ಕನ್ನಡ ಸುದ್ದಿ  /  Entertainment  /  Bollywood News Ashwatthama The Saga Continues Movie Sachin Ravi Direction Shahid Kapoor New Film Update Pcp

ಅಶ್ವತ್ಥಾಮ ಸಿನಿಮಾದ ಮೂಲಕ ಬಾಲಿವುಡ್‌ಗೆ ನೆಗೆದ ಶ್ರೀಮನ್ನಾರಾಯಣ ಸೂತ್ರಧಾರ ಸಚಿನ್ ರವಿ; ಶಾಹಿದ್ ಕಪೂರ್‌ ಚಿತ್ರಕ್ಕೆ ಆಕ್ಷನ್‌ ಕಟ್‌

ಸಚಿನ್ ರವಿ ಹಾಗೂ ಶಾಹಿದ್ ಕಪೂರ್ ಸಿನಿಮಾಗೆ ಅಶ್ವತ್ಥಾಮ: ದಿ ಸಾಗಾ ಕಂಟಿನ್ಯೂಸ್ ಎಂಬ ಟೈಟಲ್ ಇಡಲಾಗಿದೆ. ಸಚಿನ್ ರವಿ ಚಿತ್ರದ ಅಶ್ವತ್ಥಾಮನ ಪಾತ್ರಕ್ಕೆ ಶಾಹಿದ್ ಕಪೂರ್ ಹೀರೊ ಆಗುತ್ತಿದ್ದಾರೆ.

ಅಶ್ವತ್ಥಾಮ ಸಿನಿಮಾದ ಮೂಲಕ ಬಾಲಿವುಡ್‌ಗೆ ನೆಗೆದ  ಶ್ರೀಮನ್ನಾರಾಯಣ ಸೂತ್ರಧಾರ ಸಚಿನ್ ರವಿ; ಶಾಹಿದ್ ಕಪೂರ್‌ ಚಿತ್ರಕ್ಕೆ ಆಕ್ಷನ್‌ ಕಟ್‌
ಅಶ್ವತ್ಥಾಮ ಸಿನಿಮಾದ ಮೂಲಕ ಬಾಲಿವುಡ್‌ಗೆ ನೆಗೆದ ಶ್ರೀಮನ್ನಾರಾಯಣ ಸೂತ್ರಧಾರ ಸಚಿನ್ ರವಿ; ಶಾಹಿದ್ ಕಪೂರ್‌ ಚಿತ್ರಕ್ಕೆ ಆಕ್ಷನ್‌ ಕಟ್‌

ಅವನೇ ಶ್ರೀಮನ್ನಾರಾಯಣ ಸೂತ್ರಧಾರ ಸಚಿನ್ ರವಿ, ಬಾಲಿವುಡ್ ಸ್ಟಾರ್ ಶಾಹಿದ್ ಕಪೂರ್‌ಗೆ ಆಕ್ಷನ್ ಕಟ್ ಹೇಳುತ್ತಿರುವುದು ಗೊತ್ತೇ ಇದೆ. ಈ ಕ್ರೇಜಿ ಕಾಂಬಿನೇಷನ್ ಅಶ್ವತ್ಥಾಮನ ಕಥೆ ಹೇಳೋದಿಕ್ಕೆ ಬರುತ್ತಿದ್ದಾರೆ. ಮುಂಬೈನಲ್ಲಿ ಮಂಗಳವಾರ ನಡೆದ ಪ್ರೈಮ್ ವಿಡಿಯೋ ಕಾರ್ಯಕ್ರಮದಲ್ಲಿ ಈ ಬಗ್ಗೆ ಅಧಿಕೃತ ಮಾಹಿತಿ ಹೊರಬಿದ್ದಿದೆ.

ಸಚಿನ್ ರವಿ ಹಾಗೂ ಶಾಹಿದ್ ಕಪೂರ್ ಸಿನಿಮಾಗೆ ಅಶ್ವತ್ಥಾಮ: ದಿ ಸಾಗಾ ಕಂಟಿನ್ಯೂಸ್ ಎಂಬ ಟೈಟಲ್ ಇಡಲಾಗಿದೆ. ಸಚಿನ್ ರವಿ ಚಿತ್ರದ ಅಶ್ವತ್ಥಾಮನ ಪಾತ್ರಕ್ಕೆ ಶಾಹಿದ್ ಕಪೂರ್ ಹೀರೊ ಆಗುತ್ತಿದ್ದಾರೆ. ಅಶ್ವತ್ಥಾಮನಾಗಿಯೇ ಶಾಹಿದ್ ಕಪೂರ್ ಇಲ್ಲಿ ಅಬ್ಬರಿಸಲಿದ್ದಾರೆ. ಅಶ್ವತ್ಥಾಮ ಒಬ್ಬ ಗ್ರೇಟ್ ವಾರಿಯರ್ ಅನ್ನೋದು ಗೊತ್ತೇ ಇದೆ. ಆದರೆ ಏಳು ಚಿರಂಜೀವಿಗಳಲ್ಲಿ ಒಬ್ಬ ಅನ್ನೋದು ಕೂಡ ನಂಬಿಕೆ. ಅಶ್ವತ್ಥಾಮನಿಗೆ ಸಾವೇ ಇಲ್ಲ ಅನ್ನೋದು ಚಿರಂಜೀವಿಯ ಅರ್ಥ ಅಂತೇ ಹೇಳಬಹುದು.

' ಅಶ್ವತ್ಥಾಮ ಒಬ್ಬ ಗ್ರೇಟ್ ವಾರಿಯರ್ಕಥೆಯಲ್ಲಿ ಅಶ್ವತ್ಥಾಮ ವರ್ತಮಾನದಲ್ಲಿರುವ ನಾಯಕ. ಈತನಿಗೆ ಅಮರತ್ವದ ಪರಿಕಲ್ಪನೆಯನ್ನು ಶೋಧಿಸುವ ಕೆಲಸ ಇರುತ್ತದೆ. ಈ ಸಿನಿಮಾದ ಕುರಿತು ಸದ್ಯ ಇಷ್ಟೇ ಹೇಳಬಲ್ಲೆ. ಎಲ್ಲಾ ತಲೆಮಾರಿನವರನ್ನು ಸೆಳೆಯುವ ಸಾಹಸಮಯ ಚಿತ್ರವಾಗಲಿದೆ. ಪುರಾಣದ ಅಶ್ವತ್ಥಾಮನಂತೆ ಅಮರತ್ವ ಹೊಂದಿರುವ ವ್ಯಕ್ತಿಗಳನ್ನು ಕೂಡ ಈ ಸಿನಿಮಾದಲ್ಲಿತರುವ ಪ್ರಯತ್ನವೂ ಇರಲಿದೆ" ಎಂದು ಸಚಿನ್‌ ರವಿ ಮಾಹಿತಿ ನೀಡಿದ್ದಾರೆ.

"ಈ ಕಾಲ್ಪನಿಕ ಕಥೆ ಮತ್ತು ಹೊಸ ಸಾಧ್ಯತೆಗಳ ಕುರಿತು ಆಲೋಚಿಸಿ ಕಥೆ ರಚಿಸುವುದು ಡೈರೆಕ್ಟರ್‌ಗೆ ಸವಾಲಿನ ಕೆಲಸ. ಚಿಕ್ಕದಿನಿಂದಲೂ ನನ್ನ ಮೇಲೆ ಅಶ್ವತ್ಥಾಮನ ಪಾತ್ರ ಪ್ರಭಾವ ಬೀರಿದೆ. ಈ ಪಾತ್ರದ ಬಗ್ಗೆಯೇ ಚಿತ್ರ ಮಾಡುವ ಯೋಜನೆ ಹಾಕಿಕೊಂಡಿದೆ. ಅಂತಿಮವಾಗಿ ನನ್ನ ಕಲ್ಪನೆಯ ಚಿತ್ರ ಸೆಟ್ಟೇರುತ್ತಿದೆ ಎಂಬ ಸಂಭ್ರಮ ನನ್ನದಾಗುತ್ತಿದೆ.. ಈ ಚಿತ್ರದ ಹಲವು ಕುತೂಹಲಕರ ಅಂಶಗಳ ಕುರಿತು ಶಾಹೀದ್ ಕಪೂರ್ ಜತೆ ಬಹಳಷ್ಟು ಹೊತ್ತು ಕಳೆದಿದ್ದೇನೆ' ಎಂದು ಅವರು ಹೇಳಿದ್ದಾರೆ.

ಅಶ್ವತ್ಥಾಮ ಚಿತ್ರವನ್ನು ಪೂಜಾ ಎಂಟರ್ನೈನ್ಮಂಟ್ ಕಂಪನಿ ನಿರ್ಮಾಣ ಮಾಡುತ್ತಿದೆ. ವಿಷ್ಣು ಭಗ್ನಾನಿ, ಜಾಕಿ ಭಗ್ನಾನಿ ಹಾಗೂ ದೀಪ್ತಿಕಾ ದೇಶಮುಖ್ ನಿರ್ಮಾಣ ಮಾಡುತ್ತಿದ್ದಾರೆ. ರಕ್ಷಿತ್ ಶೆಟ್ಟಿ ತಂಡದಲ್ಲಿ ಸಚಿನ್ ಬಿ ರವಿ ಗುರುತಿಸಿಕೊಂಡಿದ್ದಾರೆ. ಸಂಕಲನಕಾರಾಗಿ, ಗ್ರಾಫಿಕ್ಸ್ ಪರಿಣಿತರಾಗಿ ಕೆಲಸ ನಿಭಾಯಿಸಿದ್ದಾರೆ. 'ಅವನೇ ಶ್ರೀಮನ್ನಾರಾಯಣ' ಚಿತ್ರಕ್ಕಾಗಿ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದರು. ಇದೀಗ ಈ ಸಿನಿಮಾದ ಮೂಲಕ ಬಾಲಿವುಡ್‌ ಕಡೆ ಮುಖ ಮಾಡಿದ್ದಾರೆ. 'ಫ್ಯಾಂಟಸಿ ಅಡ್ವೆಂಚರಸ್' ಡ್ರಾಮಾ 'ಅವನೇ ಶ್ರೀಮನ್ನಾರಾಯಣ' ಸಿನಿಮಾ ನಿರ್ದೇಶಕರ ಪ್ರತಿಭೆಗೆ ಹಿಡಿದ ಕನ್ನಡಿ. ಈಗ ಸಚಿನ್ ಅಶ್ವತ್ಥಾಮನ‌ ಮೂಲಕ ಪೌರಾಣಿಕ ಕಥೆ ಹರವಿಡಲಿದ್ದಾರೆ.

IPL_Entry_Point