Just Married: ಜಸ್ಟ್‌ ಮ್ಯಾರೀಡ್‌ ಸಿನಿಮಾದ ಹಾಡು ಬಿಡುಗಡೆ ಮಾಡಿದ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌
ಕನ್ನಡ ಸುದ್ದಿ  /  ಮನರಂಜನೆ  /  Just Married: ಜಸ್ಟ್‌ ಮ್ಯಾರೀಡ್‌ ಸಿನಿಮಾದ ಹಾಡು ಬಿಡುಗಡೆ ಮಾಡಿದ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌

Just Married: ಜಸ್ಟ್‌ ಮ್ಯಾರೀಡ್‌ ಸಿನಿಮಾದ ಹಾಡು ಬಿಡುಗಡೆ ಮಾಡಿದ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌

ಜಸ್ಟ್‌ ಮ್ಯಾರೀಡ್‌ ಸಿನಿಮಾದ ಮೊದಲ ಹಾಡನ್ನು ನಿರ್ಮಾಪಕಿ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಬಿಡುಗಡೆ ಮಾಡಿದ್ದಾರೆ. ಸಿ.ಆರ್‌. ಬಾಬಿ ನಿರ್ದೇಶನದ ಈ ಚಿತ್ರದಲ್ಲಿ ಶೈನ್‌ ಶೆಟ್ಟಿ ಮತ್ತು ಅಂಕಿತಾ ಅಮರ್‌ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ.

ಜಸ್ಟ್‌ ಮ್ಯಾರೀಡ್‌ ಸಿನಿಮಾದ ಮೊದಲ ಹಾಡನ್ನು ನಿರ್ಮಾಪಕಿ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಬಿಡುಗಡೆ ಮಾಡಿದ್ದಾರೆ.
ಜಸ್ಟ್‌ ಮ್ಯಾರೀಡ್‌ ಸಿನಿಮಾದ ಮೊದಲ ಹಾಡನ್ನು ನಿರ್ಮಾಪಕಿ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಬಿಡುಗಡೆ ಮಾಡಿದ್ದಾರೆ.

Just Married Song: ಶೈನ್‌ ಶೆಟ್ಟಿ ಮತ್ತು ಅಂಕಿತಾ ಅಮರ್‌ ನಟಿಸಿದ ಜಸ್ಟ್‌ ಮ್ಯಾರೀಡ್‌ ಸಿನಿಮಾದ ಮೊದಲ ಹಾಡು ಪ್ರೇಮಿಗಳ ದಿನದ ಪ್ರಯುಕ್ತ ಬಿಡುಗಡೆ ಆಗಿದೆ. ನಿರ್ಮಾಪಕಿ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಮೊದಲ ಹಾಡನ್ನು ರಿಲೀಸ್‌ ಮಾಡಿ ತಂಡಕ್ಕೆ ಶುಭ ಹಾರೈಸಿದ್ದಾರೆ. ಕೆ.ಕಲ್ಯಾಣ್ ಬರೆದಿರುವ "ಇದು ಮೊದಲನೇ ಸ್ವಾಗತಾನಾ.." ಎಂಬ ಹಾಡು ಇದಾಗಿದ್ದು, ಕೇಳುಗರಿಗೆ ಗುಂಗು ಹಿಡಿಸಿದೆ.

ಕಾಂತಾರ ಸೇರಿದಂತೆ ಸಾಲು ಸಾಲು ಹಿಟ್‌ ಚಿತ್ರಗಳಿಗೆ ಸಂಗೀತ ನೀಡಿರುವ ಅಜನೀಶ್ ಲೋಕನಾಥ್, abbs studios ಬ್ಯಾನರ್‌ನಲ್ಲಿ ಸಿ.ಆರ್ ಬಾಬಿ ಅವರ ಜೊತೆಗೂಡಿ ನಿರ್ಮಿಸಿರುವ ಸಿನಿಮಾ ಈ ಜಸ್ಟ್‌ ಮ್ಯಾರೀಡ್‌. ನಿರ್ಮಾಣದ ಜತೆಗೆ ನಿರ್ದೇಶನವನ್ನೂ ಮಾಡಿದ್ದಾರೆ ನಿರ್ದೇಶಕಿ ಸಿ.ಆರ್. ಬಾಬಿ.

ನಿರ್ಮಾಪಕಿ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌, ಈ ರೊಮ್ಯಾಂಟಿಕ್‌ ಡ್ಯುಯೆಟ್‌ ಹಾಡನ್ನು ಬಿಡುಗಡೆ ಮಾಡಿದ್ದಾರೆ. "ಇದು ಮೊದಲನೇ ಸ್ವಾಗತನಾ.." ಹಾಡು ತುಂಬಾ ಚೆನ್ನಾಗಿದೆ. ಬಾಬಿ ಅವರ ನಿರ್ದೇಶನದಲ್ಲಿ ಹಾಗೂ ಅಜನೀಶ್ ಲೋಕನಾಥ್ ಅವರ ನಿರ್ಮಾಣದಲ್ಲಿ ಮೂಡಿಬಂದಿರುವ "ಜಸ್ಟ್ ಮ್ಯಾರೀಡ್" ಚಿತ್ರದ ಬಿಡುಗಡೆಗೆ ನಾನೂ ಕಾತರದಿಂದ ಕಾಯುತ್ತಿದ್ದೇನೆ ಎಂದರು ಅಶ್ವಿನಿ ಪುನೀತ್.

"ಇದು ಮೊದಲನೇ ಸ್ವಾಗತಾನಾ" ಹಾಡನ್ನು ಬಿಡುಗಡೆ ಮಾಡಿಕೊಟ್ಟ ಅಶ್ವಿನಿ ಪುನೀತ್ ರಾಜಕುಮಾರ್ ಅವರಿಗೆ ಧನ್ಯವಾದ. ಪ್ರೇಮಿಗಳ ದಿನದಂದು ಬಿಡುಗಡೆಯಾದ ಈ ಹಾಡಿನ ಚಿತ್ರೀಕರಣ ಬೆಂಗಳೂರಿನಲ್ಲೇ ನಡೆದಿದೆ. ನಾನೇ ಈ ಹಾಡಿಗೆ ನೃತ್ಯ ನಿರ್ದೇಶನ ಮಾಡಿದ್ದೇನೆ. ಹಾಡಿಗೆ ಕೆ.ಕಲ್ಯಾಣ್ ಸಾಹಿತ್ಯ ಬರೆದರೆ, ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ಜಸ್ಕರಣ್ ಸಿಂಗ್ ಕಂಠಸಿರಿಯಲ್ಲಿ ಹಾಡು ಮೂಡಿಬಂದಿದೆ. ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಜಸ್ಟ್ ಮ್ಯಾರೀಡ್ ಆದವರಿಗಂತೂ ನಮ್ಮ ಚಿತ್ರ ಬಹಳ ಹತ್ತಿರವಾಗಲಿದೆ. ಚಿತ್ರತಂಡದ ಸಹಕಾರದಿಂದ ಒಂದೊಳ್ಳೆ ‌ಪ್ರೇಮಕಥೆ ತೆರೆಗೆ ಬರಲು ಸಿದ್ದವಾಗಿದೆ ಎಂದರು ನಿರ್ದೇಶಕಿ ಸಿ.ಆರ್. ಬಾಬಿ ತಿಳಿಸಿದ್ದಾರೆ.

ನಿರ್ದೇಶಕಿ ಬಾಬಿ ಅವರೇ ಕಥೆ ಬರೆದಿದ್ದಾರೆ. ಚಿತ್ರಕಥೆ ಸಿ.ಆರ್ ಬಾಬಿ ಹಾಗೂ ಧನಂಜಯ್ ರಂಜನ್ ಅವರದು. ರಘು ನಿಡುವಳ್ಳಿ ಈ ಚಿತ್ರದ ಸಂಭಾಷಣೆಕಾರರು. ಪಿ ಜಿ ಛಾಯಾಗ್ರಹಣ, ಶ್ರೀಕಾಂತ್ ಮತ್ತು ಅಶಿಕ್ ಕುಸುಗೊಳ್ಳಿ (ಗಣೇಶ ಸಾಂಗ್) ಸಂಕಲನ, ಅಮರ್ ಕಲಾ ನಿರ್ದೇಶನ, ವಿಕ್ರಮ್ ಮೋರ್ ಸಾಹಸ ನಿರ್ದೇಶನ ಹಾಗೂ ಬಾಬಾ ಭಾಸ್ಕರ್ ಶಾಂತಿ ಅರವಿಂದ್ ಅವರ ನೃತ್ಯ ನಿರ್ದೇಶನವಿರುವ ಜಸ್ಟ್ ಮ್ಯಾರೀಡ್ ಚಿತ್ರದ ಇನ್ನುಳಿದ ಹಾಡುಗಳನ್ನು ಪ್ರಮೋದ್ ಮರವಂತೆ ಮತ್ತು ಧನಂಜಯ್ ಬರೆದಿದ್ದಾರೆ.

ಶೈನ್ ಶೆಟ್ಟಿ, ಅಂಕಿತ ಅಮರ್, ದೇವರಾಜ್, ಅಚ್ಯುತಕುಮಾರ್, ಮಾಳವಿಕ ಅವಿನಾಶ್, ಅನೂಪ್ ಭಂಡಾರಿ, ಶ್ರುತಿ ಹರಿಹರನ್, ಶ್ರುತಿ ಕೃಷ್ಣ, ಸಾಕ್ಷಿ ಅಗರವಾಲ್, ಶ್ರೀಮಾನ್, ರವಿಶಂಕರ್ ಗೌಡ, ರವಿ ಭಟ್, ವಾಣಿ ಹರಿಕೃಷ್ಣ, ಸಂಗೀತ ಅನಿಲ್, ಕುಮುದಾ, ಜಯರಾಮ್, ವೇದಿಕಾ ಕಾರ್ಕಳ್ ಮುಂತಾದವರು ನಟಿಸಿದ್ದಾರೆ.

ಮಂಜುನಾಥ ಕೊಟಗುಣಸಿ: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಚೀಫ್‌ ಕಂಟೆಂಟ್‌ ಪ್ರೊಡ್ಯೂಸರ್‌, ಮನರಂಜನೆ ವಿಭಾಗದಲ್ಲಿ ಕಾರ್ಯನಿರ್ವಹಣೆ. ಈ ಮೊದಲು ವಿಜಯವಾಣಿ, ವಿಶ್ವವಾಣಿ ಪತ್ರಿಕೆಗಳು ಮತ್ತು ಟಿವಿ9 ಸುದ್ದಿವಾಹಿನಿಯ ವಿವಿಧ ವಿಭಾಗಗಳಲ್ಲಿ ಒಟ್ಟು 12 ವರ್ಷ ಕೆಲಸ ಮಾಡಿದ ಅನುಭವ. ಸಿನಿಮಾ ಮೋಹಿ, ಕ್ರಿಕೆಟ್‌ ಪ್ರಿಯ. ಧಾರವಾಡ ಜಿಲ್ಲೆಯ ಕಲಘಟಗಿ ನಿವಾಸಿ.