ಫಲಿಸಿತು ಪೂಜಾ ಫಲ! ದರ್ಶನ್ಗೆ ಬೇಲ್ ಸಿಕ್ಕ ಹಿನ್ನೆಲೆ ಕಾಮಾಕ್ಯ ದೇವಾಲಯದ ಫೋಟೋ ಹಂಚಿಕೊಂಡ ಪತ್ನಿ ವಿಜಯಲಕ್ಷ್ಮಿ
ನಟ ದರ್ಶನ್ಗೆ ಇಂದು (ಅಕ್ಟೋಬರ್ 30) ಬೇಲ್ ಸಿಕ್ಕಿದೆ. ದರ್ಶನ್ ಪತ್ನಿ ವಿಜಯಲಕ್ಷ್ಮಿ ಬಳ್ಳಾರಿ ಜೈಲಿಗೆ ದರ್ಶನ್ ಭೇಟಿ ಮಾಡಲು ಧಾವಿಸಿದ್ದಾರೆ. ಇದರ ನಡುವೆ ಕಾಮಾಕ್ಯ ದೇವಾಲಯದ ಫೊಟೋ ಹಂಚಿಕೊಂಡಿದ್ದಾರೆ.
ದರ್ಶನ್ಗೆ ಬೇಲ್ ಸಿಕ್ಕ ವಿಷಯ ಕೇಳಿ ಅಭಿಮಾನಿಗಳು ಖುಷಿಯಾಗಿದ್ದಾರೆ. ಬಳ್ಳಾರಿ ಜೈಲಿಗೆ ವಿಜಯಲಕ್ಷ್ಮಿ ಬಂದಿದ್ದಾರೆ. ದರ್ಶನ್ಗೆ ಬೇಲ್ ಸಿಕ್ಕಿರುವ ಬೆನ್ನಲ್ಲೇ ಪತ್ನಿ ವಿಜಯಲಕ್ಷ್ಮಿ ತಾವು ಈ ಹಿಂದೆ ಕಾಮಾಕ್ಯ ದೇವಿ ದೇವಾಲಯಕ್ಕೆ ಭೇಟಿ ನೀಡಿದ್ದ ಫೋಟೋವನ್ನು ಮತ್ತೊಮ್ಮೆ ಹಂಚಿಕೊಂಡಿದ್ದಾರೆ. ಅವರ ಸಾಮಾಜಿಕ ಜಾಲತಾಣಗಳಲ್ಲಿ ಮತ್ತೆ ದೇವಾಲಯದ ಫೋಟೋವನ್ನು ಸ್ಟೋರಿ ಮಾಡಿಕೊಂಡಿದ್ದಾರೆ. ಸ್ಟೋರಿಯಲ್ಲಿ ಥ್ಯಾಂಕ್ಫುಲ್, ಗ್ರೇಟ್ಫುಲ್, ಬ್ಲೆಸ್ಡ್ ಎಂದು ಬರೆದುಕೊಂಡಿದ್ದಾರೆ. ದರ್ಶನ್ ಜೈಲಿನಲ್ಲಿ ಇದ್ದಾಗಿನಿಂದ ಸಾಕಷ್ಟು ಬಾರಿ ಅವರು ಬೇರೆ ಬೇರೆ ದೇವಸ್ಥಾನಕ್ಕೆ ಭೇಟಿ ನೀಡಿದ್ದರು.
ದರ್ಶನ್ಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ಜಾಮೀನು ಆದೇಶ ನೀಡಿದೆ. ಹೀಗಾಗಿ ದರ್ಶನ್ ಅಭಿಮಾನಿಗಳಿಗೆ ದೀಪಾವಳಿ ಗಿಫ್ಟ್ ಸಿಕ್ಕಂತಾಗಿದೆ. ದರ್ಶನ್ ಅವರು ಕೆಲ ದಿನಗಳಿಂದ ಬೆನ್ನು ನೋವಿನಿಂದ ಬಳಲುತ್ತಿದ್ದರು. ಈ ಕುರಿತು ಸಾಕಷ್ಟು ಚರ್ಚೆಗಳಾಗಿದ್ದವು ಅವರನ್ನು ಚಿಕಿತ್ಸೆಗೆಂದು ಆಸ್ಪತ್ರೆಗೂ ಕರೆದೊಯ್ಯಲಾಗಿತ್ತು. ಅದರ ಬೆನ್ನಲ್ಲೇ ಈಗ ಅವರಿಗೆ ಮಧ್ಯಂತರ ಜಾಮೀನು ನೀಡಲಾಗಿದೆ. ದರ್ಶನ್ ಜಾಮೀನಿಗಾಗಿ ವಿಜಯಲಕ್ಷ್ಮಿ ಸಾಕಷ್ಟು ಪ್ರಯತ್ನ ಮಾಡಿದ್ದರು. ಆದರೆ ಅವರ ಪ್ರಯತ್ನಕ್ಕೆ ಈಗ ಫಲ ಸಿಕ್ಕಿದೆ.
ದರ್ಶನ್ಗೆ ಬೇಲ್ ಮಂಜೂರಾಗುತ್ತಿದ್ದಂತೆ ಸಂತಸದಲ್ಲಿ ವಿಜಯಲಕ್ಷ್ಮಿ ಬಳ್ಳಾರಿ ಜೈಲಿಗೆ ಬಂದಿದ್ದಾರೆ. ಕಾನೂನು ಹೋರಾಟದ ಜೊತೆ ವಿಜಯಲಕ್ಷ್ಮಿ ಅವರು ಸಾಕಷ್ಟು ಪ್ರಾರ್ಥನೆಗಳನ್ನು ಮಾಡಿಕೊಂಡಿದ್ದರು ಹಲವಾರು ದೇವಾಲಯಗಳಿಗೂ ಭೇಟಿ ನೀಡಿದ್ದರು.
ಜೈಲಿನಲ್ಲಿರುವ ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರು ಅಸ್ಸಾಂನ ಗುವಾಹಟಿಯಲ್ಲಿರುವ ಕಾಮಾಖ್ಯ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಫೋಟೋಗಳು ಈ ಹಿಂದೆ ವೈರಲ್ ಆಗಿತ್ತು. ಆದರೆ ಈ ದಿನ ಮುಖ್ಯವಾಗಿ ಮತ್ತೆ ಅಲ್ಲಿನ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ. 51 ಶಕ್ತಿ ಪೀಠಗಳಲ್ಲಿ ಕಾಮಾಖ್ಯ ದೇವಾಲಯವನ್ನು ಅತ್ಯಂತ ಶಕ್ತಿಶಾಲಿ ಎಂದು ಪರಿಗಣಿಸಲಾಗಿದೆ. ವಿಜಯಲಕ್ಷ್ಮಿ ಅವರು ಆ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥಿಸಿಕೊಂಡಿದ್ದರು.