ರಾಕಿಂಗ್ ಸ್ಟಾರ್ ಯಶ್ ಅಭಿನಯದ ಟಾಕ್ಸಿಕ್ ಸಿನಿಮಾ ಬಗ್ಗೆ ಹೆಚ್ಚಾಯ್ತು ಕಾತರ; ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯಾಗುತ್ತಿದೆ ಹೊಸ ವಿಚಾರ
ಕನ್ನಡ ಸುದ್ದಿ  /  ಮನರಂಜನೆ  /  ರಾಕಿಂಗ್ ಸ್ಟಾರ್ ಯಶ್ ಅಭಿನಯದ ಟಾಕ್ಸಿಕ್ ಸಿನಿಮಾ ಬಗ್ಗೆ ಹೆಚ್ಚಾಯ್ತು ಕಾತರ; ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯಾಗುತ್ತಿದೆ ಹೊಸ ವಿಚಾರ

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಟಾಕ್ಸಿಕ್ ಸಿನಿಮಾ ಬಗ್ಗೆ ಹೆಚ್ಚಾಯ್ತು ಕಾತರ; ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯಾಗುತ್ತಿದೆ ಹೊಸ ವಿಚಾರ

ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳು ಕಾತರದಿಂದ ಕಾಯುತ್ತಿರುವ ಸಿನಿಮಾ ಟಾಕ್ಸಿಕ್ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ಆರಂಭವಾಗಿದೆ.

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಟಾಕ್ಸಿಕ್ ಸಿನಿಮಾ ಬಗ್ಗೆ ಹೆಚ್ಚಾಯ್ತು ಕಾತರ
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಟಾಕ್ಸಿಕ್ ಸಿನಿಮಾ ಬಗ್ಗೆ ಹೆಚ್ಚಾಯ್ತು ಕಾತರ

ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳು ಕಾತರದಿಂದ ಕಾಯುತ್ತಿರುವ ಸಿನಿಮಾ ಟಾಕ್ಸಿಕ್ ಬಗ್ಗೆ ಕಾತರತೆ ಹೆಚ್ಚಾಗಿದೆ. ಹಲವು ತಿಂಗಳಿನಿಂದ ಶೂಟಿಂಗ್ ನಡೆಯುತ್ತಿದ್ದು, ಸಿನಿಮಾ ಯಾವಾಗ ಬಿಡುಗಡೆಯಾಗುತ್ತದೆ ಎಂಬುದೇ ಎಲ್ಲರ ಪ್ರಶ್ನೆಯಾಗಿದೆ. ಕೆಲ ಮಾಹಿತಿಗಳ ಪ್ರಕಾರ ಶೀಘ್ರದಲ್ಲೇ ದಿನಾಂಕ ಬಹಿರಂಗಗೊಳ್ಳಲಿದೆ. ರಾಕಿಂಗ್ ಸ್ಟಾರ್ ಯಶ್ ಅವರನ್ನು ತೆರೆಯ ಮೇಲೆ ಕಾಣಲು ಸಿನಿಪ್ರಿಯರು ಕಾತರದಿಂದ ಕಾಯುತ್ತಿದ್ದಾರೆ. ಚಿತ್ರತಂಡದಿಂದ ಬರುವ ಅಧಿಕೃತ ಮಾಹಿತಿಗಾಗಿ ಕಾಯುತ್ತಿದ್ದಾರೆ.

ಚಿತ್ರೀಕರಣ ಆರಂಭವಾಗಿ ಸಾಕಷ್ಟು ದಿನಗಳಾಗಿದ್ದರೂ ಸಿನಿಮಾ ಬಿಡುಗಡೆ ದಿನಾಂಕದ ಬಗ್ಗೆ ಹೆಚ್ಚಿನ ಮಾಹಿತಿ ದೊರೆತಿಲ್ಲ. ಚಿತ್ರತಂಡವು ಆರಂಭದಲ್ಲಿ ಈ ಸಿನಿಮಾ ಏಪ್ರಿಲ್ 10, 2025 ರಂದು ಬಿಡುಗಡೆಯಾಗುತ್ತದೆ ಎಂದು ತಿಳಿಸಿತ್ತು. ಆದರೆ ಚಿತ್ರೀಕರಣದ ಪ್ರಾರಂಭ ಮತ್ತು ನಂತರದ ಪ್ರಗತಿ ವಿಳಂಬವಾದ ಕಾರಣ, ಆ ದಿನಾಂಕದಂದು ಸಿನಿಮಾ ಬಿಡುಗಡೆಯಾವುದು ಅನುಮಾನ ಎಂಬಂತಾಯಿತು. ಏಪ್ರಿಲ್ 10ರಂದು ಸಿನಿಮಾ ಬಿಡುಗಡೆಯಾಗುವುದಿಲ್ಲ ಎಂದು ಯಶ್ ಸ್ಪಷ್ಟಪಡಿಸಿದ್ದರು. ಅದೇ ರೀತಿ ಇನ್ನೊಂದು ಹೊಸ ಬಿಡುಗಡೆ ದಿನಾಂಕವನ್ನು ತಿಳಿಸಿ ಎಂದಾಗ, “ಇಲ್ಲ ಅದು ವಿಶ್ವಾಸದ ಪ್ರಶ್ನೆಯಾಗಿರುತ್ತದೆ. ಚಿತ್ರೀಕರಣ ಪೂರ್ಣಗೊಳ್ಳದ ಹೊರತು ಮತ್ತೊಂದು ಬಿಡುಗಡೆ ದಿನಾಂಕವನ್ನು ಘೋಷಿಸುವುದಿಲ್ಲ” ಎಂದೂ ಸಹ ತಿಳಿಸಿದ್ದರು.

ಅಂತಿಮ ಚಿತ್ರೀಕರಣ

ಈಗಿನ ಮಾಹಿತಿ ಪ್ರಕಾರ ಪ್ರಸ್ತುತ ಚಿತ್ರದ ಅಂತಿಮ ಚಿತ್ರೀಕರಣ ನಡೆಯುತ್ತಿದೆಯಂತೆ. ವಿಎಫ್‌ಎಕ್ಸ್ ಕೆಲಸವೂ ಪ್ರಾರಂಭವಾಗಿದೆ ಎಂದು ಹೇಳಲಾಗುತ್ತಿದೆ ಎಂದು ಒಟಿಟಿ ಪ್ಲೇ ಜಾಲತಾಣ ವರದಿ ಮಾಡಿದೆ. ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿರುವ ಸುದ್ದಿಯ ಪ್ರಕಾರ ಈ ಹಿಂದೆ ಸಿನಿಮಾ ಬಿಡುಗಡೆಯಾಗುತ್ತದೆ ಎಂದ ದಿನಾಂಕದಂದೇ ಬಿಡುಗಡೆಯ ಹೊಸ ದಿನಾಂಕವನ್ನು ತಿಳಿಸುವ ಸಾಧ್ಯತೆ ಇದೆ ಎಂದು ಚರ್ಚೆಯಾಗುತ್ತಿದೆ.

ಗೀತು ಮೋಹನ್ ದಾಸ್ ನಿರ್ದೇಶನದ ಟಾಕ್ಸಿಕ್ ಚಿತ್ರವನ್ನು ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಏಕಕಾಲದಲ್ಲಿ ಚಿತ್ರೀಕರಿಸಲಾಗುತ್ತಿದ್ದು, ತಯಾರಕರು ಜಾಗತಿಕವಾಗಿ ಬಿಡುಗಡೆಯಾಗುವ ಸಿದ್ಧತೆಯಲ್ಲಿದ್ದಾರೆ. ಡ್ರಗ್ ಮಾಫಿಯಾವನ್ನು ಕೇಂದ್ರೀಕರಿಸಿ ಈ ಸಿನಿಮಾ ಮಾಡಲಾಗುತ್ತಿದೆ. ಈಗಾಗಲೇ ಸಿನಿಮಾದ ಫಸ್ಟ್‌ ಲುಕ್ ಬಿಡುಗಡೆಯಾಗಿದೆ. ಯಶ್‌ ಹುಟ್ಟುಹಬ್ಬದ ದಿನದಂದೇ ಟಾಕ್ಸಿಕ್‌ನ ತುಣುಕೊಂದು ಸಂಚಲನ ಸೃಷ್ಟಿ ಮಾಡಿತ್ತು, ಅಂದಿನಿಂದ ಅಭಿಮಾನಿಗಳ ಕಾತರ ಇನ್ನಷ್ಟು ಹೆಚ್ಚಾಗಿದೆ.

ಟಾಕ್ಸಿಕ್ ಸಿನಿಮಾ ಬಿಗ್ ಬಜೆಟ್‌ನಲ್ಲಿ ನಿರ್ಮಾಣವಾಗುತ್ತಿದ್ದು, 2025ರಲ್ಲಿ ಬಾಕ್ಸ್‌ ಆಫೀಸ್‌ನಲ್ಲಿಯೂ ಸದ್ದು ಮಾಡುವ ಸಾಧ್ಯತೆ ಹೆಚ್ಚಿದೆ. ಅದಕ್ಕೆ ತಕ್ಕಂತೆ ಜನರ ನಿರೀಕ್ಷೆಯೂ ಹೆಚ್ಚಾಗಿದೆ. ಈ ಸಿನಿಮಾಕ್ಕೆ ಗೀತು ಅವರ ಪತಿ ರಾಜೀವ್ ರವಿ ಛಾಯಾಗ್ರಹಣ ಮತ್ತು ಹಾಲಿವುಡ್ ಸಾಹಸ ನಿರ್ದೇಶಕ ಜೆಜೆ ಪೆರ್ರಿ ಸಾಹಸ ನಿರ್ದೇಶನ ಮಾಡಿದ್ದಾರೆ.

ಕನ್ನಡದಲ್ಲಿ ಇದೇ ಮೊದಲು

ಇಂಗ್ಲಿಷ್ ಮತ್ತು ಭಾರತೀಯ ಭಾಷೆಗಳಲ್ಲಿ ಚಿತ್ರೀಕರಿಸಲಾದ ಹಲವು ಸಿನಿಮಾಳನ್ನು ನೋಡುವುದಾದರೆ, "ಗೈಡ್" (1965) ಮತ್ತು "ಶಾಲಿಮಾರ್" (1978) ಈ ಸಿನಿಮಾಗಳನ್ನು ಹಿಂದಿ ಜತೆಗೆ ಇಂಗ್ಲಿಷ್ ಭಾಷೆಯಲ್ಲಿಯೇ ಆ ದಿನಗಳಲ್ಲಿಯೇ ಚಿತ್ರೀಕರಣ ಮಾಡಲಾಗಿತ್ತು. ಮಾಲಿವುಡ್‌ನ "ನಥಿಂಗ್ ಬಟ್ ಲೈಫ್" (2004) ಸಿನಿಮಾ ಮಲಯಾಳಿ ಜತೆಗೆ ಇಂಗ್ಲಿಷ್‌ನಲ್ಲಿಯೂ ಶೂಟ್‌ ಮಾಡಲಾಗಿತ್ತು. ಕನ್ನಡದ "ಸಮ್ಮರ್ ಹಾಲಿಡೇಸ್" ಅನ್ನೋ ಇಂಡಿ ಚಿತ್ರವನ್ನೂ ಇಂಗ್ಲಿಷ್ ಮತ್ತು ಕನ್ನಡ ಎರಡರಲ್ಲೂ ಚಿತ್ರೀಕರಿಸಲಾಗಿತ್ತು. ಆದರೆ ಜಾಗತಿಕ ಪ್ರಯತ್ನಗಳು ಆಗಿರಲಿಲ್ಲ. ಇದೀಗ ಆ ದಾಖಲೆಯನ್ನು ಟಾಕ್ಸಿಕ್‌ ತನ್ನದಾಗಿಸಿಕೊಂಡಿದೆ.