ಕ್ಯಾನ್ಸರ್‌ ಚಿಕಿತ್ಸೆ ಪಡೆದು ಮರಳಿದ ನಟ ಶಿವರಾಜ್ ಕುಮಾರ್ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ, ಆರೋಗ್ಯ ವಿಚಾರಣೆ
ಕನ್ನಡ ಸುದ್ದಿ  /  ಮನರಂಜನೆ  /  ಕ್ಯಾನ್ಸರ್‌ ಚಿಕಿತ್ಸೆ ಪಡೆದು ಮರಳಿದ ನಟ ಶಿವರಾಜ್ ಕುಮಾರ್ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ, ಆರೋಗ್ಯ ವಿಚಾರಣೆ

ಕ್ಯಾನ್ಸರ್‌ ಚಿಕಿತ್ಸೆ ಪಡೆದು ಮರಳಿದ ನಟ ಶಿವರಾಜ್ ಕುಮಾರ್ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ, ಆರೋಗ್ಯ ವಿಚಾರಣೆ

ಜನವರಿ 26ರ ಭಾನುವಾರ ಮಿಯಾಮಿಯಿಂದ ಕ್ಯಾನ್ಸರ್‌ ಚಿಕಿತ್ಸೆ ಬಳಿಕ ಬೆಂಗಳೂರಿಗೆ ಮರಳಿದ್ದಾರೆ ನಟ ಶಿವರಾಜ್‌ಕುಮಾರ್.‌ ಈ ಬೆನ್ನಲ್ಲೇ, ಸಿಎಂ ಸಿದ್ಧರಾಮಯ್ಯ ನೇರವಾಗಿ ಶಿವಣ್ಣನ ಮನೆಗೆ ತೆರಳಿ ಆರೋಗ್ಯ ವಿಚಾರಿಸಿದ್ದಾರೆ.

ಶಿವರಾಜ್ ಕುಮಾರ್ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ, ಆರೋಗ್ಯ ವಿಚಾರಣೆ
ಶಿವರಾಜ್ ಕುಮಾರ್ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ, ಆರೋಗ್ಯ ವಿಚಾರಣೆ

Shiva Rajkumar: ಕ್ಯಾನ್ಸರ್‌ ಚಿಕಿತ್ಸೆಗೆಂದು ಅಮೆರಿಕಾದ ಮಿಯಾಮಿಗೆ ತೆರಳಿದ್ದ ಸ್ಯಾಂಡಲ್‌ವುಡ್‌ ನಟ ಶಿವರಾಜ್‌ಕುಮಾರ್‌, ಜನವರಿ 26ರ ಗಣರಾಜ್ಯೋತ್ಸವದ ದಿನದಂದೇ ಬೆಂಗಳೂರಿಗೆ ಮರಳಿದ್ದಾರೆ. ಏರ್‌ಪೋರ್ಟ್‌ನಲ್ಲಿಯೇ ಅವರ ಅಭಿಮಾನಿ ಬಳಗದಿಂದ ಅದ್ಧೂರಿ ಸ್ವಾಗತ ಪಡೆದಿದ್ದ ಶಿವಣ್ಣ ಸದ್ಯ ಒಂದಷ್ಟು ದಿನಗಳ ಕಾಲ ವಿಶ್ರಾಂತಿಯಲ್ಲಿ ಇರಲಿದ್ದಾರೆ. ಮುಂದಿನ ಒಂದು ತಿಂಗಳ ಬಳಿಕ ಮತ್ತೆ ಹಳೇ ಲಯಕ್ಕೆ ಮರಲುವುದಾಗಿ ಹೇಳಿದ್ದಾರೆ. ಇದೀಗ ಸಿಎಂ ಸಿದ್ದರಾಮಯ್ಯ, ಶಿವಣ್ಣ ಅವರ ಮನೆಗೆ ತೆರಳಿ ಆರೋಗ್ಯ ವಿಚಾರಿಸಿದ್ದಾರೆ.

ಬೆಂಗಳೂರಿನ ನಾಗವಾರದಲ್ಲಿರುವ ಶಿವರಾಜ್ ಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿ, ಒಂದಷ್ಟು ಹೊತ್ತು ಮಾತುಕತೆ ನಡೆಸಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿ, ಶಿವರಾಜ್ ಕುಮಾರ್ ಅವರ ಶಸ್ತ್ರಚಿಕಿತ್ಸೆಯ ನಂತರ ಹಿಂತಿರುಗಿ ಬಂದ ನಂತರ ಅವರ ಆರೋಗ್ಯವನ್ನು ವಿಚಾರಿಸಲು ಇಂದು ಭೇಟಿ ಮಾಡಿದ್ದೇನೆ. ಅವರ ಶಸ್ತ್ರ ಚಿಕಿತ್ಸೆಯ ಮರುದಿನವೇ ಅವರಿಗೆ ಕರೆಮಾಡಿ ಆರೋಗ್ಯ ವಿಚಾರಿಸಿದಾಗ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ತೊಂದರೆ ಇಲ್ಲ ಎಂದು ತಿಳಿಸಿದ್ದರು. ಮುಂದಿನ ತಿಂಗಳಿನಿಂದ ಚಿತ್ರೀಕರಣಕ್ಕೆ ತೆರಳುವುದಾಗಿ ತಿಳಿಸಿದ್ದಾರೆ ಎಂದು ಸಿಎಂ ತಿಳಿಸಿದ್ದಾರೆ.

ಶಿವಣ್ಣನ ಮನೆಗೆ ಸಿನಿಮಾ ಆಪ್ತರ ಭೇಟಿ

ಇನ್ನು ಶಿವಣ್ಣ ಮನೆಗೆ ಮರಳಿದ ವಿಚಾರ ತಿಳಿದ ಚಿತ್ರರಂಗ, ರಾಜಕೀಯ ಮತ್ತು ಕುಟುಂಬಸ್ಥರು ನಾಗವಾರದ ಮನೆಗೆ ಆಗಮಿಸಿ ಅವರ ಆರೋಗ್ಯ ವಿಚಾರಿಸಿದ್ದಾರೆ. ನಟ ಧನಂಜಯ್‌ ಸಹ ಶಿವಣ್ಣನ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.

ಮೂತ್ರಕೋಶದ ಕ್ಯಾನ್ಸರ್‌ಗೆ ಚಿಕಿತ್ಸೆ

ಮೂತ್ರಕೋಶದ ಕ್ಯಾನ್ಸರ್‌ ಟ್ರೀಟ್‌ಮೆಂಟ್‌ಗೆ ಕಳೆದ ತಿಂಗಳು ಅಮೆರಿಕಾಕ್ಕೆ ಹೋಗಿದ್ದ ಶಿವಣ್ಣ, ಈ ವರ್ಷದ ಮೊದಲ ದಿನವೇ ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದರು. ನಾನೀಗ ಕ್ಯಾನ್ಸರ್‌ ಫ್ರೀ. ಎಲ್ಲ ವರದಿಗಳೂ ನೆಗೆಟಿವ್‌ ಬಂದಿವೆ. ಒಂದು ತಿಂಗಳ ಕಾಲ ರೆಸ್ಟ್‌ ಮಾಡಿ, ಮಾರ್ಚ್‌ ವೇಳೆಗೆ ಮತ್ತೆ ನಿಮ್ಮ ಎನರ್ಜಿಟಿಕ್‌ ಶಿವಣ್ಣ ಕಾಣಿಸಿಕೊಳ್ಳಲಿದ್ದಾರೆ ಎಂದಿದ್ದರು. ಈಗ ಅಂದುಕೊಂಡಂತೆ, ಯಶಸ್ವಿ ಚಿಕಿತ್ಸೆ ಬಳಿಕ ತಾಯ್ನಾಡಿಗೆ ಮರಳಿದ್ದಾರೆ.

Whats_app_banner