ಕನ್ನಡ ಸುದ್ದಿ  /  Entertainment  /  Gandhadagudi Pre Release Event

Gandhadagudi Pre release Event:'ಗಂಧದಗುಡಿ' ಪ್ರೀ ರಿಲೀಸ್‌ ಕಾರ್ಯಕ್ರಮಕ್ಕೆ ಗೈರಾಗಲಿದ್ದಾರಾ ಕಿಚ್ಚ?...ಕಾರಣ ಅದೇ ಇರಬಹುದಾ?

'ಗಂಧದಗುಡಿ' ಪ್ರೀ ರಿಲೀಸ್‌ ಕಾರ್ಯಕ್ರಮಕ್ಕೆ ಸುದೀಪ್‌ ಬರುವುದು ಅನುಮಾನ ಎನ್ನಲಾಗುತ್ತಿದೆ. ಆದರೆ ಪುನೀತ್‌ ಕಾರ್ಯಕ್ರಮಕ್ಕೆ ಸುದೀಪ್‌ ಯಾವುದೇ ಕಾರಣಕ್ಕೂ ಮಿಸ್‌ ಮಾಡುವುದಿಲ್ಲ. ಅವರು ಎಲ್ಲಾ ಕೆಲಸಗಳನ್ನು ಬದಿಗೊತ್ತಿ ತಪ್ಪದೆ ಬಂದೇ ಬರುತ್ತಾರೆ ಎಂದು ಅವರ ಅಭಿಮಾನಿಗಳು ಹೇಳುತ್ತಿದ್ದಾರೆ. ಒಟ್ಟಿನಲ್ಲಿ ಈ ವಿಚಾರವಾಗಿ ಸೋಷಿಯಲ್‌ ಮೀಡಿಯಾದಲ್ಲಿ ಸಾಕಷ್ಟು ಚರ್ಚೆಯಾಗುತ್ತಿರುವುದು ನಿಜ.

ಸುದೀಪ್‌, ಪುನೀತ್‌ ರಾಜ್‌ಕುಮಾರ್‌
ಸುದೀಪ್‌, ಪುನೀತ್‌ ರಾಜ್‌ಕುಮಾರ್‌ (PC: Puneeth Rajkumar - Power Of Indian Cinema Facebook)

ಅಕ್ಟೋಬರ್‌ 29, ಪುನೀತ್‌ ರಾಜ್‌ಕುಮಾರ್‌ ಮೊದಲ ವರ್ಷ ಪುಣ್ಯ ಸ್ಮರಣೆ. ಅಕ್ಟೋಬರ್‌ 28 ರಂದು ಅಭಿಮಾನಿಗಳು ಕಾತರದಿಂದ ಕಾಯುತ್ತಿರುವ 'ಗಂಧದಗುಡಿ' ಸಾಕ್ಷ್ಯಚಿತ್ರ ಬಿಡುಗಡೆಯಾಗುತ್ತಿದೆ. ಹಾಗೇ ಅಕ್ಟೋಬರ್‌ 21ರ ಶುಕ್ರವಾರ ಸಂಜೆ 6 ಗಂಟೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ 'ಪುನೀತ ಪರ್ವ' ಹೆಸರಿನಲ್ಲಿ ಪ್ರೀ ರಿಲೀಸ್‌ ಕಾರ್ಯಕ್ರಮಗಳು ನಡೆಯುತ್ತಿದೆ.

'ಪುನೀತ ಪರ್ವ' ಕಾರ್ಯಕ್ರಮಕ್ಕೆ ಈಗಾಗಲೇ ಬಹುತೇಕ ಎಲ್ಲಾ ಚಿತ್ರರಂಗದ ಗಣ್ಯರಿಗೆ ಆಹ್ವಾನ ನೀಡಲಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ನಟರಾದ ಯಶ್‌, ಸುದೀಪ್‌, ದರ್ಶನ್‌, ತೆಲುಗು ನಟ ಬಾಲಕೃಷ್ಣ, ರಾಣ ದಗ್ಗುಬಾಟಿ ಸೇರಿದಂತೆ ಎಲ್ಲರಿಗೂ ಆಹ್ವಾನ ನೀಡಲಾಗಿದೆ. ಕಾರ್ಯಕ್ರಮದಲ್ಲಿ ಖ್ಯಾತ ಗಾಯಕರಾದ ಕುನಾಲ್‌ ಗಾಂಜಾವಾಲ, ಅರ್ಮಾನ್‌ ಮಲಿಕ್‌ ಹಾಗೂ ಇನ್ನಿತರರು ಹಾಡಲಿದ್ದು ಪ್ರಭುದೇವ, ರಮ್ಯಾ ಹಾಗೂ ಇನ್ನಿತರರು ಡಾನ್ಸ್‌ ಮಾಡಲಿದ್ದಾರೆ ಎನ್ನಲಾಗಿದೆ. ಆದರೆ ಸುದೀಪ್‌ ಪುನೀತ ಪರ್ವ ಕಾರ್ಯಕ್ರಮಕ್ಕೆ ಗೈರು ಹಾಜರಾಗಲಿದ್ದಾರಾ ಎಂಬ ಅನುಮಾನ ಹಲವರಿಗೆ ಕಾಡುತ್ತಿದೆ.

ಅಕ್ಟೋಬರ್‌ 18ಕ್ಕೆ ಸುದೀಪ್‌-ಪ್ರಿಯಾ 21 ನೇ ಮದುವೆ ವಾರ್ಷಿಕೋತ್ಸವವನ್ನು ಆಚರಿಸಿಕೊಂಡಿದ್ದಾರೆ. ಇದರ ಸಲುವಾಗಿ ಇಬ್ಬರೂ ವಿದೇಶಕ್ಕೆ ಹೋಗುತ್ತಿದ್ದಾರೆ ಆದ್ದರಿಂದ ಕಾರ್ಯಕ್ರಮಕ್ಕೆ ಸುದೀಪ್‌ ಬರುವುದು ಅನುಮಾನ ಎನ್ನಲಾಗುತ್ತಿದೆ. ಆದರೆ ಪುನೀತ್‌ ಕಾರ್ಯಕ್ರಮಕ್ಕೆ ಸುದೀಪ್‌ ಯಾವುದೇ ಕಾರಣಕ್ಕೂ ಮಿಸ್‌ ಮಾಡುವುದಿಲ್ಲ. ಅವರು ಎಲ್ಲಾ ಕೆಲಸಗಳನ್ನು ಬದಿಗೊತ್ತಿ ತಪ್ಪದೆ ಬಂದೇ ಬರುತ್ತಾರೆ ಎಂದು ಅವರ ಅಭಿಮಾನಿಗಳು ಹೇಳುತ್ತಿದ್ದಾರೆ. ಒಟ್ಟಿನಲ್ಲಿ ಈ ವಿಚಾರವಾಗಿ ಸೋಷಿಯಲ್‌ ಮೀಡಿಯಾದಲ್ಲಿ ಸಾಕಷ್ಟು ಚರ್ಚೆಯಾಗುತ್ತಿರುವುದು ನಿಜ.

'ಗಂಧದಗುಡಿ' ಪ್ರೀ ರಿಲೀಸ್‌ ಈವೆಂಟ್‌ಗೆ ಡ್ರೆಸ್‌ ಕೋಡ್‌

ಪುನೀತ ಪರ್ವ ಹೆಸರಿನಲ್ಲಿ ನಡೆಯುತ್ತಿರುವ 'ಗಂಧದ ಗುಡಿ' ಪ್ರೀ ರಿಲೀಸ್‌ ಕಾರ್ಯಕ್ರಮಕ್ಕೆ ಈಗಾಗಲೇ ಗಣ್ಯರಿಗೆ ಆಹ್ವಾನ ನೀಡಲಾಗಿದೆ. ನವೆಂಬರ್‌ 1 ರಂದು ಪುನೀತ್‌ಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಲಾಗುತ್ತಿದೆ. ಈ ವಿವಿಧ ಕಾರ್ಯಕ್ರಮಗಳ ಅಂಗವಾಗಿ ಪುನೀತ್‌ ರಾಜ್‌ಕುಮಾರ್‌ ಅಭಿಮಾನಿಗಳು 'ಗಂಧದಗುಡಿ ಹಬ್ಬ' ದ ಹೆಸರಿನಲ್ಲಿ ನಾನಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ. ಇನ್ನು ಪುನೀತ ಪರ್ವ ಕಾರ್ಯಕ್ರಮ ನಡೆಯುವ ಸ್ಥಳ, ಸಮಯ, ಡ್ರೆಸ್‌ ಕೋಡ್‌ ಹಾಗೂ ಇನ್ನಿತರ ಮಾಹಿತಿಯನ್ನು ಕೂಡಾ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ತಮ್ಮ ಅಧಿಕೃತ ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಪುನೀತ ಪರ್ವ ಕಾರ್ಯಕ್ರಮ ಅಕ್ಟೋಬರ್‌ 21 ಶುಕ್ರವಾರದಂದು ಅರಮನೆ ಮೈದಾನದ ಕೃಷ್ಣ ವಿಹಾರದಲ್ಲಿ ಸಂಜೆ 6 ಗಂಟೆಗೆ ಆರಂಭವಾಗಲಿದೆ. ಹಾಗೇ ಈ ಕಾರ್ಯಕ್ರಮಕ್ಕೆ ಬರುವವರು ಬಿಳಿ ಬಣ್ಣದ ಡ್ರೆಸ್‌ ಧರಿಸಿ ಬರಲು ಮನವಿ ಮಾಡಲಾಗಿದೆ.

ವಿಶೇಷ ಆಮಂತ್ರಣ ಪತ್ರಿಕೆ

ಅಪ್ಪು ಅವರ ಕನಸು 'ಗಂಧದ ಗುಡಿ'ಯ ಮೂಲಕ ನನಸಾಗಿದೆ. ಅವರು ನಮ್ಮೊಂದಿಗೆ ಇಲ್ಲದಿದ್ದರೂ, ಆ ಕನಸನ್ನು ಎಲ್ಲರೆದುರು ತೆರೆದಿಡಲು ಪತ್ನಿ ಅಶ್ವಿನಿ ಮುಂದಾಗಿದ್ದಾರೆ. ಅದರಂತೆ ಅತ್ಯಾಕರ್ಷಕವಾದ ಆಮಂತ್ರಣ ಪತಿಕೆಯನ್ನು ಸಿದ್ಧಪಡಿಸಿದ್ದಾರೆ. ಕಟ್ಟಿಗೆಯಿಂದ ಮಾಡಿದ ಪೆಟ್ಟಿಗೆಯಲ್ಲಿ ಪುನೀತ್‌ ಅವರ ಕಿರು ಪ್ರತಿಮೆಯನ್ನು ಇರಿಸಲಾಗಿದೆ. ಗಂಧದ ಕಟ್ಟಿಗೆಯ ತುಂಡಿನ ಮೇಲೆ ಅಪ್ಪು ಅವರ ಹಸ್ತಾಕ್ಷರವೂ ಇದೆ.

ಸಿನಿಮಾ, ಕನ್ನಡ ಕಿರುತೆರೆ, ರಿಯಾಲಿಟಿ ಶೋ ಮತ್ತು ಒಟಿಟಿ ಕುರಿತ ಅಪ್‌ಡೇಟ್‌ಗಳಿಗಾಗಿ, "ಹಿಂದೂಸ್ತಾನ್ ಟೈಮ್ಸ್ ಕನ್ನಡ" ವೆಬ್‌ಸೈಟ್ ನೋಡಿ