಿದ್ದು ಮತ್ತಷ್ಟು ಆತಂಕ ಸೃಷ್ಟಿಸಿದೆ. ಸುದ್ದಿ ಸಂಸ್ಥೆ ANI ವರದಿ ಪ್ರಕಾರ, ಇಬ್ಬರು ವ್ಯಕ್ತಿಗಳು ಈ ಘಟನೆಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದೆ. ಸದ್ಯ, ಮುಂಬೈ ಪೊಲೀಸರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ವಿಧಿವಿಜ್ಞಾನ ತಂಡವು ಸ್ಥಳದಲ್ಲಿದ್ದು, ತನಿಖೆ ಚುರುಕು ಪಡೆದುಕೊಂಡಿದೆ. ಈ ಗುಂಡಿನ ದಾಳಿ ಏಕೆ ನಡೆದಿದೆ ಎಂದೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಲಾರೆನ್ಸ್ ಬಿಷ್ಣೋಯ್ ಜೈಲಿನಲ್ಲಿದ್ದರೂ ಆತನ ಗ್ಯಾಂಗ್ ಹೊರಗಿದೆ. ಇದು ಆ ಗ್ಯಾಂಗ್‌ನ ಕೈವಾಡ ಇರಬಹುದೇ ಎಂದೂ ಶಂಕಿಸಲಾಗಿದ್ದು, ಸಲ್ಮಾನ್‌ ಖಾನ್‌ ಮತ್ತವರ ಕುಟುಂಬಕ್ಕೆ ಬಿಗಿ ಪೊಲೀಸ್‌ ಭದ್ರತೆ ನೀಡಲಾಗಿದೆ.

IPL_Entry_Point

ವಿಭಾಗ