ಚಿನ್ನ ಅಕ್ರಮ ಸಾಗಣೆ ಪ್ರಕರಣ: ರನ್ಯಾ ರಾವ್‌ಗೆ ಸಹಕರಿಸಿದ ಬಳ್ಳಾರಿಯ ಚಿನ್ನದ ವ್ಯಾಪಾರಿ ಬಂಧನ, ಮಾಣಿಕ್ಯ ನಟಿಗೆ ಇಂದು ಜಾಮೀನು ದೊರಕುವುದೇ?
ಕನ್ನಡ ಸುದ್ದಿ  /  ಮನರಂಜನೆ  /  ಚಿನ್ನ ಅಕ್ರಮ ಸಾಗಣೆ ಪ್ರಕರಣ: ರನ್ಯಾ ರಾವ್‌ಗೆ ಸಹಕರಿಸಿದ ಬಳ್ಳಾರಿಯ ಚಿನ್ನದ ವ್ಯಾಪಾರಿ ಬಂಧನ, ಮಾಣಿಕ್ಯ ನಟಿಗೆ ಇಂದು ಜಾಮೀನು ದೊರಕುವುದೇ?

ಚಿನ್ನ ಅಕ್ರಮ ಸಾಗಣೆ ಪ್ರಕರಣ: ರನ್ಯಾ ರಾವ್‌ಗೆ ಸಹಕರಿಸಿದ ಬಳ್ಳಾರಿಯ ಚಿನ್ನದ ವ್ಯಾಪಾರಿ ಬಂಧನ, ಮಾಣಿಕ್ಯ ನಟಿಗೆ ಇಂದು ಜಾಮೀನು ದೊರಕುವುದೇ?

Ranya Rao: ದುಬೈನಿಂದ ಬೆಂಗಳೂರಿಗೆ ಅಕ್ರಮವಾಗಿ ಚಿನ್ನದ ಅಕ್ರಮ ಸಾಗಣೆ ಮಾಡುತ್ತಿದ್ದ ನಟಿ ರನ್ಯಾ ರಾವ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಳ್ಳಾರಿ ಮೂಲದ ಉದ್ಯಮಿಯೊಬ್ಬರನ್ನು ಕಂದಾಯ ಗುಪ್ತಚರ ಜಾರಿ ನಿರ್ದೇಶನಾಲಯ (ಡಿಆರ್‌ಐ) ತನ್ನ ವಶಕ್ಕೆ ತೆಗೆದುಕೊಂಡಿದೆ.


ರನ್ಯಾ ರಾವ್‌ಗೆ ಚಿನ್ನದ ಅಕ್ರಮ ಸಾಗಣೆಗೆ ಸಹಕರಿಸಿದ ಬಳ್ಳಾರಿ ಚಿನ್ನದ ವ್ಯಾಪಾರಿ ಬಂಧನ, ಮಾಣಿಕ್ಯ ನಟಿಗೆ ಇಂದು ಜಾಮೀನು ದೊರಕುವುದೇ?
ರನ್ಯಾ ರಾವ್‌ಗೆ ಚಿನ್ನದ ಅಕ್ರಮ ಸಾಗಣೆಗೆ ಸಹಕರಿಸಿದ ಬಳ್ಳಾರಿ ಚಿನ್ನದ ವ್ಯಾಪಾರಿ ಬಂಧನ, ಮಾಣಿಕ್ಯ ನಟಿಗೆ ಇಂದು ಜಾಮೀನು ದೊರಕುವುದೇ?

ಬೆಂಗಳೂರು: ದುಬೈನಿಂದ ಬೆಂಗಳೂರಿಗೆ ಅಕ್ರಮವಾಗಿ ಚಿನ್ನದ ಅಕ್ರಮ ಸಾಗಣೆ ಮಾಡುತ್ತಿದ್ದ ನಟಿ ರನ್ಯಾ ರಾವ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಳ್ಳಾರಿ ಮೂಲದ ಉದ್ಯಮಿಯೊಬ್ಬರನ್ನು ಕಂದಾಯ ಗುಪ್ತಚರ ಜಾರಿ ನಿರ್ದೇಶನಾಲಯ (ಡಿಆರ್‌ಐ) ತನ್ನ ವಶಕ್ಕೆ ತೆಗೆದುಕೊಂಡಿದೆ. ಕಳ್ಳಸಾಗಣೆ ಮಾಡಿದ ಚಿನ್ನವನ್ನು ಮಾರಾಟ ಮಾಡಲು ರನ್ಯಾ ರಾವ್‌ಗೆ ಸಹಾಯ ಮಾಡಿದ ಆರೋಪ ಹೊತ್ತಿರುವ ಸಾಹಿಲ್ ಜೈನ್ ಮಾರ್ಚ್ 29ರವರೆಗೆ ಡಿಆರ್‌ಐ ವಶದಲ್ಲಿ ಇರಲಿದ್ದಾರೆ ಎಂದು ಸುದ್ದಿಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಮೂಲದ ವ್ಯಾಪಾರಿಯನ್ನು ವಿಚಾರಣೆ ನಡೆಸಲಾಗಿದೆ. ಬಳಿಕ ಕಂದಾಯ ಗುಪ್ತಚರ ನಿರ್ದೇಶನಾಲಯ ಬುಧವಾರ ಆತನನ್ನು ಬಂಧಿಸಿದೆ. ಕಳ್ಳಸಾಗಣೆ ಮಾಡಿದ ಚಿನ್ನವನ್ನು ವಿಲೇವಾರಿ ಮಾಡಲು ಮತ್ತು ಮಾರಾಟದ ಆದಾಯವನ್ನು ಹಂಚಿಕೊಳ್ಳಲು ಸಾಹಿಲ್ ಜೈನ್ ನಟಿ ರನ್ಯಾ ರಾವ್ ಅವರಿಗೆ ಸಹಾಯ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. 64ನೇ ಸಿಸಿಎಚ್ ಸೆಷನ್ಸ್ ನ್ಯಾಯಾಲಯದಲ್ಲಿ ರನ್ಯಾ ರಾವ್ ಅವರ ಜಾಮೀನು ಅರ್ಜಿಯ ವಿಚಾರಣೆ ಇಂದು ನಡೆಯಲಿದೆ.

ಮಾರ್ಚ್ 25 ರಂದು ಬೆಂಗಳೂರಿನ ವಿಶೇಷ ನ್ಯಾಯಾಲಯವು ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ರನ್ಯಾ ರಾವ್ ಅವರ ಜಾಮೀನು ಅರ್ಜಿಯ ಆದೇಶವನ್ನು ಮಾರ್ಚ್ 27ರವರೆಗೆ ಕಾಯ್ದಿರಿಸಿತ್ತು. ಪ್ರತಿವಾದಿ ಮತ್ತು ಪ್ರಾಸಿಕ್ಯೂಷನ್ ಎರಡೂ ಕಡೆಯ ವಾದಗಳ ವಿವರವಾದ ವಿಚಾರಣೆಯ ಬಳಿಕ ನ್ಯಾಯಾಲಯವು ತನ್ನ ನಿರ್ಧಾರವನ್ನು ಕಾಯ್ದಿರಿಸಿತು. ಈ ಸಮಯದಲ್ಲಿ ನಟಿ ರನ್ಯಾ ರಾವ್‌ ಪರ ವಕೀಲರಾದ ಕಿರಣ್‌ ಜವಳಿ ಅವರು ನಟಿಯ ಬಿಡುಗಡೆಗೆ ಪ್ರಯತ್ನಿಸಿದರು. ಆದರೆ, ಕಂದಾಯ ಗುಪ್ತಚರ ನಿರ್ದೇಶನಾಲಯದ ವಕೀಲ ಮಧು ರಾವ್ ಅವರು ಅಕ್ರಮ ಹಣ ವರ್ಗಾವಣೆಯಲ್ಲಿ ನಟಿಯ ನೇರ ಪಾತ್ರದ ಪುರಾವೆಗಳನ್ನು ನೀಡಿದ್ದರು. ಹೀಗಾಗಿ, ನಟಿಗೆ ಬಿಡುಗಡೆ ಭಾಗ್ಯ ದೊರೆಯಲಿಲ್ಲ.

ಚಿನ್ನ ಖರೀದಿಗೆ ಅನುಕೂಲವಾಗುವಂತೆ ಹವಾಲಾ ಮಾರ್ಗಗಳನ್ನು ಬಳಸಿದ್ದಾಗಿ ರಾವ್ ಒಪ್ಪಿಕೊಂಡಿದ್ದಾರೆ ಎಂದು ಪ್ರಾಸಿಕ್ಯೂಷನ್ ವಾದಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಸ್ಟಮ್ಸ್ ಕಾಯ್ದೆಯ ಸೆಕ್ಷನ್ 108ನಡಿ ವಿಚಾರಣೆ ನಡೆಸಲಾಗುತ್ತಿದೆ. ಈ ಸೆಕ್ಷನ್‌ನಡಿ ಕೇಸ್‌ ದಾಖಲಿಸಿರುವದರಿಂದ ನ್ಯಾಯಾಂಗ ತನಿಖೆ ನಡೆಯುವುದು ಕಡ್ಡಾಯವಾಗಿದೆ.

ಮಾರ್ಚ್‌ 3ರಂದು ದುಬೈ ವಿಮಾನ ನಿಲ್ದಾಣದಿಂದ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಟಿ ರನ್ಯಾ ಆಗಮಿಸಿದ್ದರು. ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬರುತ್ತಿದ್ದಂತೆ ಡಿಆರ್‌ಐ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಈ ಚಿನ್ನದ ಅಕ್ರಮ ಸಾಗಾಟ ವಿಷಯವು ದೊಡ್ಡ ಮಟ್ಟದಲ್ಲಿ ನಡೆಯುವ ಸುಳಿವು ದೊರಕಿತ್ತು. ಬಳಿಕ ಈ ಪ್ರಕರಣ ಇನ್ನಷ್ಟು ಗಂಭೀರತೆ ಪಡೆದಿತ್ತು.

ಮೂಲತಃ ರನ್ಯಾ ರಾವ್‌ ಚಿಕ್ಕಮಗಳೂರಿನವರು. 2014ರಲ್ಲಿ ಮಾಣಿಕ್ಯ ಸಿನಿಮಾದ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿ ನೀಡಿದ್ದರು. ಇದಾದ ಬಳಿಕ ಕಾಲಿವುಡ್‌ಗೆ ನೆಗೆದಿದ್ದರು. ತಮಿಳಿನ ವಾಘಾ ಸಿನಿಮಾದಲ್ಲಿ ದೊಡ್ಡಮಟ್ಟದ ಯಶಸ್ಸು ದೊರಕಲಿಲ್ಲ. 2017ರಲ್ಲಿ ಗೋಲ್ಡನ್‌ ಸ್ಟಾರ್‌ ಗಣೇಶ್‌ ಜತೆ ಪಟಾಕಿ ಚಿತ್ರದಲ್ಲಿ ನಟಿಸಿದ್ದರು. ಇದಾದ ಬಳಿಕ ಇವರಿಗೆ ಯಾವುದೇ ಪ್ರಮುಖ ಆಫರ್‌ ಬರಲಿಲ್ಲ. ಈಕೆ ಡಿಜಿಪಿ ರಾಮಚಂದ್ರ ರಾವ್‌ ಅವರ ಸಂಬಂಧಿಯಾಗಿದ್ದಾರೆ.

Praveen Chandra B

TwittereMail
ಪ್ರವೀಣ್ ಚಂದ್ರ ಪುತ್ತೂರು: 'ಹಿಂದೂಸ್ತಾನ್‌ ಟೈಮ್ಸ್‌ ಕನ್ನಡ'ದಲ್ಲಿ ಸಹಾಯಕ ಸುದ್ದಿ ಸಂಪಾದಕ. ಒನ್‌ ಇಂಡಿಯಾ, ವಿಜಯ ಕರ್ನಾಟಕದಲ್ಲಿ ಒಟ್ಟು 16 ವರ್ಷಗಳ ಅನುಭವ. ಆನ್‌ಲೈನ್‌ ಪತ್ರಿಕೋದ್ಯಮದಲ್ಲಿ ಎತ್ತರದ ಸಾಧನೆ ಮಾಡುವ ಕನಸು. ಡಿಜಿಟಲ್‌ ಜಗತ್ತಿನಲ್ಲಿ ಹೊಸತನ್ನು ಕಲಿಯುವ ಆಸಕ್ತಿ. ಮನರಂಜನೆ, ಶಿಕ್ಷಣ, ಉದ್ಯೋಗ, ತಂತ್ರಜ್ಞಾನ, ವಾಣಿಜ್ಯ, ಕರ್ನಾಟಕ, ದೇಶ- ವಿದೇಶ, ಸಿನಿಮಾ, ಷೇರುಪೇಟೆ, ಜೀವನಶೈಲಿ... ಹಲವು ವಿಚಾರಗಳ ಬಗ್ಗೆ ತಳಸ್ಪರ್ಶಿಯಾಗಿ ಬರೆಯಬಲ್ಲರು. ಎಸ್‌ಇಒ ತಂತ್ರಗಳನ್ನು ಪತ್ರಿಕೋದ್ಯಮದ ಹದಕ್ಕೆ ಪಳಗಿಸುವ ಸಾಮರ್ಥ್ಯ ರೂಢಿಸಿಕೊಂಡವರು. ಇಮೇಲ್: praveen.chandra@htdigital.in
Whats_app_banner