Breaking: ಹೈದರಾಬಾದ್‌ನಲ್ಲಿ ಕಾಲ್ತುಳಿತ ಪ್ರಕರಣ; ನಟ ಅಲ್ಲು ಅರ್ಜುನ್‌ಗೆ 14 ದಿನ ನ್ಯಾಯಾಂಗ ಬಂಧನ
Allu Arjun Arrest: ಸಂಧ್ಯಾ ಚಿತ್ರಮಂದಿರದಲ್ಲಿ ಪುಷ್ಪ 2 ಸಿನಿಮಾ ವೇಳೆ ಘಟಿಸಿದ ಕಾಲ್ತುಳಿತ ದುರಂತದಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದರು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ನಟ ಅಲ್ಲು ಅರ್ಜುನ್‌ಗೆ 14 ದಿನಗಳ ನಾಯ್ಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶಿಸಿದೆ.
Hyderabad Pushpa 2 Stampede Case: ಪುಷ್ಪ 2 ಚಿತ್ರದ ಪ್ರದರ್ಶನದ ವೇಳೆ ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ ಸಂಭವಿಸಿದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಬ್ರೇಕಿಂಗ್ ಸುದ್ದಿಯೊಂದು ಹೊರಬಿದ್ದಿದೆ. ನಟ ಅಲ್ಲು ಅರ್ಜುನ್ ಅವರನ್ನು ಬಂಧಿಸಿದ ಕೆಲವೇ ಗಂಟೆಗಳ ಬಳಿಕ, ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಇದಕ್ಕೂ ಮುನ್ನ ಅಲ್ಲು ಅರ್ಜುನ್ ಅವರನ್ನು ಹೈದರಾಬಾದ್‌ನ ಗಾಂಧಿ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿ ನಾಂಪಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.
ಮೃತಳ ಪತಿಯಿಂದ ದೂರು
ಶುಕ್ರವಾರ ಗಾಂಧಿ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿದ ಬಳಿಕ ಅಲ್ಲು ಅರ್ಜುನ್ ಅವರನ್ನು ನಾಂಪಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಮೃತ ಮಹಿಳೆಯ ಪತಿ ನೀಡಿದ ದೂರಿನ ಆಧಾರದ ಮೇಲೆ ಅಲ್ಲು ಅರ್ಜುನ್ ವಿರುದ್ಧ ಕ್ರಮ ಕೈಗೊಳ್ಳಲಾಗಿದ್ದು, ಆಕೆಯ ಸಾವಿಗೆ ಅಲ್ಲು ಅರ್ಜುನ್ ಮತ್ತು ಥಿಯೇಟರ್ ಮ್ಯಾನೇಜ್‌ಮೆಂಟ್ ಹೊಣೆ ಎಂದು ದೂರಿನಲ್ಲಿ ನಮೂದಿಸಿದ್ದಾರೆ.
ಪುಷ್ಪ 2 ಚಿತ್ರದ ಬಿಡುಗಡೆಯ ವೇಳೆ ಹೈದರಾಬಾದ್ ಥಿಯೇಟರ್‌ನಲ್ಲಿ ಕಾಲ್ತುಳಿತದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮೊಕದ್ದಮೆಯನ್ನು ರದ್ದುಗೊಳಿಸುವಂತೆ ಅಲ್ಲು ಅರ್ಜುನ್ ತೆಲಂಗಾಣ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
ಏತನ್ಮಧ್ಯೆ, ಇತ್ತೀಚಿನ ಬೆಳವಣಿಗೆಯಲ್ಲಿ ಪ್ರಕರಣ ದಾಖಲಿಸಿರುವ ಸಂತ್ರಸ್ತೆ ರೇವತಿಯ ಪತಿ, ಪ್ರಕರಣವನ್ನು ಹಿಂಪಡೆಯಲು ಸಿದ್ಧ ಎಂದು ಹೇಳಿದ್ದಾರೆ. "ನಾನು ಪ್ರಕರಣವನ್ನು ಹಿಂಪಡೆಯಲು ಸಿದ್ಧನಿದ್ದೇನೆ. ಬಂಧನದ ಬಗ್ಗೆ ನನಗೆ ತಿಳಿದಿರಲಿಲ್ಲ ಮತ್ತು ನನ್ನ ಹೆಂಡತಿ ಸಾವನ್ನಪ್ಪಿದ ಕಾಲ್ತುಳಿತಕ್ಕೂ ಅಲ್ಲು ಅರ್ಜುನ್‌ಗೂ ಯಾವುದೇ ಸಂಬಂಧವಿಲ್ಲ" ಎಂದು ರೇವತಿ ಅವರ ಪತಿ ಭಾಸ್ಕರ್ ಹೇಳಿದ್ದಾರೆ.
ಡಿಸೆಂಬರ್ 4ರಂದು ಹೈದರಾಬಾದ್‌ನ ಸಂಧ್ಯಾ ಚಿತ್ರಮಂದಿರದಲ್ಲಿ ಪುಷ್ಪ 2 ದಿ ರೂಲ್ ಸಿನಿಮಾದ ಪ್ರೀಮಿಯರ್ ಶೋ ಆಯೋಜಿಸಲಾಗಿತ್ತು. ಈ ವೇಳೆ ಭಾರೀ ಪ್ರಮಾಣದ ಸಂಖ್ಯೆಯಲ್ಲಿ ಅಭಿಮಾನಿಗಳ ಆಗಮನವಾಗಿದ್ದರಿಂದ ಕಾಲ್ತುಳಿತವೂ ಸಂಭವಿಸಿತ್ತು. ಈ ದುರ್ಘಟನೆಯಲ್ಲಿ ರೇವತಿ ಎಂಬುವವರು ಕೆಳಕ್ಕೆ ಬಿದ್ದು, ಕಾಲ್ತುಳಿತಕ್ಕೆ ಬಲಿಯಾಗಿದ್ದರು. ಅದಾದ ಬಳಿಕ ಚಿತ್ರತಂಡದ ಜತೆಗೆ ಸ್ವತಃ ಅಲ್ಲು ಅರ್ಜುನ್ ಈ ಘಟನೆ ಬಗ್ಗೆ ವಿಷಾದ ವ್ಯಕ್ತಪಡಿಸಿ, ಕುಟುಂಬಕ್ಕೆ ಹಣಕಾಸಿನ ನೆರವು ನೀಡಿದ್ದರು.