ಕನ್ನಡ ಸುದ್ದಿ  /  ಮನರಂಜನೆ  /  Koli Esru Movie: ‘ಹುಚ್ಚೇರಿಯ ಎಸರಿನ ಪ್ರಸಂಗ’ವೇ ‘ಕೋಳಿ ಎಸ್ರು’ ಸಿನಿಮಾ ಆದಾಗ.. ಅಂತಾರಾಷ್ಟ್ರೀಯ ಮಟ್ಟದಲ್ಲೂ ಸಿಕ್ಕಿತು ಪ್ರಶಂಸೆ..

Koli Esru Movie: ‘ಹುಚ್ಚೇರಿಯ ಎಸರಿನ ಪ್ರಸಂಗ’ವೇ ‘ಕೋಳಿ ಎಸ್ರು’ ಸಿನಿಮಾ ಆದಾಗ.. ಅಂತಾರಾಷ್ಟ್ರೀಯ ಮಟ್ಟದಲ್ಲೂ ಸಿಕ್ಕಿತು ಪ್ರಶಂಸೆ..

‘ಅಮ್ಮಚ್ಚಿಯೆಂಬ ನೆನಪು’ ಸಿನಿಮಾ ತಂಡದಿಂದ ಇದೀಗ ಮತ್ತೊಂದು ಸದಬಿರುಚಿ ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ಅದುವೇ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಲು ಸಾಲು ಪ್ರಶಸ್ತಿ ಪಡೆದ ‘ಕೋಳಿ ಎಸ್ರು’ ಸಿನಿಮಾ.

‘ಹುಚ್ಚೇರಿಯ ಎಸರಿನ ಪ್ರಸಂಗ’ವೇ ‘ಕೋಳಿ ಎಸ್ರು’ ಸಿನಿಮಾ ಆದಾಗ.. ಅಂತಾರಾಷ್ಟ್ರೀಯ ಮಟ್ಟದಲ್ಲೂ ಸಿಕ್ಕಿತು ಪ್ರಶಂಸೆ..
‘ಹುಚ್ಚೇರಿಯ ಎಸರಿನ ಪ್ರಸಂಗ’ವೇ ‘ಕೋಳಿ ಎಸ್ರು’ ಸಿನಿಮಾ ಆದಾಗ.. ಅಂತಾರಾಷ್ಟ್ರೀಯ ಮಟ್ಟದಲ್ಲೂ ಸಿಕ್ಕಿತು ಪ್ರಶಂಸೆ..

Koli Esru Movie: ರಂಗಭೂಮಿ ಕಲಾವಿದೆ ಅಕ್ಷತಾ ಪಾಂಡವಪುರ ಇದೀಗ ಮತ್ತೊಂದು ಸಿನಿಮಾ ಮೂಲಕ ಆಗಮಿಸಿದ್ದಾರೆ. ಬೆರಳೆಣಿಕೆ ಸಿನಿಮಾ ಮಾಡಿದರೂ, ವಿಮರ್ಶೆ ದೃಷ್ಟಿಯಿಂದ ಮೆಚ್ಚುಗೆ ಸಿಗುವ ಚಿತ್ರಗಳಲ್ಲಿಯೇ ಅವರು ಕಾಣಿಸಿಕೊಂಡಿದ್ದಾರೆ. ‘ಪಿಂಕಿ ಎಲ್ಲಿ’ ಸಿನಿಮಾದಿಂದಲೂ ಅವರ ನಟನೆಗೆ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿತ್ತು. ಇದೀಗ ಇದೇ ನಟಿ ಮತ್ತೊಂದು ವಿಭಿನ್ನ ಶೈಲಿಯ ಕಥಾಹಂದರವುಳ್ಳ ಚಿತ್ರದ ಜತೆ ಮರಳಿದ್ದಾರೆ. ಅದುವೇ ‘ಕೋಳಿ ಎಸ್ರು’ ಸಿನಿಮಾ.

ಟ್ರೆಂಡಿಂಗ್​ ಸುದ್ದಿ

ನಾಲ್ಕು ವರ್ಷಗಳ ಹಿಂದೆ ‘ಅಮ್ಮಚ್ಚಿಯೆಂಬ ನೆನಪು’ ಸಿನಿಮಾ ರಾಷ್ಟೀಯ, ಅಂತರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡು ಹಲವಾರು ಪ್ರಶಸ್ತಿಗಳನ್ನು ಪಡೆದಿತ್ತು. ಅಲ್ಲದೆ ಥಿಯೇಟರ್‌ನಲ್ಲಿ ರಿಲೀಸ್ ಕೂಡ ಆಗಿ ಯಶಸ್ವಿ 31 ದಿನಗಳ ಕಾಲ ಪ್ರದರ್ಶನವಾಗಿತ್ತು. ಇದೀಗ ಅದೇ ತಂಡದಿಂದ ‘ಕೋಳಿ ಎಸ್ರು’ ಎಂಬ ವಿಭಿನ್ನ ಸಿನಿಮಾ ಸಿದ್ಧವಾಗಿದೆ. ಈಗಾಗಲೇ ರಾಷ್ಟ್ರೀಯ, ಅಂತರಾಷ್ಟ್ರೀಯ ಫಿಲ್ಮ ಪೆಸ್ಟಿವೆಲ್‌ಗಳಲ್ಲಿ ಪ್ರದರ್ಶನಗೊಂಡ ‘ಕೋಳಿ ಎಸ್ರು’ ಪ್ರಶಂಸೆಯ ಜತೆಗೆ ಪ್ರಶಸ್ತಿಗಳನ್ನು ಬಾಚಿಕೊಂಡಿದೆ.

‘ನಮ್ಮ ಮೊದಲ ಪ್ರಯತ್ನದ ‘ಅಮ್ಮಚ್ಚಿಯಂಬ ನೆನಪು’ ಚಿತ್ರಕ್ಕೂ ಒಳ್ಳೆ ಪ್ರತಿಕ್ರಿಯೆ ಸಿಕ್ಕಿತ್ತು. ನಂತರ ಮತ್ತೊಂದು ಸಿನಿಮಾ ಮಾಡಲು ಯೋಚನೆ ಮಾಡಿ ಸಾಕಷ್ಟು ಕಥೆಗಳನ್ನು ಹುಡುಕುತಿದ್ದೆ. ಆಗ ನಾನು ನಟಿಸಿದ್ದ ನಾಟಕದ ಕಥೆಯೊಂದನ್ನು ಆಯ್ಕೆ ಮಾಡಿಕೊಂಡು ಈ ಸಿನಿಮಾ ಮಾಡಲು ಮುಂದಾದೆ. ಈ ಚಿತ್ರವನ್ನು ಕಾ.ತಾ ಚಿಕ್ಕಣ್ಣ ಅವರು ಬರೆದ ‘ಹುಚ್ಚೇರಿಯ ಎಸರಿನ ಪ್ರಸಂಗ’ ಕಥೆಯನ್ನು ಆಧರಿಸಿ ಮಾಡಲಾಗಿದೆ. ಇದು ನಾಟಕವಾಗಿಯೋ ಪ್ರದರ್ಶನ ಕಂಡು ಯಶಸ್ವಿಯಾಗಿತ್ತು" ಎಂಬುದು ನಿರ್ದೇಶಕಿ ಚಂಪಾ ಅವರ ಮಾತು.

ಮುಂದುವರಿದು ಮಾತನಾಡುವ ಅವರು, "80ರ ದಶಕದ ಈ ಕಥೆ ತೆಗೆದುಕೊಂಡು ಇಂದಿನ ಸಮಾಜಕ್ಕೆ ಒಗ್ಗುವಂತೆ ಮೂಲ ಕತೆಗೆ ದಕ್ಕೆ ಆಗದಂತೆ ಸಿನಿಮಾ ಮಾಡಲಾಗಿದೆ. ಇದರಲ್ಲಿ ಒಂದು ಹೆಣ್ಣು ಎನೆಲ್ಲಾ ಕಷ್ಟ ಅನುಭವಿಸಿ ಗೆಲ್ಲುತ್ತಾಳೆ ಎಂಬುದನ್ನು ತೋರಿಸಲಾಗಿದೆ. ಹಳ್ಳಿ ಬ್ಯಾಗ್ರೌಂಡ್‌ನಲ್ಲಿ ಚಿತ್ರವಿದ್ದು, ಕಲಾತ್ಮಕವಾಗಿ ಮಾಡಲಾಗಿದೆ. ಇದೀಗ ಈ ಸಿನಿಮಾ ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡುತ್ತಿರುವುದು ಖುಷಿ ಇದೆ. ಈ ಚಿತ್ರ ನಿರ್ಮಾಣಕ್ಕೆ ಮುನಿವೆಂಕಟಪ್ಪನವರು ಸೇರಿದಂತೆ ಸಾಕಷ್ಟು ಜನ ಕೈ ಜೋಡಿಸಿದ್ದಾರೆ’ ಎಂದರು.

‘ಕಥೆಯಲ್ಲಿ ಹಳ್ಳಿಯ ಹೆಣ್ಣು ಮಗಳೊಬ್ಬಳು ಬಡತನದಿಂದ ಊರಲ್ಲಿ ಯಾರ ಮನೆಯಲ್ಲಿ ಕೋಳಿ ಸಾರ್ ಮಾಡಿದರೂ, ಎಸರಿಗಾಗಿ ಕಾಯ್ದು ತೆಗೆದುಕೊಂಡು ಬರುತಿರುತ್ತಾಳೆ. ತನ್ನ ಧಾರಿಯಲ್ಲಿಯೇ ಮಗಳು ಕೂಡ ಸಾಗುತ್ತಿರುವುದನ್ನು ಕಂಡು ಹೇಗೆ ಬದಲಾದಳು ಎಂಬ ಕತೆ ಇದೆ. ಮೂಲ ಕತೆಗೆ ದಕ್ಕೆ ಆಗದಂತೆ ಚಂಪಾ ಸುಂದರವಾಗಿ ಸಿನಿಮಾ ಮಾಡಿದ್ದು, ಇಂದು ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡುತ್ತಿದೆ. ಅದರಲ್ಲೂ ಈ ಕತೆ ನಾಟಕವಾಗಿ ಪ್ರದರ್ಶನ ಕಂಡಾಗ ಹುಚ್ಚೇರಿ ಪಾತ್ರಕ್ಕೆ ಪ್ರಶಸ್ತಿ ಬಂದಿತ್ತು. ಈಗ ಚಿತ್ರದಲ್ಲೂ ಆ ಪಾತ್ರಕ್ಕೆ ಪ್ರಶಸ್ತಿ ಬಂದಿರುವುದು ತುಂಬಾ ಖುಷಿ ಕೊಟ್ಟಿದೆ’ ಎಂದರು ಕಥೆಗಾರ ಕಾ.ತಾ ಚಿಕ್ಕಣ್ಣ.

ಅಂದಂಗೆ ‘ಕೋಳಿ ಎಸ್ರು’ ಸಿನಿಮಾ ಈಗಾಗಲೇ ‘ನ್ಯೂಯಾರ್ಕ್ ಇಂಡಿಯನ್ ಫಿಲ್ಮ ಫೆಸ್ಟಿವಲ್’ಗೆ ಆಯ್ಕೆಯಾಗಿ ಯಶಸ್ವಿ ಪ್ರದರ್ಶನ ಕಂಡಿದೆ. ಇತ್ತೀಚೆಗೆ ಔರಂಗಾಬಾದ್‌ನಲ್ಲಿ ನಡೆದ ಪ್ರತಿಷ್ಠಿತ ‘ಅಜಂತಾ ಎಲ್ಲೋರ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ’ದಲ್ಲಿ ಆಯ್ಕೆಯಾಗಿ ಪ್ರದರ್ಶನಗೊಂಡು ಪ್ರೇಕ್ಷಕರ ಮೆಚ್ಚುಗೆ ಪಡೆದಿದೆ. ಅಲ್ಲದೆ ಇಂಡಿಯನ್ ಕಾಂಪಿಟೆಷನ್ ಸ್ಪರ್ಧೆಯಲ್ಲಿ ಇನ್ನುಳಿದ ಎಂಟು ಚಿತ್ರಗಳೊಂದಿಗೆ ಸ್ಪರ್ಧಿಸಿ ಎರಡು ಪ್ರಶಸ್ತಿಗಳನ್ನು ‘ಕೋಳಿ ಎಸ್ರು’ ಬಾಚಿಕೊಂಡಿದೆ.

ಔರಂಗಾಬಾದ್ ಚಲನಚಿತ್ರೋತ್ಸವದಲ್ಲಿ ಅತ್ಯುತ್ತಮ ನಟಿ ಪ್ರಶಸ್ತಿಯನ್ನು ಚಿತ್ರದ ನಾಯಕಿ ಅಕ್ಷತಾ ಪಾಂಡವಪುರ ಮತ್ತು ತೀರ್ಪುಗಾರರ ವಿಶೇಷ ಪ್ರಶಸ್ತಿಯನ್ನು ಬಾಲ ನಟಿ ಅಪೇಕ್ಷಾ ಚೋರನಹಳ್ಳಿ ಪಡೆದುಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ ಸೇರಿದಂತೆ ಸಾಕಷ್ಟು ಚಿತ್ರೋತ್ಸಗಳಿಗೆ ಸಿನಿಮಾವನ್ನು ಕಳಿಸುವ ಜೊತೆಗೆ ಥಿಯೇಟರ್‌ನಲ್ಲಿ ಸಿನಿಮಾ ಬಿಡುಗಡೆ ಮಾಡುವುದಕ್ಕೆ ತಂಡ ತಯಾರಿ ನಡೆಸಿದೆ.

ಪ್ರಶಸ್ತಿಗಳ ಜತೆಗೆ ಕೋಳಿ ಎಸ್ರು ಚಿತ್ರತಂಡ
ಪ್ರಶಸ್ತಿಗಳ ಜತೆಗೆ ಕೋಳಿ ಎಸ್ರು ಚಿತ್ರತಂಡ
IPL_Entry_Point