ಕನ್ನಡ ಸುದ್ದಿ  /  ಮನರಂಜನೆ  /  ದುಷ್ಟ ಶಕ್ತಿಗಳ ಸಂಹಾರದ ಪಯಣದಲ್ಲಿ ಬಾಲ್ಯದಿಂದ ತಾರುಣ್ಯದ ಕಡೆಗೆ ಹೊರಳಿದ ಉಧೋ ಉಧೋ ಶ್ರೀ ರೇಣುಕಾ ಯಲ್ಲಮ್ಮ ಧಾರಾವಾಹಿ

ದುಷ್ಟ ಶಕ್ತಿಗಳ ಸಂಹಾರದ ಪಯಣದಲ್ಲಿ ಬಾಲ್ಯದಿಂದ ತಾರುಣ್ಯದ ಕಡೆಗೆ ಹೊರಳಿದ ಉಧೋ ಉಧೋ ಶ್ರೀ ರೇಣುಕಾ ಯಲ್ಲಮ್ಮ ಧಾರಾವಾಹಿ

ಸ್ಟಾರ್‌ ಸುವರ್ಣ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿರುವ ಉಧೋ ಉಧೋ ಶ್ರೀ ರೇಣುಕಾ ಯಲ್ಲಮ್ಮ ಧಾರಾವಾಹಿಯ ಕಥೆಯಲ್ಲೀಗ ಒಂದು ದಶಕ ಕಳೆದಿದೆ. ಬಾಲಕಿಯರಾಗಿದ್ದ ರೇಣುಕೆ ಮತ್ತು ಯಲ್ಲಮ್ಮ ಇದೀಗ ತಾರುಣ್ಯಕ್ಕೆ ತಿರುಗಿದ್ದಾರೆ. ಈ ಹೊಸ ಸಂಚಿಕೆಗಳು ಈ ಸೋಮವಾರದಿಂದ (ಮೇ 27) ಪ್ರಸಾರವಾಗಲಿವೆ.

ದುಷ್ಟ ಶಕ್ತಿಗಳ ಸಂಹಾರದ ಪಯಣದಲ್ಲಿ ಬಾಲ್ಯದಿಂದ ತಾರುಣ್ಯದ ಕಡೆಗೆ ಹೊರಳಿದ ಉಧೋ ಉಧೋ ಶ್ರೀ ರೇಣುಕಾ ಯಲ್ಲಮ್ಮ ಧಾರಾವಾಹಿ
ದುಷ್ಟ ಶಕ್ತಿಗಳ ಸಂಹಾರದ ಪಯಣದಲ್ಲಿ ಬಾಲ್ಯದಿಂದ ತಾರುಣ್ಯದ ಕಡೆಗೆ ಹೊರಳಿದ ಉಧೋ ಉಧೋ ಶ್ರೀ ರೇಣುಕಾ ಯಲ್ಲಮ್ಮ ಧಾರಾವಾಹಿ

Udho Udho Sri Renuka: ಸಮಯದ ಕುದುರೆಯನ್ನೇರಿ ಓಡಿವೆ ಋತುಗಳು! ಹರೆಯದ ಹೊಸ್ತಿಲನ್ನು ದಾಟುತ್ತಿವೆ ದೇವಿಯ ಅಂಶಗಳು, ಉಧೋ ಉಧೋ ಶ್ರೀ ರೇಣುಕಾ ಯಲ್ಲಮ್ಮ ಬಾಲ್ಯದಿಂದ ತಾರುಣ್ಯದ ಕಡೆಗೆ ಪ್ರಯಾಣ.. ಇದು ಎರಡನೇ ಅಧ್ಯಾಯ. ಹೌದು, ಕನ್ನಡ ಕಿರುತೆರೆಯಲ್ಲಿ ಸ್ಟಾರ್ ಸುವರ್ಣ ವಾಹಿನಿಯು ವೀಕ್ಷಕರಿಗೆ ಪುರಾಣ, ಆಧ್ಯಾತ್ಮ ಮತ್ತು ಮೌಲ್ಯಾಧಾರಿತ ಕಥೆಗಳನ್ನು ನೀಡುತ್ತಾ ಬಂದಿದೆ. ಪ್ರಸ್ತುತ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಉಧೋ ಉಧೋ ಶ್ರೀ ರೇಣುಕಾ ಯಲ್ಲಮ್ಮ ಧಾರಾವಾಹಿ ಪ್ರೇಕ್ಷಕರ ಮನಗೆದ್ದು ಯಶಸ್ಸಿನೆಡೆಗೆ ಸಾಗುತ್ತಿದೆ. ಇದೀಗ ಸಮಯದ ಕುದುರೆಯನ್ನೇರಿ ಉರುಳಿವೆ ಋತುಗಳು- ಇನ್ಮುಂದೆ ಹೊಸ ಅಧ್ಯಾಯದೊಂದಿಗೆ ಧಾರಾವಾಹಿಯಲ್ಲಿ ಅನೇಕ ರೋಚಕ ತಿರುವುಗಳು ಕಾಣಿಸಿಕೊಳ್ಳಲಿದೆ.

ಟ್ರೆಂಡಿಂಗ್​ ಸುದ್ದಿ

ವೀಕ್ಷಕರ ಮನಗೆದ್ದ ಧಾರಾವಾಹಿ

ಅಪ್ಪಟ ಕನ್ನಡ ಮಣ್ಣಿನ ಪೌರಾಣಿಕ ಕಥಾವಸ್ತುವನ್ನಿಟ್ಟುಕೊಂಡು ಶುರುವಾದ ಈ ಧಾರಾವಾಹಿ ಆರಂಭದಿಂದಲೂ ಕಿರುತೆರೆಯಲ್ಲಿ ಹೊಸ ಸಂಚಲನವನ್ನು ಮೂಡಿಸುತ್ತಿದೆ. ರೇಣುಕೆ ಹಾಗೂ ಯಲ್ಲಮ್ಮನ ಪಾತ್ರಕ್ಕೆ ಜೀವ ತುಂಬಿದ ಮಕ್ಕಳು ಅದ್ಭುತವಾಗಿ ನಟಿಸಿ ಅಭಿಮಾನಿಗಳ ಮನಗೆದ್ದು ಮನೆಮಾತಾಗಿದ್ದರು. ಆದರೆ ಇದೀಗ ಕಥೆಯಲ್ಲಿ ವರ್ಷಗಳುರುಳಿ ರೇಣುಕಾ- ಯಲ್ಲಮ್ಮ ಬಾಲ್ಯದಿಂದ ತಾರುಣ್ಯದ ಕಡೆಗೆ ಕಾಲಿಡುತ್ತಿದ್ದಾರೆ.

ಮುಂದಿನ ಕಥೆ ಏನಾಗಿರಲಿದೆ..

ಬಾಲ್ಯದಿಂದಲೂ ಕಷ್ಟಗಳನ್ನೇ ಎದುರಿಸುತ್ತಾ ಬಂದಿರುವ ರೇಣುಕಾ- ಯಲ್ಲಮ್ಮರ ಬಾಳಿನಲ್ಲಿ10 ವರ್ಷಗಳ ಬಳಿಕ ಏನೆಲ್ಲಾ ಆಗಲಿದೆ? ದುಷ್ಟರಿಂದ ಇನ್ನೆಷ್ಟು ಕಷ್ಟಗಳನ್ನು ಎದುರಿಸಬೇಕಾಗಬಹುದು? ಇವರಿಬ್ಬರ ಬಾಳಿನಲ್ಲಿ ಪ್ರೀತಿಯ ಹೂವು ಅರಳಲಿದೆಯೇ? ಜನಜನಿತವಾದ ರೇಣುಕಾ ಹಾಗೂ ಜಮದಗ್ನಿಯ ವಿವಾಹವು ಯಾವಾಗ ಜರುಗಲಿದೆ? ಲೋಕ ಕಲ್ಯಾಣಕ್ಕಾಗಿ ಹಾಗೂ ದುಷ್ಟ ಸಂಹಾರಕ್ಕಾಗಿ ದೇವಿ ಅಂಶದ ಎರಡು ಶಕ್ತಿಗಳು ಒಂದಾಗಿ ಮುಂಬರುವ ಕಷ್ಟ ಕೋಟಲೆಗಳನ್ನು ಹೇಗೆ ಎದುರಿಸುತ್ತಾರೆ? ಎಂಬುದು ಈ ಧಾರಾವಾಹಿಯ ಮುಂದಿನ ರೋಚಕ ಕಥಾಹಂದರ.

ಯಾವಾಗಿಂದ ಅಧ್ಯಾಯ 2 ಶುರು

ಈಗಾಗಲೇ ಹೊಸ ಅಧ್ಯಾಯದ ಚಿತ್ರೀಕರಣ ಶುರುವಾಗಿದ್ದು, ರೇಣುಕೆಯಾಗಿ ಮಹತಿ, ಯಲ್ಲಮ್ಮನ ಪಾತ್ರದಲ್ಲಿ ಅನನ್ಯ ಮೈಸೂರ್ ಅಭಿನಯಿಸುತ್ತಿದ್ದಾರೆ. ಅಮೋಘ ವಿನ್ಯಾಸದ ಸೆಟ್‌ ಮತ್ತು ಗ್ರಾಫಿಕ್ಸ್‌ನಿಂದ ಪ್ರಸಾರವಾಗುತ್ತಿರುವ ಧಾರಾವಾಹಿಯ ಪ್ರೋಮೋಗಳು ಪ್ರೇಕ್ಷಕರ ಮನಗೆಲ್ಲುವಲ್ಲಿ ಯಶಸ್ವಿಯಾಗಿದೆ. ಹೊಸ ಸವಾಲುಗಳನ್ನು ಎದುರಿಸಲು, ಹೊಸ ಉತ್ಸಾಹದೊಂದಿಗೆ ಬರ್ತಿದ್ದಾರೆ ರೇಣುಕಾ ಯಲ್ಲಮ್ಮ. ಉಧೋ ಉಧೋ ಶ್ರೀ ರೇಣುಕಾ ಯಲ್ಲಮ್ಮ ಇದೇ ಮೇ 27ರಿಂದ ಸೋಮವಾರದಿಂದ ರಾತ್ರಿ 8.30ಕ್ಕೆ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗಲಿದೆ.

(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್‌. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)

ಟಿ20 ವರ್ಲ್ಡ್‌ಕಪ್ 2024