ತಾಯಿಯ ಅಂತ್ಯಕ್ರಿಯೆ ನೆರವೇರಿಸಿದ ಕಿಚ್ಚ ಸುದೀಪ್; ಪಂಚಭೂತಗಳಲ್ಲಿ ಲೀನವಾದ ಸರೋಜಾ ಸಂಜೀವ್
ಇಂದು ರಾತ್ರಿ 7ಗಂಟೆಗೆ ವಿಲ್ಸನ್ ಗಾರ್ಡನ್ ಚಿತಾಗಾರದಲ್ಲಿ ಕಿಚ್ಚ ಸುದೀಪ್ ಅವರು ತಾಯಿಯ ಅಂತ್ಯಕ್ರಿಯೆ ನೆರವೇರಿಸಿದ್ದಾರೆ. ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಸಂಜೀವ್ ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದರು.
ಇಂದು ಅಕ್ಟೋಬರ್ 20ರಂದು ರಾತ್ರಿ 7 ಗಂಟೆಗೆ ವಿಲ್ಸನ್ ಗಾರ್ಡನ್ನಲ್ಲಿ ಸುದೀಪ್ ತಾಯಿಯ ಅಂತ್ಯಕ್ರಿಯೆ ನೆರವೇರಿಸಿದ್ದಾರೆ. ಸಂಜೆ 6.05ಕ್ಕೆ ಸುದೀಪ್ ಅವರ ಮನೆಯಿಂದ ಸರೋಜಾ ಅವರ ಪಾರ್ಥೀವ ಶರೀರವನ್ನು ವಿಲ್ಸನ್ ಗಾರ್ಡನ್ ಚಿತಾಗಾರಕ್ಕೆ ತರಲಾಗಿತ್ತು. ವಿಲ್ಸನ್ ಗಾರ್ಡನ್ ಚಿತಾಗಾರದಲ್ಲಿ ಅಂತಿಮ ವಿದಾಯ ಸಲ್ಲಿಸಲಿದ್ದಾರೆ. ಹಿಂದೂ ಸಂಪ್ರದಾಯದಂತೆ ಪೂಜೆ ಮಾಡಿ ಅಂತ್ಯಕ್ರಿಯೆ ನೆರವೇರಿಸಿದ್ದಾರೆ.
ಈಗಾಗಲೇ ಹಲವು ಗಣ್ಯರು ಸುದೀಪ್ ಮನೆಗೆ ಭೇಟಿ ನೀಡಿ ಸಾಂತ್ವನ ತಿಳಿಸಿದ್ದಾರೆ. ನಟ ಸುದೀಪ್ ತಾಯಿ ನಿಧನದಿಂದಾಗಿ ತುಂಬಾ ಬೇಸರದಲ್ಲಿದ್ದಾರೆ. ಅಂತ್ಯಕ್ರಿಯೆ ಮಾಡಿ ಹೊರಬರುವ ವೇಳೆ ತುಂಬಾ ಭಾವುಕರಾಗಿದ್ದಾರೆ. ಪಂಚಭೂತಗಳಲ್ಲಿ ಸರೋಜಾ ಸಂಜೀವ್ ಲೀನವಾಗಿದ್ದಾರೆ.
ಸ್ಯಾಂಡಲ್ವುಡ್ ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಸಂಜೀವ್ ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕಳೆದ ಕೆಲ ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸರೋಜಾ ಅವರನ್ನು ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಭಾನುವಾರ ಬೆಳಗ್ಗೆ 7.04 ಸುಮಾರಿಗೆ ಸರೋಜಾ ನಿಧನರಾಗಿದ್ದಾರೆ.
ವಿಭಾಗ