ಕನ್ನಡ ಸುದ್ದಿ  /  Entertainment  /  Fir Filed Against Celebrities Who Involved In Party After Siima Function

FIR against SIIMA Celebrities: ನಿಯಮ ಮೀರಿ ಪಾರ್ಟಿ ಮಾಡಿದ ಆರೋಪ..ಪ್ರಶಸ್ತಿ ಪಡೆದ ಖುಷಿಯಲ್ಲಿದ್ದ ಸೆಲೆಬ್ರಿಟಿಗಳ ವಿರುದ್ಧ ಐಫ್‌ಐಆರ್‌

ಸೆಲೆಬ್ರಿಟಿಗಳು ಬೆಂಗಳೂರಿನ ಐಷಾರಾಮಿ ಹೋಟೆಲ್‌ನಲ್ಲಿ ತಾವು ಉಳಿದುಕೊಂಡಿದ್ದ ಹೋಟೆಲ್‌ನಲ್ಲಿ ನಿಯಮ ಮೀತಿ ನಸುಕಿನವರೆಗೂ ಪಾರ್ಟಿ ಮಾಡಿದ ಆರೋಪದ ಮೇರೆಗೆ ಕಬ್ಬನ್‌ ಪಾರ್ಕ್‌ ಪೊಲೀಸರು ಕೇಸ್‌ ದಾಖಲಿಸಿಕೊಂಡಿದ್ದಾರೆ.

ಸೈಮಾ ಪ್ರಶಸ್ತಿ ಕಾರ್ಯಕ್ರಮದ ನಂತರ ಪಾರ್ಟಿಯಲ್ಲಿ ಭಾಗಿಯಾಗಿದ್ದ ಕೆಲವು ಸೆಲಬ್ರಿಟಿಗಳ ವಿರುದ್ಧ ಎಫ್‌ಐಆರ್‌
ಸೈಮಾ ಪ್ರಶಸ್ತಿ ಕಾರ್ಯಕ್ರಮದ ನಂತರ ಪಾರ್ಟಿಯಲ್ಲಿ ಭಾಗಿಯಾಗಿದ್ದ ಕೆಲವು ಸೆಲಬ್ರಿಟಿಗಳ ವಿರುದ್ಧ ಎಫ್‌ಐಆರ್‌ (PC: SIIMA Facebook)

ಇತ್ತೀಚೆಗಷ್ಟೇ ಬೆಂಗಳೂರಿನಲ್ಲಿ ನಡೆದ ಸೈಮಾ ಪ್ರಶಸ್ತಿ ಕಾರ್ಯಕ್ರಮದಲ್ಲಿ ವೇದಿಕೆಯಲ್ಲಿ ಪ್ರಶಸ್ತಿ ಸ್ವೀಕರಿಸಿ ಬೀಗುತ್ತಿದ್ದ ಕೆಲವು ಸೆಲೆಬ್ರಿಟಿಗಳಿಗೆ ಪೊಲೀಸರು ಎಫ್‌ಐಆರ್‌ ದಾಖಲಿಸುವ ಮೂಲಕ ಶಾಕ್‌ ನೀಡಿದ್ದಾರೆ.

ಸೆಲೆಬ್ರಿಟಿಗಳು ಬೆಂಗಳೂರಿನ ಐಷಾರಾಮಿ ಹೋಟೆಲ್‌ನಲ್ಲಿ ತಾವು ಉಳಿದುಕೊಂಡಿದ್ದ ಹೋಟೆಲ್‌ನಲ್ಲಿ ನಿಯಮ ಮೀತಿ ನಸುಕಿನವರೆಗೂ ಪಾರ್ಟಿ ಮಾಡಿದ ಆರೋಪದ ಮೇರೆಗೆ ಕಬ್ಬನ್‌ ಪಾರ್ಕ್‌ ಪೊಲೀಸರು ಕೇಸ್‌ ದಾಖಲಿಸಿಕೊಂಡಿದ್ದಾರೆ. 10 ವರ್ಷಗಳಿಂದ ನಡೆಯುತ್ತಿರುವ ಸೈಮಾ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಜರುಗಿತ್ತು. ಕನ್ನಡ, ತಮಿಳು, ತೆಲುಗು, ಮಲಯಾಳಂ ಹಾಗೂ ಹಿಂದಿ ಚಿತ್ರರಂಗದ ಅನೇಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮಕ್ಕೆ ಬಂದ ಸೆಲೆಬ್ರಿಟಿಗಳಿಗೆ ಬೆಂಗಳೂರಿನ ಐಷಾರಾಮಿ ಹೋಟೆಲ್‌ವೊಂದರಲ್ಲಿ ಉಳಿದುಕೊಳ್ಳುವ ವ್ಯವಸ್ಥೆ ಮಾಡಲಾಗಿತ್ತು. ಆದರೆ ಇದೇ ಹೋಟೆಲ್‌ನಲ್ಲಿ ಕೆಲವು ಸೆಲೆಬ್ರಿಟಿಗಳು ಖುಷಿಯಲ್ಲಿ ಮಧ್ಯರಾತ್ರಿವರೆಗೂ ಪಾರ್ಟಿ ಮಾಡಿದ್ದಾರೆ ಎನ್ನಲಾಗಿದೆ.

ಪಾರ್ಟಿಗೆ ಕೇವಲ 1 ಗಂಟೆ ಸಮಯ ನೀಡಲಾಗಿದ್ದರೂ ಮುಂಜಾನೆ 3.30 ವರೆಗೂ ಪಾರ್ಟಿ ನಡೆದಿದೆ ಎನ್ನಲಾಗಿದೆ. ರಾತ್ರಿ ಸುಮಾರು 12 ಗಂಟೆಗೆ ಪೊಲೀಸರು ಪರಿಶೀಲನೆಗಾಗಿ ಹೋಟೆಲ್‌ಗೆ ತೆರಳಿ ಬೇಗ ಪಾರ್ಟಿ ಮುಗಿಸುವಂತೆ ಸೂಚಿಸಿದ್ದಾರೆ. ಇಷ್ಟಾದರೂ ನಿಯಮ ಮೀರಿ ಬಹಳ ಹೊತ್ತು ಪಾರ್ಟಿ ನಡೆಸಲಾಗಿದೆ. ಆದ್ದರಿಂದ ಪೊಲೀಸರು ಪಾರ್ಟಿ ಮಾಡಲು ಅವಕಾಶ ನೀಡಿದ ಹೋಟೆಲ್‌ನವರ ವಿರುದ್ಧ, ಪಾರ್ಟಿ ಆಯೋಜಕರು ಹಾಗೂ ಪಾರ್ಟಿಯಲ್ಲಿ ಭಾಗಿಯಾಗಿದ್ದ ಕೆಲವು ಸೆಲೆಬ್ರಿಟಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದಾರೆ.

ಪಾರ್ಟಿಯಲ್ಲಿ ಯಶ್‌, ಅಭಿಷೇಕ್‌ ಅಂಬರೀಶ್‌, ಅಲ್ಲು ಅರ್ಜುನ್‌ ಭಾಗಿಯಾಗಿರುವ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ. ಆದರೆ ಯಾವ್ಯಾವ ನಟ ಅಥವಾ ನಟಿಯರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ ಎಂಬ ನಿಖರ ಮಾಹಿತಿಯನ್ನು ಪೊಲೀಸರು ಬಿಟ್ಟುಕೊಟ್ಟಿಲ್ಲ. ಒಟ್ಟಿನಲ್ಲಿ ಪ್ರಶಸ್ತಿ ಪಡೆದು ಖುಷಿಯಲ್ಲಿದ್ದ ಸೆಲೆಬ್ರಿಟಿಗಳಿಗೆ ಪೊಲೀಸರು ಶಾಕ್‌ ನೀಡಿರುವುದಂತೂ ನಿಜ.

IPL_Entry_Point